Homeಮುಖಪುಟ25 ವರ್ಷಗಳಲ್ಲಿ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಬೇಕು: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ

25 ವರ್ಷಗಳಲ್ಲಿ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಬೇಕು: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಕೆಂಪು ಕೋಟೆಯ ಆವರಣದಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆಗೆ ಚಾಲನೆ ನೀಡಿದರು. ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಿದರು.

ಮಹಾತ್ಮ ಗಾಂಧಿ, ನೇತಾಜಿ ಸುಭಾಷ್ ಚಂದ್ರ ಬೋಸ್, ಬಾಬಾಸಾಹೇಬ್ ಅಂಬೇಡ್ಕರ್, ವಿ.ಡಿ.ಸಾವರ್ಕರ್, ಭಗತ್ ಸಿಂಗ್, ಜವಾಹರಲಾಲ್ ನೆಹರೂ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರ ಗ್ಯಾಲಕ್ಸಿಗೆ ಮೋದಿ ನಮನ ಸಲ್ಲಿಸಿದರು.

ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಮಾಡಿದ ಭಾಷಣದ ಅಂಶಗಳು

  • ನಮ್ಮ ತ್ರಿವರ್ಣ ಧ್ವಜವು ಭಾರತದಲ್ಲಿ ಮಾತ್ರವಲ್ಲ, ಪ್ರಪಂಚದ ಮೂಲೆ ಮೂಲೆಗಳಲ್ಲಿ ವೈಭವಯುತವಾಗಿ ಹಾರಾಡುತ್ತಿದೆ.
  • ಸ್ವಾತಂತ್ರ್ಯ ಬಂದು 75 ವರ್ಷಗಳು ಪೂರ್ಣಗೊಂಡಿದ್ದು, ಹೊಸ ಸಂಕಲ್ಪದೊಂದಿಗೆ ಹೊಸ ದಿಕ್ಕಿನತ್ತ ಹೆಜ್ಜೆ ಹಾಕುವ ಸಮಯ ಇದಾಗಿದೆ.
  • ನಮ್ಮ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ, ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಕ್ರೌರ್ಯವನ್ನು ಎದುರಿಸದ ಒಂದು ವರ್ಷವೂ ಇರಲಿಲ್ಲ. ಇಂದು ನಾವು ಅವರಿಗೆ ಗೌರವ ಸಲ್ಲಿಸುವಾಗ, ನಾವು ಅವರ ದೂರದೃಷ್ಟಿ ಮತ್ತು ಭಾರತಕ್ಕಾಗಿ ಅವರು ಕಂಡ ಕನಸನ್ನು ನೆನಪಿಸಿಕೊಳ್ಳಬೇಕಾಗಿದೆ.
  • ಮಹಿಳೆಯರಿಗೆ ನೀಡುವ ಗೌರವ ಭಾರತದ ಬೆಳವಣಿಗೆಗೆ ಪ್ರಮುಖ ಆಧಾರಸ್ತಂಭವಾಗಿರುತ್ತದೆ. ನಮ್ಮ “ನಾರಿ ಶಕ್ತಿ”ಗೆ ನಾವು ಬೆಂಬಲ ನೀಡಬೇಕು.
  • 25 ವರ್ಷಗಳಲ್ಲಿ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕು. ಮುಂದಿನ 25 ವರ್ಷಗಳನ್ನು ದೇಶದ ಅಭಿವೃದ್ಧಿಗಾಗಿ ಮುಡಿಪಾಗಿಡಬೇಕೆಂದು ದೇಶದ ಯುವಕರನ್ನು ನಾನು ಒತ್ತಾಯಿಸುತ್ತೇನೆ. ನಾವು ಸಂಪೂರ್ಣ ಮಾನವೀಯತೆಯ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇವೆ.
  • ನಾವು ಇತರರಂತೆ ಆಗಲು ಪ್ರಯತ್ನಿಸಬಾರದು, ನಮ್ಮ ಮನಸ್ಥಿತಿಯಲ್ಲಿ ಗುಲಾಮಗಿರಿಯ ಕುರುಹು ಇರಬಾರದು. ಕೆಲವೊಮ್ಮೆ ಭಾಷೆಯ ಅಡೆತಡೆಗಳಿಂದ ನಮ್ಮ ಪ್ರತಿಭೆಯನ್ನು ನಿರ್ಬಂಧಿಸಲಾಗುತ್ತದೆ. ನಮ್ಮ ದೇಶದ ಪ್ರತಿಯೊಂದು ಭಾಷೆಯ ಬಗ್ಗೆ ನಾವು ಹೆಮ್ಮೆಪಡಬೇಕು. ನಾವು ಹೆಮ್ಮೆಯ ರಾಷ್ಟ್ರವಾಗಿ ನಮ್ಮ ಗುರುತನ್ನು ಉಳಿಸಿಕೊಳ್ಳಬೇಕು.
  • ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಪಡಬೇಕು. ನಾವು ನಮ್ಮ ಬೇರುಗಳೊಂದಿಗೆ ಸಂಪರ್ಕದ್ದಲ್ಲಿದ್ದರೆ ಮಾತ್ರ ಎತ್ತರಕ್ಕೆ ಹಾರಬಹುದು. ನಾವು ಎತ್ತರಕ್ಕೆ ಹಾರಿದಾಗ, ನಾವು ಇಡೀ ಜಗತ್ತಿಗೆ ಪರಿಹಾರಗಳನ್ನು ಒದಗಿಸಬಲ್ಲೆವು.

ಇದನ್ನೂ ಓದಿರಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ; ಭಗ್ನ ಭರವಸೆಗಳು ಮತ್ತು ಛಲದ ಹೋರಾಟಗಳು

  • ರಾಷ್ಟ್ರದ ಉನ್ನತಿಗೆ ಶ್ರಮಿಸಲು ನಾವೆಲ್ಲ ಒಂದಾಗಿರಬೇಕು. ಭಾರತದ ಪ್ರಗತಿಗೆ ಸಮಾನತೆ ಮೂಲಾಧಾರ. “ಭಾರತ ಮೊದಲು” ಎಂಬ ಮಂತ್ರದ ಮೂಲಕ ನಾವು ಒಂದಾಗಿದ್ದೇವೆ ಎಂದು ಖಚಿತಪಡಿಸಿಕೊಳ್ಳಬೇಕು.
  • ವಿದ್ಯುತ್, ನೀರು ಉಳಿಸುವುದು ಜನರ ಕರ್ತವ್ಯ. ನಾವು ಇದನ್ನು ಅನುಸರಿಸಿದರೆ, ನಾವು ಬಯಸಿದ ಫಲಿತಾಂಶಗಳನ್ನು ಸಮಯಕ್ಕೆ ಮುಂಚಿತವಾಗಿ ತಲುಪಬಹುದು. ಈ ಕರ್ತವ್ಯಗಳುಪ್ರ ಧಾನಿ ಮತ್ತು ಮುಖ್ಯಮಂತ್ರಿಗಳು ಸೇರಿದಂತೆ ಭಾರತದ ಎಲ್ಲಾ ನಾಗರಿಕರಿಗೆ ಅನ್ವಯಿಸುತ್ತವೆ.

ವರ್ಣರಂಜಿತ ಪೇಟ

ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವದ ಸಂದರ್ಭದಲ್ಲಿ ವರ್ಣರಂಜಿತ ಪೇಟಗಳನ್ನು ಧರಿಸುವ ಸಂಪ್ರದಾಯಕ್ಕೆ ಪ್ರಧಾನಿ ಮೋದಿ ಹೆಸರುವಾಸಿಯಾಗಿದ್ದಾರೆ. 2014ರಿಂದಲೂ ಈ ಸಂಪ್ರದಾಯವನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ಈ ವರ್ಷ ಕೇಸರಿ, ಬಿಳಿ, ಹಸಿರು ಬಣ್ಣದ ಪಟ್ಟಿಗಳನ್ನು ಹೊಂದಿರುವ ಬಿಳಿ ಪೇಟವನ್ನು ಮೋದಿ ಧರಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮೋದಿ ಮೂವರು ಅಧಿಕಾರಕ್ಕೆ ಬಂದ ದಿನದಿಂದಲೂಇದೀ ಭಾಷಣ ಮಾಡುತ್ತಿದ್ದಾರೆ ,ಯಾವ ಅಭಿವೃದ್ಧಿ ಆಗಿಲ್ಲ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...