Homeಮುಖಪುಟಒಡಿಶಾ ರೈಲು ದುರಂತಕ್ಕೆ ಭಾರತ ಸರ್ಕಾರ, ಸಚಿವರು, ಪ್ರಧಾನಿ ಮೋದಿ ವೈಫಲ್ಯವೇ ಕಾರಣ: ತೇಜಸ್ವಿ ಯಾದವ್...

ಒಡಿಶಾ ರೈಲು ದುರಂತಕ್ಕೆ ಭಾರತ ಸರ್ಕಾರ, ಸಚಿವರು, ಪ್ರಧಾನಿ ಮೋದಿ ವೈಫಲ್ಯವೇ ಕಾರಣ: ತೇಜಸ್ವಿ ಯಾದವ್ ವಾಗ್ದಾಳಿ

- Advertisement -
- Advertisement -

270 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ ಒಡಿಶಾ ರೈಲು ಅಪಘಾತದ ಬಗ್ಗೆ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಭಾನುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದು ಭಾರತ ಸರ್ಕಾರ, ರೈಲ್ವೆ ಸಚಿವರು ಮತ್ತು ಪ್ರಧಾನಿಯ ಸಂಪೂರ್ಣ ವೈಫಲ್ಯ ಎಂದು ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ”ನಿರ್ಲಕ್ಷ್ಯದಿಂದ ಅಪಘಾತ ಸಂಭವಿಸಿದೆ” ಎಂದು ಪ್ರತಿಪಾದಿಸಿದ್ದಾರೆ. ರೈಲ್ವೇ ಸುರಕ್ಷತೆಯು ತಮ್ಮ ಆದ್ಯತೆಯಾಗಿದೆ ಎಂದು ಹೇಳಿಕೊಳ್ಳುತ್ತದೆ ಆದರೆ ಅಂತಹ ದೊಡ್ಡ ಅಪಘಾತದ ನಂತರವೂ ಅವರು ಯಾವುದೇ ಜವಾಬ್ದಾರಿಯನ್ನು ತೆಗೆದುಕೊಂಡಿಲ್ಲ” ಎಂದು ಕೇಂದ್ರ ಬಿಜೆಪಿ ವಿರುದ್ಧ ಹರಿಹಾಯ್ದರು.

”ಇದು ರಾಜಕೀಯಕ್ಕೆ ಅವಕಾಶವಾಗಬಾರದು, ಕೇಂದ್ರ ಸರ್ಕಾರ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಅದೊಂದು ದೊಡ್ಡ ಅಪಘಾತ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

”ಕೇಂದ್ರವು ಕುಸ್ತಿಪಟುಗಳ ಸಮಸ್ಯೆಯ ಯಾವುದೇ ತನಿಖೆಯನ್ನು ಮಾಡಿಲ್ಲ, ಹಾಗಾಗಿ ಅವರು ಏನು ಮಾಡುತ್ತಾರೆಂದು ನನಗೆ ತಿಳಿದಿಲ್ಲ. ಕಾಲವೇ ಉತ್ತರಿಸುತ್ತದೆ. ಆದರೆ ಅಲ್ಲಿಯವರೆಗೆ ಯಾರಾದರೂ ಜವಾಬ್ದಾರಿ ತೆಗೆದುಕೊಳ್ಳಬೇಕು… ಇಂತಹ ದೊಡ್ಡ ಘಟನೆ ನಡೆದಿದೆ, ಪ್ರಧಾನಿ ಮೋದಿ ಪತ್ರಿಕಾಗೋಷ್ಠಿ ನಡೆಸಬೇಕಿತ್ತು” ಎಂದು ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಏಕೆ ತಮ್ಮ ಹುದ್ದೆಯನ್ನು ತ್ಯಜಿಸಬೇಕು?: 9 ಕಾರಣಗಳನ್ನು ಕೊಟ್ಟ ಸುರ್ಜೆವಾಲಾ

ಇತ್ತೀಚಿನ ವರದಿಗಳ ಪ್ರಕಾರ, ಒಡಿಶಾದ ಬಾಲಸೋರ್ ಬಳಿಯ ಬಹನಾಗ ರೈಲು ನಿಲ್ದಾಣದ ಬಳಿ ಮೂರು ರೈಲುಗಳು ಹಳಿ ತಪ್ಪಿದ ಪರಿಣಾಮ ಭಾರೀ ಅಪಘಾತ ಸಂಭವಿಸಿದೆ. ಟ್ರೈನ್‌ಗಳು ಡಿಕ್ಕಿ ಹೊಡೆದ ಪರಿಣಾಮ ರೈಲಿನ 3 ಸ್ಲೀಪರ್ ಕೋಚ್‌ಗಳನ್ನ ಹೊರತುಪಡಿಸಿ ಉಳಿದ 18 ಬೋಗಿಗಳು ಹಳಿ ತಪ್ಪಿ ಮತ್ತೊಂದು ಹಳಿಯ ಮೇಲೆ ಬಿದ್ದಿವೆ.

ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಹೌರಾಗೆ ತೆರಳುತ್ತಿದ್ದಾಗ ಹಲವಾರು ಬೋಗಿಗಳು ಹಳಿತಪ್ಪಿ ಪಕ್ಕದ ಹಳಿಗಳ ಮೇಲೆ ಬಿದ್ದವು.

ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್, ಚೆನ್ನೈಗೆ ತೆರಳುತ್ತಿದ್ದಾಗ, ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ ಹಳಿತಪ್ಪಿದ ಕೋಚ್‌ಗಳಿಗೆ ಡಿಕ್ಕಿ ಹೊಡೆದಿದೆ. ಈ ಭೀಕರ ಅಪಘಾತದಲ್ಲಿ 275 ಜನರು ಸಾವನ್ನಪ್ಪಿದ್ದಾರೆ ಮತ್ತು 1000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಈ ಅಪಘಾತಕ್ಕೆ ಕಾರಣ ಏನು?

ಕೋರಮಂಡಲ್‌ ಎಕ್ಸ್‌ಪ್ರೆಸ್‌ಗೆ ಬಹನಾಗ ನಿಲ್ದಾಣದಲ್ಲಿ’ಸ್ಟಾಪ್‌’ ಇರಲಿಲ್ಲ. ಹೀಗಾಗಿ ಗಂಟೆಗೆ 127 ಕಿ.ಮೀ. ವೇಗದಲ್ಲಿ ಬರುತ್ತಿದ್ದ ರೈಲಿಗೆ ಗ್ರೀನ್‌ ಸಿಗ್ನಲ್‌ ನೀಡಲಾಯಿತು. ಆದರೆ, ಈ ವೇಳೆ ಈಗಾಗಲೇ ಗೂಡ್ಸ್‌ ರೈಲು ನಿಂತಿರುವ ಹಳಿಯ ಮೇಲೆ ರೈಲು ಚಲಿಸಿದೆ. ಹೀಗಾಗಿ ನಿಂತಿದ್ದ ಗೂಡ್ಸ್‌ ರೈಲಿಗೆ ‘ಕೋರಮಂಡಲ್‌ ಎಕ್ಸ್‌ಪ್ರೆಸ್‌’ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕೋರಮಂಡಲ್‌ ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್‌ ಗೂಡ್ಸ್‌ ರೈಲಿನ ಬೋಗಿಯ ಮೇಲೆ ಹತ್ತಿದರೆ, ಅದರ 13 ಬೋಗಿಗಳು ಹಳಿ ತಪ್ಪಿ ಚಲ್ಲಾಪಿಲ್ಲಿಯಾಗಿ ಉರುಳಿ ಬಿದ್ದಿವೆ.

ಹಳಿ ತಪ್ಪಿದ ಬೋಗಿಗಳಲ್ಲಿ ಹಲವು ಬೋಗಿಗಳು ಪಕ್ಕದ ಹಳಿಯ ಮೇಲೂ ಉರುಳಿ ಬಿದ್ದಿವೆ. ಇದಾಗಿ ನಾಲ್ಕೇ ನಿಮಿಷದೊಳಗೆ ‘ಹೌರಾ-ಯಶವಂತಪುರ’ ರೈಲು ಸಹ ಅದೇ ನಿಲ್ದಾಣಕ್ಕೆ ಬಂದಿದೆ. ಪಕ್ಕದ ಹಳಿಯಿಂದ ಉರುಳಿ ಬಿದ್ದಿದ್ದ ಅಪಘಾತಗೊಂಡ ರೈಲಿನ ಬೋಗಿಗಳಿಗೆ ಹೌರಾ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದಿದೆ. ಇದರಿಂದ ಆ ರೈಲಿನ 3 ಬೋಗಿಗಳೂ ಉರುಳಿ ಬಿದ್ದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...