Homeಕರೋನಾ ತಲ್ಲಣದೇಶದಲ್ಲಿ 31,923 ಹೊಸ ಕೊರೊನಾ ಪ್ರಕರಣಗಳು ಪತ್ತೆ: ನಿನ್ನೆಗಿಂತ 18 % ಹೆಚ್ಚಳ

ದೇಶದಲ್ಲಿ 31,923 ಹೊಸ ಕೊರೊನಾ ಪ್ರಕರಣಗಳು ಪತ್ತೆ: ನಿನ್ನೆಗಿಂತ 18 % ಹೆಚ್ಚಳ

- Advertisement -
- Advertisement -

ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 31,923 ಹೊಸ ಕೋವಿಡ್ ಪ್ರಕರಣಗಳನ್ನು ದಾಖಲಿಸಿದೆ. ಇದು ನಿನ್ನೆ (ಬುಧವಾರ) ದಾಖಲಾಗಿದ್ದ 26,964 ಪ್ರಕರಣಗಳ ಅಂಕಿಅಂಶಗಳಿಗಿಂತ 18 % ಹೆಚ್ಚಾಗಿದೆ. ಇದರೊಂದಿಗೆ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,01,640 ಆಗಿವೆ.

ಅತಿಹೆಚ್ಚು ಪ್ರಕರಣಗಳನ್ನು ವರದಿ ಮಾಡುತ್ತಿರುವ ಕೇರಳದಲ್ಲಿ 19,675 ಹೊಸ ಪ್ರಕರಣಗಳು ಮತ್ತು 142 ಸಾವುಗಳು ದಾಖಲಾಗಿದೆ. ಮಂಗಳವಾರದಿಂದ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 19,702 ವಾಗಿದೆ. ಪ್ರಸ್ತುತ ವಿವಿಧ ಜಿಲ್ಲೆಗಳಲ್ಲಿ 4,81,195 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ 4,57,822 ಜನರು ಮನೆ ಅಥವಾ ಕ್ಯಾರಂಟೈನ್ ಕೇಂದ್ರಗಳಲ್ಲಿದ್ದರೆ, 23,373 ಮಂದಿ ಆಸ್ಪತ್ರೆಗಳಲ್ಲಿ ಇದ್ದಾರೆ.

ಮಹಾರಾಷ್ಟ್ರದಲ್ಲಿ 3,608 ಹೊಸ ಪ್ರಕರಣಗಳು ವರದಿಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 65,31,237 ಕ್ಕೆ ಏರಿದೆ. 24 ಗಂಟೆಯಲ್ಲಿ 48 ಮಂದಿ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 1,38,664 ಕ್ಕೆ ತಲುಪಿದೆ. 39,984 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ: ರಾಮ್‌ರಾಜ್‌ ಪಂಚೆ ಜಾಹೀರಾತಿನಲ್ಲಿ ಗಾಂಧಿ: ಮೆಚ್ಚುಗೆ, ವಿಮರ್ಶೆ

ಸಕ್ರಿಯ ಪ್ರಕರಣಗಳ ಒಟ್ಟು ಸೋಂಕಿನ ಪ್ರಮಾಣ 0.90 ಪ್ರತಿಶತದಷ್ಟಿದ್ದು, ಕಳೆದ ವರ್ಷ ಮಾರ್ಚ್‌ನಿಂದ ಅತ್ಯಂತ ಕಡಿಮೆಯಾಗಿದೆ. ಚೇತರಿಕೆಯ ಪ್ರಮಾಣವು 97.77 ಶೇಕಡಾ ದಾಖಲಾಗಿದೆ, ಇದು ಮಾರ್ಚ್ 2020 ರ ನಂತರ ಅತಿ ಹೆಚ್ಚು ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ದೇಶದಲ್ಲಿ  ಇದುವರೆಗೆ 83.39 ಕೋಟಿ ಲಸಿಕೆ ಡೋಸ್‌ಗಳನ್ನು ನೀಡಲಾಗಿದೆ ಎಂದಿದೆ.

ಕೋವಿಡ್‌ನಿಂದ ಸಾವನ್ನಪ್ಪಿದವರ ಕುಟುಂಬಗಳಿಗೆ ರಾಜ್ಯ ಸರ್ಕಾರಗಳಿಂದ 50,000 ಸಾವಿರ  ಪರಿಹಾರ ನೀಡಲಾಗುತ್ತದೆ ಎಂದು ಒಕ್ಕೂಟ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಈಗಾಗಲೇ ಸಂಭವಿಸಿರುವ ಸಾವುಗಳಿಗೆ ಮಾತ್ರವಲ್ಲದೆ ಭವಿಷ್ಯದಲ್ಲಿ ಉಂಟಾಗುವ ಸಾವುಗಳಿಗೂ ಪರಿಹಾರ ನೀಡಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಲಾಗಿದೆ.

ಜನವರಿ 2020 ರಲ್ಲಿ ಸಾಂಕ್ರಾಮಿಕ ರೋಗದ ತೀವ್ರತೆಗೆ ದೇಶದಲ್ಲಿ 4.45 ಲಕ್ಷಕ್ಕೂ ಹೆಚ್ಚುಜನರು ಬಲಿಯಾಗಿದ್ದಾರೆ ಎಂದು ಸರ್ಕಾರ ತಿಳಿಸಿದೆ. ಆದರೆ, ಸಾವುಗಳ ಲೆಕ್ಕ ಸರಿಯಿಲ್ಲ ಎಂದು ಅನೇಕ ಸಂಘ, ಸಂಸ್ಥೆಗಳು, ಸಾಮಾಜಿಕ ಹೋರಾಟಗಾರರು ಆರೋಪಿಸಿದ್ದಾರೆ.

ಬಿಹಾರ, ಮಧ್ಯಪ್ರದೇಶ ಮತ್ತು ದೆಹಲಿಯಂತಹ ಕೆಲವು ರಾಜ್ಯಗಳು ಈಗಾಗಲೇ ಕೋವಿಡ್‌ಗೆ ಸದಸ್ಯರನ್ನು ಕಳೆದುಕೊಂಡ ಕುಟುಂಬಗಳಿಗೆ ಪರಿಹಾರವನ್ನು ಘೋಷಿಸಿವೆ.


ಇದನ್ನೂ ಓದಿ: ಗುಜರಾತ್‌ನಲ್ಲಿ ಹೆರಾಯಿನ್ ವಶ: ಮೋದಿ ಮಿತ್ರ ಅದಾನಿಯ ಪಾತ್ರದ ಬಗ್ಗೆ ತನಿಖೆ ಏಕಿಲ್ಲ?- ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...