Homeಮುಖಪುಟ‘ಭಾರತ ಅಂತಹ ಅವಮಾನವನ್ನು ಎಂದಿಗೂ ಸಹಿಸುವುದಿಲ್ಲ…’; ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಪಟೇಲ್

‘ಭಾರತ ಅಂತಹ ಅವಮಾನವನ್ನು ಎಂದಿಗೂ ಸಹಿಸುವುದಿಲ್ಲ…’; ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಪಟೇಲ್

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿರುವ ಮಾಲ್ಡೀವ್ಸ್‌ನ ಮೂವರು ಮಂತ್ರಿಗಳ ಹೇಳಿಕೆಗಳು ‘ಭಾರತದ ಘನತೆಗೆ ಸವಾಲಾಗಿದೆ’ ಎಂದು ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್ ಖೋಡಾ ಪಟೇಲ್ ಹೇಳಿದ್ದಾರೆ ಎಂದು ಸೋಮವಾರ ಎನ್‌ಡಿಟಿವಿ ವರದಿ ಮಾಡಿದೆ.

‘ಭಾರತವು ಅಂತಹ ಅವಮಾನವನ್ನು ಎಂದಿಗೂ ಸಹಿಸುವುದಿಲ್ಲ. ಇಡೀ ದೇಶವು ಪ್ರಧಾನಿಯವರೊಟ್ಟಿಗೆ ಒಗ್ಗಟ್ಟನ್ನು ತೋರಿಸಿದೆ. ಪ್ರಧಾನಿ ಮತ್ತು ಲಕ್ಷದ್ವೀಪಗಳ ಪರವಾಗಿ ನಿಂತಿರುವ ಭಾರತದ ಜನರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ’ ಎಂದು ಹೇಳಿದ್ದಾರೆ.

‘ನಾವು ಅವರ ಕ್ಷಮೆಯಾಚನೆ ಬಗ್ಗೆ ಮಾತನಾಡಲು ಹೋಗುವುದಿಲ್ಲ.. ನಮ್ಮ ಮೌಲ್ಯಗಳು ವಿಭಿನ್ನವಾಗಿವೆ … ಅವರು ಅಂತಹ ಟೀಕೆಗಳನ್ನು ಮಾಡುವ ಅಗತ್ಯವಿಲ್ಲ. ಅವರ ತಪ್ಪುಗಳಿಗಾಗಿ ಅಲ್ಲಿನ ಸರ್ಕಾರದಿಂದ ಅವರು ಶಿಕ್ಷೆಗೆ ಒಳಗಾಗಿದ್ದಾರೆ. ಇದನ್ನೆಲ್ಲಾ ಭಾರತ ಸಹಿಸುವುದಿಲ್ಲ ಎಂದು ತೋರಿಸಿದೆ. ತನ್ನ ಪ್ರಧಾನಿಗೆ ಯಾವುದೇ ಅವಮಾನ ಆಗದಂತೆ ಬಾಲಿವುಡ್ ಸೆಲೆಬ್ರಿಟಿಗಳು, ಕ್ರಿಕೆಟಿಗರು ಮತ್ತು ಸಾಮಾನ್ಯ ಜನರವರೆಗೆ ಭಾರತವು ಮಾಲ್ಡೀವ್ಸ್‌ಗೆ ತಕ್ಕ ಪ್ರತ್ಯುತ್ತರವನ್ನು ನೀಡಿದೆ’ ಎಂದರು.

ಮಾಲ್ಡೀವಿಯನ್ ಸಚಿವರಾದ ಮರ್ಯಮ್ ಶಿಯುನಾ, ಮಲ್ಶಾ ಶರೀಫ್ ಮತ್ತು ಮಹಜೂಮ್ ಮಜಿದ್ ಅವರು ಎಕ್ಸ್ ನಲ್ಲಿ ಮೋದಿಯವರ ಬಗ್ಗೆ ವಿಮರ್ಶಾತ್ಮಕ ಟೀಕೆಗಳನ್ನು ಪೋಸ್ಟ್ ಮಾಡಿದ ನಂತರ ಈ ಗದ್ದಲ ಪ್ರಾರಂಭವಾಯಿತು. ಪ್ರಧಾನಿಯವರು ಲಕ್ಷದ್ವೀಪಕ್ಕೆ ಭೇಟಿ ನೀಡಿದ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಿದದ್ದರು. ಪ್ರಧಾನಮಂತ್ರಿಯವರ ಪೋಸ್ಟ್‌ಗಳು ಸಾಮಾಜಿಕ ಮಾಧ್ಯಮ ಬಳಕೆದಾರರಿಗೆ ಲಕ್ಷದ್ವೀಪವನ್ನು ಪರ್ಯಾಯ ರಜೆಯ ತಾಣವಾಗಿಸಿಕೊಳ್ಳಲು ಪ್ರೇರೇಪಿಸಿತು.

ಮಾಲ್ಡೀವ್ಸ್ ದ್ವೀಪವು ಆದಾಯಕ್ಕಾಗಿ ಭಾರತೀಯ ಪ್ರವಾಸಿಗರ ಮೇಲೆ ಹೆಚ್ಚು ಅವಲಂಬಿತವಾಗಿದ್ದು, ತಮ್ಮ ಸಚಿವರ ಹೇಳಿಕೆಯ ಬಗ್ಗೆ ದ್ವೀಪ ರಾಷ್ಟ್ರವು ತಡಮಾಡದೆ ಪ್ರತಿಕ್ರಿಯಿಸಿದೆ. ‘ಸರ್ಕಾರಿ ಹುದ್ದೆಗಳಲ್ಲಿದ್ದಾಗ ಸಾಮಾಜಿಕ ಮಾಧ್ಯಮದಲ್ಲಿ ಇಂತಹ ಪೋಸ್ಟ್‌ ಮಾಡಿದವರನ್ನು ಅಮಾನತುಗೊಳಿಸಲಾಗಿದೆ’ ಎಂದು ದ್ವೀಪ ರಾಷ್ಟ್ರ ಹೇಳಿದೆ.

ಈ ಘಟನೆಯು ರಾಜಕೀಯ ಮತ್ತು ರಾಜತಾಂತ್ರಿಕ ಬಿಕ್ಕಟ್ಟಾಗಿ ಮಾರ್ಪಟ್ಟಿದ್ದು, ವಿಶೇಷವಾಗಿ ಆ ದೇಶದ ವಿರೋಧ ಪಕ್ಷದ ಶಾಸಕರು ಆಡಳಿತ ಪಕ್ಷದ ಮೇಲೆ ದಾಳಿ ಮಾಡಲು ಇದನ್ನು ಬಳಸುತ್ತಿದ್ದಾರೆ. ಮಾಜಿ ಅಧ್ಯಕ್ಷ ಮೊಹಮದ್ ನಶೀದ್ ಅವರು ಸಚಿವರ ಹೇಳಿಕೆಗಳನ್ನು “ಭಯಾನಕ” ಎಂದು ಕರೆದಿದ್ದಾರೆ. ಈ ಮಧ್ಯೆ ಭಾರತವು ದೆಹಲಿಯಲ್ಲಿ ಮಾಲ್ಡೀವ್ಸ್ ರಾಯಭಾರಿಯನ್ನು ಕರೆಸಿ ಪ್ರತಿಭಟನೆ ವ್ಯಕ್ತಪಡಿಸಿದೆ.

ಚೀನಾದ ಪರವಾಗಿದ್ದಾರೆ ಎನ್ನಲಾದ ಮೊಹಮ್ಮದ್ ಮುಯಿಝು ಅವರು ದ್ವೀಪ ರಾಷ್ಟ್ರದ ನಾಯಕರಾಗಿ ಆಯ್ಕೆಯಾದಾಗಿನಿಂದ ಎರಡು ರಾಷ್ಟ್ರಗಳ ನಡುವಿನ ಸಂಬಂಧಗಳು ಹದಗೆಟ್ಟಿದೆ. ಮುಯಿಝು ಅವರು ಅಧ್ಯಕ್ಷರಾಗಿ ಆಯ್ಕೆಯಾದ ನಂತರ, ರಾಷ್ಟ್ರೀಯ ಭದ್ರತೆಯ ಆಧಾರದ ಮೇಲೆ ಮಾಲ್ಡೀವ್ಸ್‌ನಿಂದ ಭಾರತೀಯ ಪಡೆಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದರು.

ಇದನ್ನೂ ಓದಿ; ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಪುನಃ ಜೈಲು; ತೀರ್ಪು ಸ್ವಾಗತಿಸಿದ ಪ್ರತಿಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...