Homeಮುಖಪುಟಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ

ಗಾಝಾ ಸಂಘರ್ಷದಲ್ಲಿ ಭಾರತ ಒಂಟಿಯಾಗಿ ನಿಂತಿದೆ: ಮಲ್ಲಿಕಾರ್ಜುನ ಖರ್ಗೆ

ಗಾಝಾ ಭೀಕರ ಹಿಂಸೆ ಎದುರಿಸುತ್ತಿರುವಾಗ ಭಾರತ ನಿಷ್ಕ್ರಿಯವಾಗಿ ನಿಲ್ಲಲು ಸಾಧ್ಯವಿಲ್ಲ ಎಂದ ಕಾಂಗ್ರೆಸ್ ಅಧ್ಯಕ್ಷ

- Advertisement -
- Advertisement -

ಇಸ್ರೇಲ್‌ ಆಕ್ರಮಿತ ಪ್ಯಾಲೆಸ್ತೀನ್‌ನ ಗಾಝಾದಲ್ಲಿ ಕದನ ವಿರಾಮಕ್ಕೆ ಕರೆ ನೀಡುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದಿಂದ ಭಾರತ ಮತ್ತೆ ತಟಸ್ಥವಾಗಿದೆ. ಕಳೆದ ಮೂರು ವರ್ಷಗಳಲ್ಲಿ ಇದು ನಾಲ್ಕನೇ ಬಾರಿಗೆ ಭಾರತ ಮತದಾನದಿಂದ ತಟಸ್ಥವಾಗಿದೆ. ಮೋದಿ ನೇತೃತ್ವದ ಸರ್ಕಾರದ ಈ ನಿರ್ಧಾರದ ವಿರುದ್ಧ ವಿಪಕ್ಷ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಗಾಜಾ ಸಂಘರ್ಷದಲ್ಲಿ

ಈ ಬಗ್ಗೆ ಶನಿವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, “ನಮ್ಮ ವಿದೇಶಾಂಗ ನೀತಿಯು ಈಗ ಹೆಚ್ಚು ಹೆಚ್ಚು ಶಿಥಿಲಗೊಂಡಿದೆ ಎಂಬುದು ಸ್ಪಷ್ಟವಾಗುತ್ತಿದೆ. ಬಹುಶಃ, ಪ್ರಧಾನಿ ಮೋದಿ ಈಗ ತಮ್ಮ ವಿದೇಶಾಂಗ ಸಚಿವರ ಪುನರಾವರ್ತಿತ ತಪ್ಪುಗಳನ್ನು ಪರಿಗಣಿಸಿ ಕೆಲವು ಹೊಣೆಗಾರಿಕೆಯನ್ನು ಹೊಂದಿಸಬೇಕು.” ಎಂದು ಹೇಳಿದ್ದಾರೆ.

“ಗಾಜಾದಲ್ಲಿ ಕದನ ವಿರಾಮಕ್ಕಾಗಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯಕ್ಕೆ 149 ದೇಶಗಳು ಮತ ಹಾಕಿದವು. ಮತದಾನದಿಂದ ದೂರವಿದ್ದ 19 ದೇಶಗಳಲ್ಲಿ ಭಾರತ ಕೂಡಾ ಒಂದಾಗಿದೆ. ಈ ಹೆಜ್ಜೆಯಿಂದ ನಾವು ವಾಸ್ತವಿಕವಾಗಿ ಒಂಟಿಯಾಗಿ ನಿಂತಿದ್ದೇವೆ.” ಎಂದು ಅವರು ಹೇಳಿದ್ದಾರ ಎ.

ಅಕ್ಟೋಬರ್ 8, 2023 ರಂದು, ಇಸ್ರೇಲ್ ಜನರ ಮೇಲೆ ಪ್ಯಾಲೆಸ್ತೀನಿ ಹೋರಾಟಗಾರರಾದ ಹಮಾಸ್ ನಡೆಸಿದ ಕ್ರೂರ ದಾಳಿಯನ್ನು ಕಾಂಗ್ರೆಸ್ ಖಂಡಿಸಿತ್ತು ಎಂದು ಹೇಳಿರುವ ಅವರು, “ಗಾಝಾದ ದಿಗ್ಭಂಧನ ಮತ್ತು ಅದರ ಮೇಲಿನ ಬಾಂಬ್ ದಾಳಿಗಳನ್ನು ಒಳಗೊಂಡಂತೆ ವಿವೇಚನಾರಹಿತ ಕೃತ್ಯಗಳನ್ನು ನಾವು ನಿರಂತರವಾಗಿ ಖಂಡಿಸಿದ್ದೇವೆ” ಎಂದು ಹೇಳಿದ್ದಾರೆ.

ಈ ದಾಳಿಯಲ್ಲಿ 60,000 ಜನರು ಸಾವನ್ನಪ್ಪಿದ್ದಾರೆ ಮತ್ತು ವ್ಯಾಪಕ ಮತ್ತು ಭಯಾನಕ ಮಾನವೀಯ ಬಿಕ್ಕಟ್ಟು ಇದೆ. ಮಧ್ಯಪ್ರಾಚ್ಯ ಮತ್ತು ಪಶ್ಚಿಮ ಏಷ್ಯಾದಲ್ಲಿ ಕದನ ವಿರಾಮ, ಶಾಂತಿ ಮತ್ತು ಮಾತುಕತೆಗಾಗಿ ಪ್ರತಿಪಾದಿಸುವ ಭಾರತದ ಈ ಹಿಂದಿನ ನಿಲುವನ್ನು ನಾವು ಕೈಬಿಟ್ಟಿದ್ದೇವೆಯೇ? ಎಂದು ಮಲ್ಲಿಕಾರ್ಜುನ ಖರ್ಗೆ ಕೇಳಿದ್ದಾರೆ.

“ಭಾರತದ ಈ ನಿಲುವು ನಮ್ಮ ದೀರ್ಘಕಾಲದ ಅಲಿಪ್ತತೆ ಮತ್ತು ನೈತಿಕ ರಾಜತಾಂತ್ರಿಕತೆಯ ಸಂಪ್ರದಾಯದಲ್ಲಿ ತೀವ್ರವಾಗಿ ಬೇರೂರಿದೆ. ಅದರ ಮೂಲಕ ಭಾರತವು ಅಂತರರಾಷ್ಟ್ರೀಯ ಸಂಘರ್ಷಗಳಲ್ಲಿ ಯಾವಾಗಲೂ ನ್ಯಾಯ ಮತ್ತು ಶಾಂತಿಯನ್ನು ಪ್ರತಿಪಾದಿಸಿದೆ.” ಎಂದು ಹೇಳಿದ್ದಾರೆ.

“ಅಕ್ಟೋಬರ್ 19, 2023 ರಂದು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ತಕ್ಷಣದ ಕದನ ವಿರಾಮಕ್ಕೆ ಮತ್ತು ಗಾಝಾದ ಸಂಕಷ್ಟಕ್ಕೊಳಗಾದ ಮತ್ತು ಹೊರದಬ್ಬಲ್ಪಟ್ಟ ಜನರಿಗೆ ಮಾನವೀಯ ನೆರವು ನೀಡುವಂತೆ ಕರೆ ನೀಡಿತ್ತು. ಈ ಪ್ರದೇಶವು ಭೀಕರ ಹಿಂಸೆ, ಮಾನವೀಯ ದುರಂತ ಮತ್ತು ಹೆಚ್ಚುತ್ತಿರುವ ಅಸ್ಥಿರತೆಯನ್ನು ಎದುರಿಸುತ್ತಿರುವಾಗ ಭಾರತ ಮೌನವಾಗಿ ಅಥವಾ ನಿಷ್ಕ್ರಿಯವಾಗಿ ನಿಲ್ಲಲು ಸಾಧ್ಯವಿಲ್ಲ.” ಎಂದು ಅವರು ಹೇಳಿದ್ದಾರೆ. ಗಾಜಾ ಸಂಘರ್ಷದಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಏರ್ ಇಂಡಿಯಾ ಪತನ: ಸಾವಿನ ಸಂಖ್ಯೆ 279ಕ್ಕೆ ಏರಿಕೆ; ಬ್ಲಾಕ್ ಬಾಕ್ಸ್ ವಶಕ್ಕೆ ಪಡೆದ ಎಎಐಬಿ

ಏರ್ ಇಂಡಿಯಾ ಪತನ: ಸಾವಿನ ಸಂಖ್ಯೆ 279ಕ್ಕೆ ಏರಿಕೆ; ಬ್ಲಾಕ್ ಬಾಕ್ಸ್ ವಶಕ್ಕೆ ಪಡೆದ ಎಎಐಬಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...