Homeಮುಖಪುಟ189 ದೇಶಗಳಲ್ಲಿ 131ನೇ ಸ್ಥಾನ: ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಮತ್ತೆರೆಡು ಸ್ಥಾನ ಕುಸಿದ ಭಾರತ!

189 ದೇಶಗಳಲ್ಲಿ 131ನೇ ಸ್ಥಾನ: ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಮತ್ತೆರೆಡು ಸ್ಥಾನ ಕುಸಿದ ಭಾರತ!

ನೂತನ ವರದಿಯ ಪ್ರಕಾರ ಏಷ್ಯಾ ರಾಷ್ಟ್ರಗಳಾದ ರಷ್ಯಾ 52, ಶ್ರೀಲಂಕಾ 72, ಚೀನಾ 85, ಭಾರತ 131, ಬಾಂಗ್ಲಾದೇಶ 133, ನೇಪಾಳ 152 ಮತ್ತು ಪಾಕಿಸ್ತಾನ 154ನೇ ಸ್ಥಾನದಲ್ಲಿವೆ.

- Advertisement -
- Advertisement -

ವಿಶ್ವಸಂಸ್ಥೆಯ ಮಾನವ ಅಭಿವೃದ್ದಿ ಸೂಚ್ಯಂಕದಲ್ಲಿ ಭಾರತವು ಮತ್ತೆರೆಡು ಸ್ಥಾನ ಕುಸಿದಿದೆ ಎಂದು ವರದಿ ಹೇಳಿದೆ. 189 ದೇಶಗಳಲ್ಲಿ ಕಳೆದ ವರ್ಷ 129ನೇ ಸ್ಥಾನದಲ್ಲಿದ್ದ ಭಾರತ ಈ ವರ್ಷ 131ನೇ ಸ್ಥಾನಕ್ಕೆ ಕುಸಿದಿದೆ. ಆದರೆ ಪ್ರತಿ ರಾಷ್ಟ್ರದ ಅಭಿವೃದ್ಧಿಯಿಂದ ಉಂಟಾಗುವ ಗ್ರಹದ ಮೇಲಾಗುವ ಒತ್ತಡವನ್ನು ನಿರ್ಣಯಿಸಲು ಸೂಚ್ಯಂಕವನ್ನು ಸರಿಹೊಂದಿಸಿದರೆ, ಭಾರತವು ಶ್ರೇಯಾಂಕದಲ್ಲಿ ಎಂಟು ಸ್ಥಾನಗಳನ್ನು ಹೆಚ್ಚಿಸುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಯುನೈಟೆಡ್ ನೇಷನ್ಸ್ ಡೆವಲಪ್ಮೆಂಟ್ ಪ್ರೋಗ್ರಾಂ ಡಿಸೆಂಬರ್ 15 ರಂದು ಪ್ರಕಟಿಸಿದ ವರದಿಯ ಪ್ರಕಾರ, ಭಾರತದ ಒಟ್ಟು ರಾಷ್ಟ್ರೀಯ ಆದಾಯದ ಕೊಳ್ಳುವ ಶಕ್ತಿಯ ಸಾಮ್ಯತೆಯು 2018ರಲ್ಲಿ 6829 ಡಾಲರ್‌ ಇದ್ದುದು 2019 ರಲ್ಲಿ, 6,681 ಡಾಲರ್‌ಗೆ ಇಳಿದಿದೆ ಎಂದು ಪಿಟಿಐ ವರದಿ ಮಾಡಿದೆ.

ನೂತನ ವರದಿಯ ಪ್ರಕಾರ ಏಷ್ಯಾ ರಾಷ್ಟ್ರಗಳಾದ ರಷ್ಯಾ 52, ಶ್ರೀಲಂಕಾ 72, ಚೀನಾ 85, ಭಾರತ 131, ಬಾಂಗ್ಲಾದೇಶ 133, ನೇಪಾಳ 152 ಮತ್ತು ಪಾಕಿಸ್ತಾನ 154ನೇ ಸ್ಥಾನದಲ್ಲಿವೆ ಎಂದು ದಿ ಹಿಂದು ವರದಿ ಮಾಡಿದೆ.

Photo Courtesy: The Hindu

ಮಾನವ ಅಭಿವೃದ್ದಿ ಸೂಚ್ಯಂಕ (ಎಚ್‌ಡಿಐ)ವು ರಾಷ್ಟ್ರದ ಆರೋಗ್ಯ, ಶಿಕ್ಷಣ ಮತ್ತು ಜೀವನಮಟ್ಟದ ಮೌಲ್ಯಮಾಪನವಾಗಿದೆ. ಈ ವರ್ಷದ ವರದಿಯು 2019 ವರ್ಷವನ್ನು ಮಾತ್ರ ಒಳಗೊಂಡಿದ್ದು COVID 19 ನ ಪ್ರಭಾವವನ್ನು ಪರಿಗಣಿಸಿಲ್ಲ. ಕೋವಿಡ್ ಕಾರಣಕ್ಕೆ 2020 ರ ಜಾಗತಿಕ ಎಚ್‌ಡಿಐ ಸೂಚ್ಯಂಕವು ಮೂರು ದಶಕಗಳಲ್ಲಿ ಮೊದಲ ಬಾರಿಗೆ ಕೆಳಗಿಳಿಯುತ್ತದೆ ಎಂದು ಅದು ಊಹಿಸಿದೆ.

ಮೊದಲ ಬಾರಿಗೆ, ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮವು ಪ್ರತಿ ದೇಶದ ತಲಾ ಇಂಗಾಲದ ಹೊರಸೂಸುವಿಕೆ ಮತ್ತು ಅದರಿಂದ ಉಂಟಾಗುವ ಪರಿಣಾಮವನ್ನು ಪ್ರತಿಬಿಂಬಿಸಲು ಹೊಸ ಮೆಟ್ರಿಕ್ ಅನ್ನು ಪರಿಚಯಿಸಿದೆ. ಇದು ಪಳೆಯುಳಿಕೆ ಇಂಧನಗಳು, ಲೋಹಗಳು ಮತ್ತು ಸರಕುಗಳನ್ನು ತಯಾರಿಸಲು ಬಳಸುವ ಇತರ ಸಂಪನ್ಮೂಲಗಳ ಪ್ರಮಾಣವನ್ನು ಅಳೆಯುತ್ತದೆ ಎನ್ನಲಾಗಿದೆ.

ಪ್ಯಾರಿಸ್ ಒಪ್ಪಂದದ ಪ್ರಕಾರ, ಭಾರತವು ತನ್ನ ಜಿಡಿಪಿಯ ಹೊರಸೂಸುವಿಕೆಯ ತೀವ್ರತೆಯನ್ನು 2005 ರ ಮಟ್ಟದಿಂದ 2030 ರ ವೇಳೆಗೆ 33-35% ರಷ್ಟು ಕಡಿಮೆ ಮಾಡಲು ಮತ್ತು 2030 ರ ವೇಳೆಗೆ ಪಳೆಯುಳಿಕೆ ರಹಿತ ಇಂಧನ ಮೂಲಗಳಿಂದ 40% ವಿದ್ಯುತ್ ಶಕ್ತಿಯ ಸಾಮರ್ಥ್ಯವನ್ನು ಪಡೆಯುವುದಾಗಿ ಪ್ರತಿಜ್ಞೆ ಮಾಡಿದೆ ಎಂದು ವರದಿ ಹೇಳಿದೆ.

“ಯೋಜನೆಯ ಭಾಗವಾಗಿ, ಪಳೆಯುಳಿಕೆ ಇಂಧನ ಆಧಾರಿತ ಆಯ್ಕೆಗಳೊಂದಿಗೆ ಸೌರಶಕ್ತಿಯನ್ನು ಸ್ಪರ್ಧಾತ್ಮಕವಾಗಿಸಲು ವಿದ್ಯುತ್ ಉತ್ಪಾದನೆ ಮತ್ತು ಇತರ ಬಳಕೆಗಳಿಗೆ ಸೌರ ಶಕ್ತಿಯನ್ನು ಉತ್ತೇಜಿಸುವ ಉದ್ದೇಶವನ್ನು ರಾಷ್ಟ್ರೀಯ ಸೌರ ಮಿಷನ್ ಹೊಂದಿದೆ. ಭಾರತದಲ್ಲಿ ಸೌರ ಸಾಮರ್ಥ್ಯವು ಮಾರ್ಚ್ 2014 ರಲ್ಲಿ 2.6 ಗಿಗಾವಾಟ್‌ನಿಂದ 2019 ರ ಜುಲೈನಲ್ಲಿ 30 ಗಿಗಾವಾಟ್‌ಗೆ ಏರಿತು, ನಿಗದಿತ ಸಮಯಕ್ಕಿಂತ ನಾಲ್ಕು ವರ್ಷಗಳ ಮುಂಚಿತವಾಗಿ 20 ಗಿಗಾವಾಟ್‌ಗಳ ಗುರಿಯನ್ನು ಸಾಧಿಸಿತು. ಸ್ಥಾಪಿತ ಸೌರ ಸಾಮರ್ಥ್ಯಕ್ಕಾಗಿ 2019 ರಲ್ಲಿ ಭಾರತ ಐದನೇ ಸ್ಥಾನದಲ್ಲಿದೆ ”ಎಂದು ವರದಿ ತಿಳಿಸಿದೆ.


ಇದನ್ನೂ ಓದಿ: ‘PM-CARES’ ಖಾಸಗಿ ನಿಧಿ- ದಾಖಲೆಗಳು ಬಿಚ್ಚಿಟ್ಟ ವೈರುಧ್ಯ!, ದೇಶಕ್ಕೆ ಇಷ್ಟು ದೊಡ್ಡ ಸುಳ್ಳು ಹೇಳಿದರೇ ಮೋದಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...