Homeಫ್ಯಾಕ್ಟ್‌ಚೆಕ್ಭಾರತ-ಪಾಕಿಸ್ತಾನ ಸಂಘರ್ಷ | ವಿಡಿಯೊ ಗೇಮ್ ದೃಶ್ಯ ಹಂಚಿ ಪಾಕಿಸ್ತಾನದ ದೃಶ್ಯ ಎಂದ ಪಬ್ಲಿಕ್ ಟಿವಿ!

ಭಾರತ-ಪಾಕಿಸ್ತಾನ ಸಂಘರ್ಷ | ವಿಡಿಯೊ ಗೇಮ್ ದೃಶ್ಯ ಹಂಚಿ ಪಾಕಿಸ್ತಾನದ ದೃಶ್ಯ ಎಂದ ಪಬ್ಲಿಕ್ ಟಿವಿ!

- Advertisement -
- Advertisement -

ಭಾರತ – ಪಾಕಿಸ್ತಾನದ ನಡುವೆ ಉಂಟಾಗಿರುವ ಉದ್ವಿಗ್ನತೆಯ ನಡುವೆ ಹಲವಾರು ಸುಳ್ಳು ಸುದ್ದಿಗಳು, ವಿಡಿಯೊ, ಚಿತ್ರ, ಬರಹದ ಮೂಲಕ ಹರಿದಾಡುತ್ತಿವೆ. ಹೆಚ್ಚಿನ ಸುದ್ದಿಗಳಲ್ಲಿ ವಿಡಿಯೊ ಗೇಮ್ ದೃಶ್ಯಗಳು, ಇಸ್ರೇಲ್-ಗಾಝಾದ ವಿಡಿಯೊಗಳು ಮತ್ತು ಹಳೆಯ ವಿಡಿಯೊಗಳನ್ನು ಹಂಚಿ ಸುಳ್ಳು ಹರಡಲಾಗುತ್ತಿವೆ. ಅವುಗಳಲ್ಲಿ ಕೆಲವು ಸುಳ್ಳು ಸುದ್ದಿಗಳನ್ನು ನಾನುಗೌರಿ.ಕಾಂ ಓದುಗರಿಗಾಗಿ ನೀಡುತ್ತಿದ್ದೇವೆ. ಭಾರತ-ಪಾಕಿಸ್ತಾನ ಸಂಘರ್ಷ

ವಿಡಿಯೊ ಗೇಮ್‌ ದೃಶ್ಯಗಳನ್ನು ವಾಯು ದಾಳಿಯ ವಿಡಿಯೊಗಳು ಎಂದು ಹೇಳಿ, ಸಮಾಜಿಕ ಮಾಧ್ಯಮಗಳಲ್ಲಿ ಸುದ್ದಿ ಮಾಧ್ಯಮ ಪಬ್ಲಿಕ್ ಟಿವಿ, ಪ್ರತಿಧ್ವನಿ.ಕಾಂ ಸೇರಿದಂತೆ, ಹಲವಾರು ಜನರು ಹಂಚಿಕೊಳ್ಳುತ್ತಿದ್ದಾರೆ. ವಾಸ್ತವದಲ್ಲಿ ಇವುಗಳು ನಿಜವಾದ ವಾಯು ದಾಳಿಯ ದೃಶ್ಯಗಳಲ್ಲ.

ಅವುಗಳಲ್ಲಿ ಕೆಲವು ಇಂತಿವೆ. ಸ್ವತಂತ್ರ ಮಾಧ್ಯಮ ಪ್ರತಿಧ್ವನಿ ಕೂಡಾ ಇಂತಹ ವಿಡಿಯೊಗಳನ್ನು ಹಂಚಿಕೊಳ್ಳುತ್ತಿವೆ

ಈ ವಿಡಿಯೊವನ್ನು ಹಂಚಿಕೊಂಡವರ ಲಿಂಕ್ ಇಲ್ಲಿ, ಇಲ್ಲಿ ನೋಡಬಹುದು.
ಈ ಹಿಂದೆ ಪಾಕಿಸ್ತಾನಿ ಪ್ರೊಪಗಾಂಡ ಖಾತೆಗಳು ಭಾರತದ ವಿರುದ್ಧ ಹಂಚಿಕೊಂಡಿದ್ದ ವಿಡಿಯೊಗಳನ್ನು ಭಾರತೀಯರು ಇದೀಗ ಹಂಚಿಕೊಳ್ಳುತ್ತಿದ್ದಾರೆ. “ಈ ವಿಡಿಯೊವನ್ನು ಕೆಲವರು ಸಿನಿಮಾ ದೃಶ್ಯಗಳು ಎಂದು ಹೇಳುತ್ತಿದ್ದಾರೆ. ಆದರೆ ಒರಿಜಿನಲ್ ಯಾವುದು ಎಂದು ಕಂಡು ಹಿಡಿಯಲು ಈವರೆಗೆ ಆಗಿಲ್ಲ” ಎಂದು ಖ್ಯಾತ ಫ್ಯಾಕ್ಟ್‌ಚೆಕ್ಕರ್ ಮೊಹಮ್ಮದ್ ಜುಬೇರ್ ಹೇಳಿದ್ದಾರೆ.

ಈ ವಿಡಿಯೊವನ್ನು ಸಂಸದೆ ಕಂಗನಾ ರಣಾವತ್ ಸೇರಿದಂತೆ ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಅವುಗಳನ್ನು ನೀವು ಇಲ್ಲಿ ಮತ್ತು ಇಲ್ಲಿ ನೋಡಬಹುದಾಗಿದೆ.

ವಿಡಿಯೊ ಗೇಮ್ ದೃಶ್ಯವನ್ನು ಹಂಚಿಕೊಂಡ ಪಬ್ಲಿಕ್ ಟಿವಿ

ಈ ಹಿಂದೆ ಹಲವಾರು ಪಾಕಿಸ್ತಾನಿ ಪ್ರೊಪಗಾಂಡ ಖಾತೆಗಳು ಹಂಚಿಕೊಂಡಿದ್ದ ಹಳೆಯ ವಿಡಿಯೋ ಗೇಮ್‌ ದೃಶ್ಯಗಳನ್ನು ಕನ್ನಡ ಮಾಧ್ಯಮ ಪಬ್ಲಿಕ್ ಟಿವಿ ಸಹಿತ ಇತರರು ಸುಳ್ಳು ಪ್ರತಿಪಾದನೆಯೊಂದಿಗೆ ಹಂಚಿಕೊಂಡಿದೆ. ಅವುಗಳನ್ನು ಇಲ್ಲಿ, ಇಲ್ಲಿ ನೋಡಬಹುದು. “ಇದು ಭಾರತ-ಪಾಕಿಸ್ತಾನ ಉದ್ವಿಗ್ನತೆ ಪ್ರಾರಂಭವಾಗುವ ಮೊದಲೇ ಇಂಟರ್ನೆಟ್‌ನಲ್ಲಿತ್ತು. ಇದು ತುಂಬಾ ಹಳೆಯದಾಗಿರಬಹುದು” ಎಂದು ಮೊಹಮ್ಮದ್ ಜುಬೇರ್ ಹೇಳಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ ಭಾರತ ಪಾಕಿಸ್ತಾನದ ಭಯೋತ್ಪಾದಕ ಕೇಂದ್ರಗಳ ಮೇಲೆ ನಡೆಸಿದ ಆಪರೇಷನ್ ಸಿಂಧೂರ ನಡೆದ ನಂತರ ಅದರ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಕರ್ನಲ್ ಖುರೇಷಿ ಎಂದು ಪ್ರತಿಪಾದಿಸಿ ಹಳೆಯ ಸಂಬಂಧವಿಲ್ಲದೆ ವಿಡಿಯೊವೊಂದು ಹರಿದಾಡುತ್ತಿವೆ.

ವಾಸ್ತವದಲ್ಲಿ ವೈರಲ್ ವೀಡಿಯೊದಲ್ಲಿರುವ ವ್ಯಕ್ತಿ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅಲ್ಲ. ವಿಡಿಯೊದಲ್ಲಿರುವವರು ಅಮೆರಿಕಾದ ವಾಯುಪಡೆಯಲ್ಲಿ ಪೈಲಟ್ ಆಗಿರುವ ಮೇಜರ್ ಕ್ರಿಸ್ಟೀನ್ ‘ಬ್ಯೂ’ ವುಲ್ಫ್. ಈ ವಿಡಿಯೊ 2021ರದ್ದಾಗಿದೆ. ಸುಳ್ಳು ಹಂಚಿರುವ ವಿಡಿಯೊವನ್ನು ಇಲ್ಲಿ ನೋಡಬಹುದು.

ಕನ್ನಡ ಮಾಧ್ಯಮ ಕನ್ನಡಫಸ್ಟ್‌ ನ್ಯೂಸ್, ಐಎನ್‌ಎಸ್ ವಿಕ್ರಾಂತ್ ಮಾರಕ ದಾಳಿ ಎಂದು ಮಾಡಿರುವ ವರದಿಯಲ್ಲಿ ಇಸ್ರೇಲ್ – ಗಾಝಾ ಸಂಘರ್ಷದ 2020ರ ಚಿತ್ರವನ್ನು ಬಳಸಿಕೊಂಡಿದೆ. ಅವನ್ನು ನೀಡುವ ಇಲ್ಲಿ ನೋಡಬಹುದು. ಭಾರತ-ಪಾಕಿಸ್ತಾನ ಸಂಘರ್ಷ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗಡಿ ಪ್ರದೇಶಗಳ ನಾಗರಿಕರಿಗೆ ರಕ್ಷಣೆ ಬೇಕು: ‘ಜಮಾತೆ-ಇ-ಇಸ್ಲಾಮಿ ಹಿಂದ್’ ಸಂಘಟನೆ ಆಗ್ರಹ

ಗಡಿ ಪ್ರದೇಶಗಳ ನಾಗರಿಕರಿಗೆ ರಕ್ಷಣೆ ಬೇಕು: ‘ಜಮಾತೆ-ಇ-ಇಸ್ಲಾಮಿ ಹಿಂದ್’ ಸಂಘಟನೆ ಆಗ್ರಹ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...