Homeಸಿನಿಮಾಕ್ರೀಡೆಕ್ರಿಕೆಟ್‌ನ ಹೊಸ ನಿಯಮದಿಂದಾಗಿ ಭಾರತ ಮಹಿಳಾ ತಂಡಕ್ಕೆ ಜಯ: ಇಂಗ್ಲೆಂಡ್ ಎದುರು ಕ್ಲೀನ್‌ಸ್ವೀಪ್ ಸಾಧನೆ

ಕ್ರಿಕೆಟ್‌ನ ಹೊಸ ನಿಯಮದಿಂದಾಗಿ ಭಾರತ ಮಹಿಳಾ ತಂಡಕ್ಕೆ ಜಯ: ಇಂಗ್ಲೆಂಡ್ ಎದುರು ಕ್ಲೀನ್‌ಸ್ವೀಪ್ ಸಾಧನೆ

- Advertisement -
- Advertisement -

ಇಂಗ್ಲೆಂಡ್‌ನ ಲಾರ್ಡ್ಸ್ ಮೈದಾನದಲ್ಲಿ ನಡೆದ ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತ ಮಹಿಳೆಯರ ತಂಡವು 16 ರನ್‌ಗಳ ಗೆಲುವು ಸಾಧಿಸುವ ಮೂಲಕ 3-0 ಅಂತರದಲ್ಲಿ ಸರಣಿಯನ್ನು ಕ್ಲೀನ್‌ಸ್ವೀಪ್ ಮಾಡಿದೆ. ಆ ಮೂಲಕ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಹಿರಿಯ ಆಟಗಾರ್ತಿ ಜೂಲನ್ ಗೋಸ್ವಾಮಿಯವರಿಗೆ ಅರ್ಥಪೂರ್ಣ ವಿದಾಯ ಹೇಳಲಾಯ್ತು. ಈ ಐತಿಹಾಸಿಕ ಸಾಧನೆಗೆ ಕಾರಣವಾದ ಪಂದ್ಯವು ಹಲವು ಹೊಸತನಗಳಿಗೆ ಸಾಕ್ಷಿಯಾಯಿತು.

ವಿವಾದಕ್ಕೆ ಕಾರಣವಾದ ಕೊನೆಯ ವಿಕೆಟ್

ಭಾರತ ಮಹಿಳೆಯರ ತಂಡವು ಮೊದಲು ಬ್ಯಾಟ್ ಮಾಡಿ 45.5 ಓವರ್‌ಗಳಲ್ಲಿ 169 ರನ್‌ಗಳಿಗೆ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡಿತು. ಸಾಧಾರಣ ರನ್ ಗುರಿ ಪಡೆದ ಇಂಗ್ಲೆಂಡ್ ಮಹಿಳಾ ತಂಡವು ಭಾರತದ ಬೌಲಿಂಗ್ ದಾಳಿಗೆ ಬೆದರಿತು. ಒಂದು ಹಂತದಲ್ಲಿ 67 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡಿದ್ದ ಇಂಗ್ಲೆಂಡ್ ಚಾರ್ಲೋಟ್ ಡೀನ್‌ರವರ ತಾಳ್ಮೆಯ ಆಟದಿಂದ ಗೆಲುವಿನ ಸನಿಹಕ್ಕೆ ಬಂದಿತ್ತು. 80 ಎಸೆತಗಳಲ್ಲಿ 47 ರನ್ ಗಳಿಸಿದ್ದ ಡೀನ್ ಗೆಲ್ಲಲು 39 ಎಸೆತಗಳಲ್ಲಿ 17 ರನ್ ಅಗತ್ಯವಿದ್ದಾಗ ಅನಗತ್ಯ ರನ್ ಔಟ್ ಆಗುವ ಮೂಲಕ ಕೊನೆಯ ವಿಕೆಟ್ ಒಪ್ಪಿಸಿ ಸೋಲೊಪ್ಪಿಕೊಂಡರು.

ಆದರೆ ಅವರ ರನ್ ಔಟ್ ಅಥವಾ ಮಕಂಡಿಂಗ್ ಎಂದು ಕರೆಯುವ ಔಟ್‌ ಕುರಿತು ವಿವಾದವೆದ್ದಿದೆ. ಕೆಲವರು ಅದನ್ನು ಕಾನೂನುಬದ್ಧ ಔಟ್ ಎಂದರೆ ಮತ್ತೆ ಕೆಲವರು ಇದು ನಿಜವಾದ ಕ್ರೀಡಾ ಸ್ಪೂರ್ತಿಯಲ್ಲ ಎಂದು ಕರೆದಿದ್ದಾರೆ.

ನಡೆದುದ್ದೇನು

ಇಂಗ್ಲೆಂಡ್ ತಂಡ 153 ರನ್ ಗಳಿಸಿ 9 ವಿಕೆಟ್ ಕಳೆದುಕೊಂಡಿತ್ತು. ಕ್ರೀಸ್‌ನಲ್ಲಿದ್ದ ಚಾರ್ಲೋಟ್ ಡೀನ್‌ ಮತ್ತು ಪ್ರೆಯಾ ಡೆವಿಸ್ 35 ರನ್‌ಗಳ ಜೊತೆಯಾಟದೊಂದಿಗೆ ಉತ್ತಮ ಆಟ ಆಡುತ್ತಿದ್ದರು. ಗೆಲ್ಲಲು 39 ಎಸೆತಗಳಲ್ಲಿ 17 ರನ್ ಅಗತ್ಯವಿತ್ತು. ಭಾರತದ ದೀಪ್ತಿ ಶರ್ಮಾ ಬೌಲಿಂಗ್ ಮಾಡುತ್ತಿದ್ದಾಗ ನಾಲ್ಕನೆ ಎಸೆತ ಎಸೆಯುವ ಮುನ್ನವೇ ನಾನ್‌ ಸ್ಟ್ರೈಕರ್‌ ಎಂಡ್‌ನಲ್ಲಿದ್ದ ಚಾರ್ಲೋಟ್ ಡೀನ್‌ ರನ್ ಗಾಗಿ ಕ್ರೀಸ್ ಬಿಟ್ಟು ಓಡಿದ್ದರು. ಆದರೆ ದೀಪ್ತಿ ಶರ್ಮಾ ಬೌಲ್ ಮಾಡುವ ಬದಲು ನಾನ್‌ ಸ್ಟ್ರೈಕರ್‌ ಎಂಡ್‌ನ ಬೆಲ್ಸ್ ಎಗರಿಸಿದರು. ಅಂಪೈರ್ ಡೆಡ್ ಬಾಲ್ ಸೂಚನೆ ಕೊಟ್ಟಿದ್ದರು. ಆದರೆ ಸಮಾಲೋಚಿಸಿ ಮೂರನೇ ಅಂಪೈರ್ ಮೋರೆ ಹೋದಾಗ ಅವರು ಔಟ್ ಎಂದು ಸೂಚಿಸಿದರು. ಇಂಗ್ಲೆಂಡ್ ತಂಡ ಆಲೌಟ್ ಆಯ್ತು. ಭಾರತ 16 ರನ್‌ಗಳ ಜಯ ಸಾಧಿಸಿ ಸರಣಿ ಕ್ಲೀನ್‌ಸ್ವೀಪ್ ಮಾಡಿತು.

ಪರ ವಿರೋಧದ ಚರ್ಚೆ

ಈ ಕೊನೆಯ ಮಂಕಡಿಂಗ್ ಮೂಲಕ ವಿಕೆಟ್ ಪತನಕ್ಕೆ ಇಂಗ್ಲೆಂಡ್‌ನ ಆಟಗಾರರು ಅಸಮ್ಮತಿ ಸೂಚಿಸಿದ್ದಾರೆ. ಇದು ಕ್ರೀಡಾಸ್ಫೂರ್ತಿಯಲ್ಲ ಎಂದಿದ್ದಾರೆ. ಆದರೆ ಅದು ಕ್ರಿಕೆಟ್ ನಿಯಮಗಳಲ್ಲಿದೆ ಮತ್ತು ನಿಯಮಬದ್ದವಾಗಿದೆ ಎಂದು ಭಾರತದ ನಾಯಕಿ ಹರ್ಮನ್‌ ಪ್ರೀತ್‌ ಕೌರ್ ಸಮರ್ಥಿಸಿಕೊಂಡಿದ್ದಾರೆ.

ಭಾರತದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ನಿಯಮಗಳನ್ನು ಉಲ್ಲೇಖಿಸಿ ಇಂಗ್ಲೆಂಡ್ ಅಭಿಮಾನಿಗಳ ಟೀಕೆಗೆ ಉತ್ತರ ನೀಡಿದ್ದಾರೆ.

ಇದನ್ನೂ ಓದಿ: ಭಾರತಕ್ಕೆ ಚೀತಾಗಳು ಬಂದಿವೆ ಇನ್ನು ಭಯವಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...