Homeಕರ್ನಾಟಕ2024ರಲ್ಲಿ ಬಿಜೆಪಿ ಗೆದ್ದರೆ ಭಾರತ ಸೋಲುತ್ತದೆ: ಬಡಗಲಪುರ ನಾಗೇಂದ್ರ

2024ರಲ್ಲಿ ಬಿಜೆಪಿ ಗೆದ್ದರೆ ಭಾರತ ಸೋಲುತ್ತದೆ: ಬಡಗಲಪುರ ನಾಗೇಂದ್ರ

- Advertisement -
- Advertisement -

ಕೇಂದ್ರದಲ್ಲಿ 2024ರಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬಂದರೆ ಭಾರತ ಸೋಲುತ್ತದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

ವಿವಿಧ ಸಂಘಟನೆಗಳ ಜಂಟಿ ಸಹಯೋಗದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯುತ್ತಿರುವ ‘ದುಡಿವ ಜನರ ಮಹಾ ಧರಣಿ’ಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ನಂತರ ರೈತ ಸಮುದಾಯ ಯಾವ ಸಮಸ್ಯೆಗೆ ಎದುರಾಗಿತ್ತಿದೆಯೋ ಅದರ ವಿರುದ್ಧ ನಿರಂತರ ಹೋರಾಟ ನಡೆದಿದೆ. ಆದರೆ, ದೆಹಲಿ ಹೋರಾಟ ರೈತರ ಆಕ್ರೋಶ ಕಟ್ಟೆ ಒಡೆದ ಹೊರಾಟವಾಗಿದೆ. 780 ರೈತರು ತಮ್ಮ ಪ್ರಾಣವನ್ನು ಇದಕ್ಕೆ ಅರ್ಪಿಸಿದ್ದಾರೆ. ರೈತರ ಈ ತೀವ್ರ ಹೋರಾಟವು ಕಾಯ್ದೆ ವಾಪಾಸ್ ಪಡೆಯಲೇ ಬೇಕಾದ ಸ್ಥಿತಿ  ತಂದಿಟ್ಟಿತ್ತು. 2020ರಲ್ಲಿ ಹೋರಾಟಗಾರ ಮಾರುತಿ ಮಾನ್ಪಡೆ ತೀರಿಕೊಂಡರು. ಈ ವೇಳೆ ಬಿಜೆಪಿಯ ಯಡಿಯೂರಪ್ಪ ಅವರ ಸರ್ಕಾರ ರೈತ ವಿರೋಧಿ ಕಾಯ್ದೆಯನ್ನು ಜಾರಿ ತಂದಾಗ ರೈತ, ದಲಿತ, ಕಾರ್ಮಿಕರು ಐಕ್ಯವಾಗಿ ಹೋರಾಟ ನಡೆಸಿದೆವು ಎಂದರು.

ಸ್ವಾತಂತ್ರ್ಯ ಪಡೆಯಲು ನಾವು 2 ಶತಮಾನಗಳ ಕಾಲ ಹೋರಾಟ ಮಾಡಿದ್ದೇವೆ. ಈ ದೇಶಕ್ಕಾಗಿ ಜನರು ತಮ್ಮ ಆಯುಷ್ಯವನ್ನೇ ಮುಡಿಪಿಟ್ಟಿದ್ದಾರೆ. ನಾವು ಈಗ ಸಂವಿಧಾನ ಉಳಿಸಿಕೊಳ್ಳಬೇಕಾದ ಪರಿಸ್ಥಿತಿಯಿದೆ. 2024ರ ಚುನಾವಣೆಯಲ್ಲಿ ಭಾರತದ ದೇಶದ ಜನರಿಗೆ ದೊಡ್ಡ ಮಹತ್ವವಾದ ಚುನಾವಣೆ. ಈ ಚುನಾವಣೆಯಲ್ಲಿ ಕೋಮುವಾದಿ, ಬಂಡವಾಳಶಾಹಿಯನ್ನು ಪ್ರತಿನಿಧಿಸುವ ಮೋದಿ ಸರ್ಕಾರ ಮತ್ತೆ ಚುನಾಯಿತವಾದರೆ ಮತ್ತೆ ಎಂದೂ ಚುನಾವಣೆ ನಡೆಯುವುದಿಲ್ಲ. 2024ರ ಚುನಾವಣೆಯಲ್ಲಿ ಬಿಜೆಪಿ ಮತ್ತು ಸಂಘಪರಿವಾರವನ್ನು ಪ್ರತಿನಿಧಿಸುವ ಜನರು ಅಧಿಕಾರಕ್ಕೆ ಬಂದರೆ ಭಾರತ ಸೋಲುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ಜನ ಚಳವಳಿಗಳ ಮೂಲಕ ನಾವು ಬದಲವಾಣೆ ತರಬೇಕು. ರಾಜಕೀಯ ಪಕ್ಷಗಳಿಂದ ಬದಲಾವಣೆ ಸಾಧ್ಯವಿಲ್ಲ. 2024ರ ಚುನಾವಣೆಯಲ್ಲಿ ಜನ ಚಳವಳಿಗಳು ನಿರ್ಣಾಯಕ ಪಾತ್ರ ವಹಿಸಬೇಕು ಎಂದು ಹೇಳಿದರು.

ಇದನ್ನೂ ಓದಿ : ಬೆಂಗಳೂರು: ಎರಡನೇ ದಿನಕ್ಕೆ ಕಾಲಿಟ್ಟ ‘ದುಡಿಯುವ ಜನರ ಮಹಾ ಧರಣಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1,400 ಮುಸ್ಲಿಂ ಕುಟುಂಬಗಳ ಬದುಕು ಕಸಿದುಕೊಂಡ ಭೂಮಿಯಲ್ಲಿ ಅದಾನಿ ವಿದ್ಯುತ್ ಯೋಜನೆಗೆ ಹಿಮಂತ್ ಬಿಸ್ವಾ ಶರ್ಮಾ ನೇತೃತ್ವದಲ್ಲಿ ಅಡಿಪಾಯ

ಗುವಾಹಟಿ: ಅಸ್ಸಾಂನ ಧುಬ್ರಿ ಜಿಲ್ಲೆಯಲ್ಲಿ ಸುಮಾರು 1,400 ಬಂಗಾಳಿ ಮೂಲದ ಮುಸ್ಲಿಂ ಕುಟುಂಬಗಳನ್ನು ತೆರವುಗೊಳಿಸಿ, ಅವರ ಮನೆಗಳನ್ನು ನೆಲಸಮಗೊಳಿಸಿದ ಪ್ರದೇಶದಲ್ಲೇ ಅದಾನಿ ಪವರ್ ಲಿಮಿಟೆಡ್‌ನ 3,200 ಮೆಗಾವ್ಯಾಟ್ ಸಾಮರ್ಥ್ಯದ ಉಷ್ಣ ವಿದ್ಯುತ್ ಯೋಜನೆಗೆ...

ಮಧುಗಿರಿ: ಗಣೇಶೋತ್ಸವದಲ್ಲಿ ಕುಣಿದಿದ್ದಕ್ಕೆ 17 ವರ್ಷದ ದಲಿತ ಬಾಲಕನ ಕೊಲೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕಸಾಪುರ ಗ್ರಾಮದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕುಣಿದಿದ್ದಕ್ಕೆ ಆಕ್ಷೇಪಿಸಿ ದಲಿತ ಸಮುದಾಯದ17 ವರ್ಷದ ಬಾಲಕ ಸಿಂಹಾದ್ರಿಯನ್ನು ಕಲ್ಲಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ದಾರುಣ ಘಟನೆ ನಡೆದಿದೆ. ಘಟನೆಯ...

DELHI SIR : ಕರಡು ಪಟ್ಟಿಯಲ್ಲಿ 2024ರಲ್ಲಿ ನಿಧನರಾದ ಅರ್ಥಶಾಸ್ತ್ರಜ್ಞ ಬಿಬೇಕ್ ದೆಬ್ರಾಯ್ ಹೆಸರು!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಬೆಳಕಿಗೆ ಬರುತ್ತಿವೆ. ಇತ್ತೀಚಿನ ವರದಿಗಳ ಪ್ರಕಾರ, 2024ರಲ್ಲಿ ನಿಧನರಾದ ಪದ್ಮ ಪ್ರಶಸ್ತಿ ಪುರಸ್ಕೃತ ಅರ್ಥಶಾಸ್ತ್ರಜ್ಞ ಬಿಬೆಕ್ ದೆಬ್ರಾಯ್ ಅವರ...

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...