Homeಕರ್ನಾಟಕಭಾರತ v/s ಶ್ರೀಲಂಕಾ 2022 ಕ್ರಿಕೆಟ್ ಸರಣಿ: ಪೂಜಾರ, ರಹಾನೆ ತಂಡದಿಂದ ಹೊರಕ್ಕೆ

ಭಾರತ v/s ಶ್ರೀಲಂಕಾ 2022 ಕ್ರಿಕೆಟ್ ಸರಣಿ: ಪೂಜಾರ, ರಹಾನೆ ತಂಡದಿಂದ ಹೊರಕ್ಕೆ

- Advertisement -
- Advertisement -

ಶ್ರೀಲಂಕಾ ವಿರುದ್ಧದ T20 ಮತ್ತು ಟೆಸ್ಟ್ ಸರಣಿಗೆ ಭಾರತ ತಂಡವನ್ನು ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯು ಶನಿವಾರ ಸಂಜೆ ಪ್ರಕಟಿಸಿದೆ. ರೋಹಿತ್ ಶರ್ಮಾ ಅವರು ಭಾರತೀಯ ಕ್ರಿಕೆಟ್ ತಂಡದ ನಾಯಕತ್ವವನ್ನು ವಹಿಸಿಕೊಂಡ ನಂತರ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯ ಇದಾಗಿದ್ದು, ಭಾರೀ ಕುತೂಹಲವನ್ನು ಹುಟ್ಟಹಾಕಿದೆ.

ಆಯ್ಕೆ ಸಮಿತಿಯು ಜಸ್ಪ್ರೀತ್ ಬುಮ್ರಾ ಅವರನ್ನು ಟಿ20 ಮತ್ತು ಟೆಸ್ಟ್ ಉಪನಾಯಕರನ್ನಾಗಿ ನೇಮಿಸಿದೆ. ಆದರೆ, ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಗೆ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಅವರನ್ನು ತಂಡದಿಂದ ಕೈಬಿಡಲಾಗಿದೆ.

“ಇಬ್ಬರನ್ನೂ ಕೈಬಿಡುವ ನಿರ್ಣಯವನ್ನು ತೆಗೆದುಕೊಳ್ಳುವ ಮೊದಲು ನಾವು ದೀರ್ಘವಾಗಿ ಯೋಚಿಸಿದ್ದೇವೆ. ಅಲ್ಲದೆ, ಇದಕ್ಕೂ ಮೊದಲೇ ಅವರೊಂದಿಗೆ ಮಾತನಾಡಿದ್ದೇವೆ. ಅವರು ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್‌ಗಳ ಭಾಗವಾಗುವುದಿಲ್ಲ ಎಂದು ಅವರಿಗೆ ತಿಳಿಸಿದ್ದೇವೆ. ಈ ನಿರ್ಧಾರವು ಕೇವಲ ಈ ಟೆಸ್ಟ್‌ಗಳಿಗೆ ಮಾತ್ರ. ಮುಂದಿನ ಸರಣಿಗಳಲ್ಲಿ ಅವರು ತಂಡದ ಭಾಗವಾಗಿರುತ್ತಾರೆ”ಎಂದು ಚೇತನ್ ಶರ್ಮಾ ಹೇಳಿದ್ದಾರೆ.

“ಇಬ್ಬರು ಆಟಗಾರರೂ ಭಾರತ ತಂಡಕ್ಕೆ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ. ಆದ್ದರಿಂದ ಅವರು ಯಾವಾಗಬೇಕಾದರೂ ತಂಡಕ್ಕೆ ಮರಳಬಹುದು. ಇದು ಗ್ರಾಫ್ನಂತೆ, ರಹಾನೆ ನಿನ್ನೆ (ರಣಜಿ ಟ್ರೋಫಿ) ಶತಕ ಬಾರಿಸಿದ್ದರು. ಅವರನ್ನು ಕೈಬಿಟ್ಟಿರುವುದು ನಿರ್ವಹಣೆಯ ಪ್ರಕ್ರಿಯೆಯಾಗಿದೆ” ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿರಿ: ವಿರಾಟ್ ಕೊಹ್ಲಿ ವಿಚಾರದಲ್ಲಿ ಮಾಧ್ಯಮಗಳ ವಿರುದ್ಧ ರೋಹಿತ್‌ ಶರ್ಮಾ ಕಿಡಿ

“ಸದ್ಯಕ್ಕೆ, ಎರಡು ಟೆಸ್ಟ್‌ಗಳಿಗೆ ಪರಿಗಣಿಸಲಾಗುವುದಿಲ್ಲ ಎಂದು ನಾವು ಅವರಿಗೆ ತಿಳಿಸಿದ್ದೇವೆ. ನಡುವೆ, ಬದಲಾವಣೆಗಳು ಹೇಗೆ ನಡೆಯುತ್ತವೆ ಎಂಬುದನ್ನು ನಾವು ಗಮನಿಸುತ್ತೇವೆ. ನಾವು ಯಾರಿಗೂ ಸಂಪೂರ್ಣವಾಗಿ ಬಾಗಿಲು ಮುಚ್ಚುವವರಲ್ಲ. ಇದು ಕ್ರಿಕೆಟ್, ಇಲ್ಲಿ ಕಾರ್ಯಕ್ಷಮತೆ ಮುಖ್ಯ. ಈಗ ಅವರು ರಣಜಿ ಟ್ರೋಫಿ ಆಡುವುದನ್ನು ಆಯ್ಕೆ ಸಮಿತಿ ವೀಕ್ಷಿಸುತ್ತಿದೆ” ಎಂದು ಶರ್ಮಾ ಹೇಳಿದ್ದಾರೆ.

“ಯಾವ ಆಧಾರದ ಮೇಲೆ ಅವರನ್ನು ಕೈಬಿಡಲಾಗಿದೆ ಎಂದು ನಾನು ನಿಮಗೆ ಹೇಳಲಾರೆ. ಅದು ಆಯ್ಕೆಗಾರರಿಗೆ ಬಿಟ್ಟ ವಿಷಯವಾಗಿದೆ. ನಾನು ನಿಮಗೆ ಹೇಳುವುದು ಇಷ್ಟೇ, ಅವರಿಗೆ ಮೊದಲೇ ಹೇಳಲಾಗಿತ್ತು ಮತ್ತು ಭಾರತ ತಂಡಕ್ಕೆ ಮೆಟ್ಟಿಲಾಗಿರುವ ರಣಜಿ ಟ್ರೋಫಿಯನ್ನು ಆಡುವಂತೆ ಕೇಳಲಾಯಿತು. ನಾವು ನಮ್ಮ ನಡುವೆ ಏನು ಚರ್ಚಿಸಿದ್ದೇವೆ ಎಂಬುದನ್ನು ನಾವು ನಿಮಗೆ ಹೇಳಲು ಸಾಧ್ಯವಿಲ್ಲ” ಎಂದು ಸುದ್ದಿಗಾರರಿಗೆ ಶರ್ಮಾ ಹೇಳಿದ್ದಾರೆ.

“ರಹಾನೆ ಈ ಮೊದಲು ರಣಜಿ ಆಡಿಲ್ಲ. ರಣಜಿ ಆಡುವುದು ಮುಖ್ಯ. ಇಲ್ಲದಿದ್ದರೆ, ನೀವು ಪಂದ್ಯಕ್ಕೆ ಸಿದ್ಧರಾಗಿದ್ದೀರಿ ಎಂದು ನಮಗೆ ಹೇಗೆ ತಿಳಿಯುತ್ತದೆ? ನಾವು ವಯಸ್ಸನ್ನು ನೋಡುತ್ತಿಲ್ಲ. ಯುವಕರು ಹೊರಗೆ ಕುಳಿತ್ತಿದ್ದಾರೆ. ಆ ಯುವಕರಿಗೆ ಅವಕಾಶ ಕೊಡೋಣ ಎಂದುಕೊಂಡೆವು”ಎಂದು ಶರ್ಮಾ ತಿಳಿಸಿದ್ದಾರೆ.

ಟೆಸ್ಟ್ ತಂಡ: ರೋಹಿತ್ ಶರ್ಮಾ (ಕ್ಯಾಪ್ಟನ್), ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಬ್ಮನ್ ಗಿಲ್, ಆರ್ ಪಂತ್, ಕೆಎಸ್ ಭರತ್, ಆರ್ ಅಶ್ವಿನ್, ಆರ್ ಜಡೇಜಾ, ಜಯಂತ್ ಯಾದವ್, ಕುಲ್ದೀಪ್ ಯಾದವ್, ಜೆ ಬುಮ್ರಾ (ವಿಸಿ), ಎಂಡಿ ಶಮಿ, ಎಂಡಿ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್.

ಇದನ್ನೂ ಓದಿರಿ: ‘ನನ್ನ ತಂಡಕ್ಕೆ ಅಪ್ರಾಮಾಣಿಕನಾಗಿರಲು ಸಾಧ್ಯವಿಲ್ಲ!’: ಟೆಸ್ಟ್‌‌ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ

T20I ತಂಡ: ರೋಹಿತ್ ಶರ್ಮಾ (c) ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (wk), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಬುಮ್ರಾ (vc), ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಹರ್ಷಲ್ ಪಟೇಲ್, ಎಂಡಿ ಸಿರಾಜ್, ಸಂಜು ಸ್ಯಾಮ್ಸನ್ (wk), ರವೀಂದ್ರ ಜಡೇಜಾ, ವೈ ಚಹಾಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅವೇಶ್ ಖಾನ್.

ಸರಣಿ ವೇಳಾಪಟ್ಟಿ

ಟಿ20 ಸರಣಿ: 1 ನೇ T20I: ಫೆಬ್ರವರಿ 24 – ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ

2ನೇ T20I: ಫೆಬ್ರವರಿ 26 – ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾ

3 ನೇ T20I: ಫೆಬ್ರವರಿ 27 – ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾ

ಟೆಸ್ಟ್ ಸರಣಿ: 1 ನೇ ಟೆಸ್ಟ್: ಮಾರ್ಚ್ 4 ರಿಂದ ಮಾರ್ಚ್ 8 – ಮೊಹಾಲಿ

2 ನೇ ಟೆಸ್ಟ್: ಮಾರ್ಚ್ 12 ರಿಂದ ಮಾರ್ಚ್ 16 – ಬೆಂಗಳೂರು


ಇದನ್ನೂ ಓದಿರಿ: ಕ್ರಿಕೆಟ್ ಜಗತ್ತು ಕಂಡ ಕೆಚ್ಚೆದೆಯ ನಾಯಕ ಕೊಹ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...