Homeಕರೋನಾ ತಲ್ಲಣಕೊರೊನಾ ವಿರುದ್ದ ಹೋರಾಟಕ್ಕೆ ತಾತ್ಕಾಲಿಕ ಆಸ್ಪತ್ರೆ ಸ್ಥಾಪಿಸಲಿರುವ ಭಾರತೀಯ ಸೇನೆ

ಕೊರೊನಾ ವಿರುದ್ದ ಹೋರಾಟಕ್ಕೆ ತಾತ್ಕಾಲಿಕ ಆಸ್ಪತ್ರೆ ಸ್ಥಾಪಿಸಲಿರುವ ಭಾರತೀಯ ಸೇನೆ

- Advertisement -
- Advertisement -

ಭಾರತೀಯ ಸೇನೆಯು ತನ್ನ ವೈದ್ಯಕೀಯ ಸಿಬ್ಬಂದಿಯನ್ನು ರಾಜ್ಯ ಸರ್ಕಾರಗಳಿಗೆ ಲಭ್ಯವಾಗುವಂತೆ ಮಾಡುತ್ತಿದೆ ಮತ್ತು ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ದೇಶದ ವಿವಿಧ ಭಾಗಗಳಲ್ಲಿ ತಾತ್ಕಾಲಿಕ ಆಸ್ಪತ್ರೆಗಳನ್ನು ಸ್ಥಾಪಿಸುತ್ತಿದೆ ಎಂದು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾನೆ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದಾರೆ.

ಕೊರೊನಾ ನಿರ್ವಹಣೆಗೆ ಸೇನೆಯ ಸನ್ನದ್ಧತೆ ಮತ್ತು ಉಪಕ್ರಮಗಳನ್ನು ಪ್ರಧಾನಿ ಮೋದಿ ಸಭೆಯಲ್ಲಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಜನರ ಗಮನ ಬೇರೆಡೆ ಸೆಳೆಯಲು ರೋಮ್‌ ಚಕ್ರವರ್ತಿಗಳು ಗ್ಲಾಡಿಯೇಟರ್‌‌ಗಳನ್ನು ಆಡಿಸುತ್ತಿದ್ದರು, ನಮಗೆ ಐಪಿಎಲ್ ಇದೆ!

ಸೈನ್ಯವು ನಾಗರಿಕರಿಗಾಗಿ ತನ್ನ ಆಸ್ಪತ್ರೆಗಳನ್ನು ಎಲ್ಲಿ ಸಾಧ್ಯವೋ ಅಲ್ಲಿ ತೆರೆಯುತ್ತಿದೆ. ನಾಗರಿಕರು ತಮ್ಮ ಹತ್ತಿರದ ಸೇನಾ ಆಸ್ಪತ್ರೆಗಳನ್ನು ಸಂಪರ್ಕಿಸಬಹುದು ಎಂದು ಎಂ.ಎಂ. ನರವಾನೆ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಆಮದು ಮಾಡಿದ ಆಮ್ಲಜನಕ ಟ್ಯಾಂಕರ್‌ಗಳು ಮತ್ತು ವಾಹನಗಳನ್ನು ನಿರ್ವಹಿಸಲು ಸೈನ್ಯವು ಸಹಾಯ ಮಾಡುತ್ತಿದೆ” ಎಂದು ಜನರಲ್ ಎಂಎಂ ನಾರವಾನೆ ಪ್ರಧಾನ ಮಂತ್ರಿಗೆ ತಿಳಿಸಿದ್ದಾರೆ.

ದೇಶದಲ್ಲಿ ಕೊರೊನಾ ಎರಡನೆ ಅಲೆ ತೀವ್ರವಾಗಿ ಹರಡುತ್ತಿದ್ದು, ದೇಶದಲ್ಲಿ ಇರುವರೆಗೂ 1.84 ಕೋಟಿ ಜನರಲ್ಲಿ ಸೋಂಕು ವರದಿಯಾಗಿದೆ. ಕೊರೊನಾದಿಂದಾಗಿ ದೇಶದಾದ್ಯಂತ ಎರಡು ಲಕ್ಷಕ್ಕಿಂತ ಹೆಚ್ಚಿನ ಜನರು ಮೃತಪಟ್ಟಿದ್ದಾರೆ. 1.5 ಕೋಟಿ ಜನರು ಇದುವರೆಗೂ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ಇದನ್ನೂ ಓದಿ: ಊರಲ್ಲಿ ಅಂತ್ಯಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ, ಹೆಂಡತಿಯ ಶವವನ್ನು ಸೈಕಲ್‌ನಲ್ಲಿ ಒಯ್ಯುತ್ತ ಮುಗ್ಗರಿಸಿದ ವೃದ್ದ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ನೀವು ನಮ್ಮ ಬೆನ್ನೆಲುಬು; ಪಕ್ಷದ ಡಿಎನ್‌ಎ..’; ಕಾಂಗ್ರೆಸ್ ಕಾರ್ಯಕರ್ತರಿಗೆ ರಾಹುಲ್ ಗಾಂಧಿ ಸಂದೇಶ

0
ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಮುನ್ನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಪಕ್ಷದ ಕಾರ್ಯಕರ್ತರಿಗೆ ಹೃದಯಸ್ಪರ್ಶಿ ಸಂದೇಶವೊಂದನ್ನು ಪೋಸ್ಟ್ ಮಾಡಿದ್ದಾರೆ. ಕಾಂಗ್ರೆಸ್‌ನ ಅಧಿಕೃತ ಹ್ಯಾಂಡಲ್‌ನಿಂದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ರಾಹುಲ್ ಗಾಂಧಿ,...