HomeಮುಖಪುಟINDIA ಒಕ್ಕೂಟ ಗೆಲ್ಲದಿದ್ದರೆ ಇಡೀ ದೇಶ ಹರ್ಯಾಣ, ಮಣಿಪುರದಂತಾಗುತ್ತದೆ: ಎಂಕೆ ಸ್ಟಾಲಿನ್

INDIA ಒಕ್ಕೂಟ ಗೆಲ್ಲದಿದ್ದರೆ ಇಡೀ ದೇಶ ಹರ್ಯಾಣ, ಮಣಿಪುರದಂತಾಗುತ್ತದೆ: ಎಂಕೆ ಸ್ಟಾಲಿನ್

- Advertisement -
- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ತಮ್ಮ ಮೊದಲ ಪಾಡ್ ಕಾಸ್ಟ್ ಸಂಚಿಕೆಯಲ್ಲಿ ಪ್ರಧಾನಿ ಮೋದಿ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದಾರೆ. ಪ್ರಧಾನಿ ಮೋದಿ ಭರವಸೆ ನೀಡಿದ್ದ 15 ಲಕ್ಷ ರೂ.ವನ್ನು ಬ್ಯಾಂಕ್ ಎಕೌಂಟ್‌ಗಳಿಗೆ ಜಮೆ ಮಾಡಿಲ್ಲ. ಮುಂದಿನ ಚುನಾವಣೆಯಲ್ಲಿ INDIA ಒಕ್ಕೂಟ ಗೆಲ್ಲದಿದ್ದರೆ ಇಡೀ ದೇಶ ಹರ್ಯಾಣ, ಮಣಿಪುರದಂತಾಗುತ್ತದೆ ಎಂದು ಹೇಳಿದ್ದಾರೆ.

ಇಂದು ಸಿಎಂ ಎಂ.ಕೆ.ಸ್ಟಾಲಿನ್ ಪ್ರಾರಂಭಿಸಿದ  ಪಾಡ್ ಕಾಸ್ಟ್‌ನ ಮೊದಲ ಸಂಚಿಕೆ  ಮಲಯಾಳಂ, ತೆಲುಗು, ಹಿಂದಿ, ಕನ್ನಡ, ತೆಲುಗು ಭಾಷೆಗಳಲ್ಲಿ  ಬಿಡುಗಡೆಯಾಗಿದ್ದು, ಕಳೆದ 9 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಚುನಾವಣೆಗೆ ಮೊದಲು ನೀಡಿದ್ದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳ ಭರವಸೆಯನ್ನು ಈಡೇರಿಸಿಲ್ಲ ಎಂದು ಹೇಳಿದ್ದಾರೆ.

ಜನರಿಗೆ ಭರವಸೆ ನೀಡಿದ 15 ಲಕ್ಷವನ್ನು ಎಕೌಂಟ್‌ಗೆ ಜಮೆ ಮಾಡಿಲ್ಲ. ರೈತರ ಆದಾಯ ದ್ವಿಮುಖವಾಗಿಲ್ಲ. 2 ಕೋಟಿ ಉದ್ಯೋಗ ವಾರ್ಷಿಕವಾಗಿ ಸೃಷ್ಟಿ ಮಾಡವ ಭರವಸೆ ನೀಡಲಾಗಿತ್ತು, ಆದರೆ ಅದನ್ನು ಈಡೇರಿಸಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿಗಳು ತನ್ನ ಪಾಡ್ ಕಾಸ್ಟ್ ಸಂಚಿಕೆಯ ಲೈವ್‌ನಲ್ಲಿ ಹೇಳಿದ್ದಾರೆ.

ಭಾರತ, ಹರ್ಯಾಣ ಅಥವಾ ಮಣಿಪುರದಂತೆ ಆಗದಿರಲು INDIA ಒಕ್ಕೂಟದ ಗೆಲುವು ಅನಿವಾರ್ಯವಾಗಿದೆ ಎಂದು ಮೇ ತಿಂಗಳಿನಲ್ಲಿ ನಡೆದ ಮಣಿಪುರದ ಹಿಂಸಾಚಾರ ಮತ್ತು ಇತ್ತೀಚೆಗೆ ನಡೆದ ಹರ್ಯಾಣ ಹಿಂಸಾಚಾರದ ಬಗ್ಗೆ ಸ್ಟಾಲಿನ್‌ ಮಾತಿನಲ್ಲಿ ಉಲ್ಲೇಖಿಸಿದ್ದಾರೆ.

ಬಹುಸಂಸ್ಕೃತಿ ಮತ್ತು ವೈವಿಧ್ಯಮಯ ಭಾರತವನ್ನು ರೂಪಿಸಿ ಎಂದು ಎಂಕೆ ಸ್ಟಾಲಿನ್ ಜನರಿಗೆ ಕರೆ ನೀಡಿದ್ದು, ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣ, ಏರ್ ಇಂಡಿಯಾ ಮಾರಾಟ, ವಿಮಾನ ನಿಲ್ದಾಣಗಳು ಮತ್ತು ಬಂದರುಗಳನ್ನು ಬಿಜೆಪಿಯ ನಿಕಟವರ್ತಿಗಳಿಗೆ ಹಸ್ತಾಂತರ ಕಾರ್ಯವನ್ನು ಮುಚ್ಚಿಡಲು ಬಿಜೆಪಿ ಕೋಮುವಾದವನ್ನು ಆಶ್ರಯಿಸುತ್ತದೆ ಎಂದು ಆರೋಪಿಸಿದ್ದಾರೆ.

ಸ್ಟಾಲಿನ್‌ ಅವರು ತಮ್ಮ ಭಾಷಣದಲ್ಲಿ ಗುಜರಾತ್‌ ಗಲಭೆಯನ್ನು ಉಲ್ಲೇಖಿಸಿದ್ದಾರೆ. ದ್ವೇಷವನ್ನು 2002ರಲ್ಲಿ ಗುಜರಾತ್‌ನಲ್ಲಿ ತೋರಿಸಲಾಗಿದೆ. ಇದೇ ಕಾರಣದಿಂದ 2023ರಲ್ಲಿ ಹರ್ಯಾಣ ಮತ್ತು ಮಣಿಪುರದಲ್ಲಿ ಹಿಂಸಾಚಾರ ನಡೆದಿದೆ ಎಂದು ಹೇಳಿದ್ದಾರೆ.

ದೇಶದಲ್ಲಿ ಸಾಮಾಜಿಕ ನ್ಯಾಯ, ಶಾಂತಿ ಪುನಸ್ಥಾಪನೆ, ಜಾತ್ಯತೀತತೆ ಮತ್ತು ಸಮಾಜವಾದವನ್ನು ಪುನಃಸ್ಥಾಪಿಸಲು INDIA  ಒಕ್ಕೂಟವನ್ನು ರಚಿಸಲಾಗಿದೆ. ಒಕ್ಕೂಟ ವ್ಯವಸ್ಥೆಗೆ ಅಪಾಯ ಬಂದಾಗಲೆಲ್ಲಾ ಡಿಎಂಕೆ ಯಾವಾಗಲೂ ಮುಂಚೂಣಿಯಲ್ಲಿದೆ ಎಂದು ಎಂಕೆ ಸ್ಟಾಲಿನ್ ಹೇಳಿದರು.

ಇದನ್ನು ಓದಿ: ಜನ ಆಶೀರ್ವಾದ ಯಾತ್ರೆಗೆ ಆಹ್ವಾನಿಸಿದರೂ ಹೋಗುತ್ತಿರಲಿಲ್ಲ; ಬಿಜೆಪಿ ವಿರುದ್ಧ ತಿರುಗಿಬಿದ್ದ ಉಮಾಭಾರತಿ 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...