Homeಅಂತರಾಷ್ಟ್ರೀಯ'ಭಾರತ-ಪಾಕಿಸ್ತಾನ ಸಂಘರ್ಷಕ್ಕೂ ನಮಗೂ ಸಂಬಂಧವಿಲ್ಲ': ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್

‘ಭಾರತ-ಪಾಕಿಸ್ತಾನ ಸಂಘರ್ಷಕ್ಕೂ ನಮಗೂ ಸಂಬಂಧವಿಲ್ಲ’: ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್

- Advertisement -
- Advertisement -

“ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷಕ್ಕೂ ನಮಗೂ ಸಂಬಂಧವಿಲ್ಲ” ಎಂದು ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಹೇಳಿದ್ದಾರೆ. ಆದರೂ ಅವರು, “ನಾನು ಮತ್ತು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡೂ ದೇಶಗಳ ನಡುವಿನ ಉದ್ವಿಗ್ನತೆ ಶಮನ ಮಾಡಲು ಪ್ರಯತ್ನಿಸುತ್ತಿರುವುದಾಗಿ” ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಫಾಕ್ಸ್‌ ನ್ಯೂಸ್‌ ಜೊತೆಗಿನ ಸಂದರ್ಶನದಲ್ಲಿ ಮಾತನಾಡಿದ ವ್ಯಾನ್ಸ್‌, ಅಂತಾರಾಷ್ಟ್ರೀಯ ಸಂಘರ್ಷಗಳಿಂದ ಅಮೆರಿಕ ದೂರ ಉಳಿಯಲಿದೆ ಎಂದು ಪ್ರತಿಪಾದಿಸಿದ್ದಾರೆ. ಭಾರತ-ಪಾಕಿಸ್ತಾನ ವಿಷಯದಲ್ಲಿ ನಾವು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಯತ್ನಿಸುತ್ತೇವೆ. ಆದರೆ, ಅವರ ಸಂಘರ್ಷದಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ. ಏಕೆಂದರೆ, ಮೂಲಭೂತವಾಗಿ ಅದಕ್ಕೂ ನಮಗೂ ಸಂಬಂಧವಿಲ್ಲ. ಭಾರತ ಮತ್ತು ಪಾಕಿಸ್ತಾನ ಎರಡೂ ರಾಷ್ಟ್ರಗಳಿಗೆ ಶಸ್ತ್ರಾಸ್ತ್ರ ತ್ಯಜಿಸುವಂತೆ ನಾವು ಹೇಳಲು ಸಾಧ್ಯವಿಲ್ಲ. ಹಾಗಾಗಿ, ರಾಜತಾಂತ್ರಿಕ ಮಾರ್ಗಗಳ ಮೂಲಕ ನಾವು ಈ ವಿಷಯದಲ್ಲಿ ಮುಂದುವರಿಯುತ್ತೇವೆ ಎಂದು ವ್ಯಾನ್ಸ್ ಹೇಳಿದ್ದಾಗಿ ವರದಿಗಳು ವಿವರಿಸಿವೆ.

“ಭಾರತ-ಪಾಕಿಸ್ತಾನ ನಡುವಿನ ಸಂಘರ್ಷ ದೊಡ್ಡ ಯುದ್ದವಾಗಿ ಮಾರ್ಪಾಡು ಆಗಬಾರದು. ಪರಮಾಣು ಸಂಘರ್ಷವಾಗಿ ಬದಲಾಗಬಾರದು ಎಂಬುವುದೇ ನಮ್ಮ ಆಶಯ ಮತ್ತು ನಿರೀಕ್ಷೆ. ಸದ್ಯಕ್ಕೆ ಅದು ಸಂಭವಿಸುವುದಿಲ್ಲ ಎಂದು ನಾವು ಭಾವಿಸುತ್ತೇವೆ” ಎಂದು ವ್ಯಾನ್ಸ್ ಹೇಳಿದ್ದಾರೆ.

ಜಮ್ಮು, ಪಠಾಣ್‌ಕೋಟ್ ಸೇರಿದಂತೆ ಭಾರತದ ಹಲವು ನಗರಗಳ ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡಲು ಪಾಕಿಸ್ತಾನ ಯತ್ನಿಸಿದೆ. ಭಾರತದ ವಾಯು ರಕ್ಷಣಾ ವ್ಯವಸ್ಥೆಯು ಪಾಕಿಸ್ತಾನ ಹಾರಿಸಿದ ಕನಿಷ್ಠ ಎಂಟು ಕ್ಷಿಪಣಿಗಳನ್ನು ತಡೆದು ತಟಸ್ಥಗೊಳಿಸಿದೆ ಎಂದು ವರದಿಯಾದ ಬೆನ್ನಲ್ಲೇ ವ್ಯಾನ್ಸ್ ಮೇಲಿನ ಹೇಳಿಕೆ ನೀಡಿದ್ದಾರೆ.

ಇದಕ್ಕೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ಭಾರತ ಮತ್ತು ಪಾಕಿಸ್ತಾನ ಎರಡೂ ರಾಷ್ಟ್ರಗಳು ಮುಯಿಗೆ ಮುಯಿ ಎಂಬ ಕ್ರಮಗಳನ್ನು ನಿಲ್ಲಿಸಬೇಕು. ಈ ವಿಷಯದಲ್ಲಿ ಅವರಿಗೆ ಏನಾದರು ಸಹಾಯ ಮಾಡಲು ಸಾಧ್ಯವಾದರೆ ಮಾಡುತ್ತೇವೆ” ಎಂದಿದ್ದರು.

ಈ ಹಿಂದೆ ಮಾತನಾಡಿದ್ದ ಟ್ರಂಪ್, “ಭಾರತ-ಪಾಕಿಸ್ತಾನ ಎರಡೂ ನಮಗೆ ಆಪ್ತ ರಾಷ್ಟ್ರಗಳು. ಅವರ ನಡುವೆ ಆಗಾಗ ಸಂಘರ್ಷಗಳು ನಡೆಯುತ್ತಿರುತ್ತವೆ. ಅದು ಇಂದು ನಿನ್ನೆಯದ್ದಲ್ಲ. ಈ ಹಿಂದೆಯೂ ಅವರ ನಡುವೆ ಸಂಘರ್ಷಗಳು ನಡೆದಿವೆ. ಅದನ್ನು ಅವರು ಪರಸ್ಪರ ಬಗೆಹರಿಸಿಕೊಂಡಿದ್ದಾರೆ. ಈಗ ಉಂಟಾಗಿರುವ ಉದ್ವಿಗ್ನತೆಯನ್ನೂ ಶೀಘ್ರದಲ್ಲಿ ಬಗೆಹರಿಸಿಕೊಳ್ಳಲಿ ಎಂಬುವುದು ನಮ್ಮ ಆಶಯ” ಎಂದಿದ್ದರು.

ಭಾರತ – ಪಾಕ್ ಸಂಘರ್ಷ ಹಿನ್ನಲೆ | ಸಾಮಾಜಿಕ ಮಾಧ್ಯಮಗಳಲ್ಲಿ ಹರಡಲಾಗುತ್ತಿರುವ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...