Homeಕರೋನಾ ತಲ್ಲಣಜನವರಿ 6 ರಿಂದ ಬ್ರಿಟನ್‌ಗೆ ವಿಮಾನಯಾನ ಆರಂಭ: ಸಚಿವ ಹರ್ದೀಪ್ ಸಿಂಗ್ ಪುರಿ

ಜನವರಿ 6 ರಿಂದ ಬ್ರಿಟನ್‌ಗೆ ವಿಮಾನಯಾನ ಆರಂಭ: ಸಚಿವ ಹರ್ದೀಪ್ ಸಿಂಗ್ ಪುರಿ

ಭಾರತದಿಂದ ಬ್ರಿಟನ್‌ಗೆ ಜ.6 ರಿಂದ ವಿಮಾನಗಳು ಹಾರಾಟ ನಡೆಸಬಹುದು. ಬ್ರಿಟನ್‌ನಿಂದ ಭಾರತಕ್ಕೆ ಬರುವ ವಿಮಾನಗಳ ಕಾರ್ಯಾಚರಣೆ ಜ.8 ರಿಂದ ಪ್ರಾರಂಭವಾಗಲಿದೆ.

- Advertisement -
- Advertisement -

ರೂಪಾಂತರಿ ಕೊರೊನಾ ವೈರಸ್ ಆತಂಕದಿಂದ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದ್ದ ವಿಮಾನಯಾನವನ್ನು ಜನವರಿ 6 ರಿಂದ ಪುನರಾರಂಭಿಸುವುದಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

ಜನವರಿ 8 ರಿಂದ ಭಾರತ ಮತ್ತು ಯುಕೆ ನಡುವೆ ವಿಮಾನಯಾನಗಳನ್ನು ಪುನರಾರಂಭಿಸಲು ನಾಗರಿಕ ವಿಮಾನಯಾನ ಸಚಿವಾಲಯ ನಿರ್ಧರಿಸಿದೆ ಎಂದು ಶುಕ್ರವಾರ ಹೇಳಿಕೆ ನೀಡಿದ್ದ ಸಚಿವ ಹರ್ದೀಪ್ ಸಿಂಗ್ ಪುರಿ ಶನಿವಾರ ಸ್ಪಷ್ಟೀಕರಣ ನೀಡಿದ್ದಾರೆ.

ಭಾರತದಿಂದ ಬ್ರಿಟನ್‌ಗೆ ಜನವರಿ 6 ರಿಂದ ವಿಮಾನಗಳು ಹಾರಾಟ ನಡೆಸಬಹುದು. ಆದರೆ ಬ್ರಿಟನ್‌ನಿಂದ ಭಾರತಕ್ಕೆ ಬರುವ ವಿಮಾನಗಳ ಕಾರ್ಯಾಚರಣೆ ಜನವರಿ 8 ರಿಂದ ಪ್ರಾರಂಭವಾಗಲಿದೆ. ಈ ವೇಳಾಪಟ್ಟಿ ಜನವರಿ 23 ರವರೆಗೆ ಮಾನ್ಯವಾಗಿರುತ್ತದೆ ಎಂದಿದ್ದಾರೆ.

ಇದನ್ನೂ ಓದಿ:ರಸ್ತೆಗಳಿಗೆ ಮುಸ್ಲಿಮರ ಹೆಸರಿಟ್ಟರೆ ಕೋಮು ಸಾಮರಸ್ಯ ಹಾಳಾಗುತ್ತದೆ: ಅನಂತಕುಮಾರ್ ಹೇಳಿಕೆಗೆ ಖಂಡನೆ

 

ಎರಡು ದೇಶಗಳ ನಡುವೆ ಅಲ್ಲಿಯವರೆಗೆ ಪ್ರತಿ ವಾರ 30 ವಿಮಾನಗಳು ಕಾರ್ಯನಿರ್ವಹಿಸಲಿದ್ದು, ತಲಾ 15 ವಿಮಾನಗಳು ಭಾರತ ಮತ್ತು ಬ್ರಿಟನ್ ನಡುವೆ ವಾಹಕಗಳಾಗಿವೆ ಎಂದು ಸಚಿವರು ತಿಳಿಸಿದ್ದಾರೆ.

ಬ್ರಿಟನ್‌ನಲ್ಲಿ ಹೊಸ ಸ್ವರೂಪದ ಕೊರೊನಾ ವೈರಸ್ ಪತ್ತೆಯಾಗಿ, ಇಡೀ ವಿಶ್ವದಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿದ್ದ ಪರಿಣಾಮ ಮುಂಜಾಗ್ರತಾ ಕ್ರಮವಾಗಿ ಭಾರತದ ವಿಮಾನಯಾನ ಸಚಿವಾಲಯ ಯುಕೆಯಿಂದ ಭಾರತಕ್ಕೆ ಬರುವ ಎಲ್ಲಾ ವಿಮಾನಗಳನ್ನು ಡಿಸೆಂಬರ್ 23ರ ರಿಂದ ಡಿ.31ರ ವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಿತ್ತು.

ಇದನ್ನೂ ಓದಿ: ಬ್ರಿಟನ್‌ನಲ್ಲಿ ಹೊಸ ಕೊರೊನಾ ವೈರಸ್ ಪತ್ತೆ: ಯುಕೆ ವಿಮಾನಗಳನ್ನು ನಿರ್ಬಂಧಿಸಿದ ಭಾರತ

ನಂತರ ಈ ನಿರ್ಬಂಧವನ್ನು ಜನವರಿ 7ರ ವರೆಗೆ ವಿಸ್ತರಿಸಲಾಗಿತ್ತು. ಈಗ ಈ ಕುರಿತು ಸ್ಪಷ್ಟನೆ ನೀಡಿರುವ ನಾಗರಿಕ ವಿಮಾನಯಾನ ಸಚಿವ ಜನವರಿ 6 ರಿಂದ ವಿಮಾನಯಾನ ಆರಂಭವಾಗಲಿದ್ದು, ಜನವರಿ 23 ರ ನಂತರ ಆದೇಶವನ್ನು ಪರಿಷ್ಕರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ದೇಶದಲ್ಲಿ ರೂಪಾಂತರ ಕೊರೊನಾ ವೈರಸ್ ಪ್ರಕರಣಗಳು ಕಡಿಮೆ ವರದಿಯಾಗುತ್ತಿವೆ. ಇಲ್ಲಿಯವರೆಗೆ, ಭಾರತದಲ್ಲಿ 29 ಜನರು ಹೊಸ ರೂಪಾಂತರಿ ವೈರಸ್ ಸೋಂಕಿಗೆ ಒಳಗಾಗಿದ್ದಾರೆ. ರಾಜ್ಯದಲ್ಲಿ ಇಲ್ಲಿಯವರೆಗೆ 10 ಜನರಲ್ಲಿ ಹೊಸ ಸೋಂಕು ಕಾಣಿಸಿಕೊಂಡಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ವಿಮಾನ ಕಾರ್ಯಾಚರಣೆಯನ್ನು ಪುನರಾರಂಭಿಸುತ್ತಿರುವುದರಿಂದ, ಆರೋಗ್ಯ ಸಚಿವಾಲಯವು  ಪ್ರಯಾಣಿಕರಿಗೆ ವಿವರವಾದ ಮಾರ್ಗಸೂಚಿಯನ್ನು ರೂಪಿಸಿದೆ. ಎಲ್ಲಾ ಪ್ರಯಾಣಿಕರು ನಿಗದಿತ ಪ್ರಯಾಣಕ್ಕೆ ಕನಿಷ್ಠ 72 ಗಂಟೆಗಳ ಮೊದಲು ಆನ್‌ಲೈನ್ ಪೋರ್ಟಲ್ www.newdelhiairport.in ನಲ್ಲಿ ಸ್ವಯಂ ಘೋಷಣೆ ಅರ್ಜಿ ಸಲ್ಲಿಸಬೇಕು. ನೆಗೆಟಿವ್ ಆರ್‌ಟಿ-ಪಿಸಿಆರ್ ಪರೀಕ್ಷಾ ವರದಿಯನ್ನು ಕೊಂಡೊಯ್ಯುವುದು ಅತ್ಯಗತ್ಯವಾಗಿದೆ. ಜೊತೆಗೆ ಅದರ ನಕಲು ಪ್ರತಿಯನ್ನು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಬೇಕು.


ಇದನ್ನೂ ಓದಿ: ಕರ್ನಾಟಕದಲ್ಲಿ ಇತಿಹಾಸ ಸೃಷ್ಟಿಸಿದ ಮಂಗಳಮುಖಿಯರು: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 4 ಜನ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...