Homeಮುಖಪುಟಜಾಗತಿಕ ನಿರ್ಬಂಧ ಆದೇಶದಿಂದ ಇತರ ದೇಶಗಳ ಸಾರ್ವಭೌಮತ್ವಕ್ಕೆ ಅಡ್ಡಿ : ಹೈಕೋರ್ಟ್‌ಗೆ ವಿವರಿಸಿದ ಎಕ್ಸ್

ಜಾಗತಿಕ ನಿರ್ಬಂಧ ಆದೇಶದಿಂದ ಇತರ ದೇಶಗಳ ಸಾರ್ವಭೌಮತ್ವಕ್ಕೆ ಅಡ್ಡಿ : ಹೈಕೋರ್ಟ್‌ಗೆ ವಿವರಿಸಿದ ಎಕ್ಸ್

- Advertisement -
- Advertisement -

ಭಾರತೀಯ ನ್ಯಾಯಾಲಯಗಳು ತನ್ನ ವೇದಿಕೆಯಲ್ಲಿನ ಮಾಹಿತಿಗೆ ಜಾಗತಿಕ ನಿರ್ಬಂಧ ಹೇರುವುದು ಅಂತಾರಾಷ್ಟ್ರೀಯ ಕಾನೂನಿನ ಉಲ್ಲಂಘನೆಯಾಗಲಿದ್ದು, ಇದು ಇತರ ದೇಶಗಳ ಸಾರ್ವಭೌಮತ್ವಕ್ಕೆ ಅಡ್ಡಿಯುಂಟು ಮಾಡಲಿದೆ ಎಂದು ದೆಹಲಿ ಹೈಕೋರ್ಟ್‌ಗೆ ಸಾಮಾಜಿಕ ಜಾಲತಾಣ ಎಕ್ಸ್‌ ಕಾರ್ಪ್‌ ತಿಳಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಭಾರತದ ವ್ಯಾಪ್ತಿಯಲ್ಲಿ ತನ್ನ ಕಾನೂನು ಅನ್ವಯಿಸುವ ಭಾರತದ ಹಕ್ಕನ್ನು ಗೌರವಿಸುವುದಾಗಿ ಎಕ್ಸ್‌ ಕಾರ್ಪ್‌ ಅಫಿಡವಿಟ್‌ನಲ್ಲಿ ತಿಳಿಸಿದೆ ಎಂದು ವರದಿ ಹೇಳಿದೆ.

ಬೇರೆ ದೇಶಗಳ ಜನರು ಯಾವ ಮಾಹಿತಿ ನೋಡಬಹುದು ಎಂಬುವುದನ್ನು ಭಾರತದ ನ್ಯಾಯಾಲಯಗಳು ನಿರ್ಧರಿಸಬಹುದು ಎಂಬ ವಾದ ಒಪ್ಪುವುದಾದರೆ, ಪಾಕಿಸ್ತಾನ ಮತ್ತು ಚೀನಾದ ನ್ಯಾಯಾಲಯಗಳು ಇಂಟರ್‌ನೆಟ್‌ನಲ್ಲಿ ಭಾರತೀಯರು ಏನು ನೋಡಬಹುದು, ಏನು ನೋಡಬಾರದು ಎಂದು ಆದೇಶಿಸಬಹುದಾಗಿದೆ ಎಂದು ಎಕ್ಸ್ ವಾದಿಸಿದೆ.

“ಭಾರತದಲ್ಲಿ ಪೋಸ್ಟ್‌ ಕಾಣದಂತೆ ಮಾಡಬೇಕು ಎಂದು ಆದೇಶಿಸುವ ಬದಲು, ಎಲ್ಲಾ ದೇಶಗಳಲ್ಲಿ ಪೋಸ್ಟ್‌ ಕಾಣದಂತೆ ನಿರ್ಬಂಧಿಸಬೇಕು ಎಂಬುವುದು ಅಂತಾರಾಷ್ಟ್ರೀಯ ಕಾನೂನಿಗೆ ವಿರುದ್ಧ. ಇದು ಎಲ್ಲಾ ದೇಶಗಳ ಸಹಭಾಗಿತ್ವ ತತ್ವಕ್ಕೆ ವಿರುದ್ಧವಾಗಿದೆ. ಈ ಆದೇಶವು ನ್ಯಾಯಾಲಯದ ವ್ಯಾಪ್ತಿ ಮೀರಿದ್ದು, ಅಮೆರಿಕ ಸೇರಿದಂತೆ ಇತರ ದೇಶಗಳ ಸಾರ್ವಭೌಮತ್ವಕ್ಕೆ ಅಡ್ಡಿಯಾಗಬಹುದು. ಅಲ್ಲಿ ಭಿನ್ನವಾದ ಕಾನೂನು ಮತ್ತು ರಕ್ಷಣೆ ಅನ್ವಯಿಸುತ್ತದೆ” ಎಂದು ಎಕ್ಸ್‌ ಹೇಳಿದೆ.

ಭಾರತದ ಹೊರಗೆ ಇಲ್ಲಿನ ನ್ಯಾಯಾಲಯದ ಆದೇಶವನ್ನು ಜಾರಿಗೊಳಿಸಲಾಗದು ಎಂದಿರುವ ಎಕ್ಸ್‌ ಕಾರ್ಪ್‌, ಬಾಬಾ ರಾಮ್‌ದೇವ್‌ ಪ್ರಕರಣದಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಜಾಗತಿಕ ನಿರ್ಬಂಧ ಆದೇಶವು ದೋಷಪೂರಿತ ಎಂದಿದೆ.

ಐಟಿ ಕಾಯ್ದೆಯ ಸೆಕ್ಷನ್‌ 79ರ ಅಡಿ ಜಾಗತಿಕವಾಗಿ ಮಾಹಿತಿ ತೆಗೆಯಲು ಆದೇಶಿಸಬಹುದು ಎಂದು ದೆಹಲಿ ಹೈಕೋರ್ಟ್‌ ಹೇಳಿದೆ. ಆದರೆ, ಈ ಸೆಕ್ಷನ್‌ ವಿನಾಯಿತಿ ನಿಬಂಧನೆ ಮಾತ್ರ ಆಗಿದೆ ಎಂದು ಎಕ್ಸ್ ವಾದಿಸಿದೆ.

ಹೈಕೋರ್ಟ್‌ ಆದೇಶದ ಹೊರತಾಗಿಯೂ ಪತ್ರಕರ್ತ ರಜತ್‌ ಶರ್ಮಾ ವಿರುದ್ಧದ ಸಾಮಾಜಿಕ ಮಾಧ್ಯಮದಲ್ಲಿನ ಪೋಸ್ಟ್‌ ಅನ್ನು ಭಾರತದಲ್ಲಿ ಮಾತ್ರ ತೆಗೆಯಲಾಗಿದೆ. ಜಾಗತಿಕ ಮಟ್ಟದಲ್ಲಿ ತೆಗೆದಿಲ್ಲ ಎಂದು ಆಕ್ಷೇಪಿಸಿ ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ಎಕ್ಸ್‌ ಕಾರ್ಪ್‌ ಆಕ್ಷೇಪಣೆ ಸಲ್ಲಿಸಿದೆ.

ಕೃಪೆ : ಬಾರ್ & ಬೆಂಚ್

ಇದನ್ನೂ ಓದಿ : ದೇಹದ ತೂಕದಲ್ಲಿ 100 ಗ್ರಾಂ ಹೆಚ್ಚಳ; ಪ್ಯಾರಿಸ್ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ವಿನೇಶಾ ಫೋಗಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...