Homeಮುಖಪುಟಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶ ಜಾರಿಗೂ ಮುನ್ನ ಸಿಸೇರಿಯನ್ ಹೆರಿಗೆಗೆ ಧಾವಿಸುತ್ತಿರುವ...

ಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶ ಜಾರಿಗೂ ಮುನ್ನ ಸಿಸೇರಿಯನ್ ಹೆರಿಗೆಗೆ ಧಾವಿಸುತ್ತಿರುವ ಮಹಿಳೆಯರು

- Advertisement -
- Advertisement -

‘ಜನ್ಮದತ್ತ ಪೌರತ್ವ ಹಕ್ಕು’ ರದ್ದುಗೊಳಿಸುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿ ಹಾಕಿರುವುದು ಭಾರತೀಯರು ಸೇರಿದಂತೆ ಲಕ್ಷಾಂತರ ವಲಸಿಗರ ಆತಂಕಕ್ಕೆ ಕಾರಣವಾಗಿದೆ.

ವಿಶೇಷವಾಗಿ ಹೆಚ್‌-1ಬಿ ಅಧಿಕೃತ ವಲಸಿಗರ ವೀಸಾ ಹೊಂದಿರುವ ಭಾರತದ ಲಕ್ಷಾಂತರ ದಂಪತಿಗಳು ಚಿಂತೆಗೆ ಈಡಾಗಿದ್ದಾರೆ. ವಲಸಿಗ ಗರ್ಭಿಣಿಯರು ತಮಗೆ ಹುಟ್ಟುವ ಮಕ್ಕಳಿಗೆ ಜನ್ಮದತ್ತ ಅಮೆರಿಕದ ಪೌರತ್ವ ಸಿಗುವ ನಿರೀಕ್ಷೆಯಲ್ಲಿದ್ದರು. ಟ್ರಂಪ್ ಆದೇಶ ಅವರ ಲೆಕ್ಕಾಚಾರಗಳನ್ನು ತಲೆ ಕೆಳಗಾಗಿಸಿದೆ.

ವರದಿಗಳ ಪ್ರಕಾರ, ಟ್ರಂಪ್ ಆದೇಶಕ್ಕೆ ಅಮೆರಿಕದ ಫೆಡರಲ್ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಅದು ಒಂದು ವೇಳೆ ತೆರವಾದರೆ, ಫೆಬ್ರವರಿ 20 ರಿಂದ ಟ್ರಂಪ್ ಕಾರ್ಯಕಾರಿ ಆದೇಶಗಳು ಜಾರಿಗೆ ಬರಲಿವೆ. ಅದಕ್ಕೂ ಮುನ್ನ ಸಿಸೇರಿಯನ್ (ಸಿ-ಸೆಕ್ಷನ್ಸ್) ಮೂಲಕ ಹೆರಿಗೆ ಮಾಡಿಸಿಕೊಂಡು ಮಕ್ಕಳಿಗೆ ಪೌರತ್ವ ಪಡೆಯಲು ಮಹಿಳೆಯರು ಮುಂದಾಗಿದ್ದಾರೆ.

ವಿಶೇಷವಾಗಿ ಭಾರತೀಯ ವಲಸಿಗ ಗರ್ಭಿಣಿಯರು ಸಿಸೇರಿಯನ್ ಹೆರಿಗೆ ಸಂಬಂಧ ವೈದ್ಯರನ್ನು ಸಂಪರ್ಕಿಸುತ್ತಿದ್ದಾರೆ. ಕ್ಲೀನಿಕ್‌ಗಳ ಮುಂದೆ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಒಬ್ಬರು ಭಾರತೀಯ ಮೂಲದ ಸ್ತ್ರೀರೋಗತಜ್ಞ ಸಿಸೇರಿಯನ್ ಹೆರಿಗೆ ಸಂಬಂಧ 20 ಕರೆಗಳನ್ನು ಸ್ವೀಕರಿಸಿರುವುದಾಗಿ ಹೇಳಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ (ಜ.21) ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿರುವ ಹಲವು ಮಹತ್ವದ ಕಾರ್ಯಕಾರಿ ಆದೇಶಗಳಲ್ಲಿ ‘ಜನ್ಮದತ್ತ ಪೌರತ್ವ’ ಹಕ್ಕು ಕೊನೆಗೊಳಿಸುವ ಆದೇಶವೂ ಒಂದು.

ಅಮೆರಿಕದಲ್ಲಿ ತಾತ್ಕಾಲಿಕ ಹೆಚ್‌-1ಬಿ ಮತ್ತು ಎಲ್‌1 ವೀಸಾಗಳ ಮೇಲೆ ಕೆಲಸ ಮಾಡುತ್ತಿರುವ ಲಕ್ಷಾಂತರ ಭಾರತೀಯರಿದ್ದಾರೆ. ಈ ಪೈಕಿ ಹೆಚ್ಚಿನವರು ಅಮೆರಿಕದಲ್ಲಿ ಶಾಶ್ವತ ವಾಸಕ್ಕೆ ಅವಕಾಶ ಕಲ್ಪಿಸುವ ಗ್ರೀನ್ ಕಾರ್ಡ್‌ ಪಡೆಯಲು ಕ್ಯೂನಲ್ಲಿದ್ದಾರೆ. ಟ್ರಂಪ್ ಆದೇಶದಿಂದ ಇನ್ನು ಮುಂದೆ ಪೋಷಕರಲ್ಲಿ ಯಾರದರು ಒಬ್ಬರು ಅಮೆರಿಕದ ನಾಗರಿಕ ಅಥವಾ ಗ್ರೀನ್ ಕಾರ್ಡ್ ಹೊಂದಿರುವವರು ಅಲ್ಲದೇ ಇದ್ದರೆ, ಅಂತಹ ಮಕ್ಕಳಿಗೆ ಜನ್ಮದತ್ತ ಪೌರತ್ವ ಸಿಗುವುದಿಲ್ಲ.

ನ್ಯೂಜೆರ್ಸಿಯಲ್ಲಿ ಹೆರಿಗೆ ಆಸ್ಪತ್ರೆ ಹೊಂದಿರುವ ಭಾರತದ ವೈದ್ಯ ಡಾ. ಎಸ್. ಡಿ. ರಾಮಾ ಅವರಿಗೆ ಎಂಟು ಮತ್ತು ಒಂಭತ್ತು ತಿಂಗಳು ತುಂಬಿರುವ ಹಲವು ಗರ್ಭಿಣಿಯರಿಂದ ಸಿಸೇರಿಯನ್ ಹೆರಿಗೆ ಮಾಡಿಸಲು ಕೋರಿಕೆ ಬಂದಿದೆ. ಕೆಲ ಗರ್ಭಿಣಿಯರು ತಿಂಗಳು ಭರ್ತಿಯಾಗದಿದ್ದರೂ ಹೆರಿಗೆ ಮಾಡಿಸಲು ಕೋರುತ್ತಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಏಳು ತಿಂಗಳ ಗರ್ಭಿಣಿಯೊಬ್ಬರು ತನ್ನ ಪತಿಯೊಂದಿಗೆ ಅವಧಿಪೂರ್ವ ಹೆರಿಗೆಗೆ ನೋಂದಣಿ ಮಾಡಿಕೊಳ್ಳಲು ಬಂದಿದ್ದರು. ಮಾರ್ಚ್‌ವರೆಗೆ ಅವಳಿಗೆ ಹೆರಿಗೆ ಆಗುವುದಿಲ್ಲ” ಎಂದು ಡಾ. ರಮಾ ಹೇಳಿದ್ದಾಗಿ ಟೈಮ್ಸ್ ಆಫ್ ಇಂಡಿಯಾ ತಿಳಿಸಿದೆ.

ಟೆಕ್ಸಾಸ್‌ನ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಎಸ್.ಜಿ ಮುಕ್ಕಳ ಅವರು ಅವಧಿಪೂರ್ವ ಹೆರಿಗೆಯ ಅಪಾಯಗಳ ಕುರಿತು ತಮ್ಮ ಕಳವಳ ವ್ಯಕ್ತಪಡಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ ಸುಮಾರು 20 ಜೋಡಿಗಳೊಂದಿಗೆ ಮಾತನಾಡಿದ್ದೇನೆ ಎಂದು ಅವರು ಟೈಮ್ಸ್ ಆಫ್ ಇಂಡಿಯಾಗೆ ಹೇಳಿದ್ದಾರೆ.

ಸಿಸೇರಿಯನ್ ಹೆರಿಗೆ ಸಾಧ್ಯವಾದರೂ, ಅವಧಿಪೂರ್ಣ ಅದನ್ನು ಮಾಡಿಸದಂತೆ ನಾನು ದಂಪತಿಗಳಿಗೆ ತಿಳಿಸುವ ಪ್ರಯತ್ನ ಮಾಡುತ್ತಿದ್ದೇನೆ. ಪೌರತ್ವ ಕಳೆದುಕೊಳ್ಳುವ ದಾವಂತದಲ್ಲಿ ಅವಧಿಪೂರ್ಣ ಹೆರಿಗೆ ಮಾಡಿಸುವುದರಿಂದ ತಾಯಿ ಮತ್ತು ಮಗುವಿನ ಜೀವಕ್ಕೆ ಅಪಾಯವಿದೆ. ಒಂದು ಮಗುವನ್ನು ಹೊರ ತೆಗೆದರೂ, ಅದು ಶ್ವಾಸಕೋಶ, ಕಡಿಮೆ ತೂಕ, ನರದ ಸಮಸ್ಯೆಗಳನ್ನು ಎದುರಿಸಬಹುದು ಎಂದು ಡಾ. ಮುಕ್ಕಳ ಆತಂಕ ವ್ಯಕ್ತಪಡಿಸಿದ್ದಾರೆ.

ಜನ್ಮದತ್ತ ಪೌರತ್ವ ಹಕ್ಕು ರದ್ದು | ಟ್ರಂಪ್ ಆದೇಶಕ್ಕೆ ಅಮೆರಿಕ ಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...