Homeಕರ್ನಾಟಕಲೋಕಸಭೆ ಚುನಾವಣೆ: ರಾಜ್ಯದಲ್ಲಿ ‘ಇಂಡಿಯಾ ಮೈತ್ರಿಕೂಟದ ಸಮನ್ವಯ ಸಮಿತಿ' ರಚನೆ

ಲೋಕಸಭೆ ಚುನಾವಣೆ: ರಾಜ್ಯದಲ್ಲಿ ‘ಇಂಡಿಯಾ ಮೈತ್ರಿಕೂಟದ ಸಮನ್ವಯ ಸಮಿತಿ’ ರಚನೆ

- Advertisement -
- Advertisement -

ಲೋಕಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ರಾಜ್ಯದಲ್ಲಿ ‘ಇಂಡಿಯಾ ಮೈತ್ರಿಕೂಟದ ಸಮನ್ವಯ ಸಮಿತಿ’ಯನ್ನು ರಚಿಸಿದೆ. ಕೆಪಿಸಿಸಿಯ ಕಾರ್ಯಾಧ್ಯಕ್ಷ ಮತ್ತು ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದೆ.

ಸಮಿತಿಯ ಸಂಚಾಲಕರಾಗಿ ಕೆಪಿಸಿಸಿಯ ಮಾದ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬುರನ್ನು ನೇಮಿಸಲಾಗಿದೆ, ಸಿಪಿಐ ಕಾರ್ಯದರ್ಶಿ ಸಾತಿ ಸುಂದರೇಶ್, ಸಿಪಿಎಂ ಕಾರ್ಯದರ್ಶಿ ಬಸವರಾಜು, ಆಮ್ ಆದ್ಮಿ ಪಕ್ಷದ ಪ್ರಧಾನ ಕಾರ್ಯದರ್ಶಿ ಸಂಚಿತ್ ಸಹಾನೀ, ಸಮಾಜವಾದಿ ಪಕ್ಷದ ಅಧ್ಯಕ್ಷ ಮಂಜಪ್ಪ ಯಾದವ್, ಡಿಎಂಕೆ ಕಾರ್ಯದರ್ಶಿ ರಾಮಸ್ವಾಮಿ ನಟೇಶನ್, ಎನ್‍ಸಿಪಿ (ಶರದ್ ಪವಾರ್) ಅಧ್ಯಕ್ಷ ಸಿ.ಎಸ್. ಇನಾಮ್ಹಾರ್, ಸಿಪಿಐ(ಎಂಎಲ್)ನ ಕಾರ್ಯದರ್ಶಿ ಕ್ಲಿಪ್ಪನ್ ಡಿ.ರೊಜೆರಿಯೋ, ಫಾರ್‍ವರ್ಡ್‍ಬ್ಲಾಕ್‍ನ ಕಾರ್ಯದರ್ಶಿ ಶಿವಶಂಕರ್ ಜಿ.ಆರ್, ಐಯುಎಂಎಲ್‍ನ ಅಧ್ಯಕ್ಷ ಜಾವಿದುಲ್ಲಾ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆ ಇಂಡಿಯಾ ಬಣ ಕರ್ನಾಟಕದಲ್ಲಿ ಅಸ್ತಿತ್ವದಲ್ಲಿರುವ 10 ರಾಜಕೀಯ ಪಕ್ಷಗಳ ಬೆಂಬಲ ಪಡೆಯಲು ಚರ್ಚೆ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷರು ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ಹಿಂದೆ ಹೇಳಿದ್ದರು.

ತುಮಕೂರಿನಲ್ಲಿ 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಒಟ್ಟಾಗಿ ಸ್ಪರ್ಧಿಸಿದ್ದವು, ಸಿಪಿಐ ಪಕ್ಷವು 17,000 ಮತಗಳನ್ನು ಗಳಿಸಿತ್ತು ಮತ್ತು ದೇವೇಗೌಡರು ಕೇವಲ 12,000 ಮತದಾನದ ಅಂತರದಿಂದ ಚುನಾವಣೆಯಲ್ಲಿ ಸೋತರು. 2024ರ ಚುನಾವಣೆಯಲ್ಲಿ ಅಂತಹ ಪರಿಸ್ಥಿತಿ ನಮಗೆ ಬೇಕಾಗಿಲ್ಲ. ಆದ್ದರಿಂದ, ನಾವು ಎಲ್ಲಾ ಮೈತ್ರಿ ಪಕ್ಷಗಳ ಜೊತೆ ಮಾತುಕತೆ ನಡೆಸುತ್ತಿದ್ದೇವೆ. ಒಗ್ಗಟ್ಟಿನಿಂದ ಕೆಲಸ ಮಾಡಲು, ನಾವು ಈ ಬಗ್ಗೆ ಚರ್ಚಿಸುತ್ತಿದ್ದೇವೆ ಎಂದು ಹೇಳಿದ್ದರು.

‘ಇಂಡಿಯಾ’ ಒಕ್ಕೂಟದಿಂದ ಕಾಂಗ್ರೆಸ್‌ಗೆ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲೂ ಅನುಕೂಲವಾಗಲಿದೆ. ರಾಜಕಾರಣದಲ್ಲಿ 49 ಎಂದರೆ ಸೊನ್ನೆ, 51 ಎಂದರೆ ನೂರು ಎಂದರ್ಥ. ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಧ್ರುವನಾರಾಯಣ್ 1 ಮತದಿಂದ ಗೆದ್ದಿದ್ದರು. ದಿನೇಶ್ ಗುಂಡೂರಾವ್ ಅಲ್ಪ ಮತಗಳ ಅಂತರದಲ್ಲೇ ಗೆದ್ದರು. ಸೌಮ್ಯಾ ರೆಡ್ಡಿ 16 ಮತಗಳಿಂದ ಸೋತರು, ಹೀಗಾಗಿ ಒಂದೊಂದು ಮತವೂ ಮುಖ್ಯ ಎಂದು ಹೇಳಿದ್ದರು.

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್‌ ಮತ್ತು ಬಿಜೆಪಿ ಮೈತ್ರಿಯಾಗಿ ಸ್ಪರ್ಧಿಸುತ್ತಿದ್ದರೆ, ಕಾಂಗ್ರೆಸ್‌ ಏಕಾಂಗಿಯಾಗಿ ಸ್ಪರ್ಧೆಯನ್ನು ಎದುರಿಸುತ್ತಿದೆ. ಈ ಮಧ್ಯೆ ಕಾಂಗ್ರೆಸ್‌ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಸಣ್ಣ ಸಣ್ಣ ಪಕ್ಷಗಳ ಬೆಂಬಲವನ್ನು ಕೂಡ ಪಡೆಯಲು ಮುಂದಾಗಿದೆ. ಮತ ವಿಭಜನೆಯನ್ನು ತಡೆಗಟ್ಟಲು ಮಹತ್ವದ ತಂತ್ರವನ್ನು ರೂಪಿಸುತ್ತಿದೆ.

ಇದನ್ನು ಓದಿ: ಲೆಬನಾನ್‌ ಮೇಲೆ ಇಸ್ರೇಲ್‌ನಿಂದ ವೈಮಾನಿಕ ದಾಳಿ: ಹೆಚ್ಚಿದ ಪ್ರಾದೇಶಿಕ ಸಂಘರ್ಷದ ಭೀತಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...