Homeಮುಖಪುಟನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಸಾಧನೆಗಳ ಬಗ್ಗೆ ಭಾರತ ಹೆಮ್ಮೆ ಪಡುತ್ತದೆ : ಅಭಿಜಿತ್ ಭೇಟಿ...

ನೊಬೆಲ್ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಸಾಧನೆಗಳ ಬಗ್ಗೆ ಭಾರತ ಹೆಮ್ಮೆ ಪಡುತ್ತದೆ : ಅಭಿಜಿತ್ ಭೇಟಿ ನಂತರ ಮೋದಿ ಮಾತು…

- Advertisement -
- Advertisement -

ನೊಬೆಲ್ ಪ್ರಶಸ್ತಿ ವಿಜೇತ ಅಭಿಜಿತ್ ಬ್ಯಾನರ್ಜಿ ಅವರೊಂದಿಗೆ ಅತ್ಯುತ್ತಮ ಸಭೆ ನಡೆಯಿತು. ಮಾನವ ಸಬಲೀಕರಣದ ಬಗೆಗಿನ ಅವರ ಉತ್ಸಾಹ ಸ್ಪಷ್ಟವಾಗಿ ಗೋಚರಿಸುತ್ತದೆ. ವಿವಿಧ ವಿಷಯಗಳ ಕುರಿತು ಇಬ್ಬರೂ ಆರೋಗ್ಯಕರ ಮತ್ತು ಉತ್ತಮ ಚರ್ಚೆ ನಡೆಸಿದೆವು. ಅವರ ಸಾಧನೆಗಳ ಬಗ್ಗೆ ಭಾರತ ಹೆಮ್ಮೆಪಡುತ್ತದೆ. ಅವರ ಮುಂದಿನ ಪ್ರಯತ್ನಗಳಿಗೆ ಅವರಿಗೆ ಶುಭ ಹಾರೈಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್‌ ಮಾಡಿದ್ದಾರೆ.

ನಾನು ಎಡಪಂಥೀಯ ಎಂದು ಘೋಷಿಸಿಕೊಂಡ ಮತ್ತು ಪ್ರಧಾನಿ ಮೋದಿಯವರ ಆರ್ಥಿಕ ನೀತಿಗಳನ್ನು ಟೀಕಿಸಿದ ನೊಬೆಲ್ ಪ್ರಶಸ್ತಿ ಪುರಸ್ಕೃತ ಅಭಿಜಿತ್ ಬ್ಯಾನರ್ಜಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ಅವರ ಸಾಧನೆಗಳನ್ನು ಕೊಂಡಾಡಿ ಶುಭ ಹಾರೈಸಿದ್ದಾರೆ.

ಇನ್ನು ಎನ್‍ಡಿಟಿವಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ್ದ ಅಭಿಜಿತ್ ಬ್ಯಾನರ್ಜಿ, ‘ನಾನು ಆರ್ಥಿಕ ಚಿಂತನೆಗಳಲ್ಲಿ ಯಾವುದೇ ಭೇದಭಾವ ಮಾಡುವುದಿಲ್ಲ. ಯಾವುದೇ ಪಕ್ಷವಿದ್ದರೂ ಕೆಲಸ ಮಾಡಲು ತಯಾರಿದ್ದೇನೆ. ಮೋದಿ ಅವರು ಗುಜರಾತ್ ಸಿಎಂ ಆಗಿದ್ದಾಗ ಅವರೊಂದಿಗೆ ಕೆಲಸ ಮಾಡಿದ್ದೆ. ಅಲ್ಲಿನ ಅನುಭವ ಅತ್ಯುತ್ತಮವಾಗಿತ್ತು’. ಎಂದು ಹೇಳಿದ್ದಾರೆ. ಅವರ ಹೇಳಿಕೆಯ ನಂತರ ಪ್ರಧಾನಿ ಮೋದಿ ಅಭಿಜಿತ್ ಬ್ಯಾನರ್ಜಿ ಅವರನ್ನು ಭೇಟಿ ಮಾಡಿದ್ದಾರೆ.

ಈಗಾಗಲೇ ದೇಶದಲ್ಲಿ ಆರ್ಥಿಕ ಕುಸಿತ, ಜಿಡಿಪಿ ಮಂದಗತಿಯಲ್ಲಿ ಸಾಗಿದ್ದು, ನಿರುದ್ಯೋಗ, ಮೂಲ ಸೌಕರ್ಯಗಳ ಕೊರತೆ, ಬಡತನ ಹೆಚ್ಚುವ ಭೀತಿ ಶುರುವಾಗಿದೆ. ಅಲ್ಲದೇ ಈ ಹಿಂದೆ ಅಭಿಜಿತ್ ಬ್ಯಾನರ್ಜಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಆರ್ಥಿಕತೆ ಕುಸಿತ ಮತ್ತು ನೋಟು ನಿಷೇಧ, ಜಿಎಸ್‍ಟಿ ಹೇರಿಕೆಯ ನಂತರ ಕಟುವಾಗಿ ಟೀಕಿಸಿದ್ದರು. ಮುಂದಿನ ದಿನಗಳಲ್ಲಿ ನೋಟ್ ಬ್ಯಾನ್ ಸಾಕಷ್ಟು ಪರಿಣಾಮ ಬೀರಲಿದೆ. ಬಿಜೆಪಿ ಮಾಡಿದ ನೋಟ್ ಬ್ಯಾನ್ ಮತ್ತು ಜಿಎಸ್‍ಟಿ ಅರ್ಥವೇ ಆಗಿಲ್ಲ ಎಂದಿದ್ದರು. ಅರ್ಥಶಾಸ್ತ್ರ ವಿಭಾಗದಲ್ಲಿ ಅಭಿಜಿತ್ ಬ್ಯಾನರ್ಜಿ ನೊಬೆಲ್ ಪುರಸ್ಕಾರ ಪಡೆದ ನಂತರ ಅವರ ಹೇಳಿಕೆಗಳಿಗೆ ಮತ್ತಷ್ಟು ಬಲ ಬಂದಿತ್ತು.

ಇನ್ನು ಮೊನ್ನೆಯಷ್ಟೇ ಕೇಂದ್ರ ಸಚಿವ ಪಿಯೂಷ್ ಗೋಯಲ್, ಅಭಿಜಿತ್ ಬ್ಯಾನರ್ಜಿ ಅವರು ನೊಬೆಲ್ ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಅಭಿನಂದಿಸುತ್ತೇವೆ. ಆದರೆ ಅವರು ಎಡಪಂಥೀಯ ವಿಚಾರಧಾರೆಯುಳ್ಳವರು ಎಂದಿದ್ದರು. ಗೋಯಲ್ ಮಾತು ಸಾಕಷ್ಟು ಟೀಕೆ, ವಿವಾದಕ್ಕೆ ಗುರಿಯಾಗಿತ್ತು. ಈಗ ಇದೆಲ್ಲ ಬೆಳವಣಿಗೆಯ ನಂತರ ಪ್ರಧಾನಿ ಮೋದಿ ಸ್ವತಃ ಅಭಿಜಿತ್ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ, ಅಭಿನಂದನೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅವರು ಹೇಳಿದ ಒಂದು ಮಾತಾದರೂ ಈ ಮನುಷ್ಯನಿಗೆ ಅರ್ಥವಾಗಿದ್ದೀತೆ? ಸಂಶಯ! ಅವರ ಸಲಹೆ ಮೇರೆಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸೇರಿಸಿದ್ದ ಯೋಜನೆಯನ್ನು ಚುನಾವಣೆಯ ವೇಳೆ ಗೇಲಿ ಮಾಡಿದ್ದು ಈತನೇ ಅಲ್ಲವೆ?

LEAVE A REPLY

Please enter your comment!
Please enter your name here

- Advertisment -

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...