ಟಿ20 ವಿಶ್ವಕಪ್ ಸೂಪರ್ 12 ಹಂತದ ಪಂದ್ಯಗಳು ಇಂದು ಕೊನೆಗೊಂಡಿವೆ. ನಿನ್ನೆ ಗ್ರೂಪ್ 1 ರಿಂದ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ಸೆಮಿಫೈನಲ್ ತಲುಪಿದ್ದರೆ ಗ್ರೂಪ್ 2 ರಿಂದ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಮಿಫೈನಲ್ ಪ್ರವೇಶಿಸಿವೆ. ಸೆಮಿಫೈನಲ್ ಪಂದ್ಯಗಳಲ್ಲಿ ಅಂದುಕೊಂಡಂತೆ ನಡೆದರೆ ನವೆಂಬರ್ 13ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಭಾರತ-ಪಾಕ್ ಮುಖಾಮುಖಿಯಾಗುವ ಸಾಧ್ಯತೆಯಿದೆ. ಹೇಗೆ ಎಂಬುದನ್ನು ನೋಡೋಣ ಬನ್ನಿ.
ಗ್ರೂಪ್ 1 ರಲ್ಲಿ ಅಗ್ರಸ್ಥಾನ ಪಡೆದ ನ್ಯೂಜಿಲೆಂಡ್ ತಂಡವು ಗ್ರೂಪ್ 2 ರಲ್ಲಿ ಎರಡನೇ ಸ್ಥಾನ ಪಡೆದ ಪಾಕಿಸ್ತಾನದ ಎದುರು ನವೆಂಬರ್ 09 ರಂದು ಮೊದಲ ಸೆಮಿಫೈನಲ್ ಪಂದ್ಯ ನಡೆಯಲಿದೆ. ಅದೇ ರೀತಿ ಗ್ರೂಪ್ 1 ರಲ್ಲಿ ಎರಡನೇ ಸ್ಥಾನ ಪಡೆದ ಇಂಗ್ಲೆಂಡ್ ತಂಡವು ಗ್ರೂಪ್ 2 ರಲ್ಲಿ ಅಗ್ರಸ್ಥಾನ ಪಡೆದ ಭಾರತ ತಂಡದೊಂದಿಗೆ ನವೆಂಬರ್ 10 ರಂದು ಎರಡನೇ ಸೆಮಿಫೈನಲ್ ಪಂದ್ಯ ನಡೆಯಲಿದೆ.
ಸೆಮಿಫೈನಲ್ ಪಂದ್ಯಗಳಲ್ಲಿ ಭಾರತವು ಇಂಗ್ಲೆಂಡ್ ವಿರುದ್ಧ ಮತ್ತು ಪಾಕಿಸ್ತಾನವು ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿದರೆ ಮತ್ತೊಮ್ಮೆ ಫೈನಲ್‌ನಲ್ಲಿ ಭಾರತ-ಪಾಕ್ ಮುಖಾಮುಖಿಯಾಗಹುದಾಗಿದೆ. 2007ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಇವೆರೆಡು ತಂಡಗಳು ಸೆಣಸಿದ್ದವು. ಆ ಪಂದ್ಯದಲ್ಲಿ ಭಾರತ ತಂಡ 5 ರನ್‌ಗಳಿಂದ ಪಾಕ್ ಅನ್ನು ಮಣಿಸಿ ಚಾಂಪಿಯನ್ ಆಗಿತ್ತು.
ಇದನ್ನೂ ಓದಿ: 34ನೇ ಜನ್ಮದಿನ: ಮಾಗಿದ, ಸೌಹಾರ್ದತೆ ಪರ ವಾಲಿದ ವಿರಾಟ್ ಕೊಹ್ಲಿ