Homeಮುಖಪುಟಇಂಟರ್ನೆಟ್‌ಗೆ ನಿರ್ಬಂಧ ವಿಧಿಸುವ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ

ಇಂಟರ್ನೆಟ್‌ಗೆ ನಿರ್ಬಂಧ ವಿಧಿಸುವ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ

- Advertisement -
- Advertisement -

ವಿಶ್ವದಲ್ಲೇ ಭಾರತ ಅತಿ ಹೆಚ್ಚು ಬಾರಿ ಇಂಟರ್ನೆಟ್‌ ಸ್ಥಗಿತಗೊಳಿಸುತ್ತಿರುವ ದೇಶಗಳ ಪಟ್ಟಿಯಲ್ಲಿ ಮುಂದಿದ್ದು, ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಕಡಿವಾಣ ಮತ್ತು ಜನರ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುವ ಕ್ರಮವಾಗಿದೆ ಎಂದು ವ್ಯಾಪಕವಾದ ಟೀಕೆಗೆ ಕಾರಣವಾಗಿದೆ.

ಅನೇಕ ದೇಶಗಳಲ್ಲಿ, ವಾಸ್ತವಿಕ ಅಥವಾ ಸಾಂಭಾವ್ಯ ಅಶಾಂತಿಯನ್ನು ತಡೆಯಲು ಇಂಟರ್ನೆಟ್‌ ಸ್ಥಗಿತದ ಕ್ರಮವನ್ನು ತೆಗೆದುಕೊಳ್ಳಲಾಗುತ್ತಿದೆ. ಸಾಮಾನ್ಯವಾಗಿ ಸರ್ಕಾರ ಉದ್ದೇಶಪೂರ್ವಕವಾಗಿ ಸಾಮಾಜಿಕ ಮಾಧ್ಯಮ ನೆಟ್‌ವರ್ಕ್‌ಗಳ ಮೇಲೆ ನಿರ್ಬಂಧವನ್ನು ವಿಧಿಸಲು ಇಂಟರ್ನೆಟ್ ಸ್ಥಗಿತಗೊಳಿಸುತ್ತದೆ.

ಈಜಿಪ್ಟ್‌ನ 2011ರ ಕ್ರಾಂತಿ ಮತ್ತು 2016ರ ಟರ್ಕಿಶ್ ಮಿಲಿಟರಿ ದಂಗೆಯು ಇಂಟರ್‌ನೆಟ್‌ ಸ್ಥಗಿತಗೊಳಿಸಿರುವುದಕ್ಕೆ ಪ್ರಮುಖ ನಿದರ್ಶನವಾಗಿದೆ. ಭಾರತದಲ್ಲಿ ಅತಿ ಹೆಚ್ಚು ಬಾರಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ. ಈ ಹಿಂದೆ ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿ ವೇಳೆ ಇಂಟರ್‌ನೆಟ್‌ ಸ್ಥಗಿತಗೊಳಿಸಲಾಗಿತ್ತು. ಮಣಿಪುರದಲ್ಲಿನ ಜನಾಂಗೀಯ ಹಿಂಸಚಾರದ ವೇಳೆ ಇಂಟರ್‌ನೆಟ್‌ ಸ್ಥಗಿತಗೊಳಿಸಲಾಗಿತ್ತು. ಇದಲ್ಲದೆ ನೂಹ್‌ ಹಿಂಸಾಚಾರ, ಮಂಗಳೂರು ಗೋಲಿಬಾರ್‌, ರೈತರ ಪ್ರತಿಭಟನೆ, ಸಿಎಎ ಸೇರಿ ಹಲವು ಪ್ರತಿಭಟನೆ ವೇಳೆ ಭಾರತದಲ್ಲಿ ಇಂಟರ್ನೆಟ್‌ ಸ್ಥಗಿತಗೊಳಿಸಲಾಗಿದೆ.

Top10VPN ಪ್ರಕಾರ, 2023ರ ಎಲ್ಲಾ ಭಾರತೀಯ ಇಂಟರ್ನೆಟ್ ನಿರ್ಬಂಧಗಳು ಮತ್ತು ಸ್ಥಗಿತಗೊಳಿಸುವಿಕೆಗಳು ಸುಮಾರು 59 ಮಿಲಿಯನ್ ಜನರನ್ನು ಒಟ್ಟು ಸುಮಾರು 8,000 ಗಂಟೆಗಳ ಕಾಲ ಬಾಧಿಸಿದೆ. ಇದು ವಿಶ್ವದಲ್ಲೇ ಅತಿ ಹೆಚ್ಚುಗಂಟೆಗಳ ಕಾಲ ಇಂಟರ್ನೆಟ್‌ ಸ್ಥಗಿತಗೊಳಿಸಿರುವುದಾಗಿದೆ ಎಂದು ವರದಿಯು ಉಲ್ಲೇಖಿಸಿದೆ.

ಇನ್ನು ಇಥಿಯೋಪಿಯಾ, ಮ್ಯಾನ್ಮಾರ್ ಮತ್ತು ಇರಾನ್‌ಗಳಲ್ಲಿ, ಭಿನ್ನಾಭಿಪ್ರಾಯ, ಪ್ರತಿಭಟನೆ ವೇಳೆ ಇಂಟರ್‌ನೆಟ್‌ನ್ನು ಸ್ಥಗಿತಗೊಳಿಸಲಾಗಿದೆ. ಈ ಕ್ರಮಗಳು ಕೂಡ ದೀರ್ಘಾವದಿಯದ್ದಾಗಿದೆ ವರದಿಯು ಉಲ್ಲೇಖಿಸಿದೆ. ಪ್ರಪಂಚದಾದ್ಯಂತ, ಇಂಟರ್ನೆಟ್ ಸ್ಥಗಿತಗೊಳಿಸುವಿಕೆಗಳು ಮತ್ತು ಇಂಟರ್ನೆಟ್‌ ನಿಧಾನಗತಿಯು ಹೆಚ್ಚು ಸಾಮಾನ್ಯವಾಗಿದೆ. ಜನರ ದೈನಂದಿನ ಜೀವನದಲ್ಲಿ ಇಂಟರ್ನೆಟ್ ಆಳವಾದ ಮಹತ್ವವನ್ನು ಪಡೆದುಕೊಂಡಿದೆ. ಅದು ಎಷ್ಟರವೆರೆಗೆ ಎಂದರೆ ಇಂಟರ್‌ನೆಟ್‌ ಸ್ಥಗಿತಗೊಳಿಸುವಿಕೆಯು ಹಣಕಾಸಿನ ಪರಿಣಾಮಗಳನ್ನು ಕೂಡ ಉಂಟು ಮಾಡುತ್ತಿದೆ.

Top10VPN ಪ್ರಕಾರ, ರಷ್ಯಾ, ಇಥಿಯೋಪಿಯಾ ಮತ್ತು ಮ್ಯಾನ್ಮಾರ್‌ನಲ್ಲಿ, ಇಂಟರ್‌ನೆಟ್‌ ಸ್ಥಗಿತಗಳು ಮತ್ತು ಅವುಗಳ ಪ್ರಭಾವ ತುಂಬಾ ದುಬಾರಿಯಾಗುತ್ತಿದೆ. 2023ರಲ್ಲಿ ಸುಮಾರು 1,350 ಗಂಟೆಗಳ ಉದ್ದೇಶಪೂರ್ವಕ ಇಂಟರ್ನೆಟ್ ಸ್ಥಗಿತಗೊಳಿಸಿರುವಿಕೆಯ ಪ್ರಕ್ರಿಯೆಯು ರಷ್ಯಾದ ಆರ್ಥಿಕತೆ ಮೇಲೆ ಆಳವಾದ ಪ್ರಭಾವವನ್ನು ಬೀರಿದೆ ಎಂದು ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಗೋಹತ್ಯೆ ವದಂತಿಯಿಂದ ಮುಸ್ಲಿಂ ವ್ಯಾಪಾರಿಯ ಗುಂಪು ಹತ್ಯೆ: ಪೊಲೀಸರು ಕೂಡ ತಪ್ಪಿತಸ್ಥರೆಂದು ಕೋರ್ಟ್‌ ಹೇಳಿದ್ದೇಕೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...