Homeಮುಖಪುಟಕೆನಡಾದ ಪ್ರಜೆಗಳಿಗೆ ವೀಸಾ ಸೇವೆ ಸ್ಥಗಿತಗೊಳಿಸಿದ ಭಾರತ

ಕೆನಡಾದ ಪ್ರಜೆಗಳಿಗೆ ವೀಸಾ ಸೇವೆ ಸ್ಥಗಿತಗೊಳಿಸಿದ ಭಾರತ

- Advertisement -
- Advertisement -

ಭಾರತ ಮತ್ತು ಕೆನಡಾ ನಡುವಿನ ಸಂಬಂಧದಲ್ಲಿ ಬಿರುಕಿನ ಬೆನ್ನಲ್ಲೇ ಕೆನಡಾದಲ್ಲಿನ ಭಾರತೀಯರಿಗೆ ನಿನ್ನೆ ಎಚ್ಚರಿಕೆ ಸಲಹೆ ಬಿಡುಗಡೆ ಮಾಡಿದ ಕೇಂದ್ರ ಸರಕಾರ, ಇಂದು ಕೆನಡಾದ ಪ್ರಜೆಗಳಿಗೆ ವೀಸಾ ಸೇವೆಯನ್ನು ರದ್ದುಪಡಿಸಿದೆ.

ಕೆನಡಾದಲ್ಲಿನ ಭಾರತೀಯ ಹೈಕಮಿಷನ್‌ನ ವೆಬ್‌ಸೈಟ್‌ನಲ್ಲಿ ಈ ಕುರಿತು ಘೋಷಣೆಯನ್ನು ಮಾಡಲಾಗಿದೆ. ಇದಲ್ಲದೆ ಕೆನಡಾದಲ್ಲಿ ವೀಸಾ ಅರ್ಜಿಗಳನ್ನು ನಡೆಸುತ್ತಿರುವ ಬಿಎಲ್‌ಎಸ್‌ ಇಂಟರ್‌ನ್ಯಾಶನಲ್‌ ಸಂಸ್ಥೆಯು ಈ ಕುರಿತು ಸಂದೇಶವನ್ನು ಪೋಸ್ಟ್ ಮಾಡಿದೆ. ಅದಲ್ಲದೆ ಮುಂದಿನ ಆದೇಶದವರೆಗೆ ವೀಸಾ ಸೇವೆ ರದ್ದು ಮುಂದುವರಿಯಲಿದೆ ಎಂದು ಹೇಳಿದೆ.

ಸೆ.21ರಿಂದ ಜಾರಿಗೆ ಬರುವಂತೆ, ಭಾರತೀಯ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಅಮಾನತುಗೊಳಿಸಲಾಗಿದೆ. ದಯವಿಟ್ಟು BLS ವೆಬ್‌ಸೈಟ್‌ನ್ನು ಪರಿಶೀಲಿಸುತ್ತಿರಿ ಎಂದು ವೀಸಾ ಅಪ್ಲಿಕೇಶನ್ ಸೆಂಟರ್ ವೆಬ್‌ಸೈಟ್‌ನಲ್ಲಿ ತಿಳಿಸಿದೆ.

ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಗೆ ಭಾರತೀಯ ಏಜೆಂಟ್‌ಗಳಿಗೆ ಸಂಬಂಧವಿದೆ ಎಂದು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಆರೋಪಗಳನ್ನು ಮಾಡಿದ್ದರು. ಆ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧದಲ್ಲಿ ಬಿರುಕು ಉಂಟಾಗಿತ್ತು.

ಈ ಮಧ್ಯೆ ಕೆನಡಾವು ಭಾರತೀಯ ಅಧಿಕಾರಿಯನ್ನು ದೇಶ ತೊರೆಯಲು ಸೂಚಿಸಿದ್ದು, ಇದರ ಬೆನ್ನಲ್ಲೇ ಕೆನಡಾದ ರಾಜತಾಂತ್ರಿಕ ಅಧಿಕಾರಿಯನ್ನು ಭಾರತವು ಉಚ್ಛಾಟನೆ ಮಾಡಿದೆ.

ಕೆನಡಾದ ರಾಜತಾಂತ್ರಿಕ ಅಧಿಕಾರಿಗೆ ದೇಶ ತೊರೆಯಲು ಐದು ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಭಾರತ ಮಂಗಳವಾರ ಹೇಳಿದೆ. ಭಾರತದಲ್ಲಿರುವ ಕೆನಡಾದ ಹೈಕಮಿಷನರ್ ಅವರನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಕರೆಸಿಕೊಂಡು ಉಚ್ಛಾಟಣೆ ನಿರ್ಧಾರದ ಬಗ್ಗೆ ತಿಳಿಸಿತ್ತು.

ಇದಾದ ಬಳಿಕ ಕೆನಡಾ ಪ್ರಜೆಗಳಿಗೆ ಭಾರತಕ್ಕೆ ತುರ್ತು ಇದ್ದರೆ ಮಾತ್ರ ಪ್ರಯಾಣಿಸಿ ಎಂದು ಕೆನಡಾ ಸಲಹೆ ಬಿಡುಗಡೆ ಮಾಡಿತ್ತು. ಅನಗತ್ಯವಾಗಿ ಭಾರತದಲ್ಲಿರಬೇಡಿ ವಾಪಾಸ್ಸು ಬನ್ನಿ ಎಂದು ಕೂಡ ಕೆನಡಾ ಸರಕಾರ ತಿಳಿಸಿತ್ತು. ಇದರ ಬೆನ್ನಲ್ಲೇ ಭಾರತ ಕೆನಡಾದಲ್ಲಿನ ಭಾರತೀಯ ಪ್ರಜೆಗಳು ಮತ್ತು ವಿದ್ಯಾರ್ಥಿಗಳಿಗೆ ಸಲಹೆಯನ್ನು ಬಿಡುಗಡೆ ಮಾಡಿ ಎಚ್ಚರಿಕೆಯಿಂದಿರುವಂತೆ ಸೂಚಿಸಿತ್ತು.

ಇದನ್ನು ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಹೋರಾಟಗಾರ ಮಹೇಶ್ ರಾವುತ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...