Homeಮುಖಪುಟಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಭಾರತ ಮತ್ತು ಚೀನಾ ಪಡೆಗಳ ಕಾದಾಟ

ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಭಾರತ ಮತ್ತು ಚೀನಾ ಪಡೆಗಳ ಕಾದಾಟ

- Advertisement -
- Advertisement -

ಕಳೆದ ವಾರ ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನ ಯಾಂಗ್ಟ್ಸೆ ಬಳಿ ಭಾರತೀಯ ಮತ್ತು ಚೀನಾ ಸೈನಿಕರ ನಡುವೆ ಸಣ್ಣ ಮಟ್ಟಿನ ಕಾದಾಟ ನಡೆದಿತ್ತು ಎಂದು ವರದಿಯಾಗಿದೆ. ನಂತರ, ಸ್ಥಾಪಿತ ಮಾರ್ಗಸೂಚಿಗಳ ಪ್ರಕಾರ ಉಭಯ ಪಕ್ಷಗಳ ಸ್ಥಳೀಯ ಕಮಾಂಡರ್‌ಗಳ ನಡುವೆ ಮಾತುಕತೆ ನಡೆದು ಪರಿಸ್ಥಿತಿಯನ್ನು ನಿಯಂತ್ರಿಸಲಾಯಿತು ಎಂದು, ಬೆಳವಣಿಗೆಯ ಬಗ್ಗೆ ತಿಳಿದಿರುವ ಮೂಲಗಳು ಶುಕ್ರವಾರ ತಿಳಿಸಿದೆ ಎಂದು TNIE ವರದಿ ಮಾಡಿದೆ.

ಚೀನಾದ ಗಸ್ತು ಪಡೆ ಭಾರತೀಯ ಪ್ರದೇಶವನ್ನು ಪ್ರವೇಶಿಸಲು ಯತ್ನಿಸಿತ್ತು. ಅವರನ್ನು ಮತ್ತೆ ವಾಪಾಸು ತೆರಳುವಂತೆ ಮಾಡುವಾಗ ಈ ಕಾದಾಟ ನಡೆದಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಪೂರ್ವ ಲಡಾಖ್‌‌ನಲ್ಲಿ ಸೇನಾ ನಿಯೋಜನೆ ಹೆಚ್ಚಿಸಿದ ಚೀನಾ: ಭಾರತೀಯ ಸೇನಾ ಮುಖ್ಯಸ್ಥರ ಹೇಳಿಕೆ

ಪೂರ್ವ ಲಡಾಖ್‌ನಲ್ಲಿ ಉಭಯ ಸೈನ್ಯದ ನಡುವೆ ಮತ್ತೊಂದು ಸುತ್ತಿನ ಉನ್ನತ ಮಟ್ಟದ ಮಿಲಿಟರಿ ಮಾತುಕತೆಗೆ ಕೆಲವೆ ದಿನಗಳಲ್ಲಿ ನಡೆಯಲಿದೆ. ಅದಕ್ಕೂ ಮೊದಲು ಈ ಘಟನೆ ಬೆಳಕಿಗೆ ಬಂದಿದೆ. ಮುಂದಿನ ಮೂರು-ನಾಲ್ಕು ದಿನಗಳಲ್ಲಿ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತುಕತೆಗಳು ನಡೆಯುವ ಸಾಧ್ಯತೆಯಿದೆ ಎಂದು ಮೂಲ ತಿಳಿಸಿದೆ.

ಎರಡು ಕಡೆಯ ಸೈನಿಕರು ತಮ್ಮ ಗ್ರಹಿಕೆಯ ವ್ಯಾಪ್ತಿಯವರೆಗೆ ಗಸ್ತು ಚಟುವಟಿಕೆಗಳನ್ನು ಕೈಗೊಳ್ಳುತ್ತಾರೆ. ಸೈನ್ಯವು ಕಾದಾಟ ನಡೆಸಿದಾಗೆಲ್ಲಾ, ಸ್ಥಾಪಿತ ಮಾರ್ಗಸೂಚಿಗಳ ಪ್ರಕಾರ ಪರಿಸ್ಥಿತಿಯನ್ನು ನಿಯಂತ್ರಿಸಲಾಗುತ್ತದೆ ಎಂದು ಹೇಳಲಾಗಿದೆ. ಪ್ರಸ್ತುತ ನಡೆದಿರುವ ಕಾದಾಟದಲ್ಲಿ ಯಾವುದೆ ಭದ್ರತಾ ಪಡೆಗಳಿಗೆ ಯಾವುದೆ ಹಾನಿಯಾಗಿಲ್ಲ ಎಂದು ಮೂಲ ತಿಳಿದೆ.

“ಭಾರತ-ಚೀನಾ ಗಡಿಯನ್ನು ಔಪಚಾರಿಕವಾಗಿ ಗುರುತಿಸಲಾಗಿಲ್ಲ. ಆದ್ದರಿಂದ, ದೇಶಗಳ ನಡುವೆ ವಾಸ್ತವ ನಿಯಂತ್ರಣ ರೇಖೆಯ (LAC) ಗ್ರಹಿಕೆಯಲ್ಲಿ ವ್ಯತ್ಯಾಸವಿದೆ” ಎಂದು ಮೂಲ ತಿಳಿಸಿದೆ ಎಂದು TNIE ವರದಿ ಹೇಳಿದೆ. ಎರಡು ದೇಶಗಳ ನಡುವೆ ಅಸ್ತಿತ್ವದಲ್ಲಿರುವ ಒಪ್ಪಂದಗಳು ಮತ್ತು ಮಾರ್ಗಸೂಚಿಗಳ ಅನುಸರಣೆಯಿಂದ ವಿಭಿನ್ನ ಗ್ರಹಿಕೆಗಳ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಾಧ್ಯ ಎಂದು ಅವರು ಹೇಳಿದ್ದಾರೆ.

ಸುಮಾರು 17 ತಿಂಗಳುಗಳ ಕಾಲ ಪೂರ್ವ ಲಡಾಖ್‌ನ ಎಲ್‌ಎಸಿ ಉದ್ದಕ್ಕೂ ಹಲವು ಪ್ರದೇಶಗಳಲ್ಲಿ ಭಾರತೀಯ ಮತ್ತು ಚೀನಾದ ಸೇನಾಪಡೆಗಳ ನಡುವೆ ಘರ್ಷಣೆ ನಿರಂತರವಾಗಿ ಮುಂದುವರೆದಿದೆ.

ಇದನ್ನೂ ಓದಿ: ಭಾರತ-ಚೀನಾ ಗಡಿ: ಅರುಣಾಚಲ ಪ್ರದೇಶದಲ್ಲಿ ಒಂದು ಪುಟ್ಟ ಗ್ರಾಮವನ್ನೇ ನಿರ್ಮಿಸಿದ ಚೀನಾ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...