Homeಅಂತರಾಷ್ಟ್ರೀಯನವದೆಹಲಿಯ 50% ರಷ್ಟು ಪಾಕಿಸ್ತಾನ್ ಹೈಕಮೀಷನ್ ಸಿಬ್ಬಂದಿಗಳನ್ನು ಕಡಿಮೆಗೊಳಿಸಲಿರುವ ಭಾರತ

ನವದೆಹಲಿಯ 50% ರಷ್ಟು ಪಾಕಿಸ್ತಾನ್ ಹೈಕಮೀಷನ್ ಸಿಬ್ಬಂದಿಗಳನ್ನು ಕಡಿಮೆಗೊಳಿಸಲಿರುವ ಭಾರತ

- Advertisement -
- Advertisement -

ನವದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನ ಸಿಬ್ಬಂದಿಗಳ ಬಲವನ್ನು 50% ರಷ್ಟು ಕಡಿಮೆಗೊಳಿಸುವುದಾಗಿ ಭಾರತ ಮಂಗಳವಾರ ಹೇಳಿದೆ. ಅಲ್ಲದೆ ಉಭಯ ದೇಶಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ವಿವಾದಗಳ ಮಧ್ಯೆ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್‌ನ ಅರ್ಧದಷ್ಟು ಅಧಿಕಾರಿಗಳನ್ನು ಕೂಡ ವಾಪಸ್‌ ಕರೆಸಿಕೊಳ್ಳಲಿದೆ.

ವಿದೇಶಾಂಗ ಸಚಿವಾಲಯವು ನವದೆಹಲಿಯ ಪಾಕಿಸ್ತಾನ ಹೈಕಮಿಷನ್‌ನ ಚಾರ್ಜ್ ಡಿ ಅಫೈರ್‌ಗಳಾದ ಸೈಯದ್ ಹೈದರ್ ಷಾ ಅವರನ್ನು ಕರೆದು ತನ್ನ ಕಾರ್ಯಾಚರಣೆಯ ಅಧಿಕಾರಿಗಳ ಚಟುವಟಿಕೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ. ಮೇ 31 ರಂದು ಬೇಹುಗಾರಿಕೆ ಆರೋಪದ ಮೇಲೆ ಇಬ್ಬರು ಪಾಕಿಸ್ತಾನ ಹೈಕಮಿಷನ್ ನೌಕರರನ್ನು ಕೇಂದ್ರ ಹೊರಹಾಕಿತು. ಅಬಿದ್ ಹುಸೇನ್ ಮತ್ತು ಮೊಹಮ್ಮದ್ ತಾಹಿರ್ ನಡವಳಿಕೆಯ ಆರೋಪವನ್ನು “ರಾಜತಾಂತ್ರಿಕ ಕಾರ್ಯಾಚರಣೆಯ ಸದಸ್ಯರಾಗಿ ಅವರ ಸ್ಥಾನಮಾನಕ್ಕೆ ಹೊಂದಿಕೆಯಾಗುವುದಿಲ್ಲ” ಎಂದು ಹೇಳಿತ್ತು ಹಾಗೂ 24 ಗಂಟೆಗಳ ಒಳಗೆ ಭಾರತವನ್ನು ತೊರೆಯುವಂತೆ ಕೇಳಲಾಗಿತ್ತು.

“ಅವರ ಅಧಿಕಾರಿಗಳು ಹೈಕಮಿಷನ್ ನಲ್ಲಿ ತಮ್ಮ ಸವಲತ್ತು ಸ್ಥಾನಮಾನಕ್ಕೆ ಅನುಗುಣವಾಗಿರದ ಕ್ರಮಗಳಲ್ಲಿ ಪಾಲ್ಗೊಂಡಿದ್ದರೆ, ಪಾಕಿಸ್ತಾನವು ಸಮಾನಾಂತರವಾಗಿ ಇಸ್ಲಾಮಾಬಾದ್ ನಲ್ಲಿರುವ ಭಾರತೀಯ ಹೈಕಮಿಷನ್ನ ಅಧಿಕಾರಿಗಳನ್ನು ತಮ್ಮ ನ್ಯಾಯಸಮ್ಮತ ರಾಜತಾಂತ್ರಿಕ ಕಾರ್ಯಗಳನ್ನು ನಿರ್ವಹಿಸದಂತೆ ಬೆದರಿಸುವ ನಿರಂತರ ಅಭಿಯಾನದಲ್ಲಿ ತೊಡಗಿದೆ”ಎಂದು ವಿದೇಶಾಂಗ ಸಚಿವಾಲಯ ಹೇಳಿದೆ. ಉಚ್ಚಾಟನೆಯ ಹದಿನೈದು ದಿನಗಳ ನಂತರ, ಇಸ್ಲಾಮಾಬಾದ್‌ನ ಭಾರತೀಯ ಹೈಕಮಿಷನ್‌ನಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಇಬ್ಬರು ಭಾರತೀಯ ಪ್ರಜೆಗಳು ಹಲವಾರು ಗಂಟೆಗಳ ಕಾಲ ನಾಪತ್ತೆಯಾಗಿದ್ದರು. ಆದರೆ ಭಾರತವು ತೀವ್ರ ಪ್ರತಿಭಟನೆ ನಡೆಸಿದ ನಂತರ ಅವರನ್ನು ಪಾಕಿಸ್ತಾನದ ಅಧಿಕಾರಿಗಳು ಬಿಡುಗಡೆ ಮಾಡಿದ್ದರು.

ಗನ್‌ಪಾಯಿಂಟ್‌ ಇಟ್ಟು ಅಪಹರಣ ಮಾಡಿದ ಪಾಕಿಸ್ತಾನವು ಭಾರತೀಯ ಅಧಿಕಾರಿಗಳನ್ನು ಬೆದರಿಸಲು ಎಷ್ಟರ ಮಟ್ಟಿಗೆ ಪ್ರಯತ್ನಿಸಿದೆ ಎಂಬುದನ್ನು ಎತ್ತಿ ತೋರಿಸುತ್ತದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಹೇಳಿದೆ. ಜೂನ್ 22, 2020 ರಂದು ಭಾರತಕ್ಕೆ ಮರಳಿದ ಈ ಅಧಿಕಾರಿಗಳು ಪಾಕಿಸ್ತಾನದ ಏಜೆನ್ಸಿಗಳ ಕೈಯಲ್ಲಿ ಅನುಭವಿಸಿದ ಅನಾಗರಿಕ ನಡೆಯ ಗ್ರಾಫಿಕ್ ವಿವರಗಳನ್ನು ಒದಗಿಸಿದ್ದಾರೆ ಎಂದು ಸಚಿವಾಲಯ ಹೇಳಿದೆ.

ಪಾಕಿಸ್ತಾನದ ನಡವಳಿಕೆಯು ರಾಜತಾಂತ್ರಿಕ ಸಂಬಂಧಗಳ ವಿಯೆನ್ನಾ ಸಮಾವೇಶ 1961 ಮತ್ತು 1992 ರ ನೀತಿ ಸಂಹಿತೆಗೆ ಅನುಗುಣವಾಗಿಲ್ಲ ಎಂದು ಭಾರತ ಪುನರುಚ್ಚರಿಸಿದೆ. ಇದು ಪ್ರತಿಕೂಲ ಸಮಯದಲ್ಲಿ ಭಾರತ ಮತ್ತು ಪಾಕಿಸ್ತಾನದ ರಾಜತಾಂತ್ರಿಕರ ಸುರಕ್ಷತೆಯನ್ನು ಖಾತ್ರಿಗೊಳಿಸುತ್ತದೆ.


ಓದಿ: ಲಾಕ್‌ಡೌನ್ ನಡುವೆ ಮುಂಬೈ ರೈಲು ನಿಲ್ದಾಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದು ನಿಜವೇ?: ಫ್ಯಾಕ್ಟ್‌ಚೆಕ್‌


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...