ಕೊರೊನಾ: ಡಿ.31ರ ವರೆಗೆ ಅಂತಾರಾಷ್ಟ್ರೀಯ ವಿಮಾನಯಾನಕ್ಕೆ ನಿರ್ಬಂಧ

ಕೊರೊನಾವೈರಸ್ ಸಾಂಕ್ರಾಮಿಕದ ಕಾರಣದಿಂದಾಗಿ ಅಂತಾರಾಷ್ಟ್ರೀಯ ವಿಮಾನ ನಿಷೇಧವನ್ನು ಡಿಸೆಂಬರ್ 31ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶನಾಲಯ ​​(ಡಿಜಿಸಿಎ) ತಿಳಿಸಿದೆ.

‘ಸರಕು ಸಾಗಣೆ ವಿಮಾನಗಳಿಗೆ ಹಾಗೂ ಡಿಜಿಸಿಎಯಿಂದ ನಿರ್ದಿಷ್ಟವಾಗಿ ಒಪ್ಪಿಗೆ ಪಡೆದು ಕಾರ್ಯಾಚರಣೆ ನಡೆಸುವ ವಿಮಾನಗಳಿಗೆ ಈ ನಿರ್ಬಂಧ ಅನ್ವಯಿಸುವುದಿಲ್ಲ’ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ನಿರ್ದೇಶನಾಲಯ ಹೊರಡಿಸಿರುವ ಆದೇಶದಲ್ಲಿ, “ಜೂನ್‌.26, 2020ರ ಸುತ್ತೋಲೆಯ ಅವಧಿಯನ್ನು ವಿಸ್ತರಿಸಲಾಗಿದ್ದು, ಅಂತಾರಾಷ್ಟ್ರೀಯ ವಾಣಿಜ್ಯಕ್ಕೆ ಸಂಬಂಧಿಸಿದಂತೆ ಭಾರತದಿಂದ ಹೊರಡುವ ಮತ್ತು  ಆಗಮಿಸುವ ಅಂತಾರಾಷ್ಟ್ರೀಯ ವಾಣಿಜ್ಯ ಪ್ರಯಾಣಿಕರ ವಿಮಾನಸೇವೆಯನ್ನು ಡಿ.31ರ ರಾತ್ರಿ 11.59ರವರೆಗೆ ನಿಷೇಧಿಸಲಾಗಿದೆ” ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ವಿಮಾನಯಾನಕ್ಕೆ ನ.30ರವರೆಗೆ ನಿರ್ಬಂಧ ವಿಸ್ತರಣೆ

 

Image
PC: [email protected]a

ಕಳೆದ ಅಕ್ಟೋಬರ್‌ 28 ರಂದು ಡಿಜಿಸಿಎ ನಿಗದಿತ ಅಂತಾರಾಷ್ಟ್ರೀಯ ಪ್ರಯಾಣಿಕರ ಹಾರಾಟದ ನಿಷೇಧವನ್ನು ನವೆಂಬರ್ 30ರ ವರೆಗೆ ವಿಸ್ತರಿಸಿತು. ಅಂದಿನ ಆದೇಶದಲ್ಲೂ MHA ಮತ್ತು DGCA ಅನುಮೋದಿಸಿದ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಕಾರ್ಯನಿರ್ವಹಣೆ ಮುಂದುವರಿಯುತ್ತವೆ ಎಂದು ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿತ್ತು. ಜೊತೆಗೆ ಅಂತಾರಾಷ್ಟ್ರೀಯ ಸರಕು ಸಾಗಣೆ ವಿಮಾನಗಳಿಗೆ ನಿರ್ಬಂಧಗಳು ಅನ್ವಯಿಸುವುದಿಲ್ಲ ಎಂದು ಡಿಜಿಸಿಎ ತಿಳಿಸಿತ್ತು.

ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಕಳೆದ ಮಾರ್ಚ್ 23ರಿಂದ ಅಂತಾರಾಷ್ಟ್ರೀಯ ವಿಮಾನ ಯಾನವನ್ನು ನಿಷೇಧಿಸಲಾಗಿದೆ. ಆದರೆ ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿಶೇಷ ಅಂತಾರಾಷ್ಟ್ರೀಯ ವಿಮಾನಗಳು ಕಾರ್ಯನಿರ್ವಹಿಸುತ್ತಿವೆ.


ಇದನ್ನೂ ಓದಿ: ರಾಜ್ಯ ಸರ್ಕಾರ ದಿವಾಳಿಯಾಗಿದೆ, ವೃದ್ಧಾಪ್ಯ ವೇತನ ನೀಡಲು ಕೂಡಾ ಹಣವಿಲ್ಲ: ಸಿದ್ದರಾಮಯ್ಯ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here