Homeಮುಖಪುಟ'ವಿಶ್ವ ಪತ್ರಿಕಾ ಸ್ವಾತಂತ್ರ್ಯ' ಸೂಚ್ಯಂಕ: 180ರಲ್ಲಿ ಭಾರತಕ್ಕೆ 151ನೇ ಸ್ಥಾನ

‘ವಿಶ್ವ ಪತ್ರಿಕಾ ಸ್ವಾತಂತ್ರ್ಯ’ ಸೂಚ್ಯಂಕ: 180ರಲ್ಲಿ ಭಾರತಕ್ಕೆ 151ನೇ ಸ್ಥಾನ

- Advertisement -
- Advertisement -

‘ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ-2025’ರಲ್ಲಿ ಭಾರತವು 180ರಲ್ಲಿ 151ನೇ ಸ್ಥಾನ ಪಡೆದಿದೆ. 2024ರಲ್ಲಿ  159ನೇ ಸ್ಥಾನ ಪಡೆದಿತ್ತು.

ಪ್ರಜಾಪ್ರಭುತ್ವ ಆಡಳಿತಕ್ಕಾಗಿ ಕೆಲಸ ಮಾಡುವ ಅಂತಾರಾಷ್ಟ್ರೀಯ ಲಾಭರಹಿತ ಸಂಸ್ಥೆಯಾದ ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಡಬ್ಲ್ಯುಬಿ) ಪ್ರಕಟಿಸಿದ ವರದಿಯಲ್ಲಿ ವಿಶ್ವದಾದ್ಯಂತ ಹೆಚ್ಚಿನ ಮಾಧ್ಯಮಗಳಿಗೆ ‘ಆರ್ಥಿಕ ಒತ್ತಡ’ ಪ್ರಮುಖ ಸಮಸ್ಯೆಯಾಗಿ ಹೇಳಲಾಗಿದೆ.

ಭಾರತ 2024ರಲ್ಲಿ 159ನೇ ಸ್ಥಾನ ಮತ್ತು 2023ರಲ್ಲಿ 161ನೇ ಸ್ಥಾನ ಪಡೆದಿತ್ತು. ಈ ಬಾರಿ 151ನೇ ಸ್ಥಾನ ಪಡೆಯುವ ಮೂಲಕ ಕೊಂಚ ಸುಧಾರಿಸಿದೆ. ಆದಾಗ್ಯೂ, ಭಾರತದ ಪತ್ರಿಕಾ ಸ್ವಾತಂತ್ರ್ಯ ‘ಅತ್ಯಂತ ಗಂಭೀರ’ ಪರಿಸ್ಥಿತಿಯಲ್ಲಿಯೇ ಇದೆ ಎಂದು ರಿಪೋರ್ಟರ್ಸ್ ವಿದೌಟ್ ಬಾರ್ಡರ್ಸ್ ಹೇಳಿದೆ.

ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ-2025 Source: Reporters Without Borders

“ರಾಜಕೀಯ ಪ್ರಭಾವಿಗಳ ಕೈಯಲ್ಲಿ ಮಾಧ್ಯಮಗಳ ಮಾಲೀಕತ್ವದ ಕೇಂದ್ರೀಕರಣವು ಮಾಧ್ಯಮ ಬಹುತ್ವಕ್ಕೆ ಸವಾಲಾಗಿರುವ ದೇಶಗಳಲ್ಲಿ ಭಾರತವೂ ಸೇರಿದೆ” ಎಂದು ವರದಿ ತಿಳಿಸಿದೆ.

ಅದಲ್ಲದೆ, ವರದಿಯು ಜಾಗತಿಕ ಪತ್ರಿಕಾ ಸ್ವಾತಂತ್ರ್ಯದ ಸ್ಥಿತಿಯನ್ನು ಮೊದಲ ಬಾರಿಗೆ ‘ಕಠಿಣ ಪರಿಸ್ಥಿತಿ’ಯಲ್ಲಿದೆ ಎಂದಿದೆ. ಮಾಧ್ಯಮ ದುರ್ಬಲಗೊಳ್ಳಲು ಕಾರಣವಾದ ಪ್ರಮುಖ ಅಂಶವೆಂದರೆ ‘ಆರ್ಥಿಕ ಒತ್ತಡ’ ಎಂದು ಹೇಳಿದೆ.

ಸೂಚ್ಯಂಕದಲ್ಲಿ ನೆರೆಯ ರಾಷ್ಟ್ರಗಳಲ್ಲಿ ನೇಪಾಳ (90ನೇ ಸ್ಥಾನ), ಮಾಲ್ಡೀವ್ಸ್ (104ನೇ ಸ್ಥಾನ), ಶ್ರೀಲಂಕಾ (139ನೇ ಸ್ಥಾನ), ಬಾಂಗ್ಲಾದೇಶ (149ನೇ ಸ್ಥಾನ)ಕ್ಕಿಂತ ಭಾರತ ಹಿಂದೆ ಇದ್ದರೆ, ಭೂತಾನ್ (152ನೇ ಸ್ಥಾನ), ಪಾಕಿಸ್ತಾನ (158ನೇ ಸ್ಥಾನ), ಮ್ಯಾನ್ಮಾರ್ (169 ನೇ ಸ್ಥಾನ), ಅಫ್ಘಾನಿಸ್ತಾನ (175ನೇ ಸ್ಥಾನ) ಮತ್ತು ಚೀನಾ (178ನೇ ಸ್ಥಾನ) ಕ್ಕಿಂತ ಉತ್ತಮ ಸ್ಥಾನದಲ್ಲಿದೆ.

ನಾರ್ವೆ, ಎಸ್ಟೋನಿಯಾ ಮತ್ತು ನೆದರ್‌ಲ್ಯಾಂಡ್ಸ್ ಮೊದಲ ಮೂರು ಸ್ಥಾನಗಳನ್ನು ಪಡೆದಿದೆ.

ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ ರಾಜಕೀಯ, ಆರ್ಥಿಕ, ಶಾಸಕಾಂಗ, ಸಾಮಾಜಿಕ ಮತ್ತು ಭದ್ರತೆ ಎಂಬ ಐದು ಅಂಶಗಳ ಆಧಾರದ ಮೇಲೆ ದೇಶಗಳಲ್ಲಿನ ಪತ್ರಿಕಾ ಸ್ವಾತಂತ್ರ್ಯವನ್ನು ಮೌಲ್ಯಮಾಪನ ಮಾಡುತ್ತದೆ.

‘ಆರ್ಥಿಕ ಸ್ವಾತಂತ್ರ್ಯವಿಲ್ಲದೆ ಪತ್ರಿಕಾ ಸ್ವಾತಂತ್ರ್ಯವಿಲ್ಲ’ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್‌ನ ಸಂಪಾದಕೀಯ ನಿರ್ದೇಶಕಿ ಆನ್ ಬೊಕಾಂಡೆ ಹೇಳಿದ್ದಾರೆ.

“ಸುದ್ದಿ ಮಾಧ್ಯಮಗಳು ಆರ್ಥಿಕವಾಗಿ ಸಂಕಷ್ಟದಲ್ಲಿರುವಾಗ, ಗುಣಮಟ್ಟದ ವರದಿಗಾರಿಕೆಯನ್ನು ಕಡೆಗಣಿಸಿ ಪ್ರೇಕ್ಷಕರನ್ನು ಆಕರ್ಷಿಸುವ ಸ್ಪರ್ಧೆಗೆ ಇಳಿಯುತ್ತವೆ ಮತ್ತು ಅವರನ್ನು ಶೋಷಿಸಲು ಪ್ರಯತ್ನಿಸುವ ಬಂಡವಾಳಶಾಹಿಗಳು ಮತ್ತು ಸಾರ್ವಜನಿಕ ಅಧಿಕಾರಿಗಳಿಗೆ ಬಲಿಯಾಗಬಹುದು”ಎಂದಿದ್ದಾರೆ.

“ಪತ್ರಿಕೋದ್ಯಮಕ್ಕೆ ಅನುಕೂಲಕರವಾದ ಮತ್ತು ಅಂತರ್ಗತವಾಗಿ ದುಬಾರಿಯಾಗಿರುವ ವಿಶ್ವಾಸಾರ್ಹ ಮಾಹಿತಿಯ ಉತ್ಪಾದನೆಯನ್ನು ಖಾತ್ರಿಪಡಿಸುವ ಸ್ಥಿತಿಗೆ ಮಾಧ್ಯಮ ಆರ್ಥಿಕತೆಯನ್ನು ತುರ್ತಾಗಿ ಪುನಃಸ್ಥಾಪಿಸಬೇಕು. ಸಾರ್ವಜನಿಕ ಹಿತಾಸಕ್ತಿಗೆ ಸೇವೆ ಸಲ್ಲಿಸುವ ಉಚಿತ, ವಿಶ್ವಾಸಾರ್ಹ ಮಾಹಿತಿಯನ್ನು ಖಚಿತಪಡಿಸಿಕೊಳ್ಳಲು ಮಾಧ್ಯಮದ ಆರ್ಥಿಕ ಸ್ವಾತಂತ್ರ್ಯವು ಅಗತ್ಯವಾಗಿದೆ” ಎಂದು ಆನ್ ಬೊಕಾಂಡೆ ಹೇಳಿದ್ದಾರೆ.

ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ ಗಾಯಕ ಸೋನು ನಿಗಮ್; ಬಂಧನಕ್ಕೆ ಆಗ್ರಹಿಸಿದ ಕರವೇ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...