Homeಮುಖಪುಟತಾಲಿಬಾನ್ ವಿರುದ್ದ ವೈಮಾನಿಕ ದಾಳಿಗೆ ಭಾರತ ಸಿದ್ದವಾಗಿದೆ: ಯೋಗಿ ಆದಿತ್ಯನಾಥ್

ತಾಲಿಬಾನ್ ವಿರುದ್ದ ವೈಮಾನಿಕ ದಾಳಿಗೆ ಭಾರತ ಸಿದ್ದವಾಗಿದೆ: ಯೋಗಿ ಆದಿತ್ಯನಾಥ್

- Advertisement -
- Advertisement -

ಇಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶವು ಶಕ್ತಿಯುತವಾಗಿದೆ. ಯಾವುದೇ ದೇಶವು ಭಾರತದತ್ತ ಕಣ್ಣು ಹಾಯಿಸಲು ಧೈರ್ಯ ಮಾಡುತ್ತಿಲ್ಲ. ಇಂದು ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಗಳು ತಾಲಿಬಾನ್‌ನಿಂದ ತೊಂದರೆಗೀಡಾಗಿವೆ. ಆದರೆ, ಅವು ಭಾರತದತ್ತ ಬಂದರೆ, ದೇಶವು ವೈಮಾನಿಕ ದಾಳಿ ಸಿದ್ಧವಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಭಾನುವಾರು ನಡೆದ ಸಮಾಜಿಕ ಪ್ರತಿನಿಧಿ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ, “ತಾಲಿಬಾನ್‌ನಿಂದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನವು ದೇಶಗಳು ವಿಚಲಿತವಾಗಿವೆ. ಇದೇ ಸಂದರ್ಭದಲ್ಲಿ ಆ ಬಂಡುಕೋರರ ಗುಂಪು ಭಾರತದತ್ತ ಸಾಗುವ ಸಾಧ್ಯತೆ ಇದ್ದು, ಅವರ ವಿರುದ್ದ “ವೈಮಾನಿಕ ದಾಳಿಗೆ ಭಾರತ ಸಿದ್ದವಾಗಿದೆ” ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ 2022ರ ಆರಂಭದಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಎಲ್ಲಾ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಭಾರತವು ನೆರೆಯ ರಾಷ್ಟ್ರಗಳ ವಿರುದ್ಧ ಯುದ್ಧ ಮಾಡಲಿದೆ ಎನ್ನುವ ಮಾತುಗಳನ್ನಾಡಿದ್ದಾರೆ ಎನ್ನಲಾಗುತ್ತಿದೆ.

ಇನ್ನೊಂದೆಡೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಮಹಿಳೆಯರಿಗೆ 40% ಟಿಕೆಟ್ ನೀಡುವುದಾಗಿ ಘೋಷಿಸಿದ್ದಾರೆ. ಜೊತೆಗೆ ಉತ್ತರ ಪ್ರದೇಶದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಜನರಿಗೆ 10 ಲಕ್ಷ ರೂಪಾಯಿವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ. ಪ್ರತಿಯೊಬ್ಬರ ವಿದ್ಯುತ್ ಬಿಲ್ ಅನ್ನು ಅರ್ಧದಷ್ಟು ಕಡಿತಗೊಳಿಸುವುದಾಗಿ ಮತ್ತು ಸಾಂಕ್ರಾಮಿಕದ ಮಧ್ಯೆ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವ ಕುಟುಂಬಗಳಿಗೆ 25,000 ರೂಪಾಯಿಗಳನ್ನು ನೀಡುವುದಾಗಿ ಪಕ್ಷವು ಭರವಸೆ ನೀಡಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 12ನೇ ತರಗತಿ ತೇರ್ಗಡೆಯಾದ ಬಾಲಕಿಯರಿಗೆ ಸ್ಮಾರ್ಟ್‌ಫೋನ್ ಹಾಗೂ ಪದವೀಧರ ಬಾಲಕಿಯರಿಗೆ ಇ-ಸ್ಕೂಟರ್ ನೀಡಲು ಪಕ್ಷ ನಿರ್ಧರಿಸಿದೆ.


ಇದನ್ನು ಓದಿ: ಯುಪಿ ಚುನಾವಣೆಯಲ್ಲಿ ಶೇ.40 ರಷ್ಟು ಟಿಕೆಟ್‌ ಮಹಿಳೆಯರಿಗೆ: ಪ್ರಿಯಾಂಕಾ ಗಾಂಧಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...