Homeಕರೋನಾ ತಲ್ಲಣಕೋವಿಡ್ ಕುರಿತ ಬಾಬಾ ರಾಮದೇವ್ ಹುಚ್ಚಾಟ: ಕಾನೂನು ಕ್ರಮಕ್ಕೆ ವೈದ್ಯಕೀಯ ಸಂಘ ಒತ್ತಾಯ

ಕೋವಿಡ್ ಕುರಿತ ಬಾಬಾ ರಾಮದೇವ್ ಹುಚ್ಚಾಟ: ಕಾನೂನು ಕ್ರಮಕ್ಕೆ ವೈದ್ಯಕೀಯ ಸಂಘ ಒತ್ತಾಯ

- Advertisement -
- Advertisement -

ಪದೇ ಪದೇ ಕೋವಿಡ್ ಕುರಿತಂತೆ ಏನನ್ನೋ ಅವೈಜ್ಞಾನಿಕವಾದುದನ್ನು ಹೇಳುವ ಮೂಲಕ, ಯಾವುದೋ ಔಷ಼ಧಿಯನ್ನು ಕೋವಿಡ್‌ಗೆ ರಾಮಬಾಣ ಎಂದು ಸುದ್ದಿ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿರುವ ಬಾಬಾ ರಾಮದೇವ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೇಶದ ವೈದ್ಯರ ಪ್ರಾತಿನಿಧಿಕ ಸಂಸ್ಥೆಯಾದ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಒತ್ತಾಯಿಸಿದೆ.

ಇತ್ತೀಚೆಗೆ ರಾಮದೇವ್ ಅವರು ಅಲೋಫಥಿಕ್ ವಿಜ್ಞಾನ (ಆಧುನಿಕ ವೈದ್ಯ ವಿಜ್ಞಾನ) ಮತ್ತು ಅಲೊಪಥಿಕ್ ವೈದ್ಯರ ಕುರಿತಾಗಿ ಕ್ಷುಲ್ಲಕವಾಗಿ ಮಾತನಾಡಿದ್ದರು.

‘ಕೋವಿಡ್ ವಿರುದ್ಧದ ಹೋರಾಟದಲ್ಲಿ ಅಲೋಪಥಿಕ್ ವೈದ್ಯರು ಮುಂಚೂಣಿಯಲ್ಲಿದ್ದಾರೆ. ಈವರೆಗೆ 1,200 ವೈದ್ಯರು ಈ ಕಾರಣಕ್ಕೇ ಜೀವ ಕಳೆದುಕೊಂಡಿದ್ದಾರೆ. ಅಂತಹವರನ್ನು ಅವಮಾನಿಸುವ ಕೆಲಸವನ್ನು ಮಾಡುವ ಮೂಲಕ ಬಾಬಾ ರಾಮದೇವ್ ಎಂಬ ಸ್ವಯಂಘೋಷಿತ ದೇವಮಾನವ, ವೈದ್ಯರು ಮತ್ತು ರೋಗಿಗಳ ನಡುವೆ ಅವಿಶ್ವಾಸ ಮಾಡಿಸುವ ಕೆಲಸವನ್ನು ಮಾಡುತ್ತ ಬಂದಿದ್ದಾರೆ. ಇದು ವೈದ್ಯ ಸಮೂಹಕ್ಕೆ ಹಿನ್ನಡೆ ಮಾಡುವ ಕೆಲಸವಾಗಿದೆ. ವಿಜ್ಞಾನದ ಬದಲು ಮೌಢ್ಯವನ್ನು ಅವರು ಹರಡುತ್ತಿದ್ದಾರೆ. ಕೂಡಲೇ ರಾಮದೇವ್ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು’ ಎಂದು ಐಎಂಎ ಒತ್ತಾಯ ಮಾಡಿದೆ.

ವೃತ್ತಿಪರರು ದೇಶದ ಆರೋಗ್ಯ ರಕ್ಷಣೆಯನ್ನು ವೃತ್ತಿಪರ ರೀತಿಯಲ್ಲಿ ನಿರ್ವಹಿಸಬೇಕು. ಅವೈಜ್ಞಾನಿಕ ಅನಕ್ಷರತೆಯನ್ನು ಕಿವುಡು ಕಿವಿ ಮತ್ತು ಕುರುಡು ಕಣ್ಣುಗಳಿಂದ ಚಿಕಿತ್ಸೆ ನೀಡುವುದು ಅಷ್ಟೇನೂ ವೃತ್ತಿಪರತೆಯಲ್ಲ ಎಂದು ಐಎಂಎ ಚಾಟಿ ಬೀಸಿದೆ.

ಬಾಬಾ ರಾಮದೇವ್ ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ತಮ್ಮ ಪತಂಜಲಿ ಕಂಪನಿಯಿಂದ ಯಾವುದೇ ವೈಜ್ಞಾನಿಕ ಟ್ರಯಲ್ಸ್‌ಗಳಿಲ್ಲದೇ ಕೊರೊನಿಲ್ ಎಂಬ ಔಷಧಿ ಬಿಡುಗಡೆ ಮಾಡಿದ್ದರು. ಆಗಲೂ ಸರ್ಕಾರ ಸುಮ್ಮನೇ ಇತ್ತು ಎಂಬುದನ್ನು ಇಲ್ಲಿ ಗಮನಿಸಬಹುದು.

ಇತ್ತೀಚೆಗೆ ಕೆಲ ತಿಂಗಳ ಹಿಂದೆ ಅವರು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಸಮ್ಮುಖದಲ್ಲಿ ತಮ್ಮ ಕೊರೊನಿಲ್ ವಿಶ್ವ ಆರೋಗ್ಯ ಸಂಸ್ಥೆಯ ಪ್ರಮಾಣಿತ ಔಷಧಿ ಎಂದು ಸುಳ್ಳು ಹೇಳಿ ಮತ್ತೊಮ್ಮೆ ಸಿಕ್ಕು ಬಿದ್ದಿದ್ದರು.

ಈಗ ಇಡೀ ವೈದ್ಯಕೀಯ ಸಮೂಹವನ್ನೇ ಗೇಲಿ ಮಾಡುವ ಮೂಲಕ, ಅಸಂಸದೀಯ ಪದಗಳ ಮೂಲಕ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರನ್ನು ಅವಮಾನಿಸಲು ನೋಡಿದ್ದಾರೆ,
ಈಗ ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಐಎಂಎ ಅಧಿಕೃತ ಒತ್ತಾಯ ಮಾಡಿದೆ.


ಇದನ್ನೂ ಓದಿ; ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...