Homeಮುಖಪುಟಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ :...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

- Advertisement -
- Advertisement -

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, “ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ” ಎಂದು ಆರೋಪಿಸಿದರು.

ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ಮೋದಿಯವರು ಜರ್ಜರಿತರಾಗಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಸ್ಥಗಿತಗೊಂಡಿದ್ದ ಭಾರತ-ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ನರೇಂದ್ರ ಮೋದಿ ನಿನ್ನೆ ರಾತ್ರಿ ಸಹಿ ಹಾಕಿದ್ದಾರೆ. ಅವರ ಮೇಲೆ ತೀವ್ರ ಒತ್ತಡವಿದೆ. ಅದರಿಂದ ಅವರ ವರ್ಚಸ್ಸಿಗೆ ಧಕ್ಕೆಯಾಗಬಹುದು. ಮುಖ್ಯ ವಿಷಯವೆಂದರೆ ನಮ್ಮ ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ. ಸಾರ್ವಜನಿಕರು ಇದರ ಬಗ್ಗೆ ಯೋಚಿಸಬೇಕು ಎಂದರು.

“ನರೇಂದ್ರ ಮೋದಿಯವರು ಈ ವ್ಯಾಪಾರ ಒಪ್ಪಂದದಲ್ಲಿ ನಿಮ್ಮ ಕಠಿಣ ಪರಿಶ್ರಮವನ್ನು ಮಾರಿದ್ದಾರೆ. ಏಕೆಂದರೆ ಅವರು ರಾಜಿ ಮಾಡಿಕೊಂಡಿದ್ದಾರೆ. ಅವರು ದೇಶವನ್ನೇ ಮಾರಿದ್ದಾರೆ. ನರೇಂದ್ರ ಮೋದಿಯವರು ಭಯಭೀತರಾಗಿದ್ದಾರೆ. ಏಕೆಂದರೆ, ಅವರ ಇಮೇಜ್ ರೂಪಿಸಿದವರು ಈಗ ಆ ಇಮೇಜ್ ಅನ್ನು ಮುರಿಯುತ್ತಿದ್ದಾರೆ” ಎಂದು ಹೇಳಿದರು.

ಪ್ರಧಾನಿ ಮೋದಿ ರಾಜಿ ಮಾಡಿಕೊಂಡಿದ್ದಾರೆ ಎಂದು ನೀವು ಹೇಗೆ ಅಂದುಕೊಳ್ಳುತ್ತೀರಿ ಎಂದು ಸುದ್ದಿಗಾರರು ಪ್ರಶ್ನಿಸಿದ್ದಕ್ಕೆ, ರಾಹುಲ್ ಗಾಂಧಿ ಅವರು ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ದಾಖಲಾಗಿರುವ ಪ್ರಕರಣ ಮತ್ತು ಎಪ್‌ಸ್ಟೀನ್‌ ಫೈಲ್‌ಗಳನ್ನು ಉಲ್ಲೇಖಿಸಿದರು.

ಅಮೆರಿಕದಲ್ಲಿ ಅದಾನಿ ಮೇಲೆ ಒಂದು ಪ್ರಕರಣವಿದೆ, ಅದು ವಾಸ್ತವವಾಗಿ ಮೋದಿ ಮೇಲೆ ಇರುವ ಪ್ರಕರಣ. ಎಪ್‌ಸ್ಟೀನ್‌ ಫೈಲ್ಸ್‌ ಅಮೆರಿಕ ಇನ್ನೂ ಬಿಡುಗಡೆ ಮಾಡದ ಹೆಚ್ಚಿನ ವಿಷಯಗಳನ್ನು ಒಳಗೊಂಡಿದೆ. ಅದರಿಂದ ಒತ್ತಡವೂ ಇದೆ. ಇವು ಎರಡು ಒತ್ತಡದ ವಿಷಯಗಳು. ದೇಶವು ಇದನ್ನು ಅರ್ಥಮಾಡಿಕೊಳ್ಳಬೇಕು” ಎಂದು ರಾಹುಲ್ ಗಾಂಧಿ ಹೇಳಿದರು.

ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಬಂದ ನಂತರ ಭಾರತೀಯ ರಫ್ತಿನ ಮೇಲಿನ ಸುಂಕವನ್ನು ಶೇ. 25 ರಿಂದ ಶೇ. 18 ಕ್ಕೆ ಇಳಿಸಲಾಗಿದೆ. ಆದರೆ, ಕಾಂಗ್ರೆಸ್ ಈ ವ್ಯಾಪಾರ ಒಪ್ಪಂದದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದೆ.

ಅಮೆರಿಕದ ಕೃಷಿ ಉತ್ಪನ್ನಗಳಿಗೆ ಭಾರತೀಯ ಮಾರುಕಟ್ಟೆಯನ್ನು ಸಂಪೂರ್ಣವಾಗಿ ಮುಕ್ತಗೊಳಿಸಲು ಒಪ್ಪಿಗೆ ನೀಡಲಾಗಿದೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ. ಇದು ಭಾರತೀಯ ರೈತರ ಹಿತಾಸಕ್ತಿಗೆ ಮಾರಕವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದೆ.

ಅಮೆರಿಕದ ಉತ್ಪನ್ನಗಳ ಮೇಲೆ ವಿಧಿಸಲಾಗುವ ಸುಂಕವನ್ನು ‘ಶೂನ್ಯ’ಕ್ಕೆ ಇಳಿಸಲು ಭಾರತ ಒಪ್ಪಿಕೊಂಡಿದೆಯೇ? ಎಂದು ಪ್ರಶ್ನಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಈ ಹೇಳಿಕೆಯಿಂದ ಭಾರತೀಯ ಉದ್ಯಮಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ತೊಂದರೆಯಾಗಲಿದೆ ಎಂದು ಕಾಂಗ್ರೆಸ್ ಪ್ರತಿಪಾದಿಸಿದೆ.

ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ರಷ್ಯಾದಿಂದ ರಿಯಾಯಿತಿ ದರದಲ್ಲಿ ಪಡೆಯುತ್ತಿರುವ ತೈಲ ಖರೀದಿಯನ್ನು ಭಾರತ ನಿಲ್ಲಿಸಲಿದೆ ಎಂದು ಟ್ರಂಪ್ ಘೋಷಿಸಿದ್ದಾರೆ. ಈ ನಿರ್ಧಾರವು ಭಾರತದ ವ್ಯೂಹಾತ್ಮಕ ಸ್ವಾಯತ್ತತೆ ಮತ್ತು ಇಂಧನ ಭದ್ರತೆಯ ಮೇಲೆ ಪರಿಣಾಮ ಬೀರಲಿದೆ ಎಂದು ಟೀಕಿಸಿದ್ದಾರೆ.

ಭಾರತ ಸರ್ಕಾರ ಅಧಿಕೃತವಾಗಿ ವಿವರ ನೀಡುವ ಮೊದಲೇ ಅಮೆರಿಕ ಅಧ್ಯಕ್ಷರು ಒಪ್ಪಂದದ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವುದು ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...