Homeಕರೋನಾ ತಲ್ಲಣಭಾರತ: ಕಳೆದ 5 ತಿಂಗಳಲ್ಲೇ ಅತ್ಯಂತ ಕಡಿಮೆ ವರದಿಯಾದ ಕೊರೊನಾ ಪ್ರಕರಣಗಳು

ಭಾರತ: ಕಳೆದ 5 ತಿಂಗಳಲ್ಲೇ ಅತ್ಯಂತ ಕಡಿಮೆ ವರದಿಯಾದ ಕೊರೊನಾ ಪ್ರಕರಣಗಳು

ಕಳೆದ 24 ಗಂಟೆಯಲ್ಲಿ 354 ಜನರು ಸೋಂಕಿನಿಂದ ಮೃತಪಟ್ಟಿದ್ದು, ರಾಷ್ಟ್ರವ್ಯಾಪಿ ಒಟ್ಟು ಮೃತಪಟ್ಟವರ ಸಂಖ್ಯೆ 1,43,709 ಕ್ಕೆ ಏರಿಕೆಯಾಗಿದೆ.

- Advertisement -
- Advertisement -

5 ತಿಂಗಳಿನಲ್ಲೇ ಇದೇ ಮೊದಲ ಬಾರಿಗೆ ಭಾರತವು ಅತ್ಯಂತ ಕಡಿಮೆ ಕೊರೊನಾ ವೈರಸ್ ಪ್ರಕರಣವನ್ನು ವರದಿ ಮಾಡಿದೆ. ಕಳೆದ 24 ಗಂಟೆಗಳಲ್ಲಿ 22,065 ಹೊಸ ಪ್ರಕರಣಗಳು ದಾಖಲಾಗುವುದರೊಂದಿಗೆ ಭಾತರದಲ್ಲಿ ಒಟ್ಟು ಕೊರೊನಾ ಪ್ರಕರಣ 99,06,165 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಒಟ್ಟು ಸೋಂಕಿತರ ಸಂಖ್ಯೆಯಲ್ಲಿ ಭಾರತದ ಸಕ್ರಿಯ ಕೊರೊನಾ ಪ್ರಕರಣಗಳ ಪಾಲು 3.57% ಕ್ಕೆ ಕುಗ್ಗಿದೆ. ಭಾರತದಲ್ಲಿ 3,39,820 ಸಕ್ರಿಯ ಸೋಂಕಿತರು ಇದ್ದು, ಇದುವರೆಗೂ 94,22,636 ರೋಗಿಗಳು ಚೇತರಿಸಿಕೊಂಡಿದ್ದಾರೆ.

ಇದನ್ನೂ ಓದಿ: 60 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡಲು ಸಿದ್ದವಾಗಿರುವ ಭಾರತ

ವಿಶ್ವದ ಕೆಲವು ದೇಶಗಳಲ್ಲಿ ಕೊರೊನಾ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ದೊರೆಯುತ್ತಿದ್ದು, ಭಾತರದಲ್ಲೂ ಲಸಿಕೆಯ ಬಳಕೆಗೆ ಸರ್ಕಾರದ ಅನುಮತಿಯನ್ನು ಕೋರಲಾಗಿದೆ. ಶೀಘ್ರದಲ್ಲೇ ಲಸಿಕೆ ನೀಡುವ ಪ್ರಕ್ರಿಯೆ ಪ್ರಾರಂಭವಾಗುವ ನಿರೀಕ್ಷೆಯಿದೆ. ಕೇಂದ್ರ ಸರ್ಕಾರವು ಸೋಮವಾರ  ಗೈಡ್‌‌ಲೈನ್‌ಗಳನ್ನು ಬಿಡುಗಡೆ ಮಾಡಿದ್ದು, ಸುರಕ್ಷಿತ ಇಂಜೆಕ್ಷನ್ ಕ್ರಮಗಳನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳಿಗೆ ನಿರ್ದೇಶನ ನೀಡಿದೆ.

ವಿಶ್ವದಲ್ಲೇ ಅತ್ಯಂತ ಹೆಚ್ಚು ಪ್ರಕರಣಗಳಿರುವ ದೇಶದಲ್ಲಿ ಭಾರತವು 2 ನೇ ಸ್ಥಾನದಲ್ಲಿದೆ. ಅಮೆರಿಕಾ ಒಂದನೇ ಸ್ಥಾನದಲ್ಲಿದ್ದು, ಅಲ್ಲಿ 1,65,56,947 ಪ್ರಕರಣಗಳು ವರದಿಯಾಗಿದೆ. ಸೋಂಕಿಗೆ ಇದುವರೆಗೂ ವಿಶ್ವದಾದ್ಯಂತ 16,20,294 ಜನರ ಮೃತಪಟ್ಟಿದ್ದಾರೆ. ಭಾತರದಲ್ಲೂ ಕಳೆದ 24 ಗಂಟೆಯಲ್ಲಿ 354 ಜನರು ಸೋಂಕಿನಿಂದ ಮೃತಪಟ್ಟಿದ್ದು, ಇದು ರಾಷ್ಟ್ರವ್ಯಾಪಿ 1,43,709 ಕ್ಕೆ ತಲುಪಿದೆ.

ಇದನ್ನೂ ಓದಿ: ಪ್ರಯೋಗಾರ್ಥ ಕೊರೊನಾ ಲಸಿಕೆ ತೆಗೆದುಕೊಂಡಿದ್ದ ಹರಿಯಾಣ ಆರೋಗ್ಯ ಸಚಿವನಿಗೆ ಕೊರೊನಾ ಪಾಸಿಟಿವ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗಾಡುವ ಯುವಕರ ಖಾತೆಗಳಿಗೆ ಹಣ...

0
"ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳನ್ನು ಬಳಸಿಕೊಂಡು ಬೀದಿಗಳಲ್ಲಿ ತಿರುಗುತ್ತಿರುವ ನಮ್ಮ ಯುವಕರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ ಒಂದು ಲಕ್ಷ ರೂಪಾಯಿ ಮತ್ತು ತಿಂಗಳಿಗೆ 8,500 ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ"...