ಭಾರತದ ಆರ್ಥಿಕ ಸುಧಾರಣೆಗಳಿಗಾಗಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ದೇಶವು ಋಣಿಯಾಗಿದೆ ಎಂದು ಒಕ್ಕೂಟ ಸರ್ಕಾರದ ಸಚಿವ ನಿತಿನ್ ಗಡ್ಕರಿ ಹೇಳಿದ್ದು, ಬಡವರಿಗೆ ಸವಲತ್ತುಗಳನ್ನು ಒದಗಿಸುವ ಗುರಿಯೊಂದಿಗೆ ದೇಶಕ್ಕೆ ಉದಾರ ಆರ್ಥಿಕ ನೀತಿಯ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.
ಮನಮೋಹನ್ ಸಿಂಗ್ ಅವರು 1991 ರಲ್ಲಿ ಹಣಕಾಸು ಸಚಿವರಾಗಿದ್ದ ಅವಧಿಯಲ್ಲಿ ಪ್ರಾರಂಭಿಸಿದ ಆರ್ಥಿಕ ಸುಧಾರಣೆಗಳು ಭಾರತವನ್ನು ಹೊಸ ದಿಕ್ಕಿನತ್ತ ಕೊಂಡೊಯ್ದವು ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ‘ಟ್ಯಾಕ್ಸ್‌ಇಂಡಿಯಾ ಆನ್‌ಲೈನ್’ ಪೋರ್ಟಲ್ ಆಯೋಜಿಸಿದ್ದ ಟಿಐಒಎಲ್ ಅವಾರ್ಡ್ಸ್ 2022 ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
“ಮನಮೋಹನ್ ಅವರ ಕ್ರಮಗಳು ಉದಾರ ಆರ್ಥಿಕತೆಗೆ ನಾಂದಿ ಹಾಡಿದವು. 1990ರ ದಶಕದ ಮಧ್ಯಭಾಗದಲ್ಲಿ ಮಹಾರಾಷ್ಟ್ರದಲ್ಲಿ ರಸ್ತೆಗಳನ್ನು ನಿರ್ಮಿಸಲು ಹಣವನ್ನು ಸಂಗ್ರಹಿಸಲು ಸಿಂಗ್ ಅವರ ನೀತಿಗಳು ನೆರವಾದವು” ಎಂದು ಗಡ್ಕರಿ ನೆನಪಿಸಿಕೊಂಡಿದ್ದಾರೆ. ಆ ಸಮಯದಲ್ಲಿ ನಿತಿನ್ ಗಡ್ಕರಿ ಅವರು ಮಹಾರಾಷ್ಟ್ರದ ಸಂಪುಟದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಇದನ್ನೂ ಓದಿ: ಬಿಜೆಪಿ ಸಂಸದೀಯ ಮಂಡಳಿ: ಬಿ.ಎಸ್.ಯಡಿಯೂರಪ್ಪ ಒಳಗೆ, ನಿತಿನ್ ಗಡ್ಕರಿ ಔಟ್; ಆದಿತ್ಯನಾಥ್‌ಗೆ ಸ್ಥಾನವಿಲ್ಲ!
ಉದಾರ ಆರ್ಥಿಕ ನೀತಿಯು ರೈತರು ಮತ್ತು ಬಡವರಿಗಾಗಿ ಇದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರೂ ಆಗಿರುವ ಗಡ್ಕರಿ ಹೇಳಿದ್ದಾರೆ.
ಒಂದು ದೇಶದ ಅಭಿವೃದ್ಧಿಗೆ ಸಹಾಯ ಮಾಡುವ ಉದಾರ ಆರ್ಥಿಕ ನೀತಿಗೆ ಚೀನಾ ಉತ್ತಮ ಉದಾಹರಣೆಯಾಗಿದೆ ಎಂದು ಸೂಚಿಸಿದ ಅವರು, “ಆರ್ಥಿಕ ಬೆಳವಣಿಗೆಯನ್ನು ವೇಗಗೊಳಿಸಲು ಭಾರತಕ್ಕೆ ಹೆಚ್ಚಿನ ಬಂಡವಾಳ ವೆಚ್ಚದ ಹೂಡಿಕೆಯ ಅಗತ್ಯವಿದೆ” ಎಂದು ಅವರು ಪ್ರತಿಪಾದಿಸಿದ್ದಾರೆ.
ಹೆದ್ದಾರಿಗಳ ನಿರ್ಮಾಣದ ಬಗ್ಗೆ ಮಾತನಾಡಿದ ಸಚಿವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಜನಸಾಮಾನ್ಯರಿಂದ ಹಣ ಸಂಗ್ರಹಿಸುತ್ತಿದೆ. ಸಚಿವಾಲಯವು 26 ಹಸಿರು ಎಕ್ಸ್‌ಪ್ರೆಸ್‌ವೇಗಳನ್ನು ನಿರ್ಮಿಸುತ್ತಿದೆ ಮತ್ತು ಹಣದ ಕೊರತೆಯನ್ನು ಎದುರಿಸುತ್ತಿಲ್ಲ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಕೊರೊನಾ ಸೋಂಕಿಗಿಂತ ರಸ್ತೆ ಅಪಘಾತದಲ್ಲಿ ಮೃತಪಟ್ಟವರೇ ಹೆಚ್ಚು: ಸಚಿವ ನಿತಿನ್ ಗಡ್ಕರಿ
“ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಟೋಲ್ ಆದಾಯವು ಪ್ರಸ್ತುತ ವಾರ್ಷಿಕ 40,000 ಕೋಟಿಗಳಿಂದ 2024 ರ ಅಂತ್ಯದ ವೇಳೆಗೆ 1.40 ಲಕ್ಷ ಕೋಟಿಗೆ ಏರಲಿದೆ” ಎಂದು ಅವರು ಉಲ್ಲೇಖಿಸಿದ್ದಾರೆ.


