Homeಅಂತರಾಷ್ಟ್ರೀಯಭಾರತ-ಪಾಕ್ ಯುದ್ದ ತಾನೇ ನಿಲ್ಲಿಸಿದ್ದು, ಈ ಸಂದರ್ಭ 5 ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ: ಪುನರುಚ್ಚರಿಸಿದ ಟ್ರಂಪ್

ಭಾರತ-ಪಾಕ್ ಯುದ್ದ ತಾನೇ ನಿಲ್ಲಿಸಿದ್ದು, ಈ ಸಂದರ್ಭ 5 ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ: ಪುನರುಚ್ಚರಿಸಿದ ಟ್ರಂಪ್

- Advertisement -
- Advertisement -

ನ್ಯೂಯಾರ್ಕ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತ ಮತ್ತು ಪಾಕಿಸ್ತಾನದ ನಡುವಿನ ಇತ್ತೀಚಿನ ಯುದ್ಧವನ್ನು ತಾನು ನಿಲ್ಲಿಸಿದ್ದೇನೆ ಮತ್ತು ಈ ಸಂದರ್ಭದಲ್ಲಿ ಐದು ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂಬ ತಮ್ಮ ಹೇಳಿಕೆಯನ್ನು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಬಹುಶಃ ಪರಮಾಣು ಯುದ್ಧದಲ್ಲಿ ಕೊನೆಗೊಳ್ಳಬಹುದಾಗಿದ್ದ ಈ ಸಂಘರ್ಷವನ್ನು ತಡೆಯಲು ತಾನು ಮಧ್ಯಪ್ರವೇಶಿಸಿದೆ ಎಂದು ಟ್ರಂಪ್ ಮಂಗಳವಾರ ಹೇಳಿಕೊಂಡಿದ್ದಾರೆ.

ವೈಟ್‌ಹೌಸ್‌ನಲ್ಲಿ ನಡೆದ ಕಾಂಗ್ರೆಸ್ ಸದಸ್ಯರ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ಟ್ರಂಪ್, ಭಾರತ ಮತ್ತು ಪಾಕಿಸ್ತಾನ ಯುದ್ದವನ್ನು ಮಾತ್ರವಲ್ಲದೇ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ಮತ್ತು ರುವಾಂಡಾ ನಡುವಿನ ಯುದ್ಧವನ್ನು ತಾನು ನಿಲ್ಲಿಸಿರುವುದಾಗಿ ಹೇಳಿದ್ದಾರೆ. ಅವರು ಪರಿಸ್ಥಿತಿಯನ್ನು ವಿವರಿಸುತ್ತಾ, “ಭಾರತ-ಪಾಕಿಸ್ತಾನದವರು ಐದು ವಿಮಾನಗಳನ್ನು ಹೊಡೆದುರುಳಿಸಿದರು, ಅದು ಹಿಂದಕ್ಕೆ-ಮುಂದಕ್ಕೆ ನಡೆಯುತ್ತಿತ್ತು. ನಾನು ಅವರಿಗೆ ಕರೆ ಮಾಡಿ, ‘ಕೇಳಿ, ಇನ್ನು ಮುಂದೆ ನಿಮ್ಮೊಂದಿಗೆ ನಾವು ವ್ಯಾಪಾರ ನಡೆಸುವುದಿಲ್ಲ. ನೀವು ಯುದ್ಧವನ್ನು ಮುಂದುವರಿಸಿದರೆ ಅದು ಒಳ್ಳೆಯದಾಗಿರುವುದಿಲ್ಲ… ಅವೆರಡೂ ಪ್ರಬಲ ಪರಮಾಣು ರಾಷ್ಟ್ರಗಳು ಮತ್ತು ಈ ಪರಮಾಣು ಯುದ್ಧ ಸಂಭವಿಸುತ್ತಿತ್ತು ಮತ್ತು ಅದು ಎಲ್ಲಿಗೆ ತಲುಪುತ್ತಿತ್ತು ಎಂದು ಯಾರಿಗೂ ಗೊತ್ತಿರಲಿಲ್ಲ ಮತ್ತು ನಾನು ಅದನ್ನು ನಿಲ್ಲಿಸಿದೆ’ ಎಂದು ಹೇಳಿದರು.

ಟ್ರಂಪ್ ತಮ್ಮ ಆಡಳಿತದ ಇತರ ವಿದೇಶಾಂಗ ನೀತಿ ಯಶಸ್ಸುಗಳನ್ನು ಸಹ ಉಲ್ಲೇಖಿಸಿದರು. ಅಮೆರಿಕವು ಇರಾನ್‌ನ ಸಂಪೂರ್ಣ ಪರಮಾಣು ಸಾಮರ್ಥ್ಯವನ್ನು ತೆಗೆದುಹಾಕಿದೆ ಮತ್ತು ಕೊಸೊವೊ ಮತ್ತು ಸೆರ್ಬಿಯಾ ನಡುವಿನ ಸಂಘರ್ಷವನ್ನು ನಿಲ್ಲಿಸಿದೆ ಎಂದೂ ಅವರು ಹೇಳಿಕೊಂಡಿದ್ದಾರೆ. ಮಾಜಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅದನ್ನು ಮಾಡುತ್ತಿದ್ದರು ಎಂದು ನೀವು ಭಾವಿಸುತ್ತೀರಾ? ನಾನು ಹಾಗೆ ಅಂದುಕೊಳ್ಳುವುದಿಲ್ಲ. ಅವರು ಆ ದೇಶಗಳ ಬಗ್ಗೆ ಎಂದಾದರೂ ಕೇಳಿದ್ದಾರೆಯೆಂದು ನೀವು ಭಾವಿಸುತ್ತೀರಾ? ನಾನು ಹಾಗೆ ಅಂದುಕೊಳ್ಳುವುದಿಲ್ಲ” ಎಂದು ಟ್ರಂಪ್ ಹೇಳಿದರು.

ಟ್ರಂಪ್ ಈ ಹಿಂದೆ ಕೂಡ ಭಾರತ-ಪಾಕ್ ಸಂಘರ್ಷವನ್ನು ನಿಲ್ಲಿಸಿದ್ದಾಗಿ ಪದೇ ಪದೇ ಹೇಳಿದ್ದರು. ಕಳೆದ ಶುಕ್ರವಾರದಂದು ಯುದ್ಧದ ಸಮಯದಲ್ಲಿ “ಐದು ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ” ಎಂದು ಅವರು ಮೊದಲ ಬಾರಿಗೆ ಉಲ್ಲೇಖಿಸಿದರು. ಭಾರತ, ಪಾಕಿಸ್ತಾನ ಯುದ್ದದಲ್ಲಿ ನಾಲ್ಕು ಅಥವಾ ಐದು ವಿಮಾನಗಳನ್ನು ಹೊಡೆದುರುಳಿಸಲಾಗಿತ್ತು. ಈ ಎರಡು ಪರಮಾಣು ದೇಶಗಳಾಗಿವೆ ಎಂದು ಅವರು ರಿಪಬ್ಲಿಕನ್ ಸೆನೆಟರ್‌ಗಳಿಗಾಗಿ ಆಯೋಜಿಸಿದ್ದ ಔತಣಕೂಟದಲ್ಲಿ ವೈಟ್‌ಹೌಸ್‌ನಲ್ಲಿ ಮಾಡಿದ ಭಾಷಣದಲ್ಲಿ ಹೇಳಿದರು.

ಮಂಗಳವಾರದಂದು ನಡೆದ ‘ಬಹುಪಕ್ಷೀಯತೆ ಮತ್ತು ವಿವಾದಗಳ ಶಾಂತಿಯುತ ಇತ್ಯರ್ಥ’ ಕುರಿತ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮುಕ್ತ ಚರ್ಚೆಯಲ್ಲಿ ಅಮೆರಿಕದ ಕಾರ್ಯಕಾರಿ ರಾಯಭಾರಿ ಡೊರೊಥಿ ಶಿಯಾ ಅವರು, ದೇಶ ದೇಶಗಳ ನಡುವಿನ ವಿವಾದಗಳಿಗೆ ಶಾಂತಿಯುತ ಪರಿಹಾರಗಳನ್ನು ಕಂಡುಕೊಳ್ಳಲು ಅಮೆರಿಕವು ವಿಶ್ವಾದ್ಯಂತ ಕೆಲಸ ಮಾಡುವುದನ್ನು ಮುಂದುವರಿಸುತ್ತದೆ ಎಂದು ಹೇಳಿದರು. ಕಳೆದ ಮೂರು ತಿಂಗಳಲ್ಲಿ “ಇಸ್ರೇಲ್ ಮತ್ತು ಇರಾನ್ ನಡುವೆ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ ಮತ್ತು ರುವಾಂಡಾ ನಡುವೆ, ಮತ್ತು ಭಾರತ ಮತ್ತು ಪಾಕಿಸ್ತಾನ ನಡುವೆ ಅಮೆರಿಕದ ನಾಯಕತ್ವವು ಉದ್ವಿಗ್ನತೆಯನ್ನು ಕಡಿಮೆ ಮಾಡಿದೆ” ಎಂದು ಶಿಯಾ ಉಲ್ಲೇಖಿಸಿದರು.

ವಿಶ್ವಸಂಸ್ಥೆಗೆ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ಪರ್ವತನೇನಿ ಹರೀಶ್ ಅವರು ಈ ಭದ್ರತಾ ಮಂಡಳಿಯ ಸಭೆಯಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡಿದರು. ಈ ದಾಳಿಯ ಹೊಣೆಯನ್ನು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಮುಖವಾಡವಾದ ದಿ ರೆಸಿಸ್ಟೆನ್ಸ್ ಫ್ರಂಟ್ (TRF) ಹೊತ್ತುಕೊಂಡಿತ್ತು. ಇಂತಹ ಭಯೋತ್ಪಾದನೆ ಚಟುವಟಿಕೆಯನ್ನು ಹತ್ತಿಕ್ಕಲು ಸೂಕ್ತ ಕ್ರಮಗಳನ್ನು ತಗೆದುಕೊಳ್ಳಲೇಬೇಕು ಎಂದು ಹರೀಶ್ ಒತ್ತಿ ಹೇಳಿದರು.

ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಘೋರ ಭಯೋತ್ಪಾದಕ ದಾಳಿಯ ಪರಿಣಾಮವಾಗಿ 26 ಅಮಾಯಕ ಪ್ರವಾಸಿಗರನ್ನು ಕೊಂದಿದ್ದರಿಂದ ಮತ್ತು ಏಪ್ರಿಲ್ 25ರ  ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಹೇಳಿಕೆಯ ಆಧಾರದ ಮೇಲೆ ಭಾರತವು ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ಅನ್ನು ಪ್ರಾರಂಭಿಸಿತು ಎಂದು ಅವರು ಹೇಳಿದರು.

ಭದ್ರತಾ ಮಂಡಳಿಯ ಸದಸ್ಯರು ಈ ಭಯೋತ್ಪಾದಕ ಕೃತ್ಯದ ಅಪರಾಧಿಗಳು, ಸಂಘಟಕರು, ಹಣಕಾಸುದಾರರು ಮತ್ತು ಪ್ರಾಯೋಜಕರನ್ನು ಹೊಣೆಗಾರರನ್ನಾಗಿ ಮಾಡಲು ಮತ್ತು ಅವರನ್ನು ನ್ಯಾಯದ ಕಟಕಟೆಗೆ ತರಲು ಒತ್ತು ನೀಡಿದರು ಎಂದು ಹರೀಶ್ ಒತ್ತಿ ಹೇಳಿದರು. ಭಾರತವು ತನ್ನ ಪ್ರಾಥಮಿಕ ಉದ್ದೇಶಗಳನ್ನು ಸಾಧಿಸಿದ ನಂತರ, ಪಾಕಿಸ್ತಾನದ ಕೋರಿಕೆಯ ಮೇರೆಗೆ ಯುದ್ಧವನ್ನು ನೇರವಾಗಿ ನಿಲ್ಲಿಸಲಾಯಿತು ಎಂದು ಅವರು ಹೇಳಿದರು.

ಮೇ 10ರಂದು ವಾಷಿಂಗ್ಟನ್ ಮಧ್ಯಸ್ಥಿಕೆಯಲ್ಲಿ ಸುದೀರ್ಘ ಮಾತುಕತೆಗಳ ನಂತರ ಭಾರತ ಮತ್ತು ಪಾಕಿಸ್ತಾನಗಳು ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಘೋಷಿಸಿದರು. ಯುದ್ಧ ಪ್ರಾರಂಭವಾದಗಿನಿಂದ ಪರಿಸ್ಥಿತಿಯನ್ನು ನಿವಾರಿಸಲು ಸಹಾಯ ಮಾಡಿದ್ದೇನೆ ಮತ್ತು ಸಂಘರ್ಷವನ್ನು ನಿಲ್ಲಿಸಿದರೆ ಅಮೆರಿಕವು ಭಾರತ ಪಾಕಿಸ್ತಾನದೊಂದಿಗೆ “ಹೆಚ್ಚು ಹೆಚ್ಚು ವ್ಯಾಪಾರ” ಮಾಡಲಿದೆ ಎಂದು ಹೇಳಿದ್ದೇನೆ ಎಂದು ಅನೇಕ ಸಂದರ್ಭಗಳಲ್ಲಿ ತಮ್ಮ ಹೇಳಿಕೆಯನ್ನು ಪುನರಾವರ್ತಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಟ್ರಂಪ್ ಜೂನ್‌ನಲ್ಲಿ ಕೆನಡಾದ ಕಾನಾನ್‌ಸ್ಕಿಸ್‌ನಲ್ಲಿ ನಡೆದ ಜಿ7 ನಾಯಕರ ಶೃಂಗಸಭೆಯಲ್ಲಿ ಭೇಟಿಯಾಗಲು ನಿಗದಿಯಾಗಿತ್ತು. ಆದರೆ ಅಮೆರಿಕ ಅಧ್ಯಕ್ಷರು ಬೇಗನೆ ವಾಷಿಂಗ್ಟನ್‌ಗೆ ಮರಳಿದರು. ಕಾನಾನ್‌ಸ್ಕಿಸ್‌ನಿಂದ ನಿರ್ಗಮಿಸುವ ಮೊದಲು ಮೋದಿ ಟ್ರಂಪ್‌ರೊಂದಿಗೆ 35 ನಿಮಿಷಗಳ ದೂರವಾಣಿ ಸಂಭಾಷಣೆ ನಡೆಸಿದರು.

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಕಾನಾನ್‌ಸ್ಕಿಸ್‌ನಿಂದ ನೀಡಿದ ವಿಡಿಯೋ ಸಂದೇಶದಲ್ಲಿ, ಆಪರೇಷನ್ ಸಿಂಧೂರ್ ಸಂದರ್ಭದಲ್ಲಿ ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ಬಗ್ಗೆಯಾಗಲಿ ಅಥವಾ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ದದ ಕುರಿತು ಅಮೆರಿಕದ ಮಧ್ಯಸ್ಥಿಕೆಯ ಯಾವುದೇ ಪ್ರಸ್ತಾಪದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮೋದಿ ಟ್ರಂಪ್‌ಗೆ ಸ್ಪಷ್ಟವಾಗಿ ತಿಳಿಸಿದರು ಎಂದು ಹೇಳಿದರು. ಭಾರತವು ಯಾವುದೇ ದೇಶದ ಮಧ್ಯಸ್ಥಿಕೆಯನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ ಎಂದು ಪ್ರಧಾನಿ ಮೋದಿಯವರು ಟ್ರಂಪ್ ಅವರಿಗೆ  ದೃಢವಾಗಿ ಹೇಳಿದ್ದಾರೆ ಎಂದು ಮಿಸ್ರಿ ಹೇಳಿದರು.  ಯುದ್ದವನ್ನು ನಿಲ್ಲಿಸುವ ಚರ್ಚೆಯು ಭಾರತ ಮತ್ತು ಪಾಕಿಸ್ತಾನದ ನಡುವೆಯೇ ನೇರವಾಗಿ ನಡೆಯಿತು ಮತ್ತು ಇದು ಪಾಕಿಸ್ತಾನದ ಕೋರಿಕೆಯ ಮೇರೆಗೆ ಯುದ್ಧ ನಿಲ್ಲಿಸುವ ಪ್ರಕ್ರಿಯೆ ಪ್ರಾರಂಭವಾಯಿತು ಎಂದು ಸ್ಪಷ್ಟಪಡಿಸಿದರು.

ಮೋದಿ ಮೌನ: ಜೈರಾಮ್ ರಮೇಶ್ ತರಾಟೆ

ಕಳೆದ 73 ದಿನಗಳಲ್ಲಿ ಟ್ರಂಪ್ ಅವರು 25 ಬಾರಿ ತಾನೇ ಭಾರತ ಪಾಕಿಸ್ತಾನಗಳ ನಡುವಿನ ಯುದ್ಧವನ್ನು ನಿಲ್ಲಿಸಿರುವುದಾಗಿ ಹೇಳಿದ್ದಾರೆ. ಆದರೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಈ ಕುರಿತು ಸಂಪೂರ್ಣವಾಗಿ ಮೌನವಾಗಿದ್ದಾರೆ. ಮೋದಿಯವರು ವಿದೇಶ ಪ್ರವಾಸ ಮಾಡಲು ಮತ್ತು ಸ್ವದೇಶದಲ್ಲಿ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ಅಸ್ಥಿರಗೊಳಿಸಲು ಮಾತ್ರ ಸಮಯವನ್ನು ವ್ಯರ್ಥಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ “X” ನಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ: ಮೂರನೇ ದಿನವೂ ಸಂಸತ್ ಕಲಾಪ ಮುಂದೂಡಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...