Homeಮುಖಪುಟಬಹು ಸಂಖ್ಯಾತರ ಇಚ್ಛೆಯಂತೆ ದೇಶ ನಡೆಯಲಿದೆ ; 'ಕಠ್‌ಮುಲ್ಲಾಗಳು' ದೇಶ ವಿರೋಧಿಗಳು :‌ ಅಲಹಾಬಾದ್ ಹೈಕೋರ್ಟ್...

ಬಹು ಸಂಖ್ಯಾತರ ಇಚ್ಛೆಯಂತೆ ದೇಶ ನಡೆಯಲಿದೆ ; ‘ಕಠ್‌ಮುಲ್ಲಾಗಳು’ ದೇಶ ವಿರೋಧಿಗಳು :‌ ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ!

- Advertisement -
- Advertisement -

ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಕಾನೂನು ಘಟಕ ಭಾನುವಾರ (ಡಿ.8) ಆಯೋಜಿಸಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಲಹಾಬಾದ್ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ‘ಸಂವಿಧಾನ ವಿರೋಧಿ’ ಹೇಳಿಕೆ ನೀಡಿದ್ದಾರೆ.

ಅಲಹಾಬಾದ್ ಹೈಕೋರ್ಟ್‌ನ ಗ್ರಂಥಾಲಯ ಸಭಾಂಗಣದಲ್ಲಿ ವಿಹೆಚ್‌ಪಿಯ ‘ಕಾಶಿ ಪ್ರಾಂತ’ (ವಾರಣಾಸಿ ವಲಯ) ಮತ್ತು ಕಾನೂನು ಘಟಕ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಏಕರೂಪ ನಾಗರಿಕ ಸಂಹಿತೆಯ ಸಾಂವಿಧಾನಿಕ ಅಗತ್ಯತೆ’ಯ ಬಗ್ಗೆ ಮಾತನಾಡಿದ ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ “ಇದು ಹಿಂದುಸ್ತಾನ. ಈ ದೇಶ, ಕಾನೂನು ಬಹುಸಂಖ್ಯಾತರ ಇಚ್ಚೆಯಂತೆ ನಡೆಯುತ್ತದೆ. ಇದನ್ನು ಹೇಳಲು ನನಗೆ ಯಾವುದೇ ಹಿಂಜರಿಕೆ ಇಲ್ಲ” ಎಂದಿದ್ದಾರೆ.

“ಬಹುಸಂಖ್ಯಾತರಿಗೆ ಅನುಗುಣವಾಗಿ ಕಾನೂನು ಕಾರ್ಯನಿರ್ವಹಿಸುತ್ತದೆ. ಅದು ಹೇಗೆ ಎಂಬುವುದನ್ನು ಕುಟುಂಬ ಅಥವಾ ಸಮಾಜದ ಹಿನ್ನೆಲೆಯಲ್ಲಿ ನೋಡಿ. ಬಹುಸಂಖ್ಯಾತರ ಕಲ್ಯಾಣ ಮತ್ತು ಸಂತೋಷಕ್ಕೆ ಯಾವುದು ಕಾರಣವಾಗುತ್ತದೋ ಅದನ್ನು ಒಪ್ಪಲಾಗುತ್ತದೆ. ಇದು ಕಾನೂನು, ಹೈಕೋರ್ಟ್ ನ್ಯಾಯಾಧೀಶರು ಹೀಗೆ ಹೇಳಿದ್ರಾ? ಎಂದು ನೀವು ಕೇಳುವಂತಿಲ್ಲ” ಎಂದು ಹೇಳಿದ್ದಾರೆ.

ತಮ್ಮ ಭಾಷಣದಲ್ಲಿ, ಹಿಂದೂ ಧರ್ಮದಲ್ಲಿನ ಅಸ್ಪೃಶ್ಯತೆ, ಸತಿ ಸಹಗಮನ ಪದ್ದತಿಯಂತಹ ಆಚರಣೆಗಳನ್ನು ಏಕೆ ರದ್ದುಗೊಳಿಸಲಾಯಿತು? ಎಂದು ಪ್ರಶ್ನಿಸಿದ ನ್ಯಾಯಮೂರ್ತಿ, ಮುಸ್ಲಿಂ ಸಮುದಾಯ ಬಹು ಪತ್ನಿತ್ವ ಅಭ್ಯಾಸವನ್ನು ಮುಂದುವರೆಸಿದೆ. ಈ ಪದ್ಧತಿ ಸ್ವೀಕಾರಾರ್ಹವಲ್ಲ ಎಂದಿದ್ದಾರೆ.

ಶಾಸ್ತ್ರಗಳು ಮತ್ತು ವೇದಗಳಂತಹ ಹಿಂದೂ ಧರ್ಮಗ್ರಂಥಗಳಲ್ಲಿ ಮಹಿಳೆಯರನ್ನು ದೇವತೆಗಳಾಗಿ ಪೂಜಿಸಲಾಗಿದ್ದರೂ, ಒಂದು ಸಮುದಾಯದ ಜನರು ಇನ್ನೂ ಅನೇಕ ಹೆಂಡತಿಯರನ್ನು ಹೊಂದಲು, ಹಲಾಲಾದಲ್ಲಿ ತೊಡಗಿಸಿಕೊಳ್ಳಲು ಅಥವಾ ತ್ರಿವಳಿ ತಲಾಖ್ ಅಭ್ಯಾಸ ಮಾಡಲು ಹಕ್ಕನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ

ಈ ದೇಶವು ಒಂದು ಸಂವಿಧಾನ ಮತ್ತು ಒಂದು ದಂಡದ ಕಾನೂನುಗಳನ್ನು ಹೊಂದಿರುವುದರಿಂದ, ನಾಗರಿಕ ಕಾನೂನುಗಳನ್ನು ಸಹ ಏಕೀಕರಿಸುವುದು ತಾರ್ಕಿಕವಾಗಿದೆ. ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದಿದ್ದಾರೆ.

“ನಮ್ಮ ಶಾಸ್ತ್ರಗಳು ಮತ್ತು ವೇದಗಳಲ್ಲಿ ದೇವತೆ ಎಂದು ಪರಿಗಣಿಸಲ್ಪಟ್ಟ ಹೆಣ್ಣನ್ನು ನೀವು ಅಗೌರವಿಸಲು ಸಾಧ್ಯವಿಲ್ಲ. ನೀವು ನಾಲ್ವರು ಪತ್ನಿಯರನ್ನು ಹೊಂದಲು, ಹಲಾಲಾ ಮಾಡಲು ಅಥವಾ ತ್ರಿವಳಿ ತಲಾಖ್ ಹೇಳುವ ಹಕ್ಕನ್ನು ಪಡೆಯಲು ಸಾಧ್ಯವಿಲ್ಲ. ನಮಗೆ ತ್ರಿವಳಿ ತಲಾಕ್ ಹೇಳುವ ಹಕ್ಕಿದೆ, ನಾವು ಜೀವನಾಂಶ ನೀಡುವುದಿಲ್ಲ ಎಂದು ನೀವು ಹೇಳುತ್ತೀರಿ. ನೀವು ಆ ಹಕ್ಕನ್ನು ಪಡೆಯಲು ಸಾಧ್ಯವಿಲ್ಲ. ಆ ಹಕ್ಕು ವಿಎಚ್‌ಪಿ, ಆರ್‌ಎಸ್‌ಎಸ್ ಅಥವಾ ಹಿಂದೂ ಧರ್ಮದ ಪರವಾಗಿಲ್ಲ. ಈ ದೇಶದ ಸರ್ವೋಚ್ಚ ನ್ಯಾಯಾಲಯ ಕೂಡ ಈ ಬಗ್ಗೆ ಮಾತನಾಡಿದೆ. ಇದು ನ್ಯಾಯಾಲಯ ಐತಿಹಾಸಿಕ ಗ್ರಂಥಾಲಯ, ಇಲ್ಲಿ ಅನೇಕ ಮಹನಿಯರು ಬಂದು ಹೋಗಿದ್ದಾರೆ. ನಾನು ಅವರಲ್ಲಿ ಒಬ್ಬನಾಗಿ ಮಾತನಾಡುತ್ತಿದ್ದೇನೆ. ನಾನು ಸುಮ್ಮನೆ ಹೇಳುತ್ತಿಲ್ಲ, ಪ್ರತಿಜ್ಞೆ ಮಾಡುತ್ತಿದ್ದೇನೆ. ಶೀಘ್ರದಲ್ಲಿ ಏಕರೂಪ ಕಾನೂನು ಬರಲಿದೆ” ಎಂದು ಹೇಳಿದ್ದಾರೆ.

ತನ್ನ ಭಾಷಣದ ಆರಂಭದಲ್ಲಿ, ನಾನು ಗಂಗೆ ಹರಿಯುವ ದೇಶದ ನಿವಾಸಿ ಎಂದು ಹೇಳುವವರೆ ನನ್ನ ಪರಿಚಯ ಪರಿಪೂರ್ಣವಾಗದು. ಗಾಯ್ (ಹಸು) ಗಂಗಾ (ಗಂಗೆ) ಗೀತಾ(ಗೀತೆ) ಭಾರತೀಯ ಸಂಸ್ಕೃತಿಯ ಭಾಗವಾಗಿದೆ ಎಂದು ನ್ಯಾಯಮೂರ್ತಿ ಪ್ರತಿಪಾದಿಸಿದ್ದಾರೆ.

ಗಂಗೆಯಲ್ಲಿ ಸ್ನಾನ ಮಾಡುವವರು ಅಥವಾ ಚಂದನ ಹಾಕಿಕೊಳ್ಳುವವರು ಮಾತ್ರ ಹಿಂದೂಗಳಲ್ಲ. ಈ ದೇಶವನ್ನು ತಾಯಿ ಎಂದು ಪರಿಗಣಿಸುವರು, ಬಿಕ್ಕಟ್ಟಿನ ಸಮಯದಲ್ಲಿ ದೇಶಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಲು ಸಿದ್ಧರಿರುವವರು ಹಿಂದೂಗಳು. ಅವರ ಧಾರ್ಮಿಕ ಆಚರಣೆಗಳು ಅಥವಾ ನಂಬಿಕೆಗಳ ಕುರಾನ್ ಅಥವಾ ಬೈಬಲ್ ಆಗಿರಲಿ ಅವರು ಹಿಂದೂಗಳು ಎಂದಿದ್ದಾರೆ.

ನಮ್ಮ ಹಿಂದೂ ಧರ್ಮದಲ್ಲಿ ಬಾಲ್ಯವಿವಾಹ, ಸತಿ ಪದ್ಧತಿ, ಹೆಣ್ಣುಮಗುವಿನ ಹತ್ಯೆಯಂತಹ ಅನೇಕ ಸಾಮಾಜಿಕ ಅನಿಷ್ಟಗಳು ಇತ್ತು. ಆದರೆ, ರಾಮ್ ಮೋಹನ್ ರಾಯ್ ಅವರಂತಹ ಸುಧಾರಕರು ಈ ಪದ್ಧತಿಗಳನ್ನು ಕೊನೆಗೊಳಿಸಲು ಹೋರಾಡಿದರು. ಮುಸ್ಲಿಂ ಸಮುದಾಯದಲ್ಲಿ ಸಾಮಾಜಿಕ ಅನಿಷ್ಟಗಳಾದ ಹಲಾಲಾ, ತ್ರಿವಳಿ ತಲಾಖ್ ಮತ್ತು ದತ್ತು ಸ್ವೀಕಾರಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ. ಅವುಗಳನ್ನು ಕೊನೆಗೊಂಡಿಲ್ಲ, ಅದನ್ನು ಎದುರಿಸುವ ಧೈರ್ಯವೂ ಇಲ್ಲ ಎಂದು ಹೇಳಿದ್ದಾರೆ.

ಮುಸ್ಲಿಮರು ಬೆಂಕಿಯ ಸುತ್ತಲೂ ಏಳು ಸುತ್ತು ಹಾಕಿ ಮದುವೆಯಾಗಬೇಕು, ಗಂಗಾ ಸ್ನಾನ ಮಾಡಿ ಚಂದನ ಹಚ್ಚಿಕೊಳ್ಳಬೇಕು ಎಂದು ನಾವು ಭಯಸುವುದಿಲ್ಲ. ಈ ದೇಶದ ಸಂಸ್ಕೃತಿ, ಮಹಾನ್ ವ್ಯಕ್ತಿಗಳು ಮತ್ತು ಈ ನೆಲದ ದೇವರನ್ನು ಗೌರವಿಸುವುದನ್ನು ಬಯಸುತ್ತೇವೆ ಅಷ್ಟೇ ಎಂದಿದ್ದಾರೆ.

ನ್ಯಾ. ಶೇಖರ್ ಕುಮಾರ್ ಯಾದವ್ ಅವರು ಸುಪ್ರೀಂ ಕೋರ್ಟ್‌ನ ಅಯೋಧ್ಯೆ ತೀರ್ಪಿನ ಬಗ್ಗೆಯೂ ಮಾತನಾಡಿದ್ದಾರೆ. ರಾಮಲಲ್ಲಾನನ್ನು ವಿಮೋಚನೆಗೊಳಿಸಲು ಮತ್ತು ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ನಿರ್ಮಾಣವಾಗುವುದನ್ನು ಕಾಣಲು ನಮ್ಮ ಪೂರ್ವಜರು ಅನೇಕ ತ್ಯಾಗ ಮಾಡಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಹಿಂದೂಗಳು ತಮ್ಮ ಅಹಿಂಸೆ ಮತ್ತು ದಯೆಗೆ ಹೆಸರುವಾಸಿಯಾಗಿದ್ದು, ಅದನ್ನು ಹೇಡಿತನ ಎಂದು ತಪ್ಪಾಗಿ ಭಾವಿಸಬಾರದು. ನಮ್ಮ ಧಾರ್ಮಿಕ ಆಚರಣೆಗಳು ಮತ್ತು ನಮ್ಮ ಪೂಜ್ಯ ವ್ಯಕ್ತಿಗಳು ಯಾವಾಗಲೂ ಮೊದಲ ಸ್ಥಾನದಲ್ಲಿರಬೇಕು ಎಂದು ಮಕ್ಕಳಿಗೆ ಕಲಿಸುವ ಮಹತ್ವವನ್ನು ಒತ್ತಿ ಹೇಳಿದರು.

“ಕಠ್‌ಮುಲ್ಲಾಗಳು’ ದೇಶ ವಿರೋಧಿಗಳು”

ಸಾಮಾಜಿಕ ಜಾಲತಾಣಗಳಲ್ಲಿ ಮುಸ್ಲಿಮರ ವಿರುದ್ಧ ಸಾಮಾನ್ಯವಾಗಿ ಬಳಸಲಾಗುವ ‘ಕಠ್‌ಮುಲ್ಲಾ’ ಎಂಬ ಪದ ಬಳಕೆಯೂ ಸೇರಿದಂತೆ ಅನೇಕ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ ನ್ಯಾಯಮೂರ್ತಿ, ‘ಕಠ್‌ಮುಲ್ಲಾ’ ಎಂಬ ಪದ ಉಲ್ಲೇಖಿಸಿ, ದೇಶವು ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದಿದ್ದಾರೆ.

“ಇದು (ಕಠ್‌ಮುಲ್ಲಾ) ಸರಿಯಾದ ಪದ ಅಲ್ಲದಿರಬಹುದು. ಆದರೆ, ಅದನ್ನು ಹೇಳಲು ನಾನು ಹಿಂಜರಿಯಲಾರೆ. ಏಕೆಂದರೆ ಅವರು ದೇಶಕ್ಕೆ ಮಾರಕ ಅವರು ಹಾನಿಕಾರಕ. ಅವರು ರಾಷ್ಟ್ರ ವಿರೋಧಿಗಳು ಮತ್ತು ಜನರಿಗೆ ಕುಮ್ಮಕ್ಕು ನೀಡುವವರು. ಅವರು ದೇಶದ ಪ್ರಗತಿ ಬಯಸದಂತಹ ಜನ. ಅವರ ಬಗ್ಗೆ ನಮಗೆ ಎಚ್ಚರಿಕೆ ಇರಬೇಕು” ಎಂದು ಹೇಳಿದ್ದಾರೆ.

ಆಕ್ರೋಶಕ್ಕೆ ಕಾರಣವಾದ ನ್ಯಾಯಾಧೀಶರ ಭಾಷಣ

ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ಸಂವಿಧಾನ ವಿರೋಧಿ, ಮುಸ್ಲಿಂ ವಿರೋಧಿ ಹೇಳಿಕೆ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ.  ಈ ಕುರಿತು ಎಐಎಂಐಎಂ ಪಕ್ಷದ ಮುಖಸ್ಥ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಎಕ್ಸ್‌ನಲ್ಲಿ ಸರಣಿ ಪೋಸ್ಟ್ ಹಾಕುವ ಮೂಲಕ ಪ್ರತಿಕ್ರಿಯಿಸಿದ್ದಾರೆ.

“ವಿಹೆಚ್‌ಪಿಯನ್ನು ವಿವಿಧ ಸಂದರ್ಭಗಳಲ್ಲಿ ನಿಷೇಧಿಸಲಾಗಿತ್ತು. ಸರ್ದಾರ್ ವಲ್ಲಭಾಯಿ ಪಟೇಲ್ ಅವರು ‘ದ್ವೇಷ ಮತ್ತು ಹಿಂಸೆಯ ಶಕ್ತಿ’ ಎಂದು ನಿಷೇಧಿಸಿದ ಸಂಘಟನೆಯಾದ ಆರ್‌ಎಸ್‌ಎಸ್‌ನೊಂದಿಗೆ ಇದು ಸಂಬಂಧ ಹೊಂದಿದೆ. ಇಂತಹ ಸಂಘಟನೆಯ ಸಮಾವೇಶದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರು ಭಾಗವಹಿಸಿರುವುದು ದುರದೃಷ್ಟಕರ ಎಂದಿದ್ದಾರೆ.

“ಹೈಕೋರ್ಟ್ ನ್ಯಾಯಮೂರ್ತಿಯವರ ಭಾಷಣವನ್ನು ಸುಲಭವಾಗಿ ತಿರಸ್ಕರಿಸಬಹುದು. ಆದರೆ, ಅವರಿಗೆ ಭಾರತದ ಸಂವಿಧಾನವು ನ್ಯಾಯಾಂಗ ಸ್ವಾತಂತ್ರ್ಯ ಮತ್ತು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವುದನ್ನು  ಬಯಸುತ್ತದೆ ಎಂದು ಅವರಿಗೆ ನೆನಪಿಸುವುದು ಮುಖ್ಯವಾಗಿದೆ” ಎಂದು ಹೇಳಿದ್ದಾರೆ.

“ಭಾರತದ ಸಂವಿಧಾನವು ಬಹುಸಂಖ್ಯಾತರ ಪರವಾಗಿಲ್ಲ, ಅದು ಪ್ರಜಾಸತ್ತಾತ್ಮಕವಾಗಿದೆ. ಪ್ರಜಾಪ್ರಭುತ್ವದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸಲಾಗಿದೆ. ಅಂಬೇಡ್ಕರ್ ಹೇಳಿದಂತೆ “ರಾಜನಿಗೆ ಆಳುವ ಯಾವುದೇ ದೈವಿಕ ಹಕ್ಕಿಲ್ಲ, ಅದೇ ರೀತಿ ಬಹುಸಂಖ್ಯಾತರಿಗೂ ಆಳುವ ದೈವಿಕ ಹಕ್ಕಿಲ್ಲ” ಎಂದಿದ್ದಾರೆ.

“ನ್ಯಾಯಮೂರ್ತಿಯ ಭಾಷಣ ಕೊಲಿಜಿಯಂ ವ್ಯವಸ್ಥೆಯನ್ನು ದೂಷಿಸುತ್ತದೆ ಮತ್ತು ನ್ಯಾಯಾಂಗ ನಿಷ್ಪಕ್ಷಪಾತದ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತದೆ. ವಿಹೆಚ್‌ಪಿ ಕಾರ್ಯಕ್ರಮಗಳಲ್ಲಿ ಭಾಗವಹಿಸಿದವರಿಂದ ಮುಂದೆ ಅಲ್ಪಸಂಖ್ಯಾತರು ನ್ಯಾಯ ನಿರೀಕ್ಷಿಸಲು ಹೇಗೆ ಸಾಧ್ಯ? ಎಂದು ಓವೈಸಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ  : ವಿಹೆಚ್‌ಪಿ ಕಾರ್ಯಕ್ರಮದಲ್ಲಿ ಏಕರೂಪ ನಾಗರಿಕ ಸಂಹಿತೆ ಅಗತ್ಯತೆ ಕುರಿತು ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...