‘ವಿಶ್ವ ಪತ್ರಿಕಾ ಸ್ವಾತಂತ್ರ್ಯ’ ಸೂಚ್ಯಂಕ: 180ರಲ್ಲಿ ಭಾರತಕ್ಕೆ 151ನೇ ಸ್ಥಾನ

‘ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕ-2025’ರಲ್ಲಿ ಭಾರತವು 180ರಲ್ಲಿ 151ನೇ ಸ್ಥಾನ ಪಡೆದಿದೆ. 2024ರಲ್ಲಿ  159ನೇ ಸ್ಥಾನ ಪಡೆದಿತ್ತು. ಪ್ರಜಾಪ್ರಭುತ್ವ ಆಡಳಿತಕ್ಕಾಗಿ ಕೆಲಸ ಮಾಡುವ ಅಂತಾರಾಷ್ಟ್ರೀಯ ಲಾಭರಹಿತ ಸಂಸ್ಥೆಯಾದ ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ (ಆರ್‌ಡಬ್ಲ್ಯುಬಿ) ಪ್ರಕಟಿಸಿದ ವರದಿಯಲ್ಲಿ ವಿಶ್ವದಾದ್ಯಂತ ಹೆಚ್ಚಿನ ಮಾಧ್ಯಮಗಳಿಗೆ ‘ಆರ್ಥಿಕ ಒತ್ತಡ’ ಪ್ರಮುಖ ಸಮಸ್ಯೆಯಾಗಿ ಹೇಳಲಾಗಿದೆ. ಭಾರತ 2024ರಲ್ಲಿ 159ನೇ ಸ್ಥಾನ ಮತ್ತು 2023ರಲ್ಲಿ 161ನೇ ಸ್ಥಾನ ಪಡೆದಿತ್ತು. ಈ ಬಾರಿ 151ನೇ ಸ್ಥಾನ ಪಡೆಯುವ ಮೂಲಕ ಕೊಂಚ ಸುಧಾರಿಸಿದೆ. ಆದಾಗ್ಯೂ, ಭಾರತದ ಪತ್ರಿಕಾ ಸ್ವಾತಂತ್ರ್ಯ … Continue reading ‘ವಿಶ್ವ ಪತ್ರಿಕಾ ಸ್ವಾತಂತ್ರ್ಯ’ ಸೂಚ್ಯಂಕ: 180ರಲ್ಲಿ ಭಾರತಕ್ಕೆ 151ನೇ ಸ್ಥಾನ