Homeಕರ್ನಾಟಕಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ ಮುಖ್ಯವಾಗಿ ದೇಶದ 72 ಕೋಟಿ ರೈತರ ಪಾಲಿಗೆ ಮರಣಶಾಸನವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, ಎರಡು ದೇಶಗಳ ನಡುವಿನ ಸಂಬಂಧಗಳು ಸಮಾನತೆ ಮತ್ತು ಪರಸ್ಪರ ಗೌರವದ ಬುನಾದಿಯ ಮೇಲೆ ಸ್ಥಾಪನೆಯಾಗಬೇಕಾಗುತ್ತದೆ. ಅದು ಒತ್ತಡ, ಬೆದರಿಕೆ ಮತ್ತು ಏಕಪಕ್ಷೀಯ ನೀತಿ-ನಿರ್ಧಾರಗಳ ಹೇರಿಕೆಯಿಂದ ನಡೆಯಬಾರದು. ಆದರೆ ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದ ಕಾರ್ಯರೂಪಕ್ಕೆ ಬಂದಿರುವ ವಿಧಿ-ವಿಧಾನಗಳನ್ನು ಗಮನಿಸಿದರೆ, ಇದು ಒಡೆಯನ ಅಜ್ಞೆಗೆ ಸೇವಕ ತಲೆಯಾಡಿಸಿದಂತಿದೆ ಎಂದಿದ್ದಾರೆ.

ರಷ್ಯಾದಿಂದ ತೈಲ ಖರೀದಿಸುತ್ತಿದ್ದ ಭಾರತವನ್ನು ಮಣಿಸುವ ಉದ್ದೇಶದಿಂದಲೇ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಯರ್ರಾಬಿರ್ರಿಯಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಏರಿಸಿದ್ದರು. ಈಗ ಅದನ್ನು ಶೇಕಡ 25ರಿಂದ ಶೇಕಡ 18ಕ್ಕೆ ಇಳಿಸಿ ಭಾರತಕ್ಕೆ ಮಹಾ ಉಪಕಾರ ಮಾಡಿದಂತೆ ನಾಟಕವಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಅಮೆರಿಕದ ಸರಕುಗಳ ಮೇಲಿನ ಸುಂಕವನ್ನು ಭಾರತ ಶೂನ್ಯಕ್ಕಿಳಿಸಿದೆ. ಮೇಲ್ನೋಟದಲ್ಲಿಯೇ ಈ ತಾರತಮ್ಯದಿಂದ ಆಗಿರುವ ಅನ್ಯಾಯ ಸ್ಪಷ್ಟವಾಗಿ ಕಾಣುತ್ತಿದ್ದರೂ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದನ್ನು ಸ್ವಾಗತಿಸಿರುವುದು ಭಾರತದ 149 ಕೋಟಿ ಜನರಿಗೆ ಮಾಡುತ್ತಿರುವ ಮಹಾದ್ರೋಹವಾಗಿದೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸದ್ಯ ಭಾರತ ಶೇಕಡ 40ರಷ್ಟು ತೈಲವನ್ನು ರಷ್ಯಾದಿಂದ ಖರೀದಿಸುತ್ತಿದೆ. ಇದೀಗ ಡೊನಾಲ್ಡ್ ಟ್ರಂಪ್ ಅವರ ಆದೇಶಕ್ಕೆ ತಲೆಬಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದಿಂದ ತೈಲ ಖರೀದಿಯನ್ನು ಕೈಬಿಟ್ಟು ಅಮೆರಿಕ ಮತ್ತು ವೆನಿಜುವೆಲಾ ದೇಶಗಳಿಂದ ತೈಲ ಖರೀದಿಸಲು ಒಪ್ಪಿಕೊಂಡಿರುವುದು ಈ ಒಪ್ಪಂದದ ಮುಖ್ಯಾಂಶವಾಗಿದೆ. ಈ ಮೂಲಕ ಭಾರತ ಸಂಪೂರ್ಣ ಶರಣಾಗತಿಯಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಲಿದ್ದು, ಅದರ ಪರಿಣಾಮವಾಗಿ ಉಳಿದ ಅಗತ್ಯವಸ್ತುಗಳು ಕೂಡಾ ದುಬಾರಿಯಾಗಲಿದೆ ಎಂದಿದ್ದಾರೆ.

ಈ ಒಪ್ಪಂದದಿಂದ ಆಗಲಿರುವ ಸಣ್ಣಪುಟ್ಟ ಲಾಭಗಳನ್ನು ದೊಡ್ಡ ಸಾಧನೆ ಎಂದು ಬಿಂಬಿಸುತ್ತಿರುವ ಕೇಂದ್ರ ಸರ್ಕಾರ ಭಾರತೀಯರಿಗೆ, ಮುಖ್ಯವಾಗಿ ದೇಶದ ರೈತ ಸಮುದಾಯಕ್ಕೆ ಆಗುತ್ತಿರುವ ನಷ್ಟವನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡುತ್ತಿದೆ. ಈ ಒಪ್ಪಂದವನ್ನು ಅಮೆರಿಕದ ರೈತ ಸಮುದಾಯ ಒಕ್ಕೊರಲಿನಿಂದ ಸ್ವಾಗತಿಸಿ ಕುಣಿದಾಡುತ್ತಿರುವುದೇ ಈ ಒಪ್ಪಂದ ಭಾರತದ ರೈತರ ಪಾಲಿನ ಮರಣಶಾಸನವಾಗಲಿದೆ ಎಂಬುದಕ್ಕೆ ಸೂಚನೆಯಾಗಿದೆ ಎಂದು ಸಿಎಂ ಹೇಳಿದ್ದಾರೆ.

ಭಾರತಕ್ಕೆ ಹೋಲಿಸಿದರೆ ಅತೀ ಹೆಚ್ಚಿನ ಪ್ರಮಾಣದ ಸಬ್ಸಿಡಿ ಪಡೆಯುತ್ತಿರುವ ಅಮೆರಿಕದ ರೈತರು, ಭಾರತದ ಕೃಷಿ ಉತ್ಪನ್ನಗಳಿಗಿಂತ ಕಡಿಮೆ ಬೆಲೆಗೆ ತಮ್ಮ ಬೆಳೆಗಳನ್ನು ಮಾರಾಟ ಮಾಡಲು ಸಾಧ್ಯವಿದೆ. ಈ ಅಪಾಯವನ್ನು ತಪ್ಪಿಸಲಿಕ್ಕಾಗಿಯೇ ಇಲ್ಲಿಯವರೆಗಿನ ಎಲ್ಲ ಸರ್ಕಾರಗಳು ಅಮೆರಿಕದಿಂದ ಆಮದಾಗುತ್ತಿರುವ ಕೃಷಿ ಉತ್ಪನ್ನಗಳ ಮೇಲೆ ಹೆಚ್ಚಿನ ಪ್ರಮಾಣದ ಸುಂಕ ಹೇರುತ್ತಾ ಬಂದಿವೆ. ಈಗ ಈ ಆಮದು ಸುಂಕವನ್ನು ರದ್ದುಗೊಳಿಸಿದರೆ ದೇಶದ ಮಾರುಕಟ್ಟೆಗಳಲ್ಲಿ ಅಮೆರಿಕದ ಅಗ್ಗದ ದರದ ಆಹಾರಧಾನ್ಯ, ಹಣ್ಣು, ತರಕಾರಿ ಮತ್ತು ಡೇರಿ ಉತ್ಪನ್ನಗಳು ಲಗ್ಗೆ ಇಡಲಿವೆ. ಇದರಿಂದ ಭಾರತದ ರೈತರು ದಿವಾಳಿ ಸ್ಥಿತಿ ತಲುಪಲಿದ್ದು, ಅವರಿಗೆ ಆತ್ಮಹತ್ಯೆ ಬಿಟ್ಟರೆ ಬೇರೆ ದಾರಿ ಇಲ್ಲದ ಸ್ಥಿತಿ ನಿರ್ಮಾಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಸಂಪೂರ್ಣವಾಗಿ ಶರಣಾಗತಿಯಾಗಿರುವ ಈ ಒಪ್ಪಂದಕ್ಕೆ ಭಾರತೀಯರ ಹಿತರಕ್ಷಣೆಯ ಉದ್ದೇಶ ಖಂಡಿತ ಇಲ್ಲ. ಅಮೆರಿಕದ ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ಎದುರಿಸುತ್ತಿರುವ ಮೋದಿಯವರ ಉದ್ಯಮ ಸ್ನೇಹಿತ ಅದಾನಿ ಅವರ ರಕ್ಷಣೆ ಮತ್ತು ಜೆಫ್ರಿ ಎಪ್‌ಸ್ಟೀನ್ ಫೈಲ್ಸ್‌ನಲ್ಲಿ ಕಾಣಿಸಿಕೊಂಡಿರುವ ಪ್ರಧಾನಿ ಮೋದಿ ಮತ್ತು ಸಂಪುಟದ ಸದಸ್ಯರ ಹೆಸರುಗಳಿಂದಾಗಿ ಸೃಷ್ಟಿಯಾಗಿರುವ ಒತ್ತಡದ ಭಾಗವಾಗಿ ಕೇಂದ್ರ ಸರ್ಕಾರ ದೇಶ ವಿರೋಧಿಯಾಗಿರುವ ಒಪ್ಪಂದಕ್ಕೆ ಒಪ್ಪಿಕೊಂಡಿದೆ ಎಂಬ ಆರೋಪವನ್ನು ನಿರಾಕರಿಸಲು ಸಾಧ್ಯವೇ? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಜಾಗತಿಕವಾಗಿ ಭಾರತ ಹಿಂದೆಂದೂ ಇಷ್ಟೊಂದು ದುರ್ಬಲವಾಗಿರಲಿಲ್ಲ. ರಾಜತಾಂತ್ರಿಕವಾಗಿ ಎದುರಾಗುವ ಒತ್ತಡಗಳನ್ನು ಇಲ್ಲಿಯವರೆಗಿನ ಎಲ್ಲಾ ಪ್ರಧಾನಿಗಳು ಸಮರ್ಥವಾಗಿ ಎದುರಿಸಿ ಭಾರತದ ಸಾರ್ವಭೌಮತೆ ಮತ್ತು ಗೌರವವನ್ನು ಕಾಪಾಡಿಕೊಂಡು ಬಂದಿದ್ದಾರೆ. ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಅಲಿಪ್ತ ನೀತಿ ಭಾರತವನ್ನು ವಿಶ್ವಗುರುವನ್ನಾಗಿ ಮಾಡಿತ್ತು. ಪ್ರಧಾನಿ ಇಂದಿರಾಗಾಂಧಿಯವರು ದೈತ್ಯ ಅಮೆರಿಕದ ಒತ್ತಡವನ್ನು ಕೂಡಾ ಲೆಕ್ಕಿಸದೆ ಪಾಕಿಸ್ತಾನವನ್ನು ಮಣಿಸಿದ್ದು ಈಗ ಇತಿಹಾಸವಾಗಿದೆ. ಜಾಗತಿಕವಾಗಿ ಎಲ್ಲ ದೇಶಗಳು ಆರ್ಥಿಕ ಹಿಂಜರಿತದಿಂದ ತತ್ತರಿಸುತ್ತಿದ್ದಾಗ ಭಾರತದ ಆರ್ಥಿಕ ಸಾರ್ವಭೌಮತೆಯನ್ನು ಕಾಪಾಡಿದ್ದ ಡಾ.ಮನಮೋಹನ್ ಸಿಂಗ್ ಅವರು ಹೊಸ ಆರ್ಥಿಕ ಯುಗದ ಪ್ರವರ್ತಕರಾಗಿದ್ದರು ಎಂದಿದ್ದಾರೆ.

ಆದರೆ, ಇಂದು ವಿಶ್ವದಲ್ಲಿ ಭಾರತಕ್ಕೆ ಮಿತ್ರರಿಗಿಂತ ಶತ್ರುಗಳ ಸಂಖ್ಯೆ ಹೆಚ್ಚಾಗಿದೆ. ವಿದೇಶಾಂಗ ನೀತಿ ಎಂದರೆ ಭಾಷಣ, ಘೋಷಣೆ, ಕೈಕುಲುಕಾಟ ಮತ್ತು ಸ್ವಪ್ರಚಾರವಷ್ಟೇ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಿಳಿದುಕೊಂಡಂತಿದೆ. ಚೀನಾ ಮತ್ತು ಅಮೆರಿಕದಂತಹ ದೈತ್ಯ ಶಕ್ತಿಗಳ ನಡುವೆ ಸಿಕ್ಕಿಹಾಕಿಕೊಂಡಿರುವ ಭಾರತ ತನ್ನ ಅಸ್ಮಿತೆಯನ್ನು ಸಂಪೂರ್ಣ ಕಳೆದುಕೊಳ್ಳುವ ಸ್ಥಿತಿಗೆ ತಲುಪಿದೆ. ಅಮೆರಿಕದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರನ್ನು ತಲೆಮೇಲೆ ಕೂರಿಸಿ ಮೆರೆದಾಡಿದ್ದ ನರೇಂದ್ರ ಮೋದಿ ಅವರು ಈಗ ಅದೇ ಟ್ರಂಪ್ ಅವರ ಆಜ್ಞಾಪಾಲಕರಾಗುವ ದೈನೇಸಿ ಸ‍್ಥಿತಿಗೆ ಬಂದಿರುವುದು ವಿಷಾದನೀಯ ಬೆಳವಣಿಗೆಯಾಗಿದೆ. ಮೋದಿಯವರ 56 ಇಂಚಿನ ಎದೆ ಮತ್ತು ವಿಶ್ವಗುರುವಿನ ಕಿರೀಟವನ್ನು ಡೊನಾಲ್ಡ್ ಟ್ರಂಪ್ ಪ್ರತಿದಿನ ಕುಟ್ಟಿ ಪುಡಿ ಮಾಡುತ್ತಿದ್ದಾರೆ ಎಂದು ಸಿಎಂ ವ್ಯಂಗ್ಯವಾಡಿದ್ದಾರೆ.

ವಿದೇಶಾಂಗ ನೀತಿಯಿಂದ ಹಿಡಿದು ಆರ್ಥಿಕ ಮತ್ತು ಸಾಮಾಜಿಕ ನೀತಿಯವರೆಗೂ ಎಲ್ಲ ರಂಗಗಳಲ್ಲಿಯೂ ಸಂಪೂರ್ಣವಾಗಿ ವಿಫಲವಾಗಿರುವ ಪ್ರಧಾನಿ ನರೇಂದ್ರ ಮೋದಿಯವರು ರಾಜೀನಾಮೆ ಕೊಟ್ಟು ದೇಶದ ಮತ್ತು ಅಳಿದುಳಿದ ಅವರ ಗೌರವವನ್ನು ಉಳಿಸಿಕೊಳ್ಳುವುದು ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...