Homeಅಂತರಾಷ್ಟ್ರೀಯ2024 ರಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರ: ವರದಿ

2024 ರಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರ: ವರದಿ

- Advertisement -
- Advertisement -

2024ರಲ್ಲಿ ವಿಶ್ವದ ಎರಡನೇ ಅತಿದೊಡ್ಡ ಪ್ರಮುಖ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರವಾಗಿ ಭಾರತ ಹೊರಹೊಮ್ಕಿದೆ ಎಂದು ಸ್ಟಾಕ್‌ಹೋಮ್ ಇಂಟರ್ನ್ಯಾಷನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (SIPRI)ನ ಹೊಸ ವರದಿ ಉಲ್ಲೇಖಿಸಿ ಎಂದು ಮಂಗಳವಾರ ದಿ ಪ್ರಿಂಟ್ ವರದಿ ಮಾಡಿದೆ. ಆ ವರ್ಷ ಜಾಗತಿಕವಾಗಿ ಆಮದಾಗಿದ್ದ ಒಟ್ಟು ಶಸ್ತ್ರಾಸ್ತ್ರಗಳಲ್ಲಿ ಭಾರತವು 8.3%ದಷ್ಟು ಪಾಲನ್ನು ಹೊಂದಿತ್ತು ಎಂದು ವರದಿ ಉಲ್ಲೇಖಿಸಿದೆ. 2024 ರಲ್ಲಿ ಭಾರತ

2020 ಮತ್ತು 2024 ರ ನಡುವೆ ಜಾಗತಿಕವಾಗಿ ಆಮದಾದ ಒಟ್ಟು ಶಸ್ತ್ರಾಸ್ತ್ರಗಳಲ್ಲಿ 8.8% ದಷ್ಟು ಉಕ್ರೇನ್ ಆಮದು ಮಾಡಿದ್ದು, ಅಗ್ರ ಸ್ಥಾನವನ್ನು ಹೊಂದಿದೆ ಎಂದು ವರದಿ ಉಲ್ಲೇಖಿಸಿದೆ. 2022 ರ ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಆಕ್ರಮಣ ನಡೆಸಿದ ನಂತರ 35 ಕ್ಕೂ ಹೆಚ್ಚು ದೇಶಗಳು ಉಕ್ರೇನ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದವು. 2015 ಮತ್ತು 2019 ರ ನಡುವಿನ ಅವಧಿಗೆ ಹೋಲಿಸಿದರೆ ಉಕ್ರೇನ್‌ನ ಶಸ್ತ್ರಾಸ್ತ್ರ ಆಮದು ಸುಮಾರು ನೂರು ಪಟ್ಟು ಹೆಚ್ಚಾಗಿದೆ ಎಂದು ವರದಿ ಉಲ್ಲೇಖಿಸಿದೆ.

“ಉಕ್ರೇನ್‌ಗೆ ಸರಬರಾಜು ಮಾಡಲಾದ ಪ್ರಮುಖ ಶಸ್ತ್ರಾಸ್ತ್ರಗಳಲ್ಲಿ ಹೆಚ್ಚಿನವು ಅಮೆರಿಕ (45%), ನಂತರ ಜರ್ಮನಿ (12%) ಮತ್ತು ಪೋಲೆಂಡ್ (11%) ನಿಂದ ಬಂದವು. 2020–24 ರಲ್ಲಿ ಟಾಪ್ 10 ಆಮದುದಾರರ ಪಟ್ಟಿಯಲ್ಲಿ ಉಕ್ರೇನ್ ಏಕೈಕ ಯುರೋಪಿಯನ್ ರಾಜ್ಯವಾಗಿತ್ತು. ಆದಾಗ್ಯೂ ಇತರ ಹಲವು ಯುರೋಪಿಯನ್ ರಾಜ್ಯಗಳು ಈ ಅವಧಿಯಲ್ಲಿ ತಮ್ಮ ಶಸ್ತ್ರಾಸ್ತ್ರ ಆಮದುಗಳನ್ನು ಗಮನಾರ್ಹವಾಗಿ ಹೆಚ್ಚಿಸಿವೆ.” ಎಂದು ವರದಿ ಹೇಳಿದೆ.

2015-19 ಮತ್ತು 2020-24 ರ ನಡುವೆ ಭಾರತದ ಶಸ್ತ್ರಾಸ್ತ್ರ ಆಮದು ಶೇಖಡ 9.3 ರಷ್ಟು ಕಡಿಮೆಯಾಗಿದೆ, ಇದಕ್ಕೆ ಭಾಗಶಃ ಕಾರಣ ಭಾರತವು ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕಾ ಸಾಮರ್ಥ್ಯ ಹೆಚ್ಚುತ್ತಿರುವುದೇ ಆಗಿದೆ ಎಂದು ವರದಿ ಹೇಳಿದೆ.

“ಭಾರತ ಮತ್ತು ರಷ್ಯಾ ನಡುವಿನ ಸಂಬಂಧಗಳು ಸ್ನೇಹಪರವಾಗಿಯೇ ಉಳಿದಿವೆ ಎಂದು ಎರಡೂ ಕಡೆಯಿಂದ ಇತ್ತೀಚೆಗೆ ಸಾರ್ವಜನಿಕ ಘೋಷಣೆಗಳ ಹೊರತಾಗಿಯೂ, ಪ್ರಮುಖ ಶಸ್ತ್ರಾಸ್ತ್ರಗಳಿಗಾಗಿ ಭಾರತದ ಹೊಸ ಮತ್ತು ಯೋಜಿತ ಆದೇಶಗಳಲ್ಲಿಯೂ ಬದಲಾವಣೆ ಗೋಚರಿಸುತ್ತಿದೆ. ಅವುಗಳಲ್ಲಿ ಹೆಚ್ಚಿನವು ಪಾಶ್ಚಿಮಾತ್ಯ ಪೂರೈಕೆದಾರರಿಂದ ಬರುತ್ತವೆ” ಎಂದು SIPRI ವರದಿ ಹೇಳಿದೆ.

ಈಗಲೂ ರಷ್ಯಾ ಭಾರತದ ಅತಿದೊಡ್ಡ ಶಸ್ತ್ರಾಸ್ತ್ರ ಪೂರೈಕೆದಾರರಾಗಿ ಉಳಿದಿದೆ. ಆದರೆ ಭಾರತೀಯ ಶಸ್ತ್ರಾಸ್ತ್ರ ರಫ್ತಿನಲ್ಲಿ ಅದರ ಪಾಲು 2020-24 ರಲ್ಲಿ 36-38% ಕ್ಕೆ ಇಳಿದಿದೆ. ಇದು 2015-19 ರಲ್ಲಿ 55% ಮತ್ತು 2010-14 ರಲ್ಲಿ 72% ರಿಂದ ಕಡಿಮೆಯಾಗಿದೆ ಎಂದು ವರದಿ ಹೇಳಿದೆ. 2024 ರಲ್ಲಿ ಭಾರತ

ಭಾರತವು ಫ್ರಾನ್ಸ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ಕಡೆಗೆ ಗಮನ ಹರಿಸಿದ್ದರಿಂದ 2015-19 ಮತ್ತು 2020-24 ರ ನಡುವೆ ಭಾರತದ ರಷ್ಯಾದ ಮೇಲಿನ ಅವಲಂಬನೆ 64% ರಷ್ಟು ಕಡಿಮೆಯಾಗಿದೆ ಎಂದು SIPRI ಹೇಳಿದೆ. ದಕ್ಷಿಣ ಕೊರಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಭಾರತವು ಮೂರನೇ ಅತಿದೊಡ್ಡ ಆಮದುದಾರ ರಾಷ್ಟ್ರವಾಗಿದ್ದು, ಕ್ರಮವಾಗಿ 7% ಮತ್ತು 11% ಪಾಲನ್ನು ಹೊಂದಿದೆ.

ಫ್ರಾನ್ಸ್ ಮತ್ತು ಇಸ್ರೇಲ್‌ನಿಂದ ಶಸ್ತ್ರಾಸ್ತ್ರ ಖರೀದಿಸುತ್ತಿರುವ ಅಗ್ರ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರವಾಗಿ ಭಾರತವು ಇದ್ದು, ಅವುಗಳ ರಫ್ತಿನಲ್ಲಿ ಕ್ರಮವಾಗಿ 28% ಮತ್ತು 34% ರಷ್ಟಿದೆ. 2015-19 ಮತ್ತು 2020-24 ರ ನಡುವೆ ಫ್ರಾನ್ಸ್‌ನಿಂದ ಭಾರತದ ಶಸ್ತ್ರಾಸ್ತ್ರ ಆಮದು 11% ರಷ್ಟು ಹೆಚ್ಚಾಗಿದ್ದು, ಆದರೆ ಇಸ್ರೇಲ್‌ನಿಂದ ಆಮದು 2% ರಷ್ಟು ಕಡಿಮೆಯಾಗಿದೆ. ಆದಾಗ್ಯೂ, ಭಾರತವು ಅಮೆರಿಕದ ಅಗ್ರ ಮೂರು ಆಮದುದಾರರಲ್ಲಿ ಇರಲಿಲ್ಲ.

ಭಾರತವು ಫ್ರಾನ್ಸ್‌ನೊಂದಿಗೆ 36 ರಫೇಲ್ ಫೈಟರ್ ಜೆಟ್‌ಗಳು ಮತ್ತು ಆರು ಸ್ಕಾರ್ಪೀನ್-ಕ್ಲಾಸ್ ಸಾಂಪ್ರದಾಯಿಕ ಜಲಾಂತರ್ಗಾಮಿ ನೌಕೆಗಳ ಪ್ರಮುಖ ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಿದೆ. ಜೊತೆಗೆ 26 ರಫೇಲ್-ಎಂ ಜೆಟ್‌ಗಳು ಮತ್ತು ಇನ್ನೂ ಮೂರು ಜಲಾಂತರ್ಗಾಮಿ ನೌಕೆಗಳ ಒಪ್ಪಂದಗಳನ್ನು ಅಂತಿಮಗೊಳಿಸಲು ಸಿದ್ಧವಾಗಿದೆ.

1990-94ರ ನಂತರ ಚೀನಾ ಮೊದಲ ಬಾರಿಗೆ ಟಾಪ್ 10 ಶಸ್ತ್ರಾಸ್ತ್ರ ಆಮದುದಾರರ ಪಟ್ಟಿಯಿಂದ ಹೊರಗುಳಿದಿದೆ. ಇದು ಅದರ ವಿಸ್ತರಿಸುತ್ತಿರುವ ದೇಶೀಯ ರಕ್ಷಣಾ ಉದ್ಯಮವನ್ನು ಪ್ರತಿಬಿಂಬಿಸುತ್ತದೆ ಎಂದು ದಿ ಹಿಂದೂ ವರದಿ ಮಾಡಿದೆ. ವಿಶ್ವದ 10 ಅತಿದೊಡ್ಡ ಆಮದುದಾರರಲ್ಲಿ ನಾಲ್ಕು ಏಷ್ಯಾ ಮತ್ತು ಓಷಿಯಾನಿಯಾದಲ್ಲಿವೆ: ಭಾರತ, ಪಾಕಿಸ್ತಾನ, ಜಪಾನ್ ಮತ್ತು ಆಸ್ಟ್ರೇಲಿಯಾ. ಜಾಗತಿಕ ಶಸ್ತ್ರಾಸ್ತ್ರ ಆಮದುಗಳಲ್ಲಿ ಈ ಪ್ರದೇಶವು ಶೇ. 33 ರಷ್ಟು ಪಾಲನ್ನು ಹೊಂದಿದ್ದರೆ, ಯುರೋಪ್ (28%), ಪಶ್ಚಿಮ ಏಷ್ಯಾ (27%), ಅಮೆರಿಕ (6.2%) ಮತ್ತು ಆಫ್ರಿಕಾ (4.5%) ನಂತರದ ಸ್ಥಾನದಲ್ಲಿವೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...