Homeಮುಖಪುಟಪಠ್ಯಪುಸ್ತಕಗಳಲ್ಲಿ 'INDIA ಬದಲಿಗೆ ಭಾರತ' ಸೇರಿಸಲು NCERT ಶಿಫಾರಸು

ಪಠ್ಯಪುಸ್ತಕಗಳಲ್ಲಿ ‘INDIA ಬದಲಿಗೆ ಭಾರತ’ ಸೇರಿಸಲು NCERT ಶಿಫಾರಸು

- Advertisement -
- Advertisement -

ಎಲ್ಲಾ ತರಗತಿಗಳ ಶಾಲಾ ಪಠ್ಯಪುಸ್ತಕಗಳಲ್ಲಿ ‘INDIA’ ಬದಲಿಗೆ ‘ಭಾರತ’ ಎಂದು ಸೇರಿಸಬೇಕು, ಶಾಲಾ ಪಠ್ಯಕ್ರಮವನ್ನು ಪರಿಷ್ಕರಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ರಚಿಸಿರುವ ಸಮಾಜ ವಿಜ್ಞಾನಗಳ ಉನ್ನತ ಮಟ್ಟದ ಸಮಿತಿಗೆ ಶಿಫಾರಸು ಮಾಡಲಾಗಿದೆ.

ಸಮಿತಿಯ ಅಧ್ಯಕ್ಷ ಸಿ ಐ ಐಸಾಕ್ ಪ್ರಕಾರ, ಸಮಿತಿಯು ಪಠ್ಯಪುಸ್ತಕಗಳಲ್ಲಿ ‘INDIA’ ಹೆಸರನ್ನು ‘ಭಾರತ್’ ಎಂದು ಬದಲಿಸಲು ಸಲಹೆ ನೀಡಿದೆ, ಪಠ್ಯಕ್ರಮದಲ್ಲಿ ‘ಪ್ರಾಚೀನ ಇತಿಹಾಸ’ ಬದಲಿಗೆ ‘ಶಾಸ್ತ್ರೀಯ ಇತಿಹಾಸ’ ಮತ್ತು ಭಾರತೀಯ ಜ್ಞಾನ ವ್ಯವಸ್ಥೆ (ಐಕೆಎಸ್) ಅನ್ನು ಸೇರಿಸಲು ಹೇಳಲಾಗಿದೆ.

ಆದಾಗ್ಯೂ, ಸಮಿತಿಯ ಶಿಫಾರಸುಗಳ ಬಗ್ಗೆ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಎನ್‌ಸಿಇಆರ್‌ಟಿ ಅಧಿಕಾರಿಗಳು ತಿಳಿಸಿದ್ದಾರೆ.

”ಎಲ್ಲಾ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳಲ್ಲಿ ಭಾರತ್ ಎಂಬ ಹೆಸರನ್ನು ಬಳಸಬೇಕೆಂದು ಸಮಿತಿಯು ಸರ್ವಾನುಮತದಿಂದ ಶಿಫಾರಸು ಮಾಡಿದೆ. ಪಠ್ಯಪುಸ್ತಕಗಳಲ್ಲಿ ‘ಪ್ರಾಚೀನ ಇತಿಹಾಸ’ ಬದಲಿಗೆ ‘ಶಾಸ್ತ್ರೀಯ ಇತಿಹಾಸ’ವನ್ನು ಪರಿಚಯಿಸಲು ನಾವು ಶಿಫಾರಸು ಮಾಡಿದ್ದೇವೆ” ಎಂದು ಐಸಾಕ್ ಪಿಟಿಐಗೆ ತಿಳಿಸಿದರು.

ಸಮಿತಿಯು ಪಠ್ಯಪುಸ್ತಕಗಳಲ್ಲಿ ವಿವಿಧ ಯುದ್ಧಗಳಲ್ಲಿನ ಹಿಂದೂ ರಾಜರ ಗೆಲುವನ್ನು ಹೈಲೈಟ್ ಮಾಡಲು ಶಿಫಾರಸು ಮಾಡಿದೆ ಎಂದು ಅವರು ಹೇಳಿದರು.

”ನಮ್ಮ ವೈಫಲ್ಯಗಳನ್ನು ಪ್ರಸ್ತುತ ಪಠ್ಯಪುಸ್ತಕಗಳಲ್ಲಿ ಉಲ್ಲೇಖಿಸಲಾಗಿದೆ. ಆದರೆ ಮೊಘಲರು ಮತ್ತು ಸುಲ್ತಾನರ ಮೇಲಿನ ನಮ್ಮ ವಿಜಯಗಳ ಬಗ್ಗೆ ಉಲ್ಲೇಖಿಸಲಾಗಿಲ್ಲ ಎಂದು ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟಾರಿಕಲ್ ರಿಸರ್ಚ್ (ICHR) ಸದಸ್ಯರೂ ಆಗಿರುವ ಐಸಾಕ್ ಹೇಳಿದರು.

ಎನ್‌ಸಿಇಆರ್‌ಟಿಯು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ಕ್ಕೆ ಅನುಗುಣವಾಗಿ ಶಾಲಾ ಪಠ್ಯಪುಸ್ತಕಗಳ ಪಠ್ಯಕ್ರಮವನ್ನು ಪರಿಷ್ಕರಿಸುತ್ತಿದೆ. ಕೌನ್ಸಿಲ್ ಇತ್ತೀಚೆಗೆ ಪಠ್ಯಕ್ರಮ, ಪಠ್ಯಪುಸ್ತಕಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ಅಂತಿಮಗೊಳಿಸಲು 19 ಸದಸ್ಯರ ರಾಷ್ಟ್ರೀಯ ಪಠ್ಯಕ್ರಮ ಮತ್ತು ಬೋಧನಾ ಕಲಿಕಾ ಸಾಮಗ್ರಿ ಸಮಿತಿಯನ್ನು (ಎನ್‌ಎಸ್‌ಟಿಸಿ) ರಚಿಸಿದೆ.

”ಎಲ್ಲಾ ವಿಷಯಗಳ ಪಠ್ಯಕ್ರಮದಲ್ಲಿ ಭಾರತೀಯ ಜ್ಞಾನ ವ್ಯವಸ್ಥೆ (ಐಕೆಎಸ್) ಯನ್ನು ಪರಿಚಯಿಸಲು ಸಮಿತಿಯು ಶಿಫಾರಸು ಮಾಡಿದೆ” ಎಂದು ಐಸಾಕ್ ಹೇಳಿದರು.

ಸಮಿತಿಯ ಇತರ ಸದಸ್ಯರಲ್ಲಿ ಐಸಿಎಚ್‌ಆರ್ ಅಧ್ಯಕ್ಷ ರಘುವೇಂದ್ರ ತನ್ವಾರ್, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಪ್ರಾಧ್ಯಾಪಕಿ ವಂದನಾ ಮಿಶ್ರಾ, ಡೆಕ್ಕನ್ ಕಾಲೇಜ್ ಡೀಮ್ಡ್ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ವಸಂತ ಶಿಂಧೆ ಮತ್ತು ಹರಿಯಾಣ ಸರ್ಕಾರಿ ಶಾಲೆಯಲ್ಲಿ ಸಮಾಜಶಾಸ್ತ್ರ ಬೋಧಿಸುವ ಮಮತಾ ಯಾದವ್ ಇರಲಿದ್ದಾರೆ.

ಇದನ್ನೂ ಓದಿ: ಪುಲ್ವಾಮಾ ದಾಳಿಗೆ ಮೋದಿ ಸರ್ಕಾರದ ಲೋಪವೇ ಕಾರಣ: ರಾಹುಲ್ ಸಂದರ್ಶನದಲ್ಲಿ ಮಲಿಕ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...