HomeಮುಖಪುಟINDIA ಗೆಲ್ಲುತ್ತದೆ, ನಮ್ಮ ದೇಶ ಗೆಲ್ಲುತ್ತದೆ ಮತ್ತು ಬಿಜೆಪಿ ಸೋಲುತ್ತದೆ: ವಿಪಕ್ಷಗಳ ಸಭೆ ಬಳಿಕೆ ಮಮತಾ...

INDIA ಗೆಲ್ಲುತ್ತದೆ, ನಮ್ಮ ದೇಶ ಗೆಲ್ಲುತ್ತದೆ ಮತ್ತು ಬಿಜೆಪಿ ಸೋಲುತ್ತದೆ: ವಿಪಕ್ಷಗಳ ಸಭೆ ಬಳಿಕೆ ಮಮತಾ ಬ್ಯಾನರ್ಜಿ

- Advertisement -
- Advertisement -

INDIA ಗೆಲ್ಲುತ್ತದೆ, ನಮ್ಮ ದೇಶ ಗೆಲ್ಲುತ್ತದೆ ಮತ್ತು ಬಿಜೆಪಿ ಸೋಲುತ್ತದೆ, ಎನ್‌ಡಿಎ INDIA ಎದುರಿಸಲು ಸಾಧ್ಯವೇ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ ಒಗ್ಗಟ್ಟಿನ ಸಭೆಯ ನಂತರ ಮಾತನಾಡಿದ ಅವರು, ನಮ್ಮ ಸಭೆ ಫಲಪ್ರದವಾಗಿದೆ ಮತ್ತು ಯಶಸ್ವಿಯಾಗಿದೆ. ನಮ್ಮ ಮೈತ್ರಿಕೂಟಕ್ಕೆ ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟಲ್ ಇನ್‌ಕ್ಲೂಸಿವ್ ಅಲೈಯನ್ಸ್ ಎಂದು ಹೆಸರಿಟ್ಟಿದ್ದೇವೆ. ಎನ್‌ಡಿಎಗೆ INDIA ವನ್ನು ಎದುರಿಸುವ ಶಕ್ತಿ ಇದೆಯೇ ಎಂದು ಅವರು ಹೇಳಿದ್ದಾರೆ.

ಕೇಂದ್ರದ ಆಡಳಿತವು ಇಂದು ಮಾಡುತ್ತಿರುವ ಏಕೈಕ ಕೆಲಸವೆಂದರೆ ಸರ್ಕಾರಗಳನ್ನು ಖರೀದಿಸುವುದು ಮತ್ತು ಸಾರ್ವಜನಿಕ ಸಂಪತ್ತನ್ನು ಮಾರಾಟ ಮಾಡುವುದಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, 2024ರ ಲೋಕಸಭೆ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಹೋರಾಡಿ ಯಶಸ್ವಿಯಾಗುತ್ತೇವೆ. ಇಂದು ಇಡೀ ಮಾಧ್ಯಮವನ್ನು ಪ್ರಧಾನಿ ಮೋದಿ ವಶಪಡಿಸಿಕೊಂಡಿದ್ದಾರೆ. ಅವರ ಆದೇಶವಿಲ್ಲದೇ ಯಾರೂ ಚಲಿಸುವುದಿಲ್ಲ. ನನ್ನ 52 ವರ್ಷಗಳ ಸಕ್ರಿಯ ರಾಜಕೀಯ ಜೀವನದಲ್ಲಿ ವಿರೋಧ ಪಕ್ಷದ ನಾಯಕರನ್ನು (ಧ್ವನಿಗಳನ್ನು) ಹತ್ತಿಕ್ಕುವ ಇಂತಹ ಪ್ರತಿಕೂಲ ಪರಿಸ್ಥಿತಿಯನ್ನು ನಾನು ನೋಡಿಲ್ಲ” ಎಂದರು.

ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಮಹತ್ವದ ಸಭೆ ಇದಾಗಿದ್ದು, ದೇಶದ ಹಿತಾಸಕ್ತಿಯಿಂದ ನಾವು ಒಗ್ಗೂಡಿದ್ದೇವೆ. ಒಕ್ಕೂಟದ ಪ್ರಚಾರ ನಿರ್ವಹಣೆಗಾಗಿ ಸಚಿವಾಲಯವನ್ನು ಸ್ಥಾಪಿಸಲಾಗುವುದು ಮತ್ತು ಇತರ ಸಮಿತಿಗಳು ಇರುತ್ತವೆ ಎಂದು ಅವರು ತಿಳಿಸಿದ್ದಾರೆ.

ಎನ್‌ಡಿಎ ಇಂದೇ 30 ಪಕ್ಷಗಳೊಂದಿಗೆ ಸಭೆ ನಡೆಸುತ್ತಿದೆ. ಭಾರತದಲ್ಲಿ ಇಷ್ಟು ಪಕ್ಷಗಳು ಸಕ್ರಿಯವಾಗಿರುವುದರ ಬಗ್ಗೆ ನಾನು ಕೇಳಿರಲಿಲ್ಲ. ಈ ಮೊದಲು ಅವರು ಯಾವುದೇ ಸಭೆಗಳನ್ನು ನಡೆಸಲಿಲ್ಲ ಆದರೆ ಈಗ ಅವರು ಒಂದೊಂದಾಗಿ ಭೇಟಿಯಾಗುತ್ತಿದ್ದಾರೆ. ಏಕೆಂದರೆ ಪ್ರಧಾನಿ ಮೋದಿ ಈಗ ವಿರೋಧ ಪಕ್ಷಗಳಿಗೆ ಹೆದರುತ್ತಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ಇದು ನಮ್ಮ ಎರಡನೇ ಯಶಸ್ವಿ ಸಭೆಯಾಗಿದೆ. ಇಡೀ ದೇಶವೇ ನಮ್ಮ ಕುಟುಂಬವಾಗಿದ್ದು, ನಮ್ಮ ಕುಟುಂಬವನ್ನು ಉಳಿಸಲು ನಾವು ಒಟ್ಟಾಗಿ ಹೋರಾಡುತ್ತಿದ್ದೇವೆ. ಈ ಮೈತ್ರಿಕೂಟದ ಮುಂದಿನ ಸಭೆ ಮುಂಬೈನಲ್ಲಿ ನಡೆಯಲಿದೆ ಎಂದು ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಹೇಳಿದರು.

ಪ್ರಧಾನಿ ಮೋದಿಗೆ 9 ವರ್ಷಗಳಲ್ಲಿ ದೇಶಕ್ಕಾಗಿ ಸಾಕಷ್ಟು ಮಾಡುವ ಅವಕಾಶ ಸಿಕ್ಕಿದೆ, ಆದರೆ ಯಾವುದೇ ಅಭಿವೃದ್ಧಿಯಾಗಿಲ್ಲ. ಅವರು ಕಳೆದ 9 ವರ್ಷಗಳಲ್ಲಿ ಆರ್ಥಿಕತೆ, ರೈಲ್ವೆಯನ್ನು ಹಾಳು ಮಾಡಿದ್ದಾರೆ. ಯುವಕರು, ರೈತರು, ಉದ್ಯಮಿಗಳು, ಕೈಗಾರಿಕೋದ್ಯಮಿಗಳು ಎಲ್ಲರೂ ಈ (ಎನ್‌ಡಿಎ) ಸರ್ಕಾರದಿಂದ ಅತೃಪ್ತರಾಗಿದ್ದಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದರು.

ಈ ಹೋರಾಟ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವೆ ಅಲ್ಲ. ದೇಶದ ಧ್ವನಿಯನ್ನು ಅಡಗಿಸುತ್ತಿರುವುದರ ವಿರುದ್ಧದ ಹೋರಾಟವಾಗಿದೆ. ಅದಕ್ಕಾಗಿಯೇ ನಾವು ಮೈತ್ರಿಕೂಟದ ಹೆಸರನ್ನು ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್ ಎಂದು ಕರೆದಿದ್ದೇವೆ. ಯಾರಾದರೂ ಇಂಡಿಯಾದ ವಿರುದ್ಧ ನಿಂತರೆ ಯಾರು ಗೆಲ್ಲಬಹುದು? ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಹುದ್ದೆಯ ಮೇಲೆ ಕಾಂಗ್ರೆಸ್‌ಗೆ ಆಸಕ್ತಿ ಇಲ್ಲ: ಪ್ರತಿಪಕ್ಷಗಳ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...