Homeಮುಖಪುಟಇರಾನ್-ಇಸ್ರೇಲ್ ಕದನವಿರಾಮವನ್ನು ಸ್ವಾಗತಿಸಿದ ಭಾರತ; ಅಮೆರಿಕ ಮತ್ತು ಕತಾರ್ ಪಾತ್ರಕ್ಕೆ ಮೆಚ್ಚುಗೆ

ಇರಾನ್-ಇಸ್ರೇಲ್ ಕದನವಿರಾಮವನ್ನು ಸ್ವಾಗತಿಸಿದ ಭಾರತ; ಅಮೆರಿಕ ಮತ್ತು ಕತಾರ್ ಪಾತ್ರಕ್ಕೆ ಮೆಚ್ಚುಗೆ

- Advertisement -
- Advertisement -

ಹೊಸದಿಲ್ಲಿ: ಇರಾನ್ ಮತ್ತು ಇಸ್ರೇಲ್ ನಡುವೆ ಕದನವಿರಾಮ ಏರ್ಪಟ್ಟಿರುವುದನ್ನು ಭಾರತ ಸ್ವಾಗತಿಸಿದೆ. ಈ ಕದನವಿರಾಮಕ್ಕೆ ಅಮೆರಿಕ ಮತ್ತು ಕತಾರ್ ವಹಿಸಿದ ಪಾತ್ರವನ್ನು ಶ್ಲಾಘಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ (ಜೂನ್ 24) ಸಂಜೆ ತಿಳಿಸಿದೆ.

ಆದಾಗ್ಯೂ, ಈ ಪ್ರದೇಶದ ಒಟ್ಟಾರೆ ಭದ್ರತೆ ಕುರಿತು ಭಾರತಕ್ಕೆ ಇನ್ನೂ ಕಳವಳವಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಎರಡು ದಿನಗಳ ಹಿಂದೆ ಇರಾನಿನ ಪರಮಾಣು ಘಟಕಗಳ ಮೇಲೆ ಅಮೆರಿಕ ದಾಳಿ ನಡೆಸಿದ ಪ್ರತಿಕ್ರಿಯೆಯಾಗಿ, ಇರಾನ್ ಕತಾರ್‌ನಲ್ಲಿರುವ ಅಮೆರಿಕನ್ ಮಿಲಿಟರಿ ನೆಲೆಯ ಮೇಲೆ ಕ್ಷಿಪಣಿಗಳನ್ನು ಉಡಾಯಿಸಿತ್ತು. ಇದರ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಮುಂಜಾನೆ (ಭಾರತೀಯ ಕಾಲಮಾನದ ಪ್ರಕಾರ) ಇಸ್ರೇಲ್ ಮತ್ತು ಇರಾನ್ ನಡುವೆ “12 ದಿನಗಳ ಯುದ್ಧ” ಕೊನೆಗೊಳ್ಳಲಿದ್ದು, ಕದನವಿರಾಮಕ್ಕೆ ಮುಂದಾಗಲಿವೆ ಎಂದು ಘೋಷಿಸಿದರು. ಕತಾರ್‌ನ ಪ್ರಧಾನ ಮಂತ್ರಿ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ ರಹಮಾನ್ ಅಲ್ ಥಾನಿ ಅವರು, ಅಮೆರಿಕದ ಕೋರಿಕೆಯ ಮೇರೆಗೆ ತಾವು ಇರಾನ್‌ನೊಂದಿಗೆ ಸಂಪರ್ಕ ಸಾಧಿಸಿದ್ದೇವೆ ಎಂದು ದೃಢಪಡಿಸಿದ್ದಾರೆ.

ಭಾರತವು ತನ್ನ ಹೇಳಿಕೆಯಲ್ಲಿ, ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷಗಳನ್ನು ಬಗೆಹರಿಸಲು “ಸಂವಾದ ಮತ್ತು ರಾಜತಾಂತ್ರಿಕತೆಗೆ ಬೇರೆ ಪರ್ಯಾಯವಿಲ್ಲ” ಎಂದು ಪುನರುಚ್ಚರಿಸಿದೆ. ಈ ಪ್ರಯತ್ನಗಳಲ್ಲಿ ತನ್ನ ಪಾತ್ರವನ್ನು ನಿರ್ವಹಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದ್ದು, ಎಲ್ಲಾ ಸಂಬಂಧಿತ ಪಕ್ಷಗಳು ಶಾಂತಿ ನೆಲಸುವತ್ತ ಕೆಲಸ ಮಾಡುತ್ತವೆ ಎಂದು ಆಶಿಸಿದೆ.

ಆದಾಗ್ಯೂ, ಕದನವಿರಾಮ ಜಾರಿಗೆ ಬರಬೇಕಿದ್ದ ಕೆಲವೇ ಕ್ಷಣಗಳಲ್ಲಿ ಅದರ ಕುರಿತ ವರದಿ ಅಸ್ಪಷ್ಟವಾಯಿತು. ಇರಾನ್ ತನ್ನ ಮೇಲೆ ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು ಇಸ್ರೇಲ್ ಆರೋಪಿಸಿತು. ಇದಕ್ಕೆ ಪ್ರತೀಕಾರವಾಗಿ, ಇರಾನ್ ಬಳಿಯ ರೇಡಾರ್ ಸೌಲಭ್ಯವನ್ನು ನಾಶಪಡಿಸಿರುವುದಾಗಿ ಇಸ್ರೇಲ್ ಹೇಳಿಕೊಂಡಿತು. ಆದರೆ, ಇರಾನ್ ಕದನವಿರಾಮವನ್ನು ಉಲ್ಲಂಘಿಸಿರುವುದನ್ನು ನಿರಾಕರಿಸಿದೆ.

ಟ್ರಂಪ್ ಮತ್ತು ಇಸ್ರೇಲಿ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ನಡುವಿನ ಮಾತುಕತೆಯ ನಂತರ ಇಸ್ರೇಲ್ ಇರಾನ್ ಮೇಲೆ ಹೆಚ್ಚುವರಿ ದಾಳಿಗಳಿಂದ ದೂರ ಉಳಿದಿದೆ ಎಂದು ನೆತನ್ಯಾಹು ಅವರ ಕಚೇರಿ ಮೂಲಗಳು ತಿಳಿಸಿವೆ.

ಆದರೆ, ಟ್ರಂಪ್ ಅವರು ಎರಡೂ ದೇಶಗಳು ಕದನವಿರಾಮವನ್ನು ಉಲ್ಲಂಘಿಸಿವೆ ಎಂದು ಹೇಳಿದ್ದಾರೆ. ಒಪ್ಪಂದವು ಜಾರಿಗೆ ಬಂದ ತಕ್ಷಣ ಅಂದರೆ ಅದು ಸಂಪೂರ್ಣವಾಗಿ ಜಾರಿಗೆ ಬರುವ ಮೊದಲು ಇಸ್ರೇಲ್ “ನಾನು ಹಿಂದೆಂದೂ ನೋಡಿರದಂತಹ ಅತ್ಯಂತ ದೊಡ್ಡ ಪ್ರಮಾಣದ ಬಾಂಬ್‌ಗಳನ್ನು” ಹಾಕಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ.

“ಇಸ್ರೇಲ್‌ನ ಇಂತಹ ನಡೆ ಬಗ್ಗೆ ನಾನು ಸಂತೋಷವಾಗಿಲ್ಲ” ಎಂದು ಟ್ರಂಪ್ ಸುದ್ದಿಗಾರರಿಗೆ ತಿಳಿಸಿದರು. ಇರಾನ್ ಬಗ್ಗೆ ಅತೃಪ್ತಿ ಹೊಂದಿದ್ದರೂ, ಇಸ್ರೇಲ್ ಬಗ್ಗೆ ತಮಗೆ ವಿಶೇಷವಾಗಿ ಬೇಸರವಾಗಿದೆ ಎಂದು ಅವರು ಹೇಳಿದರು.

“ಈ ಎರಡು ದೇಶಗಳು ಎಷ್ಟು ಸಮಯದಿಂದ ಮತ್ತು ಎಷ್ಟು ಕಠಿಣವಾಗಿ ಹೋರಾಡುತ್ತಿವೆ ಎಂದರೆ ಅವು ಏನು ಮಾಡುತ್ತಿವೆ ಎಂದು ಅವರಿಗೆ ತಿಳಿದಿಲ್ಲ. ನಿಮಗೆ ಅದು ಅರ್ಥವಾಗುತ್ತಿದೆಯೇ?” ಎಂದು ಟ್ರಂಪ್ ಸುದ್ದಿಗಾರರಿಗೆ ಪ್ರಶ್ನಿಸಿದ್ದಾರೆ.

ನಂತರ ಅವರು, “ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡುವುದಿಲ್ಲ. ಎಲ್ಲಾ ವಿಮಾನಗಳು ಹಿಂದಿರುಗಿ ಹೋಗುತ್ತವೆ. ಯಾರಿಗೂ ನೋವುಂಟು ಮಾಡುವುದಿಲ್ಲ, ಕದನವಿರಾಮ ಜಾರಿಯಲ್ಲಿದೆ” ಎಂದು ಸ್ಪಷ್ಟಪಡಿಸಿದರು.

ಇರಾನ್ ಮತ್ತು ಇಸ್ರೇಲ್ ನಡುವಿನ ಈ ಸಂಘರ್ಷವು ಜೂನ್ 13ರಂದು ಪ್ರಾರಂಭವಾಗಿದೆ. ಇರಾನ್ ಅಣು ಶಸ್ತ್ರಾಸ್ತ್ರಗಳನ್ನು ಪಡೆಯುವ ಹಂಚಿನಲ್ಲಿತ್ತು ಎಂದು ಆರೋಪಿಸಿ ಇಸ್ರೇಲ್ ಇರಾನ್‌ನಲ್ಲಿ ಮಿಲಿಟರಿ ಮತ್ತು ಅಣು ಗುರಿಗಳ ಮೇಲೆ ದಾಳಿ ಮಾಡಿದೆ. ಇದು ತನ್ನ ಅಸ್ತಿತ್ವಕ್ಕೆ ಬೆದರಿಕೆ ಎಂದು ಇಸ್ರೇಲ್ ಹೇಳಿದೆ.

ಜೂನ್ 13ರ ಘಟನೆಯ ನಂತರ, ಉಭಯ ದೇಶಗಳು ಪರಸ್ಪರ ಕ್ಷಿಪಣಿಗಳನ್ನು ಉಡಾಯಿಸಿದವು. ಎರಡೂ ಕಡೆ ಸಾವುಗಳು ಸಂಭವಿಸಿದವು. ಅಮೆರಿಕವು ಭಾನುವಾರದಂದು ಇರಾನ್‌ನಲ್ಲಿರುವ ಮೂರು ಪ್ರಮುಖ ಪರಮಾಣು ಕೇಂದ್ರಗಳ ಮೇಲೆ ಬಾಂಬ್ ದಾಳಿ ಮಾಡುವ ಮೂಲಕ ಯುದ್ಧಕ್ಕೆ ಪ್ರವೇಶಿಸಿತು. ಟ್ರಂಪ್ ಈ ಗುರಿಗಳನ್ನು ‘ಸಂಪೂರ್ಣವಾಗಿ ನಾಶಪಡಿಸಲಾಗಿದೆ’ ಎಂದು ಹೇಳಿಕೊಂಡಿದ್ದಾರೆ.

ತನ್ನ ಪರಮಾಣು ಕೇಂದ್ರಗಳ ಮೇಲಿನ ಅಮೆರಿಕ ದಾಳಿಯ ಪ್ರತಿಕ್ರಿಯೆಯಾಗಿ, ಇರಾನ್‌ ದೇಶವು ಕತಾರ್‌ನಲ್ಲಿರುವ ಅಮೆರಿಕದ ಅಲ್ ಉದೈಡ್ ವಾಯುನೆಲೆಯ ಮೇಲೆ ಸೋಮವಾರದಂದು ಕ್ಷಿಪಣಿ ದಾಳಿಯನ್ನು ನಡೆಸಿತು.

Latest Update: ಕದನ ವಿರಾಮಕ್ಕೆ ಒಪ್ಪಿಕೊಂಡ ಇರಾನ್-ಇಸ್ರೇಲ್; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...