Homeಅಂತರಾಷ್ಟ್ರೀಯಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

- Advertisement -
- Advertisement -

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ.

ಈ ಒಪ್ಪಂದದ ಅಡಿಯಲ್ಲಿ, ಭಾರತೀಯ ಉತ್ಪನ್ನಗಳ ಮೇಲೆ ಅಮೆರಿಕ ವಿಧಿಸುತ್ತಿದ್ದ ಗರಿಷ್ಠ ಸುಂಕವನ್ನು ಶೇ. 50 ರಿಂದ ಶೇ. 18ಕ್ಕೆ ಇಳಿಕೆ ಮಾಡಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿದೆ. ವರದಿಗಳ ಪ್ರಕಾರ, ಇದರಲ್ಲಿ ರಷ್ಯಾ ತೈಲ ಖರೀದಿಯ ಕಾರಣಕ್ಕಾಗಿ ವಿಧಿಸಲಾಗಿದ್ದ ಶೇ. 25ರಷ್ಟು ಹೆಚ್ಚುವರಿ ಪೆನಾಲ್ಟಿ ಸುಂಕದ ರದ್ದತಿಯೂ ಸೇರಿದೆ.

ವ್ಯಾಪಾರ ಒಪ್ಪಂದದಿಂದ ಜೆನೆರಿಕ್ ಔಷಧಗಳು, ರತ್ನ ಮತ್ತು ವಜ್ರಗಳು ಹಾಗೂ ವಿಮಾನದ ಬಿಡಿಭಾಗಗಳ ಮೇಲಿನ ಸುಂಕವು ಶೂನ್ಯಕ್ಕೆ ಇಳಿಕೆಯಾಗಲಿದೆ. ಜವಳಿ, ಚರ್ಮದ ವಸ್ತುಗಳು ಮತ್ತು ಕರಕುಶಲ ವಸ್ತುಗಳ ರಫ್ತಿಗೂ ಹೆಚ್ಚಿನ ಉತ್ತೇಜನ ಸಿಗಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿಕೊಂಡಿದೆ.

ವ್ಯಾಪಾರ ಒಪ್ಪಂದದ ಮೂಲಕ ಮುಂದಿನ 5 ವರ್ಷಗಳಲ್ಲಿ ಅಮೆರಿಕದಿಂದ ಸುಮಾರು 500 ಬಿಲಿಯನ್ ಡಾಲರ್ ಮೌಲ್ಯದ ಇಂಧನ ಉತ್ಪನ್ನಗಳು, ವಿಮಾನದ ಬಿಡಿಭಾಗಗಳು ಮತ್ತು ತಂತ್ರಜ್ಞಾನ ಉತ್ಪನ್ನಗಳನ್ನು ಖರೀದಿಸಲು ಭಾರತ ಉದ್ದೇಶಿಸಿದೆ.

ರಷ್ಯಾದಿಂದ ನೇರವಾಗಿ ಅಥವಾ ಪರೋಕ್ಷವಾಗಿ ತೈಲ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಲು ಭಾರತ ಬದ್ಧತೆ ವ್ಯಕ್ತಪಡಿಸಿದೆ ಎಂದು ಅಮೆರಿಕದ ಶ್ವೇತಭವನ ಹೇಳಿದೆ. ರಷ್ಯಾ ತೈಲದ ಬದಲಿಗೆ ಭಾರತವು ಮುಂದಿನ ದಿನಗಳಲ್ಲಿ ಅಮೆರಿಕ ಮತ್ತು ವೆನೆಜುವೆಲಾದಿಂದ ಹೆಚ್ಚಿನ ಪ್ರಮಾಣದಲ್ಲಿ ತೈಲ ಖರೀದಿಸಲು ಉದ್ದೇಶಿಸಿದೆ ಎಂದಿದೆ.

ಭಾರತವು ರಷ್ಯಾದಿಂದ ತೈಲ ಆಮದನ್ನು ಸಂಪೂರ್ಣವಾಗಿ ನಿಲ್ಲಿಸಿಲ್ಲ, ಆದರೆ ಹೊಸ ವ್ಯಾಪಾರ ಒಪ್ಪಂದದ ಭಾಗವಾಗಿ ಅದನ್ನು ಗಣನೀಯವಾಗಿ ಕಡಿಮೆ ಮಾಡಲು ಮತ್ತು ಹಂತಹಂತವಾಗಿ ಸ್ಥಗಿತಗೊಳಿಸಲು ಸಮ್ಮತಿಸಿದೆ ಎಂದು ವರದಿಗಳು ಹೇಳಿವೆ.

ಕಳೆದ ಕೆಲವು ತಿಂಗಳುಗಳಿಂದ ಭಾರತವು ರಷ್ಯಾದಿಂದ ಮಾಡುತ್ತಿದ್ದ ತೈಲ ಆಮದನ್ನು ಈಗಾಗಲೇ ಕಡಿಮೆ ಮಾಡಿದೆ. ಜನವರಿಯಲ್ಲಿ ದಿನಕ್ಕೆ 1.2 ಮಿಲಿಯನ್ ಬ್ಯಾರೆಲ್ ಇದ್ದ ಆಮದು, ಫೆಬ್ರವರಿಯಲ್ಲಿ 1 ಮಿಲಿಯನ್ ಮತ್ತು ಮಾರ್ಚ್ ವೇಳೆಗೆ 8 ಲಕ್ಷ ಬ್ಯಾರೆಲ್‌ಗಳಿಗೆ ಇಳಿಕೆಯಾಗುವ ನಿರೀಕ್ಷೆಯಿದೆ.

ಭಾರತವು ಈ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ, ಅಮೆರಿಕವು ಭಾರತೀಯ ಉತ್ಪನ್ನಗಳ ಮೇಲೆ ವಿಧಿಸಿದ್ದ ಶೇ. 25ರಷ್ಟು ಹೆಚ್ಚುವರಿ ‘ಪೆನಾಲ್ಟಿ’ ಸುಂಕವನ್ನು ಫೆಬ್ರವರಿ 7ರಿಂದ ಜಾರಿಗೆ ಬರುವಂತೆ ರದ್ದುಗೊಳಿಸಿದೆ.

ಭಾರತದ ವಿದೇಶಾಂಗ ಸಚಿವಾಲಯವು ದೇಶದ ಇಂಧನ ಭದ್ರತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಮರ್ಥಿಸಿಕೊಂಡಿದೆ.

ವ್ಯಾಪಾರ ಒಪ್ಪಂದದ ಮಾತುಕತೆಯಲ್ಲಿ ಭಾರತವು ತನ್ನ ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರಗಳ ಹಿತಾಸಕ್ತಿಯನ್ನು ಕಾಪಾಡಿಕೊಂಡಿದೆ. ಅಕ್ಕಿ, ಗೋಧಿ, ಹಾಲು ಮತ್ತು ಮಾಂಸದಂತಹ ಸೂಕ್ಷ್ಮ ಉತ್ಪನ್ನಗಳಿಗೆ ಸುಂಕ ವಿನಾಯಿತಿಯಿಂದ ರಕ್ಷಣೆ ನೀಡಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿದೆ.

ಭಾರತೀಯ ರೈತರ ಜೀವನೋಪಾಯಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಲಾಗುವುದು ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.

ಅಮೆರಿಕದ ಉತ್ಪನ್ನಗಳು ಭಾರತದ ಮಾರುಕಟ್ಟೆಗೆ ಬರುವಾಗ ವಿಧಿಸುವ ಆಮದು ಸುಂಕವನ್ನು ಕಡಿಮೆ ಮಾಡುವುದಿಲ್ಲ. ಇದರಿಂದ ಅಮೆರಿಕದ ಅಗ್ಗದ ಕೃಷಿ ಉತ್ಪನ್ನಗಳು ಭಾರತೀಯ ಮಾರುಕಟ್ಟೆಯನ್ನು ಆಕ್ರಮಿಸದಂತೆ ತಡೆಯಲಾಗುತ್ತದೆ. ಗೋಧಿ, ಅಕ್ಕಿ, ಜೋಳ, ಸೋಯಾಬೀನ್ ಮತ್ತು ಸಕ್ಕರೆಯಂತಹ ಪ್ರಮುಖ ಬೆಳೆಗಳನ್ನು ‘ಸೂಕ್ಷ್ಮ ಉತ್ಪನ್ನ’ಗಳ ಪಟ್ಟಿಯಲ್ಲಿ ಇರಿಸಲಾಗಿದ್ದು, ಇವುಗಳಿಗೆ ಯಾವುದೇ ರಿಯಾಯಿತಿ ನೀಡಿಲ್ಲ. ಅಮೆರಿಕದ ಹಾಲು, ಬೆಣ್ಣೆ, ಗಿಣ್ಣು ಮತ್ತು ಪನೀರ್‌ನಂತಹ ಉತ್ಪನ್ನಗಳ ಆಮದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಭಾರತದ ಕೋಟ್ಯಂತರ ಸಣ್ಣ ಹೈನುಗಾರರ ಹಿತಾಸಕ್ತಿ ಕಾಪಾಡುವುದು ಇದರ ಉದ್ದೇಶ ಎಂದು ಪಿಯೂಷ್ ಗೋಯಲ್ ಹೇಳಿದ್ದಾರೆ.

ಈ ಒಪ್ಪಂದದ ಮೊದಲ ಹಂತಕ್ಕೆ ಮಾರ್ಚ್ 2026ರ ಮಧ್ಯಭಾಗದಲ್ಲಿ ಅಧಿಕೃತವಾಗಿ ಸಹಿ ಹಾಕುವ ನಿರೀಕ್ಷೆಯಿದೆ. ಒಪ್ಪಂದವು ಭಾರತೀಯ ರಫ್ತುದಾರರಿಗೆ, ವಿಶೇಷವಾಗಿ ಸಣ್ಣ ಕೈಗಾರಿಕೆಗಳಿಗೆ (MSMEs) 30 ಟ್ರಿಲಿಯನ್ ಡಾಲರ್ ಮಾರುಕಟ್ಟೆಯನ್ನು ಮುಕ್ತಗೊಳಿಸಲಿದೆ ಪಿಯೂಷ್ ಗೋಯಲ್ ಎಂದು ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...

ದೆಹಲಿ| ‘ಮುಸ್ಲಿಮರಿಗೆ ನನ್ನ ವಾಹನದಲ್ಲಿ ಪ್ರವೇಶವಿಲ್ಲ..’ ಎಂದು ಪ್ರಯಾಣ ನಿರಾಕರಿಸಿದ ರ‍್ಯಾಪಿಡೊ ಚಾಲಕ

ದೆಹಲಿಯ ರ‍್ಯಾಪಿಡೊ ಚಾಲಕನೊಬ್ಬ, ಪ್ರಯಾಣಿಕ ಮುಸ್ಲಿಂ ಎಂದು ಗೊತ್ತಾದ ಬಳಿಕ ಪ್ರಯಾಣಿಕನನ್ನು ಕರೆದುಕೊಂಡು ಹೋಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ. ಚಾಲಕನ ನಡೆಗೆ ಆನ್‌ಲೈನ್‌ನಲ್ಲಿ ಆಕ್ರೋಶ ವ್ಯಕ್ತವಾಗಿದೆ. ವರದಿಗಳ ಪ್ರಕಾರ, ದೃಢೀಕೃತ ಬುಕಿಂಗ್ ಹೊರತಾಗಿಯೂ ಚಾಲಕ...

ಪಶ್ಚಿಮ ಏಷ್ಯಾ ಸಂಘರ್ಷ: 48 ಗಂಟೆಗಳ ಹಾರ್ಮುಜ್ ಎಚ್ಚರಿಕೆ ನೀಡಿದ್ದ ಟ್ರಂಪ್ ಅವರನ್ನು ‘ಕೆಲಸದಿಂದ ತೆಗೆದುಹಾಕಲಾಗಿದೆ’ ಎಂದು ಅಣಕಿಸಿದ ಇರಾನ್

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಸೋಮವಾರ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು "ನಿಮ್ಮನ್ನು ಕೆಲಸದಿಂದ ತೆಗೆದುಹಾಕಲಾಗಿದೆ" ಮತ್ತು "ನಿಮ್ಮ ದಯೆಯಿಂದ ಗಮನ...

ಅಮೆರಿಕದ ಯಾವುದೇ ದಾಳಿ ಎದುರಿಸಲು ನಾವು ಸಿದ್ದ : ಟ್ರಂಪ್ ಬೆದರಿಕೆ ಬೆನ್ನಲ್ಲೇ ಕ್ಯೂಬಾ ಹೇಳಿಕೆ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕೆರಿಬಿಯನ್ ದ್ವೀಪ ರಾಷ್ಟ್ರ ಕ್ಯೂಬಾವನ್ನು ವಶಪಡಿಸಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಕ್ಯೂಬಾದ ಉಪ ವಿದೇಶಾಂಗ ಸಚಿವ ಕಾರ್ಲೋಸ್ ಫೆರ್ನಾಂಡಿಸ್ ಡಿ ಕೊಸ್ಸಿಯೊ, ಅಮೆರಿಕ ಯಾವುದೇ...

ಮಾಜಿ ಉಪ ರಾಷ್ಟ್ರಪತಿ ಜಗದೀಪ್ ಧನ್ಕರ್ ರಾಜೀನಾಮೆ ಹಿಂದೆ ಇಡಿ ಒತ್ತಡ : ತನ್ನ ಹೊಸ ಪುಸ್ತಕದಲ್ಲಿ ಸಂಜಯ್ ರಾವುತ್ ಆರೋಪ

ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಮೋದಿ ಸರ್ಕಾರದ ವಿರುದ್ಧ ಕೈಗೊಂಡ ಸ್ವತಂತ್ರ ರಾಜಕೀಯ ನಡೆಗಳಿಗೆ ಪ್ರತಿಯಾಗಿ, ಜಾರಿ ನಿರ್ದೇಶನಾಲಯದ (ಇಡಿ) ಒತ್ತಡಕ್ಕೆ ಮಣಿದು 2025ರಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು ಎಂದು...

ಯುಎನ್‌ಐ ಮಾಧ್ಯಮ ಕಚೇರಿಗೆ ಬೀಗ : ಪೊಲೀಸರ ವರ್ತನೆಗೆ ಪತ್ರಿಕಾ ಸಂಘಗಳು, ವಿಪಕ್ಷ ನಾಯಕರಿಂದ ತೀವ್ರ ಖಂಡನೆ

ಶುಕ್ರವಾರ (ಮಾ.20) ರಾತ್ರಿ ದೆಹಲಿ ಪೊಲೀಸರು ಯುನೈಟೆಡ್ ನ್ಯೂಸ್ ಆಫ್ ಇಂಡಿಯಾ (ಯುಎನ್‌ಐ) ಸುದ್ದಿ ಸಂಸ್ಥೆಯ ಕಚೇರಿಗೆ ಬೀಗ ಜಡಿದ ರೀತಿಗೆ ಪತ್ರಕರ್ತರ ಸಂಘಗಳು ಮತ್ತು ವಿರೋಧ ಪಕ್ಷಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ದೆಹಲಿಯ...

ಉಪಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್: ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಮರ ತೀವ್ರ ವಿರೋಧದ ನಡುವೆಯೂ ಕೃಷಿ ಸಚಿವ ಎಸ್‌.ಎಸ್‌ ಮಲ್ಲಿಕಾರ್ಜುನ್ ಅವರ...

ಕೇರಳ ವಿಧಾನಸಭೆ ಚುನಾವಣೆ : ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಕೇಸ್!

ಏಪ್ರಿಲ್ 9ರಂದು ನಡೆಯಲಿರುವ ಕೇರಳ ವಿಧಾನಸಭೆ ಚುನಾವಣೆಗೆ ಕಾಸರಗೋಡಿನ ಮಂಜೇಶ್ವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೆ. ಸುರೇಂದ್ರನ್ ಮೇಲೆ ಬರೋಬ್ಬರಿ 242 ಕ್ರಿಮಿನಲ್ ಪ್ರಕರಣಗಳು ಬಾಕಿ ಇವೆ. ಈ ಮಾಹಿತಿ ಶನಿವಾರ...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...