Homeಮುಖಪುಟವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ INDIA ಹೆಸರು ಪ್ರಸ್ತಾಪ

ವಿರೋಧ ಪಕ್ಷಗಳ ಮೈತ್ರಿಕೂಟಕ್ಕೆ INDIA ಹೆಸರು ಪ್ರಸ್ತಾಪ

- Advertisement -
- Advertisement -

ಸೋಮವಾರ ಮತ್ತು ಮಂಗಳವಾರ ಬೆಂಗಳೂರಿನಲ್ಲಿ ನಡೆಯುತ್ತಿರುವ ಎರಡು ದಿನಗಳ ವಿರೋಧ ಪಕ್ಷಗಳ ಮೈತ್ರಿಕೂಟದ ಸಭೆಯಲ್ಲಿ ಒಕ್ಕೂಟಕ್ಕೆ INDIA (Indian National Developmental Inclusive Alliance) ಎಂಬ ಹೆಸರಿಡುವ ಪ್ರಸ್ತಾಪ ಮುಂದಿಡಲಾಗಿದೆ.

ನೂತನ ಹೆಸರಿಗೆ ಬಹುತೇಕ ಪಕ್ಷಗಳು ಒಪ್ಪಿಗೆ ನೀಡಿದ್ದು ಮುಂದಿನ ಸಭೆಗಳಲ್ಲಿ ಅಧಿಕೃತವಾಗಿ ಘೋಷಣೆ ಮಾಡಲಾಗುವುದು ಎನ್ನಲಾಗಿದೆ. ಒಕ್ಕೂಟದ ಮುಖ್ಯಸ್ಥರನ್ನಾಗಿ ಸೋನಿಯಾ ಗಾಂಧಿ ಅವರನ್ನು ಆಯ್ಕೆ ಮಾಡುವ ಬಗ್ಗೆಯೂ ಚರ್ಚೆಗಳು ನಡೆದಿವೆ.

ಪ್ರತಿಪಕ್ಷಗಳ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ”ತಮ್ಮ ಪಕ್ಷಕ್ಕೆ ಅಧಿಕಾರ ಅಥವಾ ಪ್ರಧಾನಿ ಹುದ್ದೆಯ ಬಗ್ಗೆ ಆಸಕ್ತಿ ಇಲ್ಲ. 2024ರಲ್ಲಿ ಎನ್‌ಡಿಎಯನ್ನು ಅಧಿಕಾರದಿಂದ ಹೊರಗಿಡಲು ಬಿಜೆಪಿಯನ್ನು ಗುರಿಯಾಗಿಟ್ಟುಕೊಂಡು, ಆಡಳಿತ ಪಕ್ಷದ ವಿರುದ್ಧ ಹೋರಾಟ ಮಾಡಬೇಕಿದೆ” ಎಂದಿದ್ದಾರೆ.

ನಾವು 26 ಪಕ್ಷಗಳು ಇಲ್ಲಿ ಸೇರಿದ್ದೇವೆ, ಅಲ್ಲದೇ 11 ರಾಜ್ಯಗಳಲ್ಲಿ ನಮ್ಮ ಸರ್ಕಾರವಿದೆ. ಬಿಜೆಪಿ ತಮ್ಮ ಮಿತ್ರಪಕ್ಷಗಳ ಮತಗಳನ್ನು ಬಳಸಿಕೊಂಡು ನಂತರ ಅವುಗಳನ್ನು ತಿರಸ್ಕರಿಸಿತ್ತು. ಆದರೆ ಈಗ ಬಿಜೆಪಿ ಅಧ್ಯಕ್ಷರು ಮತ್ತು ಪಕ್ಷದ ನಾಯಕರು ಹಳೆಯ ಮಿತ್ರ ಪಕ್ಷದ ನಾಯಕರನ್ನು ಸೆಳೆಯಲು ”ರಾಜ್ಯದಿಂದ ರಾಜ್ಯಕ್ಕೆ ಓಡುತ್ತಿದ್ದಾರೆ.” ಎಂದು ಅವರು ಸಭೆಯಲ್ಲಿ ಟೀಕಿಸಿದರು.

ಸಭೆಯಲ್ಲಿ ಭಾಗವಹಿಸಿರುವ ಪಕ್ಷಗಳ ಪಟ್ಟಿ ಇಲ್ಲಿದೆ.

1. ಕಾಂಗ್ರೆಸ್:

2. ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (TMC)

3. ದ್ರಾವಿಡ ಮುನ್ನೇತ್ರ ಕಳಗಂ (DMK)

4. ಆಮ್ ಆದ್ಮಿ ಪಕ್ಷ (AAP):

5. ಜನತಾ ದಳ (ಯುನೈಟೆಡ್): (JDU)

6. ರಾಷ್ಟ್ರೀಯ ಜನತಾ ದಳ (RJD):

7. ಜಾರ್ಖಂಡ್ ಮುಕ್ತಿ ಮೋರ್ಚಾ (JMM):

8. ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) – ಶರದ್ ಪವಾರ್ ಬಣ

9. ಶಿವಸೇನೆ (UBT)

10. ಸಮಾಜವಾದಿ ಪಕ್ಷ (SP)

11. ರಾಷ್ಟ್ರೀಯ ಲೋಕದಳ (RLD)

12. ಅಪ್ನಾ ದಳ (ಕಾಮೆರವಾಡಿ)

13. ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್(NC)

14. ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP)

15. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ)

16. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ)

17. ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಎಂಎಲ್) ಲಿಬರೇಶನ್

18. ಕ್ರಾಂತಿಕಾರಿ ಸಮಾಜವಾದಿ ಪಕ್ಷ (RSP)

19. ಆಲ್ ಇಂಡಿಯಾ ಫಾರ್ವರ್ಡ್ ಬ್ಲಾಕ್

20. ಮರುಮಲಾರ್ಚಿ ದ್ರಾವಿಡ ಮುನ್ನೇತ್ರ ಕಳಗಂ (MDMK)

21. ವಿದುತಲೈ ಚಿರುತೈಗಲ್ ಕಚ್ಚಿ (VCK)

22. ಕೊಂಗುನಾಡು ಮಕ್ಕಳ್ ದೇಸಿಯಾ ಕಚ್ಚಿ (KMDK)

23. ಮಾನಿತನೇಯ ಮಕ್ಕಳ್ ಕಚ್ಚಿ (MMK)

24. ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (IUML)

25. ಕೇರಳ ಕಾಂಗ್ರೆಸ್ (ಎಂ)

26. ಕೇರಳ ಕಾಂಗ್ರೆಸ್ (ಜೋಸೆಫ್)

ಇದನ್ನೂ ಓದಿ: ಪ್ರಧಾನಿ ಹುದ್ದೆಯ ಮೇಲೆ ಕಾಂಗ್ರೆಸ್‌ಗೆ ಆಸಕ್ತಿ ಇಲ್ಲ: ಪ್ರತಿಪಕ್ಷಗಳ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...