Homeಮುಖಪುಟಆಸ್ಕರ್ ವೇದಿಕೆಯಲ್ಲಿ ದೀಪಿಕಾ ಪಡುಕೋಣೆ ಸೇರಿ ಭಾರತೀಯರ ಸಂಭ್ರಮ: ನಾಟು ನಾಟು ಹಾಡಿಗೆ ನೃತ್ಯ

ಆಸ್ಕರ್ ವೇದಿಕೆಯಲ್ಲಿ ದೀಪಿಕಾ ಪಡುಕೋಣೆ ಸೇರಿ ಭಾರತೀಯರ ಸಂಭ್ರಮ: ನಾಟು ನಾಟು ಹಾಡಿಗೆ ನೃತ್ಯ

- Advertisement -
- Advertisement -

ಅಮೆರಿಕದ ಲಾಸ್‌ ಏಂಜಲೀಸ್‌ನಲ್ಲಿ ನಡೆಯುತ್ತಿರುವ 95ನೇ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾರತೀಯರ ಸಂಭ್ರಮಾಚರಣೆ ಜೋರಾಗಿತ್ತು. ಭಾರತಕ್ಕೆ ಎರಡು ಆಸ್ಕರ್ ಪ್ರಶಸ್ತಿಗಳು ಲಭಿಸಿವೆ. ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ಗೆ ಸಾಕ್ಷ್ಯಚಿತ್ರ ವಿಭಾಗದಲ್ಲಿ ಪ್ರಶಸ್ತಿ ಲಭಿಸಿದೆ. ಮತ್ತೊಂದು, ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

ಸಮಾರಂಭದಲ್ಲಿ ನಿರೂಪಣೆ ಮಾಡಿದ ದೀಪಿಕಾ ಪಡುಕೋಣೆ ಅವರು,  RRR ಚಿತ್ರದ ನಾಟು ನಾಟು ಹಾಡಿಗೆ ಅತ್ಯುತ್ತಮ ಮೂಲ ಗೀತೆ ವಿಭಾಗದಲ್ಲಿ ಆಸ್ಕರ್‌ ಪ್ರಶಸ್ತಿಯನ್ನು ಗೆದ್ದಿದೆ ಎಂದು ಅನೌನ್ಸ್‌ ಮಾಡುವಾಗ ಹಾಡಿನ ಬಗ್ಗೆ ಪರಿಚಯಿಸಿದರು. ಆಸ್ಕರ್‌ನಲ್ಲಿ ಬೆಸ್ಟ್ ಒರಿಜಿನಲ್ ಸಾಂಗ್ ವರ್ಗಕ್ಕೆ ನಾಮನಿರ್ದೇಶನಗೊಂಡ ಮೊದಲ ಭಾರತೀಯ ಮೂಲ ಗೀತೆಯಾಗಿದೆ. ಈ ಕ್ಷಣವನ್ನು ನಾವು ಶಾಶ್ವತವಾಗಿ ನೆನಪಿನಲ್ಲಿಟ್ಟುಕೊಳ್ಳುತ್ತೇವೆ ಎಂದರು. ಈ ಐತಿಹಾಸಿಕ ಕ್ಷಣದಲ್ಲಿ ದೀಪಿಕಾ ಪಡುಕೋಣೆ ಅವರು ಭಾವುಕರಾದರು. ನಾಟು ನಾಟು ಹಾಡಿಗೆ ಪ್ರಶಸ್ತಿ ಸಿಕ್ಕಿದೆ ಎಂದು ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯ ಸದ್ದು ಜೋರಾಗಿತ್ತು.

ಈ ವೇಳೆ ವೇದಿಕೆ ಮೇಲೆ ನಾಟು ನಾಟು ಹಾಡು ಹಾಡುತ್ತ ನೃತ್ಯ ಮಾಡಿ ಸಂಭ್ರಮಿಸಿದರು. ಒಂದೆಡೆ ಭಾರತೀಯ ಚಿತ್ರರಂಗದ ಹೆಸರಾಂತ ನಟಿಯ ನಿರೂಪಣೆ ಮತ್ತೊಂದೆಡೆ ಎರಡು ಆಸ್ಕರ್ ಪ್ರಶಸ್ತಿಗಳು ಭಾರತಕ್ಕೆ ಬಂದಿವೆ. ಇದು ಇಡೀ ಭಾರತೀಯರ ಸಂಭ್ರಮಕ್ಕೆ ಕಾರಣವಾಗಿದೆ.

‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರಕ್ಕೆ ಆಸ್ಕರ್

‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರವನ್ನು ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶಿಸಿದ್ದಾರೆ. ಸಿಖ್ಯ ಎಂಟರ್‌ಟೈನ್‌ಮೆಂಟ್‌ನ ಗುನೀತ್ ಮೊಂಗಾ ಮತ್ತು ಅಚಿನ್ ಜೈನ್ ನಿರ್ಮಾಣದಲ್ಲಿ ಈ ಕಿರು ಚಿತ್ರ ಮೂಡಿಬಂದಿದೆ. ಚಿತ್ರದಲ್ಲಿ ಎರಡು ಆನೆಗಳು ಮತ್ತು ಅವುಗಳ ಪಾಲಕರ ನಡುವಿನ ಅವಿನಾಭಾವ ಸಂಬಂಧವನ್ನು ಅಮೋಘವಾಗಿ ಚಿತ್ರಿಸಲಾಗಿದೆ.

ಮುದುಮಲೈ ರಾಷ್ಟ್ರೀಯ ಉದ್ಯಾನವನದಲ್ಲಿ ನಿರ್ಮಿಸಲಾದ ಈ ಸಾಕ್ಷ್ಯಚಿತ್ರದಲ್ಲಿ ಸ್ಥಳೀಯ ದಂಪತಿಗಳಾದ ಬೊಮ್ಮನ್ ಮತ್ತು ಬೆಳ್ಳಿಯ ಆರೈಕೆಯಲ್ಲಿ ಬೆಳೆದ ರಘು ಎಂಬ ಅನಾಥ ಆನೆ ಮರಿಯ ಕಥೆ ಹೇಳಲಾಗಿದೆ. ಈ ಸಾಕ್ಷ್ಯಚಿತ್ರವು ಆನೆ ಮತ್ತು ಆ ದಂಪತಿ ನಡುವೆ ಬೆಳೆಯುವ ಬಾಂಧವ್ಯವನ್ನು ಮಾತ್ರವಲ್ಲದೆ ಅವರ ಸುತ್ತಮುತ್ತಲಿನ ನೈಸರ್ಗಿಕ ಸೌಂದರ್ಯ ವರ್ಣಿಸುವ ಕಥೆಯಾಗಿದೆ. ಇದು ನೆಟ್‌ಫ್ಲಿಕ್ಸ್ ಓಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ.

ಇದನ್ನೂ ಓದಿ: ಭಾರತಕ್ಕೆ ಎರಡು ಆಸ್ಕರ್: ತಮಿಳಿನ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಚಿತ್ರ, RRR ಚಿತ್ರದ ನಾಟು ನಾಟು ಹಾಡಿಗೆ ಪ್ರಶಸ್ತಿ

ಕಾರ್ತಿಕಿ ಗೊನ್ಸಾಲ್ವೆಸ್ ನಿರ್ದೇಶನದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಜೊತೆಗೆ ‘ಬೆಸ್ಟ್ ಡಾಕ್ಯುಮೆಂಟರಿ ಶಾರ್ಟ್’ ಫಿಲ್ಮ್’ ವಿಭಾಗದಲ್ಲಿ ‘ಹಾಲ್‌ ಔಟ್’, ‘ಹೌ ಡು ಯು ಮೆಷರ್‌ ಎ ಈಯರ್?’, ‘ದಿ ಮಾರ್ಥಾ ಮಿಚೆಲ್ ಎಫೆಕ್ಟ್’, ‘ಸ್ಟ್ರೇಂಜರ್ ಅಟ್ ದಿ ಗೇಟ್’ ಸಾಕ್ಷ್ಯಚಿತ್ರಗಳು ನಾಮನಿರ್ದೇಶನಗೊಂಡಿದ್ದವು. ಅಂತಿಮವಾಗಿ ಭಾರತದ ‘ದಿ ಎಲಿಫೆಂಟ್ ವಿಸ್ಪರರ್ಸ್’ ಸಾಕ್ಷ್ಯಿಚಿತ್ರವು ಪ್ರಶಸ್ತಿ ಪಡೆಯುವಲ್ಲಿ ಸಫಲವಾಗಿದೆ.

RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ

ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ RRR ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಸಿಕ್ಕಿದೆ. ‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’,’ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ​ ಹಾಡುಗಳು  ಪ್ರಶಸ್ತಿಗೆ ಪೈಪೋಟಿ ನಡೆಸಿದ್ದವು, ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

ಈ ಕಾರ್ಯಕ್ರಮದಲ್ಲಿ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ. ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದ್ದವು. ಬಾಲಿವುಡ್ ನಟಿ  ಈ ಕಾರ್ಯಕ್ರಮದ ನಿರೂಪಣೆ ಮಾಡಿರುವುದು ಭಾರತಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...