2050ರ ವೇಳೆಗೆ ಭಾರತವು ವಿಶ್ವದ 3ನೇ ಅತಿದೊಡ್ಡ ಆರ್ಥಿಕತೆಯ ದೇಶವಾಗಲಿದೆ: ಅಧ್ಯಯನ

2050ರ ವೇಳೆಗೆ ಅಮೇರಿಕಾ ಮತ್ತು ಚೀನಾದ ನಂತರ, ಭಾರತವು ವಿಶ್ವದಲ್ಲಿ 3ನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿರುವ ರಾಷ್ಟ್ರವಾಗಲಿದೆ ಎಂದು ಲ್ಯಾನ್ಸೆಟ್‌ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನ ತಿಳಿಸಿದೆ. ಪ್ರಸ್ತುತ ಭಾರತ 5ನೇ ಸ್ಥಾನದಲ್ಲಿದ್ದು, ಫ್ರಾನ್ಸ್‌ ಮತ್ತು ಇಂಗ್ಲೆಂಡ್‌ನ ನಂತರದ ಸ್ಥಾನದಲ್ಲಿದೆ.

ಇದನ್ನೂ ಓದಿ: ಲಾಕ್‌ಡೌನ್‌ನಿಂದಾಗಿ ಆರ್ಥಿಕತೆ ನೆಲಕಚ್ಚಿದ್ದಾಗ ಅಂಬಾನಿ ಪ್ರತಿ ಗಂಟೆಗೆ ಸಂಪಾದಿಸಿದ್ದು ಎಷ್ಟು ಗೊತ್ತೇ?

2017 ರಲ್ಲಿ ಭಾರತವು ವಿಶ್ವದ ಏಳನೇ ಅತಿದೊಡ್ಡ ಆರ್ಥಿಕತೆಯನ್ನು ಹೊಂದಿರುವ ದೇಶವಾಗಿತ್ತು. ಈ ಅಧ್ಯಯನವು ಆ ಮೂಲ ವರ್ಷವನ್ನು ಆಧಾರವಾಗಿಟ್ಟುಕೊಂಡು ದೇಶದ ಬೆಳವಣಿಗೆಯನ್ನು ಅಧ್ಯಯನಿಸಿದೆ. ಈ ಅಧ್ಯಯನದ ಪ್ರಕಾರ, ಭಾರತವು 2030 ರ ವೇಳೆಗೆ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಲಿದ್ದು, 2050 ರ ವೇಳೆಗೆ ಮೂರನೇ ಸ್ಥಾನಕ್ಕೆ ತಲುಪಲಿದೆ ಎಂದು ತಿಳಿದುಬಂದಿದೆ. ಇದು ಸಂಭವಿಸಿದರೆ, ಪ್ರಸ್ತುತ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿರುವ ಜಪಾನ್‌ ಅನ್ನು ಭಾರತವು ಹಿಂದಿಕ್ಕಲಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಆದರೆ, ಲಾಕ್‌ಡೌನ್‌ ಸಂದರ್ಭದಲ್ಲಿ ದೇಶದ ಜಿಡಿಪಿ ಕುಸಿದು, ಇತ್ತೀಚಿನ ವರ್ತಮಾನದ ಪ್ರಕಾರ ಅದು ಶೇ. -23ರಷ್ಟು ಕುಸಿದಿತ್ತು. ನಿರುದ್ಯೋಗ ದಾಖಲೆ ಪ್ರಮಾಣದಲ್ಲಿ ಏರಿತ್ತು. ಕೃಷಿಯೊಂದನ್ನು ಹೊರತುಪಡಿಸಿದರೆ ಉತ್ಪಾದನೆ, ಸೇವಾ ವಲಯ, ನಿರ್ಮಾಣ ವಲಯ ಸೇರಿದಂತೆ ಮಿಕ್ಕೆಲ್ಲಾ ಕ್ಷೇತ್ರಗಳು ತೀವ್ರ ಸಂಕಷ್ಟ ಅನುಭವಿಸಿದ್ದವು.

ಇದನ್ನೂ ಓದಿ: ಕೊರೊನಾ ಪ್ಯಾಕೇಜ್‌ ಅಸಮರ್ಪಕ, ದೇಶದ ಆರ್ಥಿಕತೆ ಕುಸಿಯುತ್ತಿದೆ: ಬಿಜೆಪಿ ರಾಜ್ಯಸಭಾ ಸದಸ್ಯ ಸುಬ್ರಹ್ಮಣ್ಯನ್‌ ಸ್ವಾಮಿ

ಹಿಂದೆಂದಿಗಿಂತಲೂ ಇಂದು ದೇಶದ ಆರ್ಥಿಕತೆ ಪಾತಾಳ ಸೇರಿದೆ ಎಂದು ಭಾರತದ ಅರ್ಥಶಾಸ್ತ್ರಜ್ಮರಿಂದ ಹಿಡಿದು ಅಂತರಾಷ್ಟ್ರೀಯ ತಜ್ಞರವರೆಗೆ ಬಹುತೇಕರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ಈ ಅಧ್ಯಯನ ಸ್ವಲ್ಪಮಟ್ಟಿಗೆ ಆಶಾಭಾವನೆಯನ್ನು ಮೂಡಿಸುತ್ತದಾದರೂ, ಅನುಮಾನಕ್ಕೂ ಎಡೆ ಮಾಡಿಕೊಡುತ್ತದೆ?!

ದೇಶದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಆರ್ಥಿಕ ತಜ್ಞರೂ ಆದ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದು, ಸರ್ಕಾರದ ಅಸಮರ್ಪಕ ನೀತಿಗಳ ವಿರುದ್ಧ ತೀವ್ರವಾಗಿ ಟೀಕೆ ಮಾಡಿದ್ದರು.

ಇದನ್ನೂ ಓದಿ: ದೋಷಪೂರಿತ ಜಿಎಸ್‌ಟಿ ದೇಶದ ಆರ್ಥಿಕತೆಯನ್ನು ನಾಶಮಾಡಿದೆ: ರಾಹುಲ್ ಗಾಂಧಿ

“2014-15 ರ ಆರ್ಥಿಕ ವರ್ಷದಲ್ಲಿ ದೇಶದ ಅಭಿವೃದ್ಧಿ ದರ ಶೇ.8 ರಷ್ಟಿತ್ತು. ನಂತರದ ವರ್ಷಗಳಲ್ಲಿ ಅದು ವರ್ಷದಿಂದ ವರ್ಷಕ್ಕೆ ಕುಸಿಯುತ್ತಾ ಬಂದಿದೆ. 2019-20 ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಅಭಿವೃದ್ಧಿ ದರ 3.1 ಕ್ಕೆ ಕುಸಿದಿತ್ತು. ಕೊರೊನಾ ನಂತರದಲ್ಲಿ ಮತ್ತಷ್ಟು ಕುಸಿತ ಕಂಡಿದೆ. ಲಾಕ್‌ಡೌನ್‌ ಹೇರಿಕೆಯಿಂದಾಗಿ ವ್ಯಾಪಾರ, ವಹಿವಾಟು, ಉತ್ಪಾದನಾ ಕ್ಷೇತ್ರ ಎಲ್ಲವೂ ಸ್ಥಗಿತಗೊಂಡಿದ್ದು, ಅಭಿವೃದ್ಧಿ ಸೂಚ್ಯಂಕ ಬಿದ್ದಿದೆ. ಜಿಡಿಪಿ ದರ ಗಣನೀಯವಾಗಿ ಕುಸಿಯುತ್ತಿದೆ ಎಂದು ನಾನು ಹೇಳುತ್ತಲೇ ಇದ್ದೆ. ಆದರೆ, ಎಲ್ಲರೂ ನನಗೆ ಬೈದು ಬಾಯಿಮುಚ್ಚಿಸುತ್ತಿದ್ದರು. ಈಗ, 2020-2021 ರ ಹಣಕಾಸು ವರ್ಷದ ಆರಂಭದಲ್ಲಿ (ಏಪ್ರಿಲ್‌-ಜೂನ್‌ 30)  ದೇಶದ ಜಿಡಿಪಿ ಶೇಕಡಾ 23.9 ರಷ್ಟು ಕುಸಿದಿದೆ. ಈ ವರ್ಷದ ಅಂತ್ಯದ ವೇಳೆಗೆ ದೇಶದ ಅಭಿವೃದ್ಧಿ ದರ -15% ಗೆ ಇಳಿಯಬಹುದು. ಕೊನೆಗೆ ಒಟ್ಟಾರೆ ದೇಶದ ಬೆಳವಣಿಗೆ ಶೇಕಡಾ 15 ರಷ್ಟಾಗಬಹುದು” ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಐತಿಹಾಸಿಕ ಕುಸಿತಕ್ಕೆ ಸಾಕ್ಷಿಯಾದ ಭಾರತದ ಆರ್ಥಿಕತೆ; ವರ್ಷದ ಮೊದಲ ತ್ರೈಮಾಸಿಕದಲ್ಲೇ ಶೇ.-23.9 ರಷ್ಟು ಕುಸಿತ!

“ಕಳೆದ ನಾಲ್ಕೈದು ವರ್ಷಗಳಿಂದ ವಿತ್ತೀಯ ಕೊರತೆಯುಂಟಾಗಿದೆ. ನೋಟು ಅನಾಣ್ಯೀಕರಣ ಮತ್ತು ಜಿಎಸ್‌ಟಿಯಿಂದ ಇದು ಸಂಭವಿಸಿದೆ. ಇದನ್ನು ತೆರಿಗೆ ಭಯೋತ್ಪಾದನೆ ಎಂದು ನಾವು ಕರೆಯಬಹುದು. ಆದಾಯ ತೆರಿಗೆ ದಿನದಿಂದ ದಿನಕ್ಕೆ ಕಠಿಣವಾಗುತ್ತಿದೆ. ಸರ್ಕಾರ ಜನರ ಕೈಗೆ ಹೇಗೆ ಹಣ ತಲುಪಬೇಕು ಎಂಬುದರ ಬಗ್ಗೆ ಯೋಚಿಸಬೇಕು. ಕೊರೊನಾ ಪರಿಸ್ಥಿತಿಯನ್ನು ಸರ್ಕಾರ ಉತ್ತಮವಾಗಿ ನಿಭಾಯಿಸಿದೆ. ಆದರೆ, ದೇಶಾದ್ಯಂತ ಲಾಕ್‌ಡೌನ್‌ ಹೇರುವ ಮುನ್ನ ಜನರಿಗೆ ತಮ್ಮ ಜೀವನೋಪಾಯಕ್ಕೆ ಬೇಕಾದ ತಯಾರಿ ಮಾಡಿಕೊಳ್ಳಲು ಕಾಲಾವಕಾಶ ನೀಡಬೇಕಾಗಿತ್ತು. ಆದರೆ, ಅದು ಆಗಲಿಲ್ಲ ಹಾಗಾಗಿ ಜನರು ಸಂಕಷ್ಟಗಳನ್ನು ಎದುರಿಸಬೇಕಾಯಿತು” ಎಂದು ವಿವರಿಸಿದ್ದರು


ಇದನ್ನೂ ಓದಿ: ಕೋವಿಡ್‌ನಿಂದ ನೆಲಕಚ್ಚಿರುವ ಆರ್ಥಿಕತೆಯನ್ನು ಮೇಲೆತ್ತಲು ಸರ್ಕಾರ ಮಾಡಬೇಕಾದುದ್ದೇನು?

Donate

ಈ ಲೇಖನ, ಈ ವೆಬ್‌ಸೈಟ್ ನಿಮಗೆ ಇಷ್ಟವಾಯಿತೇ? ನಿಮ್ಮ ಬೆಂಬಲ ಇದಕ್ಕೆ ಅಗತ್ಯ.

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

+ posts