Homeಮುಖಪುಟಕ್ರಿಕೆಟ್‌ನಲ್ಲಿ ಭಾರತಕ್ಕೆ ಸೋಲು: ರಾಜಸ್ಥಾನದಲ್ಲಿ ಶಿಕ್ಷಕಿಯಿಂದ ಸಂಭ್ರಮಾಚರಣೆಯ ಪೋಸ್ಟ್, ಕೆಲಸದಿಂದ ಅಮಾನತು

ಕ್ರಿಕೆಟ್‌ನಲ್ಲಿ ಭಾರತಕ್ಕೆ ಸೋಲು: ರಾಜಸ್ಥಾನದಲ್ಲಿ ಶಿಕ್ಷಕಿಯಿಂದ ಸಂಭ್ರಮಾಚರಣೆಯ ಪೋಸ್ಟ್, ಕೆಲಸದಿಂದ ಅಮಾನತು

- Advertisement -
- Advertisement -

ಭಾನುವಾರ (ಅ.24) ನಡೆದ ಕ್ರಿಕೆಟ್ ವಿಶ್ವಕಪ್ ಪಂದ್ಯದಲ್ಲಿ ಭಾರತ ವಿರುದ್ಧ ಪಾಕಿಸ್ತಾನ ಜಯಗಳಿಸಿದ ನಂತರ ಸಂಭ್ರಮಾಚರಣೆಯ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಶಿಕ್ಷಕಿಯನ್ನು ಕೆಲಸದಿಂದ ಅಮಾನತುಗೊಳಿಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ.

ರಾಜಸ್ಥಾನದ ಉದಯಪುರದ ಖಾಸಗಿ ಶಾಲೆಯ ಶಿಕ್ಷಕಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಜೊತೆಗೆ ಆಕೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಉದಯಪುರದ ನೀರಜಾ ಮೋದಿ ಶಾಲೆಯ ಶಿಕ್ಷಕಿ ನಫೀಸಾ ಅಟ್ಟಾರಿ ಅವರು ತಮ್ಮ ವಾಟ್ಸಾಪ್ ಸ್ಟೇಟಸ್‌ನಲ್ಲಿ ಪಾಕಿಸ್ತಾನಿ ಕ್ರಿಕೆಟ್ ಆಟಗಾರರ ಚಿತ್ರವನ್ನು ಹಾಕಿ “ಜೀತ್ ಗಯೀ… ನಾವು ಗೆದ್ದಿದ್ದೇವೆ” ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್ ಮಾಡಿದ್ದರು.

ಶಿಕ್ಷಕಿ ನಫೀಸಾ ಅಟ್ಟಾರಿ ಅವರ ವಾಟ್ಸಾಪ್ ಸ್ಟೇಟಸ್‌ನ ಸ್ಕ್ರೀನ್‌ಶಾಟ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಶಾಲೆಯ ಆಡಳಿತ ಮಂಡಳಿ ಅವರನ್ನು ವಜಾಗೊಳಿಸಿದೆ. “ನಾವು ಶಿಕ್ಷಕಿಯನ್ನು ವಜಾಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ” ಎಂದು ಸೋಜಾಟಿಯಾ ಚಾರಿಟೇಬಲ್ ಟ್ರಸ್ಟ್‌ನ ಸಭೆಯ ಬಳಿಕ ಶಾಲೆಯ ಅಧ್ಯಕ್ಷ ಮಹೇಂದ್ರ ಸೋಜಾಟಿಯಾ ದೃಢಪಡಿಸಿದ್ದಾರೆ.

ಇದನ್ನೂ ಓದಿ: ಸೋಲೆ ಗೆಲುವಿನ ಸೋಪಾನ: T20 ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಹುರಿದುಂಬಿಸಿದ ಬಾಲಿವುಡ್‌ ಮಂದಿ

ಭಾರತೀಯ ದಂಡ ಸಂಹಿತೆ 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ) ಅಡಿಯಲ್ಲಿ ಶಿಕ್ಷಕಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಂಬಾ ಮಾತಾ ಪೊಲೀಸ್ ಠಾಣೆ ಎಸ್‌ಎಚ್‌ಒ ನರ್ಪತ್ ಸಿಂಗ್ ಹೇಳಿದ್ದಾರೆ.

ಘಟನೆ ತೀವ್ರ ಸ್ಪರೂಪ ಪಡೆದುಕೊಂಡ ಬಳಿಕ ಪೋಸ್ಟ್‌ಗಾಗಿ ಕ್ಷಮೆಯಾಚಿಸುವ ವೀಡಿಯೊ ಹೇಳಿಕೆಯನ್ನು ಶಿಕ್ಷಕಿ ಬಿಡುಗಡೆ ಮಾಡಿ, ಯಾರ ಭಾವನೆಯನ್ನು ನೋಯಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದರು.

“ಯಾರೋ ನನಗೆ ಸಂದೇಶ ಕಳುಹಿಸಿ ‘ನೀವು ಪಾಕಿಸ್ತಾನವನ್ನು ಬೆಂಬಲಿಸುತ್ತೀರಾ’ ಎಂದು ಕೇಳಿದರು. ಸಂದೇಶವು ಎಮೋಜಿಗಳನ್ನು ಹೊಂದಿದ್ದು ತಮಾಷೆಯಾಗಿತ್ತು ಅದಕ್ಕೆ, ನಾನು ‘ಹೌದು’ ಎಂದು ಉತ್ತರಿಸಿದೆ. ಆದರೆ, ನಾನು ಪಾಕಿಸ್ತಾನವನ್ನು ಬೆಂಬಲಿಸುತ್ತೇನೆ ಎಂದು ಅರ್ಥವಲ್ಲ. ನಾನು ಭಾರತೀಯಳು. ನಾನು ಭಾರತವನ್ನು ಪ್ರೀತಿಸುತ್ತೇನೆ. ನಾನು ತಪ್ಪು ಮಾಡಿದ್ದೇನೆ ಎಂದು ತಿಳಿದುಕೊಂಡ ತಕ್ಷಣ, ನಾನು ಸ್ಟೇಟಸ್ ಅಳಿಸಿದ್ದೇನೆ. ಯಾರ ಭಾವನೆಗಳನ್ನೆನಾದರೂ ನೋಯಿಸಿದ್ದರೆ ಕ್ಷಮಿಸಿ” ಶಿಕ್ಷಕಿ ತಮ್ಮ ವೀಡಿಯೊ ಸಂದೇಶದಲ್ಲಿ ತಿಳಿಸಿದ್ದಾರೆ.

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ದುಕೊಂಡಿತು. ಪಾಕಿಸ್ತಾನದ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ಗಳು ತತ್ತರಿಸಿದರು. 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡ ಭಾರತ 151 ರನ್ ಪೇರಿಸಲಷ್ಟೇ ಸಾಧ್ಯವಾಯಿತು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಯಾವುದೇ ವಿಕೆಟ್ ನಷ್ಟವಿಲ್ಲದೆ 152 ರನ್ ಗಳಿಸಿ ಗೆಲುವು ದಾಖಲಿಸಿತ್ತು.


ಇದನ್ನೂ ಓದಿ: ಕ್ರಿಕೆಟ್‌ನಲ್ಲಿ ಭಾರತಕ್ಕೆ ಸೋಲು, ಪಂಜಾಬ್‌ನಲ್ಲಿ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...