Homeಮುಖಪುಟಪನ್ನೂನ್‌ ಹತ್ಯೆಗೆ ಸಂಚು: ವಾಷಿಂಗ್‌ ಟನ್‌ ಪೋಸ್ಟ್‌ ವರದಿ ತಿರಸ್ಕರಿಸಿದ ಭಾರತ

ಪನ್ನೂನ್‌ ಹತ್ಯೆಗೆ ಸಂಚು: ವಾಷಿಂಗ್‌ ಟನ್‌ ಪೋಸ್ಟ್‌ ವರದಿ ತಿರಸ್ಕರಿಸಿದ ಭಾರತ

- Advertisement -
- Advertisement -

ಭಾರತದ ಮಾಜಿ ಗುಪ್ತಚರ ಅಧಿಕಾರಿಯೊಬ್ಬರು ಅಮೆರಿಕದ ನೆಲದಲ್ಲಿ ಖಲಿಸ್ತಾನಿ ಭಯೋತ್ಪಾದಕ ಗುರ್ಪತ್‌ವಂತ್ ಸಿಂಗ್ ಪನ್ನೂನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂಬ ವಾಷಿಂಗ್ಟನ್ ಪೋಸ್ಟ್‌ನ ವರದಿಯನ್ನು ಭಾರತ ಇಂದು ಬಲವಾಗಿ ತಿರಸ್ಕರಿಸಿದೆ.

ಭಾರತದ ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್(RAW)ನ ಮಾಜಿ ಅಧಿಕಾರಿ ವಿಕ್ರಮ್ ಯಾದವ್, ಅಮೆರಿಕದಲ್ಲಿ ನೆಲೆಸಿದ್ದ ಸಿಖ್‌ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ತಂಡವನ್ನು ನೇಮಿಸಿಕೊಂಡಿದ್ದಾರೆ ಎಂದು ವರದಿ ಹೇಳಿದೆ.

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ವರದಿಯನ್ನು  ‘ಆಧಾರರಹಿತ’ ಎಂದು ಕರೆದಿದ್ದಾರೆ. ಕ್ರಿಮಿನಲ್ ಮತ್ತು ಭಯೋತ್ಪಾದಕ ಜಾಲಗಳ ಬಗ್ಗೆ ಯುಎಸ್ ಎತ್ತಿರುವ ಭದ್ರತಾ ಕಳವಳಗಳನ್ನು ಪರಿಹರಿಸಲು ಭಾರತ ಸರ್ಕಾರವು ಸ್ಥಾಪಿಸಿದ ಉನ್ನತ ಮಟ್ಟದ ಸಮಿತಿಯಿಂದ ತನಿಖೆ ನಡೆಯುತ್ತಿದೆ. ಈ ಬಗ್ಗೆ ಊಹಾತ್ಮಕ ಮತ್ತು ಬೇಜವಾಬ್ದಾರಿ ಕಾಮೆಂಟ್‌ಗಳು ಸಹಾಯಕವಾಗುವುದಿಲ್ಲ ಎಂದು ಜೈಸ್ವಾಲ್ ಹೇಳಿದ್ದಾರೆ.

2022ರ ನವೆಂಬರ್‌ನಲ್ಲಿ ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರ್ಪತ್‌ವಂತ್ ಸಿಂಗ್ ಪನ್ನುನ್ ಅವರ ಹತ್ಯೆಯನ್ನು ಮಾಡುವ ಸಂಚನ್ನು ಅಮೆರಿಕ ವಿಫಲಗೊಳಿಸಿದೆ ಎಂದು ಹೇಳಿಕೊಂಡಿತ್ತು. ಪ್ರಕರಣದಲ್ಲಿ ಭಾರತದ ಕೈವಾಡದ ಬಗ್ಗೆ ಹೇಳಿತ್ತು.

ಈ ಕುರಿತು ಮ್ಯಾನ್‌ಹ್ಯಾಟನ್ ನ್ಯಾಯಾಲಯದಲ್ಲಿ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಭಾರತೀಯ ಪ್ರಜೆ ನಿಖಿಲ್ ಗುಪ್ತಾ ಹೆಸರಿತ್ತು. ಆತನ ಬಂಧನವೂ ನಡೆದಿತ್ತು. ಇದೀಗ ವಿಕ್ರಮ್ ಯಾದವ್ ಪನ್ನುನ್‌ ಹತ್ಯೆಗೆ  ಅಂತಿಮ ಸೂಚನೆಗಳನ್ನು ನೀಡಿದ್ದರು ಎಂದು ವಾಷಿಂಗ್‌ ಟನ್‌ ಪೋಸ್ಟ್ ವರದಿ ಹೇಳಿದೆ. ಇದಲ್ಲದೆ ಮೋದಿಯ ರಾಷ್ಟ್ರೀಯ ಭದ್ರತಾ ಸಲಹೆಗಾರರಾದ ಅಜಿತ್ ದೋವಲ್, ಸಿಖ್ ಕಾರ್ಯಕರ್ತ ಪನ್ನೂನ್ ಹತ್ಯೆ ಸಂಚಿನ ಬಗ್ಗೆ ತಿಳಿದಿರುವ ಸಾಧ್ಯತೆ ಇದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಭಾರತವು ಈ ಆರೋಪಗಳನ್ನು ಬಲವಾಗಿ ತಿರಸ್ಕರಿಸಿದೆ ಮತ್ತು ಸರ್ಕಾರದ ನೀತಿಗೆ ವಿರುದ್ಧವಾಗಿದೆ ಎಂದು ಹೇಳಿದೆ. ಭಾರತದ ಮೇಲಿನ ಆರೋಪಗಳ ಬಗ್ಗೆ ತನಿಖೆ ಮಾಡಲು ನವೆಂಬರ್ 2023ರಲ್ಲಿ ಉನ್ನತ ಮಟ್ಟದ ತನಿಖಾ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದೆ.

ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ ಈ ಕುರಿತ ತನಿಖೆಯಲ್ಲಿ ಭಾರತದ ರಾಷ್ಟ್ರೀಯ ಭದ್ರತಾ ಹಿತಾಸಕ್ತಿಗಳು ಕೂಡ ಇದೆ ಎಂದು ಹೇಳಿದ್ದರು. ಬಿಡೆನ್ ಆಡಳಿತವು ವಿಕ್ರಮ್ ಯಾದವ್ ವಿರುದ್ಧ ಆರೋಪ ಮಾಡುವುದನ್ನು ತಪ್ಪಿಸಿದೆ ಎಂದು ಕೂಡ ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. ತನಿಖೆಯ ಫಲಿತಾಂಶದ ಆಧಾರದ ಮೇಲೆ ಭಾರತ ಸರ್ಕಾರವು ಹೊಣೆಗಾರಿಕೆಯನ್ನು ತೆಗೆದುಕೊಳ್ಳುತ್ತದೆ ಎಂದು ನಿರೀಕ್ಷಿಸುತ್ತದೆ ಎಂದು ಶ್ವೇತಭವನ ಹೇಳಿದೆ.

ಇದು ಗಂಭೀರ ವಿಷಯವಾಗಿದೆ ಮತ್ತು ನಾವು ಅದನ್ನು ತುಂಬಾ ಗಂಭೀರವಾಗಿ ಪರಿಗಣಿಸುತ್ತಿದ್ದೇವೆ. ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುವ ಬಗ್ಗೆ ಭಾರತ ಸರ್ಕಾರವು ನಮ್ಮೊಂದಿಗೆ ಸ್ಪಷ್ಟವಾಗಿ ಹೇಳಿದೆ.  ನಾವು ನಮ್ಮ ಕಳವಳಗಳನ್ನು ನೇರವಾಗಿ ಭಾರತ ಸರ್ಕಾರದೊಂದಿಗೆ ವ್ಯಕ್ತಪಡಿಸುವುದನ್ನು ಮುಂದುವರಿಸಲಿದ್ದೇವೆ ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್ ಹೇಳಿದ್ದಾರೆ.

ಇದನ್ನು ಓದಿ: ಪನ್ನೂನ್ ಹತ್ಯೆ ಸಂಚು: ಮೋದಿ ಆಪ್ತರ ಕಡೆ ಬೊಟ್ಟು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಟಿಕೆಟ್‌ ಕೈತಪ್ಪಿದಕ್ಕೆ ‘ಮತದಾನ’ ಮಾಡದ ಬಿಜೆಪಿ ಸಂಸದ: ಶೋಕಾಸ್ ನೋಟಿಸ್ ಜಾರಿ

0
ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಜಯಂತ್ ಸಿನ್ಹಾ ಮತದಾನ ಮಾಡಲು ವಿಫಲರಾದ ಹಿನ್ನೆಲೆಯಲ್ಲಿ ಬಿಜೆಪಿ ಅವರ ವಿರುದ್ಧ ಕ್ರಮ ಕೈಗೊಂಡಿದ್ದು, ಎರಡು ದಿನಗಳಲ್ಲಿ ಉತ್ತರ ನೀಡುವಂತೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಜಾರ್ಖಂಡ್‌ನ...