Homeಮುಖಪುಟಸೈಬರ್ ವಂಚನೆ : 10 ತಿಂಗಳಲ್ಲಿ ₹ 2,140 ಕೋಟಿ ಕಳೆದುಕೊಂಡ ಭಾರತೀಯರು!

ಸೈಬರ್ ವಂಚನೆ : 10 ತಿಂಗಳಲ್ಲಿ ₹ 2,140 ಕೋಟಿ ಕಳೆದುಕೊಂಡ ಭಾರತೀಯರು!

'ಡಿಜಿಟಲ್ ಅರೆಸ್ಟ್' ಪ್ರಕರಣಗಳೇ ಹೆಚ್ಚು

- Advertisement -
- Advertisement -

ಈ ವರ್ಷದ (2024) 10 ತಿಂಗಳ ಅವಧಿಯಲ್ಲಿ ಸೈಬರ್ ವಂಚಕರು ಭಾರತೀಯರ ಬರೋಬ್ಬರಿ 2, 140 ಕೋಟಿ ರೂಪಾಯಿಗಳನ್ನು ದೋಚಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯದ ಸೈಬರ್ ವಿಭಾಗ ಐ4ಸಿ (I4C) ವರದಿ ತಿಳಿಸಿದೆ.

ಡಿಜಿಟಲ್ ಅರೆಸ್ಟ್ ವಂಚನೆಯ ಮೂಲಕ ಹೆಚ್ಚಿನ ಹಣವನ್ನು ದೋಚಲಾಗಿದೆ. ಸೈಬರ್ ವಂಚಕರು ಜಾರಿ ನಿರ್ದೇಶನಾಲಯ (ಇಡಿ) ಕೇಂದ್ರಿಯ ತನಿಖಾ ದಳ (ಸಿಬಿಐ) ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಮತ್ತು ಪೊಲೀಸ್ ಅಧಿಕಾರಿಗಳಂತೆ ಸೋಗು ಹಾಕಿ ಜನರು ತಮ್ಮ ಬ್ಯಾಂಕ್‌ ಖಾತೆಗಳಿಂದ ಹಣ ವರ್ಗಾಯಿಸುವಂತೆ ಮಾಡುತ್ತಿದ್ದಾರೆ ಎಂದು ವರದಿ ಹೇಳಿದೆ.

ಹೆಚ್ಚಿನ ಸೈಬರ್‌ ವಂಚನೆಗಳು ಅಥವಾ ಡಿಜಿಟಲ್ ಅರೆಸ್ಟ್ ವಂಚನೆಯನ್ನು ಕಾಂಬೋಡಿಯಾ, ಮ್ಯಾನ್ಮಾರ್, ವಿಯೆಟ್ನಾಂ, ಲಾವೋಸ್ ಮತ್ತು ಥೈಲ್ಯಾಂಡ್‌ನಂತಹ ದೇಶಗಳಿಂದ ಕಾರ್ಯನಿರ್ವಹಿಸುತ್ತಿರುವ ಹಲವಾರು ಕಾಲ್ ಸೆಂಟರ್‌ಗಳಿಂದ ಮಾಡಲಾಗುತ್ತಿದೆ.

ಕಾಂಬೋಡಿಯಾ ಮತ್ತು ಚೀನಾ ಒಡೆತನದ ಕ್ಯಾಸಿನೋಗಳಲ್ಲಿ ಹೆಚ್ಚಾಗಿ ಈ ಕಾಲ್‌ ಸೆಂಟರ್‌ಗಳು ನೆಲೆಗೊಂಡಿವೆ. ಅಲ್ಲಿನ ಸೈಬರ್ ಗುಲಾಮಗಿರಿಯು ಕಳವಳಕಾರಿ ವಿಷಯವಾಗಿದೆ. ವಂಚನೆಯ ಮೂಲ ವಿದೇಶದಲ್ಲಿದ್ದರೂ, ಅದಕ್ಕೆ ಬಲಿಯಾಗುತ್ತಿರುವ 30 ರಿಂದ 40 ಶೇಖಡ ಜನರು ಭಾರತೀಯರು. ಇಲ್ಲಿನ ಸ್ಥಳೀಯ ವಂಚನೆಯ ಜಾಲಗಳೂ ಈ ವಿಚಾರದಲ್ಲಿ ಸಕ್ರಿಯವಾಗಿವೆ ಎಂದು ವರದಿ ವಿವರಿಸಿದೆ.

ವರದಿಯ ಪ್ರಕಾರ, ಜನವರಿ 2024 ರಿಂದ, ಭಾರತದಲ್ಲಿ 92,334ಕ್ಕೂ ಹೆಚ್ಚು ಡಿಜಿಟಲ್ ಅರೆಸ್ಟ್ ಘಟನೆಗಳು ನಡೆದಿವೆ. ಬಹುತೇಕ ಪ್ರಕರಣಗಳಲ್ಲಿ ತಕ್ಷಣ ಹಣ ವರ್ಗಾಯಿಸದಿದ್ದರೆ ತೀವ್ರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹೆದರಿಕೊಂಡು ಜನರು ಮೋಸ ಹೋಗುತ್ತಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ವರದಿಯ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯದ ಅಧೀನದಲ್ಲಿರುವ ಸೈಬರ್ ಸೆಕ್ಯುರಿಟಿ ಏಜೆನ್ಸಿ CERT-IN ಜನರು ಸೈಬರ್ ವಂಚನೆಯ ಜಾಲದಲ್ಲಿ ಬಿದ್ದಿರುವ ಅನುಮಾನ ಎದುರಾದರೆ ರಕ್ಷಣೆ ಪಡೆಯಲು ಹಲವು ಸಲಹೆಗಳನ್ನು ನೀಡಿದೆ. ವಂಚನೆಗೊಳಗಾದವರು ಸಹಾಯವಾಣಿ ಸಂಖ್ಯೆ 1930ಗೆ ಕರೆ ಮಾಡಿ ಐ4ಸಿಗೆ ನೇರವಾಗಿ ವರದಿ ಮಾಡಬಹುದು. ಹೀಗೆ ವರದಿ ಮಾಡಿದರೆ, ಜನರು ಕಳೆದುಕೊಂಡಿರುವ ಹಣವನ್ನು ಮರಳಿ ಪಡೆಯಬಹುದು ಅಥವಾ ನಷ್ಟವನ್ನು ತಡೆಗಟ್ಟಲು ಗರಿಷ್ಠ ಪ್ರಯತ್ನ ಮಾಡಬಹುದು.

ಹೆಚ್ಚುತ್ತಿರುವ ಡಿಜಿಟಲ್ ಅರೆಸ್ಟ್ ವಂಚನೆಯ ಕುರಿತು ಅಕ್ಟೋಬರ್ 27ರಂದು ನಡೆದ ಮನ್‌ ಕಿ ಬಾತ್ 115ನೇ ಸಂಚಿಕೆಯಲ್ಲಿ ಪ್ರಧಾನಿ ಮೋದಿ ಉಲ್ಲೇಖಿಸಿದ ಬಳಿಕ ಹೆಚ್ಚಿನ ಚರ್ಚೆ ನಡೆಯುತ್ತಿದೆ.

ಈ ಡಿಜಿಟಲ್ ಅರೆಸ್ಟ್ ಅಂದರೆ ಏನು? ಅದರ ಮೂಲಕ ಹೇಗೆ ಜನರಿಂದ ಹಣ ದೋಚಲಾಗುತ್ತದೆ ಎಂಬುವುದರ ಕುರಿತ ವಿಸ್ಕೃತ ವರದಿ ಕೆಳಗಿದೆ

ಇದನ್ನೂ ಓದಿ : Explained : ಏನಿದು ‘ಡಿಜಿಟಲ್ ಅರೆಸ್ಟ್’ ವಂಚನೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...