HomeಮುಖಪುಟINDIA vs ಭಾರತ: ಹೆಸರು ಬದಲಾವಣೆ ವಿರೋಧಿಸುವವರು ದೇಶ ಬಿಟ್ಟುಹೋಗಬಹುದು- ಬಿಜೆಪಿ ನಾಯಕ

INDIA vs ಭಾರತ: ಹೆಸರು ಬದಲಾವಣೆ ವಿರೋಧಿಸುವವರು ದೇಶ ಬಿಟ್ಟುಹೋಗಬಹುದು- ಬಿಜೆಪಿ ನಾಯಕ

- Advertisement -
- Advertisement -

”INDIAವನ್ನು ಭಾರತ ಎಂದು ಮರುನಾಮಕರಣ ಮಾಡಲಾಗುವುದು ಮತ್ತು ಕೋಲ್ಕತ್ತಾದಲ್ಲಿರುವ ವಿದೇಶಿಯರ ಪ್ರತಿಮೆಗಳನ್ನು ತೆಗೆದುಹಾಕಲಾಗುವುದು” ಎಂದು ಪಶ್ಚಿಮ ಬಂಗಾಳದ ಹಿರಿಯ ಬಿಜೆಪಿ ನಾಯಕ ದಿಲೀಪ್ ಘೋಷ್ ಭಾನುವಾರ ಹೇಳಿದ್ದಾರೆ.

ಹೆಸರು ಬದಲಾವಣೆಯನ್ನು ವಿರೋಧಿಸುವವರು ದೇಶ ತೊರೆಯಬಹುದು ಎಂದು ದಿಲೀಪ್ ಘೋಷ್ ಹೇಳಿದ್ದಾರೆ.

ಮೇದಿನಿಪುರ ಕ್ಷೇತ್ರದ ಸಂಸದರಾಗಿರುವ ಘೋಷ್, ತಮ್ಮ ಕ್ಷೇತ್ರದ ವ್ಯಾಪ್ತಿಗೆ ಬರುವ ಖರಗ್‌ಪುರ ನಗರದಲ್ಲಿ ನಡೆದ ‘ಚಾಯ್ ಪೆ ಚರ್ಚಾ’ ಕಾರ್ಯಕ್ರಮದಲ್ಲಿ ಮಾತನಾಡಿದ್ದು, ”ಪಶ್ಚಿಮ ಬಂಗಾಳದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಾಗ, ಕೋಲ್ಕತ್ತಾದಲ್ಲಿ ವಿದೇಶಿಯರ ಎಲ್ಲಾ ಪ್ರತಿಮೆಗಳನ್ನು ತೆಗೆದುಹಾಕುತ್ತೇವೆ” ಎಂದು ಹೇಳಿದರು.

”INDIAವನ್ನು ಭಾರತ್ ಎಂದು ಮರುನಾಮಕರಣ ಮಾಡಲಾಗುವುದು, ಅದನ್ನು ಇಷ್ಟಪಡದವರು ದೇಶವನ್ನು ತೊರೆಯಬಹುದು” ಎಂದು ಅವರು ಹೇಳಿದ್ದಾರೆ.

ರಾಜ್ಯದ ಮತ್ತೊಬ್ಬ ಹಿರಿಯ ಬಿಜೆಪಿ ನಾಯಕ ರಾಹುಲ್ ಸಿನ್ಹಾ ಮಾತನಾಡಿ, ”ಒಂದು ದೇಶಕ್ಕೆ ಎರಡು ಹೆಸರುಗಳು ಇರಬಾರದು ಮತ್ತು ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ವಿಶ್ವ ನಾಯಕರು ನವದೆಹಲಿಯಲ್ಲಿ ಉಪಸ್ಥಿತರಿರುವುದರಿಂದ ಹೆಸರನ್ನು ಬದಲಾಯಿಸಲು ಇದು ಸರಿಯಾದ ಸಮಯ” ಎಂದು ಹೇಳಿದ್ದಾರೆ.

ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ತೃಣಮೂಲ ಕಾಂಗ್ರೆಸ್ ವಕ್ತಾರ ಸಂತಾನು ಸೇನ್, ”ಪ್ರತಿಪಕ್ಷಗಳ I.N.D.I.A ಮೈತ್ರಿಗೆ ಹೆದರಿ ಬಿಜೆಪಿ ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ” ಎಂದಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟವನ್ನು (ಐಎನ್‌ಡಿಐಎ) ರಚಿಸಿವೆ.

ಇದನ್ನೂ ಓದಿ: ಉಪಚುನಾವಣೆ: NDAಗೆ ಮೊದಲ ಆಘಾತಕೊಟ್ಟ ಪ್ರತಿಪಕ್ಷಗಳ INDIA ಮೈತ್ರಿಕೂಟ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...