Homeಮುಖಪುಟಭಾರತ ಹಿಂದೂ ರಾಷ್ಟ್ರವಲ್ಲ: ಮೋಹನ್ ಭಾಗವತ್‌ಗೆ ತಿರುಗೇಟು ಕೊಟ್ಟ ಸ್ವಾಮಿ ಪ್ರಸಾದ್ ಮೌರ್ಯ

ಭಾರತ ಹಿಂದೂ ರಾಷ್ಟ್ರವಲ್ಲ: ಮೋಹನ್ ಭಾಗವತ್‌ಗೆ ತಿರುಗೇಟು ಕೊಟ್ಟ ಸ್ವಾಮಿ ಪ್ರಸಾದ್ ಮೌರ್ಯ

- Advertisement -
- Advertisement -

ಭಾರತ ಹಿಂದೂ ರಾಷ್ಟ್ರ ಎಂಬ ಮೋಹನ್ ಭಾಗವತ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಮಾಜವಾದಿ ಪಕ್ಷದ (ಎಸ್‌ಪಿ) ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಭಾರತ ಎಂದಿಗೂ ಇಂದು ರಾಷ್ಟ್ರವಲ್ಲ ಎಂದು ಹೇಳಿದ್ದಾರೆ.

ಸ್ವಾಮಿ ಪ್ರಸಾದ್ ಮೌರ್ಯ ಅವರು ತಮ್ಮ ಅಧಿಕೃತ X (ಟ್ವಿಟ್ಟರ್)ನಲ್ಲಿ ಭಾರತವು ಹಿಂದೂ ರಾಷ್ಟ್ರವಲ್ಲ, ಮತ್ತು ಅದು ಎಂದೂ ಹಿಂದೂ ರಾಷ್ಟ್ರವಾಗಿರಲಿಲ್ಲ. ಭಾರತ ಬಹುತ್ವವನ್ನು ಅಂತರ್ಗತ ಮಾಡಿಕೊಂಡಿರುವ ರಾಷ್ಟ್ರವಾಗಿದೆ ಎಂದು ಹೇಳಿದ್ದಾರೆ.

ನಮ್ಮ ಸಂವಿಧಾನವು ಜಾತ್ಯತೀತ ರಾಜ್ಯದ ಕಲ್ಪನೆಯನ್ನು ಆಧರಿಸಿದೆ. ಭಾರತದಲ್ಲಿರುವ ಎಲ್ಲಾ ಜನರು ಭಾರತೀಯರು. ನಮ್ಮ ಭಾರತೀಯ ಸಂವಿಧಾನವು ಎಲ್ಲಾ ಧರ್ಮಗಳು, ನಂಬಿಕೆಗಳು, ಪಂಗಡಗಳು ಮತ್ತು ಸಂಸ್ಕೃತಿಗಳನ್ನು  ಪ್ರತಿನಿಧಿಸುತ್ತದೆ ಎಂದು ಸಮಾಜವಾದಿ ಪಕ್ಷದ ನಾಯಕ ಹಿಂದಿಯಲ್ಲಿ ಬರೆದಿದ್ದಾರೆ.

ನಾಗ್ಪುರದಲ್ಲಿ ನಡೆದ ‘ಮಧುಕರ್ ಭವನ’ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮೋಹನ್ ಭಾಗವತ್, ಭಾರತವು ‘ಹಿಂದೂ ರಾಷ್ಟ್ರ’ ಮತ್ತು ಎಲ್ಲಾ ಭಾರತೀಯರು ಹಿಂದೂಗಳು ಮತ್ತು ಹಿಂದೂಗಳು ಎಲ್ಲಾ ಭಾರತೀಯರನ್ನು ಪ್ರತಿನಿಧಿಸುತ್ತಾರೆ ಎಂದು ಹೇಳಿದ್ದರು.

ಹಿಂದೂಸ್ತಾನ್ ಹಿಂದೂ ರಾಷ್ಟ್ರವಾಗಿದೆ. ಇದು ಸತ್ಯ. ಸೈದ್ಧಾಂತಿಕವಾಗಿ, ಎಲ್ಲಾ ಭಾರತೀಯರು ಹಿಂದೂಗಳು ಮತ್ತು ಹಿಂದೂಗಳು ಎಂದರೆ ಎಲ್ಲಾ ಭಾರತೀಯರು. ಇಂದು ಭಾರತದಲ್ಲಿರುವವರೆಲ್ಲರೂ ಹಿಂದೂ ಸಂಸ್ಕೃತಿಗೆ ಸಂಬಂಧವನ್ನು ಹೊಂದಿರುವವರು ಎಂದು ಭಾಗವತ್ ಹೇಳಿದ್ದರು.

ಇದನ್ನು ಓದಿ: ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂದ ಬಿಎಲ್ ಸಂತೋಷ್‌ಗೆ ಪ್ರಿಯಾಂಕ್ ಖರ್ಗೆ ಸವಾಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read