Homeಮುಖಪುಟಅಮೆರಿಕ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತದ ರೈತರಿಗೆ ದ್ರೋಹ : ರಾಹುಲ್ ಗಾಂಧಿ

ಅಮೆರಿಕ ವ್ಯಾಪಾರ ಒಪ್ಪಂದದ ಹೆಸರಿನಲ್ಲಿ ಭಾರತದ ರೈತರಿಗೆ ದ್ರೋಹ : ರಾಹುಲ್ ಗಾಂಧಿ

- Advertisement -
- Advertisement -

ಭಾರತ–ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, ಭಾರತೀಯ ರೈತರಿಗೆ ದ್ರೋಹ ಬಗೆಯಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಭಾನುವಾರ (ಫೆ.15) ಪೋಸ್ಟ್ ಹಾಕಿರುವ ಅವರು, ಪ್ರಧಾನಿ ನರೇಂದ್ರ ಮೋದಿಯವರಿಗೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದ್ದಾರೆ.

ಡ್ರೈ ಡಿಸ್ಟಿಲರ್ಸ್ ಧಾನ್ಯಗಳನ್ನು ಆಮದು ಮಾಡಿಕೊಳ್ಳುವುದರ ಅರ್ಥವೇನು? ಭಾರತೀಯ ಜಾನುವಾರುಗಳಿಗೆ ಅಮೆರಿಕದ ಮೆಕ್ಕೆ ಜೋಳದಿಂದ ತಯಾರಿಸಿದ ಡಿಸ್ಟಿಲರ್‌ಗಳ ಧಾನ್ಯಗಳನ್ನು ನೀಡಲಾಗುತ್ತದೆಯೇ? ಹೀಗೆ ಮಾಡುವುದರಿಂದ ನಮ್ಮ ಹಾಲಿನ ಉತ್ಪನ್ನಗಳು ಅಮೆರಿಕದ ಕೃಷಿ ಉದ್ಯಮದ ಮೇಲೆ ಅವಲಂಬಿತವಾಗುವಂತೆ ಮಾಡುವುದಿಲ್ಲವೇ? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಭಾರತವು ಅಮೆರಿಕದಿಂದ ಸೋಯಾ ಎಣ್ಣೆಯನ್ನು ಆಮದು ಮಾಡಿಕೊಳ್ಳಲು ಅನುಮತಿ ನೀಡಿದರೆ, ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಸೇರಿದಂತೆ ದೇಶದಾದ್ಯಂತದ ಸೋಯಾ ಬೆಳೆಯುವ ರೈತರ ಮೇಲೆ ನೇರ ಪರಿಣಾಮ ಬೀರಲಿದೆ. ಮಾತ್ರವಲ್ಲ, ತೀವ್ರ ಬೆಲೆ ನಷ್ಟ ಉಂಟಾಗಲಿದೆ. ಇದನ್ನು ಭಾರತದ ರೈತರು ಹೇಗೆ ತಡೆದುಕೊಳ್ಳುತ್ತಾರೆ? ಎಂದು ಕೇಳಿದ್ದಾರೆ.

ಹೆಚ್ಚುವರಿ ಪದಾರ್ಥಗಳು ಎಂದರೆ ಏನು? ಅದು ಏನನ್ನು ಒಳಗೊಂಡಿದೆ? ಇದರಿಂದ ಮುಂದಿನ ದಿನಗಳಲ್ಲಿ ಅಮೆರಿಕದ ದ್ವಿದಳ ಧಾನ್ಯಗಳು ಹಾಗೂ ಇತರೆ ಬೆಳೆಗಳ ಆಮದಿಗೆ ಅಡಿಪಾಯ ಹಾಕುವುದಿಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.

ವ್ಯಾಪಾರೇತರ ಅಡೆತಡೆಗಳನ್ನು ತೆಗೆದುಹಾಕುವುದರ ಅರ್ಥವೇನು? ಮುಂದಿನ ದಿನಗಳಲ್ಲಿ ಮಾರ್ಪಡಿಸಿದ ತಳಿಗಳ ಮೇಲಿನ ತಮ್ಮ ನಿಲುವನ್ನು ಸಡಿಲಗೊಳಿಸಿ, ಸಂಗ್ರಹಣೆಯನ್ನು ಕಡಿಮೆ ಮಾಡುವ ಸಾಧ್ಯತೆ ಇದೆ ಮತ್ತು ಬೋನಸ್‌ ಅನ್ನು ಕಡಿಮೆ ಮಾಡಲು ಭಾರತದ ರೈತರ ಮೇಲೆ ಒತ್ತಡ ಹೇರಲಾಗುವುದಿಲ್ಲವೇ? ಎಂದು ರಾಹುಲ್ ಗಾಂಧಿ ಕೇಳಿದ್ದಾರೆ.

ಅಮೆರಿಕ ಹಾಗೂ ಭಾರತ ನಡುವಿನ ಈ ವ್ಯಾಪಾರ ಒಮ್ಮೆ ಆರಂಭವಾದರೆ, ಇದು ಪ್ರತೀ ವರ್ಷವೂ ದೊಡ್ಡದಾಗುತ್ತದೆ. ಅದನ್ನು ತಡೆಯಲು ಸಾಧ್ಯವಾಗುವುದಿಲ್ಲ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಉಭಯ ದೇಶಗಳ ನಡುವೆ ಈ ವ್ಯಾಪಾರ ಒಪ್ಪಂದ ಆರಂಭವಾದೆ, ಮುಂದಿನ ದಿನಗಳಲ್ಲಿ ಇದನ್ನು ತಡೆಯಲು ಸಾಧ್ಯವಾಗುತ್ತದೆಯೇ? ಇದು ವರ್ಷದಿಂದ ವರ್ಷಕ್ಕೆ ಹಚ್ಚಾಗುತ್ತಾ ಹೋಗುತ್ತದೆ. ಈ ಬಗ್ಗೆ ರೈತರು ಸ್ಪಷ್ಟತೆ ಪಡೆಯಬೇಕು ಎಂದು ಹೇಳಿದ್ದಾರೆ.

ಇದು ಕೇವಲ ಇಂದಿನ ಸಮಸ್ಯೆಯಲ್ಲ, ಭವಿಷ್ಯದ ದೃಷ್ಟಿಯಿಂದ ಗಂಭೀರವಾಗಿ ಯೋಚಿಸಬೇಕಾಗಿದೆ. ಭಾರತದ ಕೃಷಿ ಉದ್ಯಮದ ಮೇಲೆ ದೀರ್ಘಕಾಲದ ಹಿಡಿತ ಸಾಧಿಸಲು ಇನ್ನೊಂದು ದೇಶಕ್ಕೆ ಅವಕಾಶ ನೀಡುತ್ತಿದ್ದೇವೆಯೇ? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...