Homeಮುಖಪುಟಲಿಂಗತ್ವ ಸಮಾನತೆಯಲ್ಲಿ 129ನೇ ಸ್ಥಾನ ಪಡೆದ ಭಾರತ: ಕಳೆದ ಬಾರಿಗಿಂತ ಎರಡು ಸ್ಥಾನ ಕುಸಿತ

ಲಿಂಗತ್ವ ಸಮಾನತೆಯಲ್ಲಿ 129ನೇ ಸ್ಥಾನ ಪಡೆದ ಭಾರತ: ಕಳೆದ ಬಾರಿಗಿಂತ ಎರಡು ಸ್ಥಾನ ಕುಸಿತ

- Advertisement -
- Advertisement -

ವಿಶ್ವ ಆರ್ಥಿಕ ವೇದಿಕೆಯ (ಡಬ್ಲ್ಯುಇಎಫ್‌) ಜಾಗತಿಕ ಲಿಂಗತ್ವ ಸಮಾನತೆ ಸೂಚ್ಯಂಕದಲ್ಲಿ ಭಾರತ ಎರಡು ಸ್ಥಾನ ಕುಸಿದಿದ್ದು 129ನೇ ಸ್ಥಾನಕ್ಕೆ ತಲುಪಿದೆ. ಐಸ್‌ಲ್ಯಾಂಡ್ ಅಗ್ರಸ್ಥಾನ ಕಾಯ್ದುಕೊಂಡಿದೆ.

ವಿಶ್ವ ಆರ್ಥಿಕ ವೇದಿಕೆ ಬುಧವಾರ ಬಿಡುಗಡೆ ಮಾಡಿರುವ ಲಿಂಗತ್ವ ಅಂತರ ಸೂಚ್ಯಂಕ ವರದಿಯಲ್ಲಿ ಫಿನ್‌ಲ್ಯಾಂಡ್ ಎರಡನೇ ಸ್ಥಾನ ಪಡೆದುಕೊಂಡಿದ್ದು, ನಾರ್ವೆ, ನ್ಯೂಜಿಲೆಂಡ್‌ ಮತ್ತು ಸ್ವೀಡನ್ ಕ್ರಮವಾಗಿ ಮೂರರಿಂದ ಐದನೇ ಸ್ಥಾನದಲ್ಲಿವೆ. ಬ್ರಿಟನ್ 14ನೇ ಸ್ಥಾನ ಮತ್ತು ಅಮೆರಿಕ 43ನೇ ಸ್ಥಾನ ಪಡೆದುಕೊಂಡಿವೆ.

ದಕ್ಷಿಣ ಏಷ್ಯಾದಲ್ಲಿ ಬಾಂಗ್ಲಾದೇಶ, ನೇಪಾಳ, ಶ್ರೀಲಂಕಾ ಮತ್ತು ಭೂತಾನ್ ನಂತರ ಭಾರತವು ಐದನೇ ಸ್ಥಾನದಲ್ಲಿದ್ದರೆ, ಪಾಕಿಸ್ತಾನವು ಕೊನೆಯ ಸ್ಥಾನದಲ್ಲಿದೆ.

ಜಾಗತಿಕವಾಗಿ, ಸುಡಾನ್ 146 ದೇಶಗಳ ಸೂಚ್ಯಂಕದಲ್ಲಿ ಕೊನೆಯ ಸ್ಥಾನದಲ್ಲಿದ್ದರೆ, ಪಾಕಿಸ್ತಾನ ಮೂರು ಸ್ಥಾನಗಳನ್ನು ಕಳೆದುಕೊಂಡು 145ನೇ ಸ್ಥಾನ ಪಡೆದುಕೊಂಡಿದೆ.

ಬಾಂಗ್ಲಾದೇಶ, ಸುಡಾನ್, ಇರಾನ್, ಪಾಕಿಸ್ತಾನ ಮತ್ತು ಮೊರಾಕೊ ಜೊತೆಗೆ ಕಡಿಮೆ ಮಟ್ಟದ ಆರ್ಥಿಕ ಸಮಾನತೆಯನ್ನು ಹೊಂದಿರುವ ದೇಶಗಳಲ್ಲಿ ಭಾರತವೂ ಸೇರಿದೆ. ಈ ಎಲ್ಲಾ ದೇಶಗಳು ಅಂದಾಜು ಗಳಿಸಿದ ಆದಾಯದಲ್ಲಿ 30 ಪ್ರತಿಶತಕ್ಕಿಂತ ಕಡಿಮೆ ಲಿಂಗ ಸಮಾನತೆಯನ್ನು ದಾಖಲಿಸಿದೆ.

ಮಾಧ್ಯಮಿಕ ಶಿಕ್ಷಣದಲ್ಲಿ ದಾಖಲಾತಿಗೆ ಸಂಬಂಧಿಸಿದಂತೆ ಭಾರತವು ಅತ್ಯುತ್ತಮ ಲಿಂಗ ಸಮಾನತೆಯನ್ನು ತೋರಿಸಿದೆ. ಮಹಿಳೆಯರ ರಾಜಕೀಯ ಸಬಲೀಕರಣದಲ್ಲೂ ಉತ್ತಮ ಅಂಕ ಗಳಿಸಿದ್ದು, ಜಾಗತಿಕವಾಗಿ 65ನೇ ಸ್ಥಾನದಲ್ಲಿದೆ.

ಕಳೆದ 50 ವರ್ಷಗಳಲ್ಲಿ ಮಹಿಳೆಯರು ಮತ್ತು ಪುರುಷರು ರಾಷ್ಟ್ರದ ಮುಖ್ಯಸ್ಥರಾಗಿರುವ ಸಮಾನತೆಗೆ ಸಂಬಂಧಿಸಿದಂತೆ ಭಾರತವು 10 ನೇ ಸ್ಥಾನದಲ್ಲಿದೆ.

140 ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತ ಲಿಂಗತ್ವ ಅಸಮಾನತೆ ಅಳಿಸಿ ಹಾಕುವಲ್ಲಿ ಒಟ್ಟಾರೆ ಶೇ.64.1ರಷ್ಟು ಪ್ರಗತಿ ಸಾಧಿಸಿದೆ.

ಜಾಗತಿಕ ಲಿಂಗತ್ವ ಅಂತರವು ಶೇ. 68.5ರಷ್ಟು ಇದ್ದು, ಇದೇ ವೇಗದಲ್ಲಿ ಸಾಗಿದರೆ ಪೂರ್ಣ ಪ್ರಮಾಣದಲ್ಲಿ ಲಿಂಗತ್ವ ಸಮಾನತೆ ಸಾಧಿಸಲು ಇನ್ನೂ 134 ವರ್ಷಗಳು ಬೇಕಾಗಬಹುದು.

ಇದನ್ನೂ ಓದಿ : ರೈತರ ಹತ್ಯೆ ಹೊಣೆಗಾರರಿಗೆ ಕೃಷಿ ಸಚಿವಾಲಯದ ಹೊಣೆ: ರೈತ ಸಂಘಟನೆಗಳಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...