Homeಕೊರೊನಾದೇಶದಲ್ಲಿ ಒಂದೇ ದಿನ 58,097 ಕೊರೊನಾ ಪ್ರಕರಣಗಳು: ಶೇ 55 ರಷ್ಟು ಏರಿಕೆ

ದೇಶದಲ್ಲಿ ಒಂದೇ ದಿನ 58,097 ಕೊರೊನಾ ಪ್ರಕರಣಗಳು: ಶೇ 55 ರಷ್ಟು ಏರಿಕೆ

- Advertisement -
- Advertisement -

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 58,097 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದು ಮಂಗಳವಾರ ವರದಿಯಾಗಿದ್ದ 37,379 ಪ್ರಕರಣಗಳಿಗಿಂತ ಶೇಕಡಾ 55 ರಷ್ಟು ಹೆಚ್ಚಾಗಿದೆ.

ಇದರೊಂದಿಗೆ ದೇಶದಲ್ಲಿ 2,135 ಓಮಿಕ್ರಾನ್ ರೂಪಾಂತರ ಸೋಂಕಿನ ಪ್ರಕರಣಗಳಿವೆ. ಮಹಾರಾಷ್ಟ್ರದಲ್ಲಿ 653 ಪ್ರಕರಣಗಳು, ದೆಹಲಿಯಲ್ಲಿ 464 ಓಮಿಕ್ರಾನ್ ಪ್ರಕರಣಗಳಿವೆ.

ಚೇತರಿಕೆಯ ಪ್ರಮಾಣವು ಪ್ರಸ್ತುತ ಶೇಕಡಾ 98.01 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ಕನಿಷ್ಠ 15,389 ಜನರು ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಲಸಿಕೆ ಅಭಿಯಾನವನ್ನು ನಿರಂತರವಾಗಿ ವೇಗಗೊಳಿಸಲಾಗುತ್ತಿದ್ದು, 15 ರಿಂದ 18 ವರ್ಷದೊಳಗಿನವರಿಗೆ ಲಸಿಕೆ ಹಾಕಲಾಗುತ್ತಿದೆ.

ಇದನ್ನೂ ಓದಿ: ಓಮೈಕ್ರಾನ್ ಆತಂಕ: ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಘೋಷಣೆ

ಪ್ರಪಂಚದಾದ್ಯಂತ ಹೆಚ್ಚುತ್ತಿರುವ ಹೊಸ ಓಮಿಕ್ರಾನ್ ರೂಪಾಂತರಿ ಪ್ರಕರಣಗಳು ಅಪಾಯವನ್ನು ಹೆಚ್ಚಿಸಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಹೇಳಿದೆ.

ಕೋವಿಡ್ ಪ್ರಕರಣಗಳು ಹೆಚ್ಚುತ್ತಲೇ ಇರುವುದರಿಂದ ಹಲವಾರು ರಾಜ್ಯಗಳು ನೈಟ್ ಕರ್ಫ್ಯೂನಂತಹ ನಿರ್ಬಂಧಗಳನ್ನು ಘೋಷಿಸಿವೆ.

ರಾಜ್ಯ ಸರ್ಕಾರವು ಸಹ ವಾರಾಂತ್ಯದ ಕರ್ಫ್ಯೂ ವಿಧಿಸಲು ಮಂಗಳವಾರ ನಿರ್ಧರಿಸಿದೆ. ಜೊತೆಗೆ ಈಗಾಗಲೇ ಜಾರಿಯಲ್ಲಿರುವ ನೈಟ್‌ ಕರ್ಫ್ಯೂ‌ ಅನ್ನು ಜನವರಿ 19 ರವರೆಗೆ ವಿಸ್ತರಿಸಲು ನಿರ್ಧರಿಸಿದೆ. ರಾಜ್ಯಾದ್ಯಂತ ಕರ್ಫ್ಯೂ ರಾತ್ರಿ 10 ರಿಂದ ಬೆಳಿಗ್ಗೆ 5 ರವರೆಗೆ ಜಾರಿಯಲ್ಲಿರುತ್ತದೆ.

ಮಂಗಳವಾರದಂದು ರಾಜ್ಯದಲ್ಲಿ 2,479 ಹೊಸ ಪ್ರಕರಣಗಳು ದಾಖಲಾಗಿದ್ದು, ನಾಲ್ಕು ಸಾವುಗಳು ಸಂಭವಿಸಿವೆ ಎಂದು ವರದಿಯಾಗಿದೆ. ಜನವರಿ 1 ರಿಂದ ಬೆಂಗಳೂರಿನಲ್ಲಿ ಪ್ರತಿದಿನ 1,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ.


ಇದನ್ನೂ ಓದಿ: ಕೊರೊನಾ ಉಲ್ಬಣ: ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳು? ಶೀಘ್ರದಲ್ಲೇ ನಿರ್ಧಾರ: ಆರೋಗ್ಯ ಸಚಿವ ಸುಧಾಕರ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ರೇವಣ್ಣ ಸಹಚರ ಸತೀಶ್ ಬಾಬಣ್ಣಗೆ ನ್ಯಾಯಾಂಗ ಬಂಧನ

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ ಬಯಲಾದ ಬೆನ್ನಲ್ಲಿ ಮೈಸೂರಿನಲ್ಲಿ ಮಹಿಳೆಯನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣದ ಎರಡನೇ ಆರೋಪಿ ಸತೀಶ್ ಬಾಬಣ್ಣ ಬಂಧನವಾಗಿದ್ದು, ಅವರನ್ನು ನ್ಯಾಯಾಲಯ 14...